ಮಾ.1-2 : ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ಮೇಳೈಸಲಿದೆ ಇತಿಹಾಸ ಪ್ರಸಿದ್ಧ ಪುತ್ತೂರು ಕೋಟಿ-ಚೆನ್ನಯ ಜೋಡುಕರೆ ಕಂಬಳ | ಚಲನಚಿತ್ರ ನಟಿ-ನಟಿಯರ ಮೆರುಗು | ಪ್ರಥಮ ಬಾರಿಗೆ ರಾಜ್ಯಮಟ್ಟದ ಕೆಸರುಗದ್ದೆ ಓಟ ಸ್ಪರ್ಧೆ
ಪುತ್ತೂರು : 32ನೇ ವರ್ಷದ ಪುತ್ತೂರಿನ ಇತಿಹಾಸ ಪ್ರಸಿದ್ಧ ಪುತ್ತೂರು ಕೋಟಿ-ಚೆನ್ನಯ ಜೋಡುಕರೆ ಕಂಬಳ ಮಾ.1 ಹಾಗೂ 2 ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿದೆ ಎಂದು ಕೋಟಿ-ಚೆನ್ನಯ ಜೋಡುಕರೆ ಕಂಬಳ ಸಮಿತಿ ಅಧ್ಯಕ್ಷ ಎನ್.ಚಂದ್ರಹಾಸ ಶೆಟ್ಟಿ ತಿಳಿಸಿದ್ದಾರೆ. ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಅನುಗ್ರಹ ಆಶೀರ್ವಾದಗಳಿಂದ, ಪದ್ಮವಿಭೂಷಣ ರಾಜರ್ಷಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಶುಭಾಶೀರ್ವಾದಗಳೊಂದಿಗೆ ಕೀರ್ತಿಶೇಷ ಜಯಂತ ರೈ ಹಾಗೂ ಮಾಜಿ ನಗರಾಭಿವೃದ್ಧಿ ಸಚಿವ ವಿನಯ ಕುಮಾರ್ […]










