ಸುದ್ದಿ

ಛಲದಂಕ ಚಕ್ರೇಶ್ವರ ತಾಳ ಮದ್ದಳೆ ಮತ್ತು ಸನ್ಮಾನ

ಶ್ರೀ ಉಮಾ ಮಹೇಶ್ವರ ಯಕ್ಷಕಲಾ ಇಷುದಿ ನಿಡ್ಲೆ ಸಂಯೋಜನೆಯಲ್ಲಿ ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದ ಆಶ್ರಯದಲ್ಲಿ ಶ್ರೀ ಕಾಳಿಕಾಂಬ ಯಕ್ಷಗಾನ ಕಲಾ ಸೇವಾ ಸಂಘದ ಸಹಯೋಗದೊಂದಿಗೆ ಛಲದಂಕ ಚಕ್ರೇಶ್ವರ ತಾಳ ಮದ್ದಳೆ ಜರಗಿತು. ಭಾಗವತರಾಗಿ ಮಹೇಶ ಕನ್ಯಾಡಿ, ಶಾಲಿನಿ ಹೆಬ್ಬಾರ್ ಹಿಮ್ಮೇಳದಲ್ಲಿ ಮುರಾರಿ ಕಡoಬಳಿತ್ತಾಯ, ಶ್ರೀಪತಿಭಟ್ ಉಪ್ಪಿನಂಗಡಿ, ಅರ್ಥದಾರಿಗಳಾಗಿ ನಿಡ್ಲೆ ಈಶ್ವರ ಪ್ರಸಾದ್ ಪಿ.ವಿ. (ಕೌರವ), ರವಿ ಭಟ್ ನೆಲ್ಯಾಡಿ (ಭೀಮ-1),  ದಿವಾಕರ ಆಚಾರ್ಯ ಗೇರುಕಟ್ಟೆ (ಸಂಜಯ), ಹರೀಶ ಆಚಾರ್ಯ ಬಾರ್ಯ (ಅಶ್ವತ್ಥಾಮ), ಸುಬ್ರಹ್ಮಣ್ಯ ಭಟ್ಪೆರ್ವೋಡಿ (ಬೇಹಿನಚರ), […]

ಛಲದಂಕ ಚಕ್ರೇಶ್ವರ ತಾಳ ಮದ್ದಳೆ ಮತ್ತು ಸನ್ಮಾನ Read More »

ಆಶೀರ್ವಾದ್‍ ಫರ್ನಿಚರ್ ಮಳಿಗೆಗೆ ಬೆಂಕಿ

ಪುತ್ತೂರು: ದರ್ಬೆ ಬಳಿ ಕಾರ್ಯನಿರ್ವಹಿಸುತ್ತಿದ್ದ ಆಶೀರ್ವಾದ್ ಫರ್ನಿಚರ್ ಮಳಿಗೆಯಲ್ಲಿ ಇಂದು ಬೆಂಕಿ ಕಾಣಿಸಿಕೊಂಡಿದೆ. ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಬೆಂಕಿ ನಂದಿಸುವ ಕಾರ್ಯ ನಡೆಸುತ್ತಿದ್ದಾರೆ.

ಆಶೀರ್ವಾದ್‍ ಫರ್ನಿಚರ್ ಮಳಿಗೆಗೆ ಬೆಂಕಿ Read More »

ಬ್ಯಾಂಕಿಗೆ 13,850 ಕೋ. ರೂ. ವಂಚಿಸಿದ ಉದ್ಯಮಿ ಮೆಹುಲ್‌ ಚೋಕ್ಸಿ ಬೆಲ್ಜಿಯಂನಲ್ಲಿ ಬಂಧನ

2019ರಲ್ಲಿ ದೇಶ ಬಿಟ್ಟು ಪಲಾಯನ ಮಾಡಿದ್ದ ಪ್ರತಿಷ್ಠಿತ ವಜ್ರೋದ್ಯಮಿ ನವದೆಹಲಿ: ಪಂಜಾಬ್ ನ್ಯಾಷನಲ್ ಬ್ಯಾಂಕಿಗೆ 13,000 ಕೋ.ರೂ.ಗೂ ಹೆಚ್ಚು ಮೊತ್ತ ವಂಚಿಸಿ ಪಲಾಯನ ಮಾಡಿದ್ದ ಪ್ರತಿಷ್ಠಿತ ವಜ್ರೋದ್ಯಮಿ ಮೆಹುಲ್ ಚೋಕ್ಸಿಯನ್ನು ಬೆಲ್ಜಿಯಂ ದೇಶದಲ್ಲಿ ಅಲ್ಲಿನ ಪೊಲೀಸರು ಬಂಧಿಸಿದ್ದಾರೆ. ಭಾರತೀಯ ತನಿಖಾ ಸಂಸ್ಥೆಗಳ ಕೋರಿಗೆ ಮೇರೆಗೆ ಏಪ್ರಿಲ್‌ 12ರಂದು ಮೆಹುಲ್‌ ಚೋಕ್ಸಿಯನ್ನು ಬೆಲ್ಜಿಯಂನ ಆಸ್ಪತ್ರೆಯಲ್ಲಿ ಬಂಧಿಸಲಾಯಿತು ಎಂದು ತಿಳಿದುಬಂದಿದೆ. ಅವನನ್ನು ಭಾರತಕ್ಕೆ ಕರೆತರಲು ತನಿಖಾ ಸಂಸ್ಥೆಗಳು ಸಿದ್ಧತೆ ಮಾಡಿಕೊಳ್ಳುತ್ತಿವೆ. ಕಾನೂನು ಹೋರಾಟ ಸ್ವಲ್ಪ ಸಮಯ ತೆಗೆದುಕೊಳ್ಳಬಹುದು ಎಂದು ಮೂಲಗಳು

ಬ್ಯಾಂಕಿಗೆ 13,850 ಕೋ. ರೂ. ವಂಚಿಸಿದ ಉದ್ಯಮಿ ಮೆಹುಲ್‌ ಚೋಕ್ಸಿ ಬೆಲ್ಜಿಯಂನಲ್ಲಿ ಬಂಧನ Read More »

ಇಂದು ಮಧ್ಯರಾತ್ರಿಯಿಂದ ಲಾರಿ ಮುಷ್ಕರ : ನಾಳೆಯಿಂದ ರಸ್ತೆಗಿಳಿಯುವುದಿಲ್ಲ 6 ಲಕ್ಷ ಲಾರಿಗಳು

ತರಕಾರಿ, ಗ್ಯಾಸ್‌ ಸೇರಿ ಅಗತ್ಯ ವಸ್ತುಗಳ ಪೂರೈಕೆ ವ್ಯತ್ಯಯವಾಗುವ ಸಾಧ್ಯತೆ ಬೆಂಗಳೂರು: ಡೀಸೆಲ್ ದರ ಏರಿಕೆ ಪ್ರತಿಭಟಿಸಿ ಏಪ್ರಿಲ್‌ 14ರ ಮಧ್ಯರಾತ್ರಿಯಿಂದಲೇ ಲಾರಿ ಮಾಲೀಕರ ಸಂಘ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದೆ. ಇದರಿಂದ ರಾಜ್ಯಾದ್ಯಂತ ಸುಮಾರು 6 ಲಕ್ಷ ಲಾರಿಗಳ ಸಂಚಾರ ಬಂದ್‌ ಆಗಲಿದ್ದು, ರಾಜ್ಯಕ್ಕೆ ಬರುವ ಮತ್ತು ಹೊರರಾಜ್ಯಗಳಿಗೆ ಹೋಗುವ ಸರಕು ಸಾಗಾಟದಲ್ಲಿ ವ್ಯತ್ಯಯವಾಗಿ ಜನರಿಗೆ ಇನ್ನಷ್ಟು ಸಂಕಷ್ಟ ಎದುರಾಗಲಿದೆ. ಆಲ್ ಇಂಡಿಯಾ ಮೋಟರ್ ಟ್ರಾನ್ಸ್‌ಪೋರ್ಟ್ ಕಾಂಗ್ರೆಸ್‌ ದೆಹಲಿ, ಸೌಥ್ ಇಂಡಿಯಾ ಮೋಟರ್ ಟ್ರಾನ್ಸ್‌ಪೋರ್ಟ್ ಅಸೋಸಿಯೇಷನ್,

ಇಂದು ಮಧ್ಯರಾತ್ರಿಯಿಂದ ಲಾರಿ ಮುಷ್ಕರ : ನಾಳೆಯಿಂದ ರಸ್ತೆಗಿಳಿಯುವುದಿಲ್ಲ 6 ಲಕ್ಷ ಲಾರಿಗಳು Read More »

ಮಗುವನ್ನು ಹತ್ಯೆ ಮಾಡಿದ ಆರೋಪಿ ಪೊಲೀಸರ ಗುಂಡಿಗೆ ಬಲಿ : ಕಮಿಷನರ್‌ಗೆ ಜೈಕಾರ ಹಾಕಿದ ಜನ

ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ 5 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಲು ಯತ್ನಿಸಿ ಕೊಲೆಗೈದು ಪರಾರಿಯಾಗಿದ್ದ ಆರೋಪಿಯನ್ನು ಪೊಲೀಸರು ಗುಂಡಿಟ್ಟು ಕೊಂದಿರುವುದು ರಾಜ್ಯಾದ್ಯಂತ ಸಂಚಲನವುಂಟುಮಾಡಿದೆ. ರಾಜ್ಯದಲ್ಲಿ ಆರೋಪಿಯನ್ನು ಈ ರೀತಿ ಎನ್‌ಕೌಂಟರ್‌ನಲ್ಲಿ ಸಾಯಿಸಿರುವುದು ಬಹಳ ಅಪರೂಪದ ಪ್ರಕರಣವಾಗಿದೆ. ಶಿಶುಕಾಮಿ ಆರೋಪಿಯನ್ನು ಪೊಲೀಸರು ಗುಂಟಿಕ್ಕಿ ಸಾಯಿಸಿದ್ದಾರೆ ಎಂಬ ಸುದ್ದಿ ತಿಳಿಯುತ್ತಿದ್ದಂತೆ ಹುಬ್ಬಳ್ಳಿ-ಧಾರವಾಡ ಪೊಲೀಸ್​ ಆಯುಕ್ತ ಶಶಿಕುಮಾರ್​ ಅವರಿಗೆ ಜನರು ಜೈಕಾರ ಹಾಕಿದ್ದಾರೆ. ಈ ವೀಡಿಯೊ ಈಗ ಸೋಷಿಯಲ್‌ ಮೀಡಿಯಾಗಳಲ್ಲಿ ವೈರಲ್‌ ಆಗಿದೆ. ಆರೋಪಿಯ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಕಿಮ್ಸ್

ಮಗುವನ್ನು ಹತ್ಯೆ ಮಾಡಿದ ಆರೋಪಿ ಪೊಲೀಸರ ಗುಂಡಿಗೆ ಬಲಿ : ಕಮಿಷನರ್‌ಗೆ ಜೈಕಾರ ಹಾಕಿದ ಜನ Read More »

ಹಿರಿಯ ನಟ ಬ್ಯಾಂಕ್‌ ಜನಾರ್ದನ್‌ ನಿಧನ

800ಕ್ಕೂ ಅಧಿಕ ಚಿತ್ರಗಳಲ್ಲಿ ನಟಿಸಿದ್ದ ಕನ್ನಡದ ಪೋಷಕ ನಟ ಬೆಂಗಳೂರು : 800ಕ್ಕೂ ಅಧಿಕ ಚಿತ್ರಗಳಲ್ಲಿ ಪೋಷಕ ಪಾತ್ರಗಳಲ್ಲಿ ನಟಿಸಿದ್ದ ಕನ್ನಡದ ಹಿರಿಯ ನಟ ಬ್ಯಾಂಕ್ ಜನಾರ್ದನ್ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿಂದು ನಿಧನ ಹೊಂದಿದ್ದಾರೆ. ಅವರಿಗೆ 76 ವರ್ಷ ವಯಸ್ಸಾಗಿತ್ತು. ಹಲವು ದಿನಗಳ ಕಾಲ ಅನಾರೋಗ್ಯದಿಂದ ಅವರು ಬಳಲುತ್ತಿದ್ದರು. ರಾತ್ರಿ 2.30ರ ಸುಮಾರಿಗೆ ಬ್ಯಾಂಕ್ ಜನಾರ್ದನ್ ನಿಧನ ಹೊಂದಿದ್ದಾರೆ ಎಂದು ತಿಳಿದು ಬಂದಿದೆ. ಸುಲ್ತಾನ್ ಪಾಳ್ಯದ ನಿವಾಸದಲ್ಲಿ ಅವರ ಪಾರ್ಥೀವ ಶರೀರ ಇಡಲಾಗಿದೆ.1949ರಲ್ಲಿ ಬ್ಯಾಂಕ್ ಜನಾರ್ದನ್ ಚಿತ್ರದುರ್ಗದ

ಹಿರಿಯ ನಟ ಬ್ಯಾಂಕ್‌ ಜನಾರ್ದನ್‌ ನಿಧನ Read More »

ಪಶ್ಚಿಮ ಬಂಗಾಳ : ಮೂವರು ಸಾವು; 150ಕ್ಕೂ ಅಧಿಕ ಬಂಧನ

ವಕ್ಫ್‌ ಕಾಯಿದೆ ವಿರೋಧಿ ಪ್ರತಿಭಟನೆ ವೇಳೆ ಭಾರಿ ಹಿಂಸಾಚಾರ ಕೋಲ್ಕತ್ತಾ: ವಕ್ಫ್ ತಿದ್ದುಪಡಿ ಕಾಯ್ದೆ ವಿರೋಧಿಸಿ ಬಂಗಾಳದಲ್ಲಿ ನಡೆಯುತ್ತಿರುವ ಹಿಂಸಾತ್ಮಕ ಪ್ರತಿಭಟನೆ ಮುಂದುವರಿದಿದೆ. ತಂದೆ ಮತ್ತು ಮಗ ಸೇರಿ ಈವರೆಗೆ ಒಟ್ಟು ಮೂವರು ಸಾವನ್ನಪ್ಪಿದ್ದು, 150ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಶುಕ್ರವಾರದ ಪ್ರಾರ್ಥನೆಯ ನಂತರ ಭುಗಿಲೆದ್ದ ಹಿಂಸಾಚಾರ ಮುರ್ಷಿದಾಬಾದ್‌ ಜಿಲ್ಲೆಯ ಹಲವು ಭಾಗಗಳಿಗೆ ವ್ಯಾಪಿಸಿದ್ದು, ಅಪಾರ ಪ್ರಮಾಣದ ಸಾರ್ವಜನಿಕ ಆಸ್ತಿಪಾಸ್ತಿ ಹಾನಿಯಾಗಿವೆ. ಕಳೆದ ರಾತ್ರಿ ಪೊಲೀಸರು, ಅರೆಸೇನಾ ಪಡೆಗಳು ಸಂಪೂರ್ಣ ಗಸ್ತು ತಿರುಗಿದ್ದು, ಸುತಿ,

ಪಶ್ಚಿಮ ಬಂಗಾಳ : ಮೂವರು ಸಾವು; 150ಕ್ಕೂ ಅಧಿಕ ಬಂಧನ Read More »

ಬೆಂಗಳೂರು : 20ಕ್ಕೂ ಅಧಿಕ ಶೆಡ್‌ಗಳು ಬೆಂಕಿಗಾಹುತಿ

ಬೆಂಗಳೂರು: ಕೂಲಿ ಕಾರ್ಮಿಕರು ವಾಸವಿದ್ದ 20ಕ್ಕೂ ಹೆಚ್ಚು ಶೆಡ್​ಗಳು ಬೆಂಕಿಗಾಹುತಿ ಆಗಿರುವ ಘಟನೆ ಬೆಂಗಳೂರು ನಗರದ ವೀರಣ್ಣಪಾಳ್ಯ ಮುಖ್ಯ ರಸ್ತೆಯ ಬಳಿ ಇಂದು ಮುಂಜಾನೆ ನಡೆದಿದೆ. ಬೆಂಕಿ ಅವಘಡದಿಂದ ಆಟಿಕೆ ಫ್ಯಾಕ್ಟರಿಯ ಕಾರ್ಮಿಕರಿಗಾಗಿ ನಿರ್ಮಿಸಲಾಗಿದ್ದ 20 ಶೆಡ್​ಗಳು ಪೂರ್ತಿಯಾಗಿ ಸುಟ್ಟುಹೋಗಿವೆ. ಅದೃಷ್ಟವಶಾತ್​ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಗೋವಿಂದಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.ಆಟಿಕೆ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ ಜನರಿಗಾಗಿ ವೀರಣ್ಣಪಾಳ್ಯ ಮುಖ್ಯರಸ್ತೆಯ ಖಾಸಗಿ ಶಾಲೆ ಪಕ್ಕದಲ್ಲಿ

ಬೆಂಗಳೂರು : 20ಕ್ಕೂ ಅಧಿಕ ಶೆಡ್‌ಗಳು ಬೆಂಕಿಗಾಹುತಿ Read More »

ಪರಿಶಿಷ್ಟರೆ ರಾಜ್ಯದಲ್ಲಿ ನಂಬರ್‌ ಒನ್‌ : ಜಾತಿ ಗಣತಿ ವರದಿಯಲ್ಲಿ ಬಹಿರಂಗ

ಹಲವು ಜಾತಿಗಳ ಮೀಸಲಾತಿ ಪ್ರಮಾಣ ಹೆಚ್ಚಿಸಲು ಶಿಫಾರಸ್ಸು ಬೆಂಗಳೂರು: ತೀವ್ರ ಚರ್ಚೆಗೆ ಕಾರಣವಾಗಿರುವ ಸಿದ್ದರಾಮಯ್ಯ ಸರಕಾರದ ಜಾತಿ ಗಣತಿ ವರದಿ ಅಧಿಕೃತವಾಗಿ ಇನ್ನೂ ಬಹಿರಂಗವಾದಿದ್ದರೂ ಅದರಲ್ಲಿರುವ ಕೆಲವು ಮಾಹಿತಿಗಳು ಸೋರಿಕೆಯಾಗಿವೆ. ವರದಿ ಪ್ರಕಾರ ರಾಜ್ಯದಲ್ಲಿ ಪರಿಶಿಷ್ಟ ಜಾತಿಗೆ ಸೇರಿದವರು ಅತಿಹೆಚ್ಚಿನ ಸಂಖ್ಯೆಯಲ್ಲಿದ್ದಾರೆ ಎಂದು ತಿಳಿದುಬಂದಿದೆ. ಹಲವು ಚರ್ಚೆ, ವಿರೋಧದ ನಡುವೆ ಸಚಿವ ಸಂಪುಟದಲ್ಲಿ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ-2015 ಮಂಡನೆ ಆಗಿದೆ. ಸಮಗ್ರ ಚರ್ಚೆಗೆ ಮುಂದಿನ ಗುರುವಾರದ ಸಚಿವ ಸಂಪುಟ ಸಭೆಯ ಮುಹೂರ್ತ

ಪರಿಶಿಷ್ಟರೆ ರಾಜ್ಯದಲ್ಲಿ ನಂಬರ್‌ ಒನ್‌ : ಜಾತಿ ಗಣತಿ ವರದಿಯಲ್ಲಿ ಬಹಿರಂಗ Read More »

ಭಾರತೀಯ ಔಷಧ ಕಂಪನಿ ಗೋದಾಮಿನ ಮೇಲೆ ರಷ್ಯಾ ದಾಳಿ

ಉದ್ದೇಶಪೂರ್ವಕವಾಗಿ ದಾಳಿ ಮಾಡಿ ಔಷಧಗಳ ನಾಶ ಎಂದು ಆರೋಪಿಸಿದ ಉಕ್ರೇನ್‌ ನವದೆಹಲಿ: ಉಕ್ರೇನ್‌ನ ಕೀವ್‌ನಲ್ಲಿರುವ ಭಾರತೀಯ ಮೂಲದ ಔಷಧ ಕಂಪನಿಯ ಗೋದಾಮನ್ನು ರಷ್ಯಾ ಕ್ಷಿಪಣಿ ದಾಳಿ ನಡೆಸಿ ನಾಶ ಮಾಡಿದೆ ಎಂದು ಉಕ್ರೇನ್‌ ಹೇಳಿಕೊಂಡಿದೆ. ಉಕ್ರೇನ್‌ನಲ್ಲಿರುವ ಭಾರತೀಯ ವ್ಯವಹಾರಗಳನ್ನು ಭಾರತದ ಪರಮಾಪ್ತ ಮಿತ್ರ ಎಂದು ಹೇಳಿಕೊಳ್ಳುವ ರಷ್ಯಾ ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡಿದೆ ಎಂದು ಭಾರತದಲ್ಲಿನ ಉಕ್ರೇನ್‌ನ ರಾಯಭಾರ ಕಚೇರಿ ಆರೋಪಿಸಿದೆ.ಉಕ್ರೇನ್‌ನಲ್ಲಿರುವ ಭಾರತೀಯ ಔಷಧ ಕಂಪನಿ ಕುಸುಮ್‌ನ ಗೋದಾಮಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ನಡೆಸಿದೆ. ಭಾರತದೊಂದಿಗೆ ವಿಶೇಷ ಸ್ನೇಹವಿದೆ

ಭಾರತೀಯ ಔಷಧ ಕಂಪನಿ ಗೋದಾಮಿನ ಮೇಲೆ ರಷ್ಯಾ ದಾಳಿ Read More »

error: Content is protected !!
Scroll to Top