ಸುದ್ದಿ

ಆಪರೇಷನ್‌ ಸಿಂಧೂರ ವಿಜಯೋತ್ಸವದಲ್ಲಿ ಪಾಕ್‌ ಪರ ಘೋಷಣೆ ಕೂಗಿದ ಟೆಕ್ಕಿ

ಬೆಂಗಳೂರು : ಆಪರೇಷನ್‌ ಸಿಂಧೂರ ವಿಜಯೋತ್ಸವ ಆಚರಣೆ ವೇಳೆ ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪದ ಮೇಲೆ ಟೆಕ್ಕಿಯೊಬ್ಬನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ವೈಟ್ ಫೀಲ್ಡ್‌ನ ಪ್ರಶಾಂತ್ ಲೇಔಟ್‌ನಲ್ಲಿ ವಿಜಯೋತ್ಸವ ನಡೆಯುತ್ತಿದ್ದಾಗ ಶುಭಾಂಶು ಶುಕ್ಲಾ(26) ಎಂಬ ಯುವಕ ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾನೆ ಎನ್ನಲಾಗಿದೆ. ಛತ್ತಿಸ್‌ಗಢ ಮೂಲದ ಶುಕ್ಲಾ ಬೆಂಗಳೂರಿನಲ್ಲಿ ಟೆಕ್ಕಿ ಆಗಿದ್ದು, ವೈಟ್‌ಫೀಲ್ಡ್‌ನ ಪ್ರಶಾಂತ್‌ ಲೇಔಟ್‌ನಲ್ಲಿ ವಾಸಿಸುತ್ತಿದ್ದ. ಮೇ 9ರಂದು ಈ ಬಡಾವಣೆಯಲ್ಲಿ ʻಆಪರೇಷನ್‌ ಸಿಂಧೂರʼ ವಿಜಯೋತ್ಸವ ಆಚರಿಸಲಾಗುತ್ತಿತ್ತು. ಈ ವೇಳೆ ಶುಭಾಂಶು ಶುಕ್ಲಾ […]

ಆಪರೇಷನ್‌ ಸಿಂಧೂರ ವಿಜಯೋತ್ಸವದಲ್ಲಿ ಪಾಕ್‌ ಪರ ಘೋಷಣೆ ಕೂಗಿದ ಟೆಕ್ಕಿ Read More »

ಸಿಡಿಲು ಬಡಿದು ಒಂದೇ ಕುಟುಂಬದ ಮೂವರು ಸಾವು

ಬಳ್ಳಾರಿ : ಕುರಿ ಮೇಯಿಸಲು ಹೋದ ವೇಳೆ ಸಿಡಿಲು ಬಡಿದು ಒಂದೇ ಕುಟುಂಬದ ಮೂವರು ಮೃತಪಟ್ಟ ಘಟನೆ ಬಳ್ಳಾರಿ ಜಿಲ್ಲೆಯ ಸಿರಗುಪ್ಪ ತಾಲೂಕಿನ ರಾರಾವಿ ಗ್ರಾಮದಲ್ಲಿ ನಡೆದಿದೆ. ಕುರಿ ಮೇಯಿಸಲು ಹೋದಾಗ ಜೋರು ಮಳೆ ಬಂದ ಕಾರಣ ಮರದ ಅಡಿಯಲ್ಲಿ ಆಶ್ರಯ ಪಡೆದಿದ್ದರು. ಈ ಮರಕ್ಕೇ ಸಿಡಿಲು ಬಡಿದು ಮೂವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಭೀರಪ್ಪ (45), ಸುನೀಲ್ (26) ಮತ್ತು ವಿನೋದ್ (14) ಮೃತಪಟ್ಟವರು. ಸಿರಗುಪ್ಪ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಸಿಡಿಲು ಬಡಿದು ಒಂದೇ ಕುಟುಂಬದ ಮೂವರು ಸಾವು Read More »

ಪಾಕಿಸ್ತಾನದಲ್ಲಿ ವಿಕಿರಣ ಸೋರಿಕೆಯಾಗುತ್ತಿರುವ ಅನುಮಾನ

ಕಿರಾನ ಬೆಟ್ಟದಡಿಯಲ್ಲಿರುವ ಅಣ್ವಸ್ತ್ರ ಸಂಗ್ರಹಕ್ಕೆ ಭಾರತದ ಕ್ಷಿಪಣಿಗಳು ಅಪ್ಪಳಿಸಿರುವ ಕುರಿತು ಚರ್ಚೆ ನವದೆಹಲಿ: ಭಾರತದ ಕ್ಷಿಪಣಿಗಳು ಪಾಕಿಸ್ಥಾನದ ಅಣ್ವಸ್ತ್ರಗಳ ಮೇಲೆಯೇ ದಾಳಿ ನಡೆಸಿವೆ ಎಂಬ ದಟ್ಟ ವದಂತಿಯೊಂದು ಹರಿದಾಡುತ್ತಿದೆ. ಭಾರತದ ಸೇನೆ ಪಾಕ್‌ನ ಅಣ್ವಸ್ತ್ರಗಳನ್ನು ಗುರಿ ಮಾಡಿಕೊಂಡು ದಾಳಿ ನಡೆಸಿಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದರೂ ಪಾಕಿಸ್ಥಾನದಲ್ಲಿ ನಡೆಯುತ್ತಿರುವ ಬೆಳವಣಿಗೆಗಳು ಪಾಕಿಸ್ಥಾನದಲ್ಲಿ ಪರಮಾಣು ವಿಕಿರಣ ಸೋರಿಕೆ ಆಗುತ್ತಿದ್ಯಾ ಎಂಬ ಅನುಮಾನ ಹುಟ್ಟಿಸಿದೆ. ಭಾರತ ಮತ್ತು ಪಾಕಿಸ್ತಾನದ ಮಧ್ಯೆ ತೀವ್ರ ಸಂಘರ್ಷ ನಡೆಯುತ್ತಿದ್ದಾಗ ದಿಢೀರ್‌ ಕದನ ವಿರಾಮ ಘೋಷಣೆಯಾಗಿದ್ದಕ್ಕೆ ಕಾರಣ

ಪಾಕಿಸ್ತಾನದಲ್ಲಿ ವಿಕಿರಣ ಸೋರಿಕೆಯಾಗುತ್ತಿರುವ ಅನುಮಾನ Read More »

ಸ್ನಾನಕ್ಕೆಂದ ತೆರಳಿದ ಇಬ್ಬರು ಯುವಕರು ನೀರಿಗೆ ಬಿದ್ದು ಮೃತ್ಯು

ಮಡಿಕೇರಿ : ಕಾವೇರಿ ನದಿಯಲ್ಲಿ ಸ್ನಾನಕ್ಕೆಂದು ತೆರಳಿದ್ದ 8 ಜನ ಯುವಕರಲ್ಲಿ ಇಬ್ಬರು ನೀರಿನಲ್ಲಿ ಮುಳುಗಿದ ಘಟನೆ ಮಡಿಕೇರಿ ತಾಲೂಕಿನ ನಾಪೊತ್ತು ಸಮೀಪದ ಎಮ್ಮೆಮಾಡುವಿನ ಕೂರುಳಿಯಲ್ಲಿ ನಡೆದಿದೆ. ಚೇರಂಬಾಣೆ ಮೂಲದ ಗಿರೀಶ್ (16) ಮತ್ತು ಅಯ್ಯಪ್ಪ (18) ಕಾವೇರಿ ನದಿಯಲ್ಲಿ ಈಜಲು ತೆರಳಿ ನೀರು ಪಾಲಾಗಿದ್ದಾರೆ. ಇಬ್ಬರ ಪೈಕಿ ಓರ್ವನ ಮೃತದೇಹ ದೊರಕಿದೆ. ಇನ್ನೋರ್ವನ ಮೃತದೇಹಕ್ಕಾಗಿ ಶೋಧ ಕಾರ್ಯ ನಡೆಯುತ್ತಿದೆ. ಸ್ಥಳಕ್ಕೆ ನಾಪೊಗ್ಗು ಪಿಎಸ್‌ಐ ಮಂಜುನಾಥ್ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಸ್ನಾನಕ್ಕೆಂದ ತೆರಳಿದ ಇಬ್ಬರು ಯುವಕರು ನೀರಿಗೆ ಬಿದ್ದು ಮೃತ್ಯು Read More »

ಹಸುವಿನ ಕೆಚ್ಚಲು ಕೊಯ್ದು ವಿಕೃತಿ ಮೆರೆದ ದನ ಕಳ್ಳರು

ಚಿಕ್ಕಮಗಳೂರಿನ ಕಡೂರಿನಲ್ಲಿ ಸಂಭವಿಸಿದ ಕೃತ್ಯಕ್ಕೆ ಭಾರಿ ಆಕ್ರೋಶ ಚಿಕ್ಕಮಗಳೂರು : ಬೆಂಗಳೂರು ಮಾದರಿಯಲ್ಲೇ ಚಿಕ್ಕಮಗಳೂರು ಜಿಲ್ಲೆಯ ಕಡೂರಿನಲ್ಲಿ ದನದ ಕೆಚ್ಚಲು ಕೊಯ್ದು ಕ್ರೌರ್ಯ ಮೆರೆದ ಘಟನೆ ಬೆಳಕಿಗೆ ಬಂದಿದ್ದು, ವಿಪರೀತ ರಕ್ತ ಸೋರಿಕೆಯಾಗಿ ದನ ಮೃತಪಟ್ಟಿದೆ. ಚಿಕ್ಕಮಗಳೂರಿನ ಬೀರೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೃತ್ಯ ಎಸಗಲಾಗಿದ್ದು, ತೀವ್ರ ರಕ್ತಸ್ರಾವದಿಂದಾಗಿ ಹಸು ಮೃತಪಟ್ಟಿದೆ.ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ತಮ್ಮಿಹಳ್ಳಿಯಲ್ಲಿ ಶೇಖರಪ್ಪ ಎಂಬವರಿಗೆ ಸೇರಿದ ಹಸುವನ್ನು ರಾತ್ರೋರಾತ್ರಿ ಕಳವು ಮಾಡಲು ದುಷ್ಕರ್ಮಿಗಳು ಯತ್ನಿಸಿದ್ದಾರೆ. ಆದರೆ ಕಳ್ಳತನ ಯತ್ನ ವಿಫಲವಾದಾಗ ರೋಷದಿಂದ

ಹಸುವಿನ ಕೆಚ್ಚಲು ಕೊಯ್ದು ವಿಕೃತಿ ಮೆರೆದ ದನ ಕಳ್ಳರು Read More »

ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಸೆರೆ

ಉಡುಪಿ: ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಘಟನೆ ಬಲಾಯಿಪಾದೆ ಜಂಕ್ಷನ್ ಬಳಿ ನಡೆದಿದೆ. ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಪ್ರಶಾಂತ್ ಹಾಗೂ ಪ್ರವೀಣ್ ಎಂದು ಪತ್ತೆಹಚ್ಚಲಾಗಿದೆ. ಆರೋಪಿಗಳಿಬ್ಬರ ಬಳಿ ಇದ್ದ ವಿವಿಧ ಬ್ಯಾಂಡ್‌ನ ಮದ್ಯದ ಸಾಚೇಟ್, ಬೀಯರ್ ಬಾಟಲ್, ನೀರಿನ ಬಾಟಲ್‌ಗಳು ಮತ್ತು ನಗದನ್ನು ವಶಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಸೆರೆ Read More »

ಟೆಂಪೋ ಟ್ರಾವೆಲರ್ ಮತ್ತು ಮಾರುತಿ-800 ನಡುವೆ ಅಪಘಾತ |  ನಾಲ್ಕು ಮಂದಿಗೆ ಗಾಯ

ಕಡಬ: ಟೆಂಪೋ ಟ್ರಾವೆಲರ್ ಮತ್ತು ಮಾರುತಿ-800 ಕಾರು ಪರಸ್ಪರ ಡಿಕ್ಕಿಯಾದ ಘಟನೆ ಸುಬ್ರಹ್ಮಣ್ಯ-ಉಪ್ಪಿನಂಗಡಿ ರಾಜ್ಯ ಹೆದ್ದಾರಿಯಲ್ಲಿ ಕೊಯಿಲ ಗ್ರಾಮದ ಗಂಡಿಬಾಗಿಲು ಬಳಿ ನಡೆದಿದೆ. ಘಟನಾನುಸಾರವಾಗಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ 4 ಮಂದಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಕಡಬ ತಾಲೂಕು ಆಲಂಕಾರು ನಿವಾಸಿಗಳಾದ ಪದ್ಮನಾಭ, ಸುದರ್ಶನ್, ಚೇತನ್, ಸತೀಶ್ ಎಂದು ಎನ್ನಲಾಗಿದೆ. ಗಾಯಗೊಂಡವರ ಪೈಕಿ ಗಂಭೀರ ಗಾಯಗಳಾಗಿರುವ ಪದ್ಮನಾಭರವರನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದವರು ಉಪ್ಪಿನಂಗಡಿಯ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶಿವಮೊಗ್ಗ ಮೂಲದ ಯಾತ್ರಿಕರು ಟೆಂಪೋ ಟ್ರಾವೆಲರ್‌ನಲ್ಲಿ ಸುಬ್ರಹ್ಮಣ್ಯ

ಟೆಂಪೋ ಟ್ರಾವೆಲರ್ ಮತ್ತು ಮಾರುತಿ-800 ನಡುವೆ ಅಪಘಾತ |  ನಾಲ್ಕು ಮಂದಿಗೆ ಗಾಯ Read More »

ಭದ್ರತಾ ಪಡೆ ಗುಂಡಿಗೆ ಓರ್ವ ಉಗ್ರ ಬಲಿ

ಶೋಪಿಯಾನ್‌ನಲ್ಲಿ ಭದ್ರತಾ ಪಡೆಗೆ ಮುಖಾಮುಖಿಯಾದ ಉಗ್ರರ ತಂಡ ಶ್ರೀನಗರ: ಜಮ್ಮು-ಕಾಶ್ಮೀರದ ಶೋಪಿಯಾನ್‌ ಜಿಲ್ಲೆಯ ಜಿನ್‌ಪತೆರ್‌ ಎಂಬಲ್ಲಿ ಭದ್ರತಾ ಪಡೆಗೆ ಭಯೋತ್ಪಾದಕರು ಇಂದು ಬೆಳಗ್ಗೆ ಮುಖಾಮುಖಿಯಗಿದ್ದು, ಈ ಸಂದರ್ಭದಲ್ಲಿ ನಡೆದ ಗುಂಡಿನ ಕಾಳಗದಲ್ಲಿ ಓರ್ವ ಉಗ್ರ ಸತ್ತಿದ್ದಾನೆ. ಇನ್ನೂ ಹಲವು ಉಗ್ರರು ಇಲ್ಲಿದ್ದು, ತೀವ್ರ ಗುಂಡಿನ ಕಾಳಗ ನಡೆಯುತ್ತಿದೆ ಎಂದು ಮೂಲಗಳು ತಿಳಿಸಿವೆ. ಉಗ್ರರು ಲಷ್ಕರ್‌ ಎ ತೈಬಾ ಸಂಘಟನೆಗೆ ಸೇರಿದವರು. ಇಬ್ಬರು ಉಗ್ರರನ್ನು ಭದ್ರತಾ ಪಡೆ ಸುತ್ತುವರಿದಿದೆ. ಎನ್‌ಕೌಂಟರ್‌ ನಡೆಯುತ್ತಿದೆ ಎಂದು ಮೂಲಗಳು ತಿಳಿಸಿವೆ. ವಿವರವಾದ ಮಾಹಿತಿ

ಭದ್ರತಾ ಪಡೆ ಗುಂಡಿಗೆ ಓರ್ವ ಉಗ್ರ ಬಲಿ Read More »

ಕಳ್ಳಭಟ್ಟಿ ಸಾರಾಯಿ ಸೇವಿಸಿ 16 ಮಂದಿ ಸಾವು

ನವದೆಹಲಿ: ಕಳ್ಳಭಟ್ಟಿ ಸಾರಾಯಿ ಸೇವಿಸಿ ಕನಿಷ್ಠ 16 ಮಂದಿ ಸಾವಿಗೀಡಾದ ಘಟನೆ ಪಂಜಾಬಿನ ಅಮೃತಸರ ಜಿಲ್ಲೆಯ ಐದು ಹಳ್ಳಿಗಳಲ್ಲಿ ಸಂಭವಿಸಿದೆ. ಈ ದುರಂತಕ್ಕೆ ಸಂಭವಿಸಿ ಐದು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಐದು ಹಳ್ಳಿಗಳ ಜನ ನಿನ್ನೆ ರಾತ್ರಿ ಕಳ್ಳಭಟ್ಟಿ ಸೇವಿಸಿ ಅಸ್ವಸ್ಥರಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಪೈಕಿ ಕನಿಷ್ಠ 6 ಮಂದಿ ಚಿಂತಾಜನಕ ಸ್ಥಿತಿಯಲ್ಲಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ರಾತ್ರಿ 9.30ರ ವೇಳೆಗೆ ಜನರು ಕಳ್ಳಭಟ್ಟಿ ಸಾರಾಯಿ ಸೇವಿಸಿ ತೀವ್ರ ಅಸ್ವಸ್ಥರಾಗತೊಡಗಿದರು. ಪೊಲೀಸರು ಸ್ಥಳಕ್ಕೆ ತಲುಪುವಷ್ಟರಲ್ಲಿ

ಕಳ್ಳಭಟ್ಟಿ ಸಾರಾಯಿ ಸೇವಿಸಿ 16 ಮಂದಿ ಸಾವು Read More »

ಮೋದಿ ಮನೆ ಮೇಲೆ ಬಾಂಬ್‌ ಹಾಕಬೇಕು ಎಂದ ಯುವಕ ಸೆರೆ

ಯುದ್ಧಕ್ಕೆ ಮೋದಿಯೇ ಕಾರಣ ಎಂಬ ವೀಡಿಯೊ ಅಪ್‌ಲೋಡ್‌ ಮಾಡಿದ್ದ ಯುವಕ ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಮನೆ ಮೇಲೆ ಬಾಂಬ್‌ ಹಾಕಬೇಕೆಂದು ಪ್ರಚೋದನಾಕಾರಿ ಹೇಳಿಕೆಯ ವೀಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹಾಕಿದ್ದ ಯುವಕನನ್ನು ಬೆಂಗಳೂರಿನ ಬಂಡೆಪಾಳ್ಯ ಪೊಲೀಸರು ಬಂಧಿಸಿದ್ದಾರೆ. ವೀಡಿಯೊ ವೈರಲ್ ಆಗುತ್ತಿದ್ದಂತೆಯೇ ಆರೋಪಿ ನವಾಜ್ ಎಂಬಾತನ ವಿರುದ್ಧ ಪ್ರಕರಣ ದಾಖಲಿಸಿದ್ದರು. ಆತನನ್ನು ಪರಪ್ಪನ ಅಗ್ರಹಾರ ಜೈಲಿನಲ್ಲಿರಿಸಲಾಗಿದೆ. ಭಾರತ ಮತ್ತು ಪಾಕಿಸ್ತಾನ ಮಧ್ಯೆ ಯುದ್ಧವಾಗುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಮನೆ ಮೇಲೆ ಯಾಕೆ ಪಾಕಿಸ್ತಾನ ಬಾಂಬ್ ಹಾಕಿಲ್ಲ?

ಮೋದಿ ಮನೆ ಮೇಲೆ ಬಾಂಬ್‌ ಹಾಕಬೇಕು ಎಂದ ಯುವಕ ಸೆರೆ Read More »

error: Content is protected !!
Scroll to Top