ಸುದ್ದಿ

ಮೇ 29ರಿಂದ ಮುಂದಿನ ಶೈಕ್ಷಣಿಕ ವರ್ಷದ ಶಾಲಾರಂಭ

2025- 26ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಇಂತಿದೆ ಬೆಂಗಳೂರು: ಈ ಬೇಸಿಗೆ ರಜೆ ಕಳೆದ ಬಳಿಕ ಮೇ 29ರಿಂದ ಮುಂದಿನ ಶೈಕ್ಷಣಿಕ ವರ್ಷದ ಚಟುವಟಿಕೆಗಳು ಪ್ರಾರಂಭಗೊಳ್ಳಲಿವೆ. ಕರ್ನಾಟಕ ರಾಜ್ಯ ಶಾಲಾ ಶಿಕ್ಷಣ ಇಲಾಖೆ 2025- 26ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಬಿಡುಗಡೆ ಮಾಡಿದೆ. ಮೇ 29ರಿಂದ ಶಾಲೆಗಳನ್ನು ಆರಂಭಿಸಲು ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. ರಾಜ್ಯ ಪಠ್ಯಕ್ರಮದ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ, ಪ್ರೌಢಶಾಲೆಗಳಿಗೆ ಇದು ಅನ್ವಯವಾಗಲಿದೆ ಎಂದು ಪ್ರಕಟಣೆ ತಿಳಿಸಿದೆ.ಮೇ 29ರಿಂದ ಶಾಲೆಗಳು ಆರಂಭವಾಗಲಿದ್ದು, […]

ಮೇ 29ರಿಂದ ಮುಂದಿನ ಶೈಕ್ಷಣಿಕ ವರ್ಷದ ಶಾಲಾರಂಭ Read More »

ಸೌಜನ್ಯಾ ಪ್ರಕರಣ : ನಾಳಿನ ಸಭೆಗೆ ಹೈಕೋರ್ಟ್‌ ತಡೆ

ಬೆಳ್ತಂಗಡಿ : ಸೌಜನ್ಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಏ.6ರಂದು ನಡೆಯಬೇಕಿದ್ದ ಸಭೆಗೆ ಹೈಕೋರ್ಟ್‌ ತಾತ್ಕಾಲಿಕ ತಡೆಯಾಜ್ಞೆ ನೀಡಿದೆ. ನಾಳೆ ಧರ್ಮಸ್ಥಳದಿಂದ ಉಜಿರೆವರೆಗೆ ಮೆರವಣಿಗೆ ನಡೆಸಿ ಉಜಿರೆಯಲ್ಲಿ ಹಕ್ಕೊತ್ತಾಯ ಸಭೆ ನಡೆಸಲು ನಿರ್ಧರಿಸಲಾಗಿತ್ತು.ಆರಂಭದಲ್ಲಿ ಈ ಪ್ರತಿಭಟನೆಗೆ ನ್ಯಾಯಾಲಯ ಅನುಮತಿ ನೀಡಿತ್ತು. ಆದರೆ ಈ ಪ್ರತಿಭಟನೆಗೆ ಸಂಬಂಧಿಸಿ ವಾಟ್ಸಪ್‌ ಸೇರಿದಂತೆ ವಿವಿಧ ಸೋಷಿಯಲ್‌ ಮೀಡಿಯಾಗಳಲ್ಲಿ ಹರಿದಾಡುತ್ತಿರುವ ಸಂದೇಶಗಳನ್ನು ಗಮನಿಸಿದ ಬಳಿಕ ಪರಿಸ್ಥಿತಿ ಗಂಭೀರವಾಗಿರುವುದನ್ನು ಅರಿತು ನ್ಯಾಯಾಲಯ ತಾತ್ಕಾಲಿಕ ತಡೆಯಾಜ್ಞೆ ನೀಡಿದೆ.ಪ್ರತಿಭಟನೆಗೆ ಅವಕಾಶ ನೀಡದಂತೆ ಸಲ್ಲಿಸಿದ್ದ ರಿಟ್‌ ಅರ್ಜಿಯನ್ನು

ಸೌಜನ್ಯಾ ಪ್ರಕರಣ : ನಾಳಿನ ಸಭೆಗೆ ಹೈಕೋರ್ಟ್‌ ತಡೆ Read More »

ಪುತ್ತೂರಿನಲ್ಲಿ ಭಾವ ತೀರ ಯಾನ ಸಿನಿಮಾ ನಾಳೆ ಸಂಜೆ 4:30ಕ್ಕೆ ಚಿತ್ರ ಪ್ರದರ್ಶನ

ಪುತ್ತೂರು : ಸುಳ್ಯದ ಯುವ ಸಂಗೀತ ನಿರ್ದೇಶಕ ಮಯೂರ ಅಂಬೆಕಲ್ಲು ಹಾಗು ತೇಜಸ್‍ ಕಿರಣ್‍ ರವರ ನಿರ್ದೇಶನದಿಂದ ಮೂಡಿಬಂದ “ಭಾವ ತೀರ ಯಾನ” ಸಿನಿಮಾ ರಾಜ್ಯಾದ್ಯಂತ ಅದ್ಭುತವಾಗಿ ಚಿತ್ರ ಪ್ರದರ್ಶನಗೊಳ್ಳುತ್ತಿದೆ ಪುತ್ತೂರಿನ ಭಾರತ್ ಸಿನಿಮಾಸ್‍ನಲ್ಲಿ ಭಾವ ತೀರ ಯಾನ ಏ.05(ನಾಳೆ) ರಂದು ಸಂಜೆ 4:30 ರ ಸಮಯಕ್ಕೆ  ಶೋ ನೀಡಲು ನಿರ್ಧರಿಸಲಾಗಿದೆ.

ಪುತ್ತೂರಿನಲ್ಲಿ ಭಾವ ತೀರ ಯಾನ ಸಿನಿಮಾ ನಾಳೆ ಸಂಜೆ 4:30ಕ್ಕೆ ಚಿತ್ರ ಪ್ರದರ್ಶನ Read More »

ಚಿನ್ನದ ಬೆಲೆ ದಿಢೀರ್‌ ಇಳಿಕೆ : ಒಂದೇ ದಿನದಲ್ಲಿ 1,600 ರೂ. ಕಡಿಮೆ

ನವದೆಹಲಿ: ಕೆಲ ದಿನಗಳಿಂದ ಭಾರಿ ಏರಿಕೆ ಕಾಣುತ್ತಿದ್ದ ಚಿನ್ನ ಮತ್ತು ಬೆಳ್ಳಿಯ ದರ ಇಂದು ದಿಢೀರ್‌ ಇಳಿಕೆಯಾಗಿದೆ. ಇಂದು 24 ಕ್ಯಾರೆಟ್ ಚಿನ್ನದ ಬೆಲೆ 1,740 ರೂ. ಮತ್ತು 22 ಕ್ಯಾರೆಟ್ ಚಿನ್ನದ ಬೆಲೆ 1,600 ರೂ. ಕಡಿಮೆಯಾಗಿದೆ. ಶುಕ್ರವಾರ ಬೆಂಗಳೂರಿನಲ್ಲಿ 10 ಗ್ರಾಂ 24 ಕ್ಯಾರಟ್ ಚಿನ್ನದ ಬೆಲೆ 91,640 ರೂ. ಆಗಿದ್ದರೆ, 22 ಕ್ಯಾರಟ್ ಚಿನ್ನದ ಬೆಲೆ 84,000 ರೂ.ಗೆ ಇಳಿಕೆಯಾಗಿದೆ. ಗುರುವಾರ 10 ಗ್ರಾಂ 24 ಕ್ಯಾರೆಟ್ ಬೆಲೆ 93,380 ರೂ. ಆಗಿದ್ದರೆ,

ಚಿನ್ನದ ಬೆಲೆ ದಿಢೀರ್‌ ಇಳಿಕೆ : ಒಂದೇ ದಿನದಲ್ಲಿ 1,600 ರೂ. ಕಡಿಮೆ Read More »

ಕಾಂಗ್ರೆಸ್‌ ಮುಖಂಡನ ಕಿರುಕುಳದಿಂದ ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ

ರಾಜಕೀಯ ಪ್ರೇರಿತ ಎಫ್‌ಐಆರ್‌ ದಾಖಲಿಸಿದ್ದಾರೆ ಎಂದು ಆರೋಪ ಬೆಂಗಳೂರು : ಕಾಂಗ್ರೆಸ್‌ ಶಾಸಕರ ಆಪ್ತನ ಕಿರುಕುಳದಿಂದ ಬೇಸತ್ತು ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ಸಂಭವಿಸಿದೆ. ಬೆಂಗಳೂರಿನ ನಾಗವಾರದ ಕಚೇರಿಯಲ್ಲೇ ವಿನಯ್ ಸೋಮಯ್ಯ(35) ಎಂಬವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೂ ಮುನ್ನ ಸಾಮಾಜಿಕ ಜಾಲತಾಣದಲ್ಲಿ ಡೆತ್​ನೋಟ್ ಪೋಸ್ಟ್ ಮಾಡಿದ್ದ ವಿನಯ್, ರಾಜಕೀಯ ಪ್ರೇರಿತ ಎಫ್‌ಐಆರ್‌ನಿಂದ ಮನನೊಂದು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಬರೆದುಕೊಂಡಿದ್ದರು. ವಿನಯ್​ ವಾಟ್ಸ್​ಆ್ಯಪ್​ ಗ್ರೂಪ್​​ ಒಂದರ ಅಡ್ಮಿನ್ ಆಗಿದ್ದರು. ಆ ಗ್ರೂಪ್​ನಲ್ಲಿ ಇತ್ತೀಚೆಗೆ ಕಾಂಗ್ರೆಸ್​ ಶಾಸಕರೊಬ್ಬರ

ಕಾಂಗ್ರೆಸ್‌ ಮುಖಂಡನ ಕಿರುಕುಳದಿಂದ ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ Read More »

ವಕ್ಫ್‌ ಮಸೂದೆ ಪಾಸ್‌ ಆದ ಬಳಿಕ ಅನ್ವರ್‌ ಮಾಣಿಪ್ಪಾಡಿಗೆ ಜೀವ ಬೆದರಿಕೆ

ವಿದೇಶಗಳಿಂದ ಕರೆ ಮಾಡಿ ಬೆದರಿಕೆಯೊಡ್ಡುತ್ತಿರುವ ಕುರಿತು ಪೊಲೀಸ್‌ ಕಮಿಷನರ್‌ಗೆ ದೂರು ಮಂಗಳೂರು: ಸಂಸತ್ತಿನಲ್ಲಿ ವಕ್ಫ್‌ ತಿದ್ದುಪಡಿ ಮಸೂದೆ ಪಾಸ್‌ ಆದ ಬೆನ್ನಲ್ಲೇ ಕರ್ನಾಟಕದ ಅಲ್ಪಸಂಖ್ಯಾತ ಆಯೋಗದ ಮಾಜಿ ಅಧ್ಯಕ್ಷ ಅನ್ವರ್ ಮಾಣಿಪಾಡಿ ಅವರಿಗೆ ವಿದೇಶದಿಂದ ಬೆದರಿಕೆ ಕರೆಗಳು ಬರಲಾರಂಭಿಸಿವೆ. ಈ ವಿಚಾರವಾಗಿ ಅನ್ವರ್ ಮಾಣಿಪ್ಪಾಡಿ ಮಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಮಾಹಿತಿ ನೀಡಿದ್ದಾರೆ. ಇಂಟರ್‌ನೆಟ್ ಆಧಾರಿತ ಕರೆ ಮೂಲಕ ಬೆದರಿಕೆ ಕರೆ ಬಂದಿದೆ ಎಂದು ಅನ್ವರ್‌ ಮಾಣಿಪ್ಪಾಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಅನ್ವರ್ ಮಾಣಿಪ್ಪಾಡಿ ಮಂಗಳೂರಿನಲ್ಲಿ ವಾಸವಾಗಿದ್ದಾರೆ.

ವಕ್ಫ್‌ ಮಸೂದೆ ಪಾಸ್‌ ಆದ ಬಳಿಕ ಅನ್ವರ್‌ ಮಾಣಿಪ್ಪಾಡಿಗೆ ಜೀವ ಬೆದರಿಕೆ Read More »

ನೀರಕಟ್ಟೆಯಲ್ಲಿ ಬಸ್‌ ಪಲ್ಟಿಯಾಗಿ ಮೃತಪಟ್ಟ ಯುವಕ ಬೆಂಗಳೂರಿನವರು

12 ಮಂದಿಗೆ ಗಾಯ; ಓರ್ವನಿಗೆ ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಉಪ್ಪಿನಂಗಡಿ: ಬಜತ್ತೂರು ಗ್ರಾಮದ ನೀರಕಟ್ಟೆ ಎಂಬಲ್ಲಿ ಇಂದು ಮುಂಜಾನೆ ಖಾಸಗಿ ಬಸ್‌ ಪಲ್ಟಿಯಾಗಿ ಮೃತಪಟ್ಟ ವ್ಯಕ್ತಿಯನ್ನು ಬೆಂಗಳೂರಿನ ನಿವಾಸಿ ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ 12 ಮಂದಿ ಗಾಯಗೊಂಡಿದ್ದು, ಈ ಪೈಕಿ ಓರ್ವನ ಸ್ಥಿತಿ ಚಿಂತಾಜನಕವಿದೆ ಎನ್ನಲಾಗಿದೆ. ಬೆಂಗಳೂರಿನಿಂದ ಉಡುಪಿಗೆ ಬರುತ್ತಿದ್ದ ಖಾಸಗಿ ಬಸ್‌ ಬೆಳಗ್ಗೆ 5 ಗಂಟೆಗೆ ವೇಳೆಗೆ ನೀರಕಟ್ಟೆಯ ಕಡಿದಾದ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.ಮೃತಪಟ್ಟವರನ್ನು ಬೆಂಗಳೂರಿನ ಯಡಿಯೂರು ನಿವಾಸಿ ಹರ್ಷ (24) ಎಂದು

ನೀರಕಟ್ಟೆಯಲ್ಲಿ ಬಸ್‌ ಪಲ್ಟಿಯಾಗಿ ಮೃತಪಟ್ಟ ಯುವಕ ಬೆಂಗಳೂರಿನವರು Read More »

ಬಾವಿಯೊಳಗೆ ಉಸಿರುಕಟ್ಟಿ 8 ಮಂದಿ ಸಾವು

ಸ್ವಚ್ಛಗೊಳಿಸಲು ಇಳಿದವರು ವಿಷಾನಿಲ ಸೇವಿಸಿ ಮೃತ್ಯು ಹೊಸದಿಲ್ಲಿ: ಬಾವಿಯೊಳಗೆ ಉಸಿರುಕಟ್ಟಿ 8 ಮಂದಿ ಸಾವಿಗೀಡಾದ ದಾರುಣ ಘಟನೆ ಮಧ್ಯ ಪ್ರದೇಶದ ಖಾಂಡ್ವಾ ಜಿಲ್ಲೆಯಲ್ಲಿ ಸಂಭವಿಸಿದೆ. ಛಾಯ್‌ಗಾಂವ್‌ ಮಖಾನ ಎಂಬಲ್ಲಿ ಊರಿನ ಉತ್ಸವದ ವಿಗ್ರಹ ವಿಸರ್ಜನೆಗೆ ಮುಂಚಿತವಾಗಿ ಬಾವಿಯ ನೀರನ್ನು ಸ್ವಚ್ಛಗೊಳಿಸುವ ಕೆಲಸ ನಡೆಯುತ್ತಿದ್ದಾಗ ಬಾವಿಯಲ್ಲಿದ್ದವರು ವಿಷಾನಿಲದಿಂದಾಗಿ ಉಸಿರುಕಟ್ಟಿ ಸಾವಿಗೀಡಾಗಿದ್ದಾರೆ. ಮೊದಲು ಓರ್ವ ಕಾರ್ಮಿಕ ಬಾವಿಗಿಳಿದಿದ್ದು, ಅತ ಉಸಿರುಕಟ್ಟಿ ಒದ್ದಾಡುವುದನ್ನು ನೋಡಿ ಉಳಿದವರು ಅವನನ್ನು ರಕ್ಷಿಸಲು ಇಳಿದಿದ್ದರು. ಆದರೆ ಎಲ್ಲರೂ ಉಸಿರುಕಟ್ಟಿ ಮೇಲೆ ಬರಲಾಗದೆ ಸಾವಿಗೀಡಾಗಿದ್ದಾರೆ. ಈ ಬಾವಿ

ಬಾವಿಯೊಳಗೆ ಉಸಿರುಕಟ್ಟಿ 8 ಮಂದಿ ಸಾವು Read More »

ಬಾಲಿವುಡ್‌ನ ಹಿರಿಯ ನಟ, ನಿರ್ದೇಶಕ ಮನೋಜ್‌ ಕುಮಾರ್‌ ನಿಧನ

ರಾಷ್ಟ್ರಪ್ರೇಮದ ಚಿತ್ರಗಳಿಂದ ಪ್ರಸಿದ್ಧರಾಗಿದ್ದ ಮನೋಜ್‌ ಕುಮಾರ್‌ ಮುಂಬಯಿ: ಬಾಲಿವುಡ್‌ನ ಹಿರಿಯ ನಟ ಹಾಗೂ ನಿರ್ದೇಶಕ ಮನೋಜ್ ಕುಮಾರ್ ಇಂದು ನಸುಕಿನ ವೇಳೆ ನಿಧನ ಹೊಂದಿದ್ದಾರೆ. ಅವರಿಗೆ 87 ವರ್ಷ ವಯಸ್ಸಾಗಿತ್ತು. ಹಲವು ಸಮಯದಿಂದ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಾ ಇದ್ದರು. ಅವರು ರಾಷ್ಟ್ರಪ್ರೇಮದ ಸಿನಿಮಾಗಳಿಗೆ ಹೆಸರುವಾಸಿಯಾಗಿದ್ದರು. ಈ ಕಾರಣಕ್ಕೆ ಅವರಿಗೆ ‘ಭಾರತ್ ಕುಮಾರ್’ ಎಂಬ ಹೆಸರು ಇತ್ತು.ಮನೋಜ್ ಕುಮಾರ್ ಅವರನ್ನು ಕೆಲ ವಾರಗಳ ಹಿಂದೆ ಮುಂಬಯಿಯ ಕೋಕಿಲಾಬೆನ್ ಧೀರೂಭಾಯಿ ಅಂಬಾನಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಇಂದು ಮುಂಜಾನೆ

ಬಾಲಿವುಡ್‌ನ ಹಿರಿಯ ನಟ, ನಿರ್ದೇಶಕ ಮನೋಜ್‌ ಕುಮಾರ್‌ ನಿಧನ Read More »

ಬೆಳ್ತಂಗಡಿ : ತರಕಾರಿ ಟೆಂಪೊದಲ್ಲಿ ವಧೆಗಾಗಿ ಸಾಗಿಸುತ್ತಿದ್ದ 15 ಗೋವುಗಳ ರಕ್ಷಣೆ

ಬೆಳ್ಳಂಬೆಳಗ್ಗೆ ಕಾರ್ಯಾಚರಣೆ ನಡೆಸಿದ ಹಿಂದೂ ಸಂಘಟನೆ ಕಾರ್ಯಕರ್ತರು ಬೆಳ್ತಂಗಡಿ: ವಧಿಸುವ ಸಲುವಾಗಿ ಮಂಗಳೂರಿಗೆ ಸಾಗಿಸುತ್ತಿದ್ದ ಸುಮಾರು 15 ಗೋವುಗಳನ್ನು ಇಂದು ನಸುಕಿನ ಹೊತ್ತು ಬೆಳ್ತಂಗಡಿ ಸಮೀಪ ರಕ್ಷಿಸಲಾಗಿದೆ. ತರಕಾರಿ ವಾಹನದಲ್ಲಿ ಗೋವು ಸಾಗಾಟ ಮಾಡುತ್ತಿರುವ ಮಾಹಿತಿ ಸಿಕ್ಕಿ ಹಿಂದು ಸಂಘಟನೆಗಳು ವಾಹನವನ್ನು ಹಿಂಬಾಲಿಸಿ ಕಳಿಯ ನಾಯತರ್ಪು ಸಮೀಪದ ಜಾರಿಗೆಬೈಲಿನಲ್ಲಿ ಅಡ್ಡಗಟ್ಟಿದ್ದಾರೆ. ಆಗ ವಾಹನದಲ್ಲಿ ಸುಮಾರು 15 ಗೋವುಗಳನ್ನು ಅತ್ಯಂತ ಹಿಂಸಾತ್ಮಕ ರೀತಿಯಲ್ಲಿ ಸಾಗಿಸುತ್ತಿರುವುದು ಪತ್ತೆಯಾಗಿದೆ.ಮಹೇಶ್‌ ಶೆಟ್ಟಿ ತಿಮರೋಡಿ ನೇತೃತ್ವದ ರಾಷ್ಟ್ರೀಯ ಹಿಂದೂ ಜಾರಣ ವೇದಿಕೆಯ ಕಾರ್ಯಕರ್ತರು ಈ

ಬೆಳ್ತಂಗಡಿ : ತರಕಾರಿ ಟೆಂಪೊದಲ್ಲಿ ವಧೆಗಾಗಿ ಸಾಗಿಸುತ್ತಿದ್ದ 15 ಗೋವುಗಳ ರಕ್ಷಣೆ Read More »

error: Content is protected !!
Scroll to Top