ನೆಲ್ಯಾಡಿಯಲ್ಲಿ ಮನೆಯಂಗಳದಲ್ಲೇ ಯುವಕನ ಕೊಲೆ
ನೆಲ್ಯಾಡಿ : ಮನೆಯಂಗಳದಲ್ಲೇ ಚಾಕುವಿನಿಂದ ಇರಿದು ಯುವಕನನ್ನು ಹತ್ಯೆ ಮಾಡಿದ ಘಟನೆ ಶುಕ್ರವಾರ ರಾತ್ರಿ ನೆಲ್ಯಾಡಿ ಹೊರಠಾಣೆ ವ್ಯಾಪ್ತಿಯ ಮಾದೇರಿ ಸಮೀಪ ನಡೆದಿದೆ. ಮೃತ ಯುವಕನನ್ನು ಮಾದೇರಿ ನಿವಾಸಿ ಶರತ್ ಎಂದು ಗುರುತಿಸಲಾಗಿದೆ. ಮನೆಯ ಅಂಗಳದಲ್ಲಿ ಶರತ್ನನ್ನು ಚಾಕುವಿನಿಂದ ಇರಿದು ಕೊಲೆಗೈಯಲಾಗಿದ್ದು, ಕೌಟುಂಬಿಕ ಕಲಹ ಘಟನೆಗೆ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ. ಸ್ಥಳಕ್ಕೆ ನೆಲ್ಯಾಡಿ ಹೊರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ನೆಲ್ಯಾಡಿಯಲ್ಲಿ ಮನೆಯಂಗಳದಲ್ಲೇ ಯುವಕನ ಕೊಲೆ Read More »










