ಸುದ್ದಿ

ಆರೋಪಿಗಳ ಸುಳಿವು ಪತ್ತೆ, ಕಾರುಗಳು ವಶ : ಎಡಿಜಿಪಿ ಆರ್.ಹಿತೇಂದ್ರ ಮಾಹಿತಿ

ತನಿಖೆಗೆ ವಿಶೇಷ ತಂಡ ರಚನೆ; ಶಾಂತಿ ಕಾಪಾಡಲು ಮನವಿ ಮಂಗಳೂರು: ಮಂಗಳೂರು ಪೊಲೀಸರು ಆರೋಪಿಗಳ ಸುಳಿವು ಪತ್ತೆ ಹಚ್ಚಿದ್ದಾರೆ. ಸುಹಾಸ್ ಶೆಟ್ಟಿ ಮೇಲೆ ದಾಳಿ ನಡೆಸಿ ಪರಾರಿಯಾದ ಆರೋಪಿಗಳು ಯಾರು ಎಂದು ನಮಗೆ ಗೊತ್ತಾಗಿದೆ. ಆರೋಪಿಗಳ ಬಂಧನಕ್ಕೆ ತಂಡ ರಚನೆ ಮಾಡುತ್ತೇವೆ. ಆರೋಪಿಗಳ ಸುಳಿವನ್ನು ಈಗಾಗಲೇ ಪತ್ತೆ ಹಚ್ಚಿಲಾಗಿದೆ ಎಂದು ಎಡಿಜಿಪಿ ಆರ್.ಹಿತೇಂದ್ರ ಹೇಳಿದ್ದಾರೆ. ಕಾನೂನು ಕೈಗೆತ್ತಿಕೊಂಡವರ ಮೇಲೆ ಕಾನೂನು ರೀತಿ ಕ್ರಮ ಆಗಲಿದೆ ಎಂದು ಹಿತೇಂದ್ರ ಹೇಳಿದ್ದಾರೆ. ಸ್ಥಳದ ಸಿಸಿಟಿವಿ ದೃಶ್ಯಗಳನ್ನು ಪೊಲೀಸರು ಪರಿಶೀಲಿಸಿದ್ದಾರೆ. ಇನ್ನು […]

ಆರೋಪಿಗಳ ಸುಳಿವು ಪತ್ತೆ, ಕಾರುಗಳು ವಶ : ಎಡಿಜಿಪಿ ಆರ್.ಹಿತೇಂದ್ರ ಮಾಹಿತಿ Read More »

ಮಾರ್ಚ್‌ನಲ್ಲೇ ಸುಹಾಸ್‌ ಶೆಟ್ಟಿ ಹತ್ಯೆಗೆ ಸ್ಕೆಚ್‌ : ಇನ್‌ಸ್ಟಾಗ್ರಾಂ ಪೋಸ್ಟರ್‌ನಿಂದ ಹುಟ್ಟಿದ ಅನುಮಾನ

ಹಂತಕರಿಗೆ ತಪ್ಪಿಸಿಕೊಳ್ಳಲು ಬುರ್ಖಾಧಾರಿ ಮಹಿಳೆಯರ ಸಹಾಯ? ಮಂಗಳೂರು: ನಗರದ ಬಜ್ಪೆ ಕಿನ್ನಿಪದವು ಬಳಿ ನಿನ್ನೆ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ಹಂತಕರು ಬರ್ಬರವಾಗಿ ಹತ್ಯೆ ಮಾಡಿದ ಬಳಿಕ ಹಲವು ಬೆಳವಣಿಗೆಗಳು ನಡೆದಿದ್ದು, ಸುಹಾಸ್ ಹತ್ಯೆ ಬೆನ್ನಲ್ಲೇ ‘ಫಿನಿಶ್’ ಅಂತ ಸೋಶಿಯಲ್​ ಮೀಡಿಯಾದಲ್ಲಿ ಒಂದು ಪೋಸ್ಟ್ ವೈರಲ್​ ಆಗಿದ್ದು, ಸದ್ಯ ಸಾಕಷ್ಟು ಕುತೂಹಲ ಮತ್ತು ಚರ್ಚೆಗೆ ಗ್ರಾಸವಾಗಿದೆ. ಮಾರ್ಚ್ 31ರಂದೇ ಸುಹಾಸ್ ಶೆಟ್ಟಿ ಹತ್ಯೆಗೆ ಸ್ಕೆಚ್‌ ಹಾಕಲಾಗಿತ್ತಾ ಎಂಬ ಅನುಮಾನಗಳು ಹುಟ್ಟಿಕೊಂಡಿವೆ. ಅಂದೇ ಟಾರ್ಗೆಟ್ ಕಿಲ್ಲರ್-03 ಎಂಬ ಇನ್‌ಸ್ಟಾಗ್ರಾಂ

ಮಾರ್ಚ್‌ನಲ್ಲೇ ಸುಹಾಸ್‌ ಶೆಟ್ಟಿ ಹತ್ಯೆಗೆ ಸ್ಕೆಚ್‌ : ಇನ್‌ಸ್ಟಾಗ್ರಾಂ ಪೋಸ್ಟರ್‌ನಿಂದ ಹುಟ್ಟಿದ ಅನುಮಾನ Read More »

ಮಂಗಳೂರು: ಉಳ್ಳಾಲದಲ್ಲಿ ಯುವಕನ ಮೇಲೆ ತಲವಾರಿನಿಂದ ಹಲ್ಲೆ

ಉಳ್ಳಾಲ: ನಿನ್ನೆ ರಾತ್ರಿ ಬಜಪೆ ಸಮೀಪ ಹಿಂದೂ ಕಾರ್ಯಕರ್ತ ಸುಹಾಸ್‌ ಶೆಟ್ಟಿಯನ್ನು ಸಾಯಿಸಿದ ಹಿನ್ನೆಲೆಯಲ್ಲಿ ಮಂಗಳೂರು ಧಗಧಗಿಸುತ್ತಿರುವಾಗಲೇ ಸಮೀಪದ ಉಳ್ಳಾಲದಲ್ಲಿ ಇನ್ನೊಂದು ಮರಣಾಂತಿಕ ಹಲ್ಲೆ ಸಂಭವಿಸಿದೆ. ಯುವಕನ ಮೇಲೆ ತಂಡವೊಂದು ತಲವಾರಿನಿಂದ ದಾಳಿ ನಡೆಸಿದ ಪರಿಣಾಮ ಆತನಿಗೆ ಗಂಭೀರವಾದ ಗಾಯವಾಗಿದೆ. ಈ ಘಟನೆ ತೊಕ್ಕೊಟ್ಟು ಒಳಪೇಟೆ ಬಳಿ ನಡೆದಿರುವುದು ವರದಿಯಾಗಿದೆ. ಗಾಯಗೊಂಡವನನ್ನು ಅಳೇಕಲ ನಿವಾಸಿ ಫೈಝಲ್ ಎಂದು ಗುರುತಿಸಲಾಗಿದೆ. ಫೈಝಲ್ ಕಲ್ಲಾಪು ಮಾರುಕಟ್ಟೆಗೆ ಬರುತ್ತಿದ್ದ ವೇಳೆ ಒಳಪೇಟೆ ಬಳಿ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಮಂಗಳೂರು: ಉಳ್ಳಾಲದಲ್ಲಿ ಯುವಕನ ಮೇಲೆ ತಲವಾರಿನಿಂದ ಹಲ್ಲೆ Read More »

ಎರಡು ವೆಬ್‌ಸೈಟ್‌ಗಳಲ್ಲಿ ವೀಕ್ಷಿಸಿ ಎಸ್‌ಎಸ್‌ಎಲ್‌ಸಿ ಫಲಿತಾಂಶ : ಎಸ್‌ಎಂಎಸ್‌ನಲ್ಲೂ ಸಿಗುತ್ತದೆ ರಿಸಲ್ಟ್‌

ಅಧಿಕೃತ ವೆಬ್‌ಸೈಟ್‌ https://kseab.karnataka.gov.in ಅಥವಾ https://karresults.nic.in ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಎಸ್ಎಸ್​​ಎಲ್​ಸಿ ಪರೀಕ್ಷೆ ವಿದ್ಯಾರ್ಥಿಗಳು ಫಲಿತಾಂಶವನ್ನು ಇಂದು ಮಧ್ಯಾಹ್ನ ಪ್ರಕಟಿಸಲಿದ್ದು, ಮಧ್ಯಾಹ್ನ 12.30ರ ಬಳಿಕ ವೆಬ್‌ಸೈಟ್‌ಗಳಲ್ಲಿ ಫಲಿತಾಂಶ ವೀಕ್ಷಣೆಗೆ ಸಿಗುತ್ತದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಬೆಳಗ್ಗೆ 11.30ಕ್ಕೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಲಿದ್ದಾರೆ. ಮಧ್ಯಾಹ್ನ 12.30ರ ನಂತರ ವೆಬ್‌ಸೈಟ್‌ನಲ್ಲಿ SSLC ಫಲಿತಾಂಶ ಲಭ್ಯವಾಗಲಿದೆ. http://karresults.nic.in ಜಾಲತಾಣದಲ್ಲಿ ಫಲಿತಾಂಶ ವೀಕ್ಷಿಸಬಹುದಾಗಿದೆ. ಮಾರ್ಚ್‌, ಏಪ್ರಿಲ್ ತಿಂಗಳಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸಲಾಗಿದೆ. 8,96,447 ವಿದ್ಯಾರ್ಥಿಗಳು

ಎರಡು ವೆಬ್‌ಸೈಟ್‌ಗಳಲ್ಲಿ ವೀಕ್ಷಿಸಿ ಎಸ್‌ಎಸ್‌ಎಲ್‌ಸಿ ಫಲಿತಾಂಶ : ಎಸ್‌ಎಂಎಸ್‌ನಲ್ಲೂ ಸಿಗುತ್ತದೆ ರಿಸಲ್ಟ್‌ Read More »

ಇಂದು ದ.ಕ ಬಂದ್‌, ಮಂಗಳೂರಿನಲ್ಲಿ ಬಸ್‌ಗೆ ಕಲ್ಲು ತೂರಾಟ

ಸುಹಾಸ್‌ ಶೆಟ್ಟಿ ಕೊಲೆಗೆ ಹಿಂದೂ ಸಂಘಟನೆಗಳಿಂದ ಆಕ್ರೋಶ ಮಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್‌ ಶೆಟ್ಟಿ ಹತ್ಯೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಬಂದ್​​ಗೆ ವಿಶ್ವ ಹಿಂದೂ ಪರಿಷತ್ ಕರೆ ಕೊಟ್ಟಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಹೇರಲಾಗಿದೆ. ಮಂಗಳೂರಲ್ಲಿ ವಾಹನ ಸಂಚಾರ ಬಹುತೇಕ ಬಂದ್‌ ಆಗಿದೆ. ಅಂಗಡಿ ಮುಂಗಟ್ಟುಗಳು ಮುಚ್ಚಿವೆ. ಮಂಗಳೂರಿನಲ್ಲಿ ಸಂಚಾರ ಆರಂಭಿಸಿದ ಬಸ್‌ಗೆ ಕಲ್ಲು ತೂರಲಾಗಿದೆ. ಗುಂಪೊಂದು ಹಂಪನಕಟ್ಟೆ ಬಳಿ ಬಸ್‌ಗೆ ಕಲ್ಲು ತೂರಾಟ ನಡೆಸಿದ ಪರಿಣಾಮ ಬಸ್ಸಿನ ಮುಂಭಾಗದ

ಇಂದು ದ.ಕ ಬಂದ್‌, ಮಂಗಳೂರಿನಲ್ಲಿ ಬಸ್‌ಗೆ ಕಲ್ಲು ತೂರಾಟ Read More »

ಹಿಂದೂ ಕಾರ್ಯಕರ್ತ ಸುಹಾಸ್‌ ಶೆಟ್ಟಿ ಹತ್ಯೆ : ಮಂಗಳೂರಿನಲ್ಲಿ ಹೈ ಅಲರ್ಟ್‌, ಬಂದ್‌ ಪರಿಸ್ಥಿತಿ

ಗುರುವಾರ ರಾತ್ರಿ ಬಜಪೆ ಸಮೀಪ ನಡುರಸ್ತೆಯಲ್ಲಿ ಕಾರು ಅಡ್ಡಗಟ್ಟಿ ತಲವಾರುಗಳಿಂದ ಕೊಚ್ಚಿ ಭೀಕರ ಹತ್ಯೆ ಮಂಗಳೂರು: ಬಜಪೆಯ ಕಿನ್ನಿಪದವುನಲ್ಲಿ ಗುರುವಾರ ರಾತ್ರಿ ರೌಡಿಶೀಟರ್ ಮೂಲತಃ ಬೆಳ್ತಂಗಡಿಯ ನಿವಾಸಿ ಸುಹಾಸ್ ಶೆಟ್ಟಿ (32) ಎಂಬವನನ್ನು ತಂಡವೊಂದು ಮಾರಕಾಸ್ತ್ರಗಳಿಂದ ಕಡಿದು ಕೊಲೆ ಮಾಡಿದ ಬರ್ಬರ ಘಟನೆ ಹಿನ್ನೆಲೆ ಇಂದು ಮಂಗಳೂರಿನಲ್ಲಿ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಾಗಿದ್ದು, ನಗರದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಪೊಲೀಸರು ಹೈ ಅಲರ್ಟ್‌ ಘೋಷಿಸಿದ್ದಾರೆ. ಬೆಳಗ್ಗಿನಿಂದಲೇ ಮಂಗಳೂರಿನಲ್ಲಿ ಬಂದ್‌ ಮಾದರಿಯ ವಾತಾವರಣ ಕಂಡುಬರುತ್ತಿದೆ. ಬಸ್‌ಗಳು ಓಡಾಟ ನಡೆಸುತ್ತಿಲ್ಲ. ಕೆಲವೇ

ಹಿಂದೂ ಕಾರ್ಯಕರ್ತ ಸುಹಾಸ್‌ ಶೆಟ್ಟಿ ಹತ್ಯೆ : ಮಂಗಳೂರಿನಲ್ಲಿ ಹೈ ಅಲರ್ಟ್‌, ಬಂದ್‌ ಪರಿಸ್ಥಿತಿ Read More »

ಅಮುಲ್ ಹಾಲಿನ ದರ 2.ರೂ ಏರಿಕೆ

ಬೆಂಗಳೂರು: ಇತ್ತೀಚಿಗೆ ದಿನಗಳಲ್ಲಿ ಕೆಎಂಎಫ್ ನಂದಿನಿ ಹಾಲಿನ ಬೆಲೆ ಏರಿಕೆಯಾಗಿದೆ.  ಇದೀಗ ಅದರ ಬೆನ್ನಲ್ಲೇ ಅಮುಲ್ ಹಾಲಿನ ದರ 2 ರೂ. ಏರಿಕೆಯಾಗಿದೆ. ದೇಶಾದ್ಯಂತ ಅಮುಲ್ ಹಾಲಿನ ಪರಿಷ್ಕೃತ ದರ ಇಂದಿನಿಂದಲೇ (ಮೇ 1) ಜಾರಿಯಾಗಿದೆ. ಈ ದರ ಏರಿಕೆಯು ಅಮುಲ್ ಸ್ಟ್ಯಾಂಡರ್ಡ್, ಅಮುಲ್ ಬಫೆಲೋ, ಅಮುಲ್ ಗೋಲ್ಡ್, ಅಮುಲ್ ಸ್ಲಿಮ್ ಆಂಡ್ ಟ್ರಿಮ್, ಅಮುಲ್ ಚಾಯ್‌ಮಜಾ, ಅಮುಲ್ ತಾಜಾ ಹಾಗೂ ಅಮುಲ್ ಕೌ ಮಿಲ್ಕ್ ಗಳಿಗೆ ಬೆಲೆ ಏರಿಕೆ ಅನ್ವಯವಾಗುತ್ತದೆ

ಅಮುಲ್ ಹಾಲಿನ ದರ 2.ರೂ ಏರಿಕೆ Read More »

ನಾಳೆ (ಮೇ.2) : ಎಸ್‍.ಎಸ್.ಎಲ್.ಸಿ ಪರೀಕ್ಷೆ ಫಲಿತಾಂಶ ಪ್ರಕಟ

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ನಡೆಸಿದ್ದ 2025ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆ -1ರ ಫಲಿತಾಂಶ ನಾಳೆ ಮೇ. 2ರಂದು ಪ್ರಕಟವಾಗಲಿದೆ. ಬೆಳಗ್ಗೆ 11.30ಕ್ಕೆ ಶಾಲಾ ಶಿಕ್ಷಣ ಸಚಿವರು ಸುದ್ದಿಗೋಷ್ಠಿ ನಡೆಸಿ ಪರೀಕ್ಷೆಯ ಫಲಿತಾಂಶ ಪ್ರಕಟಿಸಲಿದ್ದಾರೆ. ಫಲಿತಾಂಶವನ್ನು karresults.nic.in ವೆಬ್ ಸೈಟ್ ನಲ್ಲಿ ಮಧ್ಯಾಹ್ನ 12.30ಗೆ ವೀಕ್ಷಿಸಬಹುದು.

ನಾಳೆ (ಮೇ.2) : ಎಸ್‍.ಎಸ್.ಎಲ್.ಸಿ ಪರೀಕ್ಷೆ ಫಲಿತಾಂಶ ಪ್ರಕಟ Read More »

ಯಕ್ಷಗಾನ ವಿದ್ವಾಂಸ ಡಾ.ಎಂ. ಪ್ರಭಾಕರ ಜೋಶಿಯವರಿಗೆ ಸ್ವರ್ಣ ಸಾಧನಾ ಪ್ರಶಸ್ತಿ ಪ್ರದಾನ

ಪುತ್ತೂರು : ಪ್ರಸ್ತುತ ಕೂಡು ಕುಟುಂಬದ ಸವಿಯ ಸನ್ನಿವೇಶ ಕಡಿಮೆಯಾಗುತ್ತಿದ್ದು, ಇದು ಕಟು ವಾಸ್ತವವಾಗಿದೆ. ಈ ನಿಟ್ಟಿನಲ್ಲಿ ನಮ್ಮ ಸಂಜೆಯ ಮೌಲ್ಯಗಳನ್ನು ಗಟ್ಟಿಗೊಳಿಸುವಲ್ಲಿ, ಮೌಲ್ಯಯುತವಾಗಿಸುವಲ್ಲಿ ನಿವೃತ್ತ ನೌಕರರಂತಹ ಸಂಘಟನೆ ಪೂರಕವಾಗಿದೆ ಎಂದು ವಿಶ್ರಾಂತ ಪ್ರೊಫೆಸರ್, ಸಾಹಿತಿ ತಾಳ್ತಂಜೆ ವಸಂತ ಕುಮಾರ್‍ ಅಭಿಪ್ರಾಯಪಟ್ಟವರು. ಅವರು ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘ ಪುತ್ತೂರು ತಾಲೂಕು ಘಟಕದ ವತಿಯಿಂದ ಸ್ವರ್ಣ ಸಾಧನಾ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ, ಯಕ್ಷಗಾನ ವಿದ್ವಾಂಸ ಡಾ.ಎಂ.ಪ್ರಭಾಕರ ಜೋಶಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು.

ಯಕ್ಷಗಾನ ವಿದ್ವಾಂಸ ಡಾ.ಎಂ. ಪ್ರಭಾಕರ ಜೋಶಿಯವರಿಗೆ ಸ್ವರ್ಣ ಸಾಧನಾ ಪ್ರಶಸ್ತಿ ಪ್ರದಾನ Read More »

ಗಾಳಿ ಮಳೆಗೆ ತೆಂಗಿನ ಮರ ಬಿದ್ದು ಮನೆ ಹಾನಿ

ಸುಳ್ಯ: ಭಾರೀ ಗಾಳಿ ಮಳೆಗೆ ತಾಲೂಕಿನ ತೊಡಿಕಾನ ಗ್ರಾಮದ ಬೊಳ್ಳುರು ಪದ್ಮಯ್ಯ ಗೌಡರ ಮನೆಯ ಮೇಲೆ ತೆಂಗಿನ ಮರ ಬಿದ್ದು ಹಾನಿಯಾದ ಘಟನೆ ನಡೆದಿದೆ. ಅದೃಷ್ಟವಶಾತ್ ಮನೆಯವರು ಅಪಾಯದಿಂದ ಪಾರಾಗಿದ್ದಾರೆ. ಘಟನೆಯಲ್ಲಿ ಮನೆಯ ಹಂಚು ಮುರಿದು ಬಿದ್ದಿದೆ ಎಂದು ತಿಳಿದು ಬಂದಿದೆ. ಮನೆಯೊಳಗೆ ನೀರು ಬಂದಿದ್ದು, ಇದರಿಂದ ಮನೆಯೊಳಗೆ ಇದ್ದ ವಸ್ತುಗಳಿಗೆ ಹಾನಿಯಾಗಿದೆ. ಕಂದಾಯ ಇಲಾಖೆ ಹಾಗೂ ಸ್ಥಳೀಯ ಗ್ರಾಮ ಪಂಚಾಯತ್‌ಗೆ ಮಾಹಿತಿ ನೀಡಲಾಗಿದೆ.

ಗಾಳಿ ಮಳೆಗೆ ತೆಂಗಿನ ಮರ ಬಿದ್ದು ಮನೆ ಹಾನಿ Read More »

error: Content is protected !!
Scroll to Top