ವಿದ್ಯಾರ್ಥಿಗಳ ಪರಿಶ್ರಮ ಹಾಗೂ ಶಿಕ್ಷಕರ ಮಾರ್ಗದರ್ಶನದಿಂದ ಸಾಧನೆ ಸಾಧ್ಯ : ರವಿ ಕುಮಾರ್ ಎನ್. | ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಎಸ್.ಎಸ್.ಎಲ್.ಸಿ. ಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ ‘ವಿವೇಕ ಅಭಿನಂದನಮ್’
ಪುತ್ತೂರು: ವಿದ್ಯಾರ್ಥಿಗಳು ಕೊಠಡಿಯೊಳಗೆ ಉಳಿದರೆ ಯಶಸ್ಸು ಸಾಧಿಸಲಾಗುವುದಿಲ್ಲ. ಶಿಕ್ಷಣದಲ್ಲಿ ಅನುತ್ತೀರ್ಣರಾದವರು, ಜೀವನದಲ್ಲಿ ಉತ್ತೀರ್ಣರಾಗುತ್ತಿದ್ದಾರೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಸಮಗ್ರ ರೀತಿಯಲ್ಲಿ ಅಭಿವೃದ್ಧಿಯಾಗಬೇಕಾಗಿದೆ. ವಿದ್ಯಾರ್ಥಿಗಳ ಪರಿಶ್ರಮ ಹಾಗೂ ಶಿಕ್ಷಕರ ಮಾರ್ಗದರ್ಶನದಿಂದ ಸಾಧನೆ ಸಾಧ್ಯವಾಗುತ್ತದೆ ಎಂದು ವಿಧಾನ ಪರಿಷತ್ತಿನ ಮುಖ್ಯ ಸಚೇತಕ ರವಿ ಕುಮಾರ್ ಎನ್. ಹೇಳಿದರು. ಅವರು ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಯಾದವಶ್ರೀ ಸಭಾಂಗಣದಲ್ಲಿ 2024-25ನೇ ಸಾಲಿನ ಎಸ್.ಎಸ್.ಎಲ್.ಸಿ. ಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ ವಿವೇಕ ಅಭಿನಂದನಮ್ ನಲ್ಲಿ ಮಾತನಾಡಿದರು. ಕಾರ್ಯಕ್ರಮವನ್ನು ವಿವೇಕಾನಂದ […]










