ಸವಣೂರಿನಲ್ಲಿ ಮೇಲ್ಸೇತುವೆ ನಿರ್ಮಾಣಕ್ಕೆ ತಯಾರಿ | ಮೈಸೂರು ವಿಭಾಗದ ಅಧಿಕಾರಿಗಳಿಂದ ಮೇ30 ರಂದು ಪರೀಶೀಲನೆಯ ಭರವಸೆ
ಪುತ್ತೂರು: ಮಂಗಳೂರು – ಬೆಂಗಳೂರು ರೈಲು ಮಾರ್ಗದ ಮಧ್ಯೆ ಸವಣೂರಿನಲ್ಲಿ ಮೇಲ್ಸೇತುವೆ ನಿರ್ಮಾಣ ಬಹಳ ಹಿಂದಿನ ಮಾತಾಗಿತ್ತು. ಈ ಬಗ್ಗೆ ಕಾರ್ಯರೂಪಕ್ಕೆ ತರುವಲ್ಲಿ ತಡವಾದರೂ ಇದೀಗ ಸವಣೂರಿನಲ್ಲಿ ಮೇಲ್ಸೇತುವೆ ನಿರ್ಮಾಣಕ್ಕೆ ಕಾಲ ಕೂಡಿ ಬಂದಿದೆ ಎನ್ನಬಹುದು. ರೈಲ್ವೆ ಇಲಾಖೆ ಮೈಸೂರು ವಿಭಾಗದ ಅಧಿಕಾರಿಗಳು ಆಗಮಿಸಿ ಸ್ಥಳ ಪರಿಶೀಲಿಸಲು ಮೇ.30ರಂದು ಸವಣೂರಿಗೆ ಬರುವದಾಗಿ ಭರವಸೆಯನ್ನಿತ್ತಿದ್ದಾರೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಸ್ಥಳೀಯ ರೈಲು ಬಳಕೆದಾರ ಉಮೇಶ್ ಕುಮಾರಮಂಗಲ ಬೇರಿಕೆ ಇವರಲ್ಲಿ ಮಾಹಿತಿ ಹಕ್ಕಿನಲ್ಲಿ ರೈಲ್ವೆ ಮೇಲ್ಸೇತುವೆ ನಿರ್ಮಾಣದ […]










