ಸುದ್ದಿ

ಉಗ್ರರ ದಾಳಿಗೆ ಮೊದಲು ಅಲ್ಲಾಹು ಅಕ್ಬರ್‌ ಕೂಗಿದ್ದ ಜಿಪ್‌ಲೈನ್‌ ಆಪರೇಟರ್‌

ವೀಡಿಯೊದಲ್ಲಿ ಕಂಡು ಬಂದ ದೃಶ್ಯದ ಬಳಿಕ ನಾನಾ ಅನುಮಾನ ಶ್ರೀನಗರ: ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ಉಗ್ರರು ಗುಂಡಿನ ದಾಳಿ ನಡೆಸುವ ಸಂದರ್ಭದಲ್ಲೇ ಜಿಪ್‌ಲೈನ್‌ ಆಪರೇಟರ್‌ವೊಬ್ಬ ಅಲ್ಲಾಹು ಅಕ್ಬರ್ ಎಂದು ಮೂರು ಬಾರಿ ಕೂಗಿರುವುದು ಕಂಡುಬಂದಿದೆ. ಈ ದೃಶ್ಯ ಪ್ರವಾಸಿಗರೊಬ್ಬರ ಸೆಲ್ಫಿ ವೀಡಿಯೊದಲ್ಲಿ ಸೆರೆಯಾಗಿದೆ. ‘ಅಲ್ಲಾಹು ಅಕ್ಬರ್‌’ ಎಂದು ಕೂಗಿದ್ದ ಜಿಪ್‌ಲೈನ್‌ ಆಪರೇಟರ್‌ನನ್ನು ರಾಷ್ಟ್ರೀಯ ತನಿಖಾ ಸಂಸ್ಥೆ ಮತ್ತು ಜಮ್ಮು-ಕಾಶ್ಮೀರ ಪೊಲೀಸರು ವಿಚಾರಣೆಗಾಗಿ ಕರೆಸಿಕೊಂಡಿರುವುದಾಗಿ ಮೂಲಗಳು ತಿಳಿಸಿವೆ. ಸ್ಥಳದಲ್ಲಿದ್ದ ಎಲ್ಲರನ್ನೂ ತನಿಖಾ ಸಂಸ್ಥೆಗಳು ವಿಚಾರಣೆಗೆ ಕರೆಸಿಕೊಂಡಿವೆ. ಜಿಪ್‌ಲೈನ್ ಆಪರೇಟರ್‌ನನ್ನು […]

ಉಗ್ರರ ದಾಳಿಗೆ ಮೊದಲು ಅಲ್ಲಾಹು ಅಕ್ಬರ್‌ ಕೂಗಿದ್ದ ಜಿಪ್‌ಲೈನ್‌ ಆಪರೇಟರ್‌ Read More »

ಬದಲಾಗಲಿದೆ ಐಪಿಎಲ್‌ ಪಂದ್ಯಗಳ ಮಾದರಿ : ಪ್ರತಿ ತಂಡಕ್ಕೆ 18 ಮ್ಯಾಚ್‌

ರೌಂಡ್ ರಾಬಿನ್ ಸ್ವರೂಪದಲ್ಲಿ ಒಟ್ಟು 94 ಪಂದ್ಯ ಆಡಿಸಲು ತೀರ್ಮಾನ ಮುಂಬಯಿ: ಐಪಿಎಲ್‌ ಪಂದ್ಯದಲ್ಲಿ ಮಹತ್ವದ ಬದಲಾವಣೆಗಳನ್ನು ಮಾಡಲು ಬಿಸಿಸಿಐ ನಿರ್ಧರಿಸಿದೆ. ಇನ್ನಷ್ಟು ಹೆಚ್ಚು ಪಂದ್ಯಗಳನ್ನು ಆಡಿಸುವುದರ ಜೊತೆಗೆ ಪಂದ್ಯದ ಮಾದರಿಯನ್ನು ಬದಲಾಯಿಸುವ ಬಗ್ಗೆ ಚಿಂತನೆ ನಡೆದಿದೆ. ಈ ಬಾರಿಯ ಐಪಿಎಲ್ ಲೀಗ್ ಹಂತದಲ್ಲಿ 70 ಪಂದ್ಯಗಳನ್ನಾಡಲಾಗುತ್ತದೆ. ಆದರೆ 21ನೇ ಸೀಸನ್​ ಐಪಿಎಲ್​ನಲ್ಲಿ ಈ ಸಂಖ್ಯೆಯು 90ಕ್ಕೇರಲಿದೆ. ಅಲ್ಲದೆ ಒಟ್ಟು 94 ಪಂದ್ಯಗಳನ್ನು ಆಯೋಜಿಸಲಾಗುತ್ತದೆ. ಈ ಮೂಲಕ ಐಪಿಎಲ್ ಪಂದ್ಯಗಳ ವಿಸ್ತರಣೆಗೆ ಬಿಸಿಸಿಐ ಪ್ಲ್ಯಾನ್ ರೂಪಿಸಿದೆ. 2028ರಿಂದ

ಬದಲಾಗಲಿದೆ ಐಪಿಎಲ್‌ ಪಂದ್ಯಗಳ ಮಾದರಿ : ಪ್ರತಿ ತಂಡಕ್ಕೆ 18 ಮ್ಯಾಚ್‌ Read More »

ಕೌಶಲ್ಯಗಳ ಬೆಳವಣಿಗೆಗೆ ವಿಮರ್ಶಾತ್ಮಕ ಚಿಂತನೆ ಅಗತ್ಯ – ಬಲರಾಮ ಆಚಾರ್ಯ | ಫಿಲೋಕಾರ್ನಿವಾಲ್- 2025 ಪಿಜಿಫೆಸ್ಟ್ ಉದ್ಘಾಟನೆ

ಪುತ್ತೂರು: ಪುತ್ತೂರು ಸಂತ ಫಿಲೋಮಿನ ಕಾಲೇಜು (ಸ್ವಾಯತ್ತ) ಸ್ನಾತಕೋತ್ತರ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ಸ್ನಾತಕೋತ್ತರ ವಿಭಾಗಗಳ ಫೆಸ್ಟ್ “ಫಿಲೋಕಾರ್ನಿವಾಲ್ 2025” ಸೋಮವಾರ ಉದ್ಘಾಟನೆಗೊಂಡಿತು. ಜಿ..ಎಲ್. ಆಚಾರ್ಯ ಸಮೂಹ ಸಂಸ್ಥೆಗಳ ಎಂಡಿ ಬಲರಾಮ ಆಚಾರ್ಯ ಉದ್ಘಾಟನೆ ನೆರವೇರಿಸಿ ಮಾತನಾಡಿ, ಪ್ರಸ್ತುತ ದಿನಮಾನದಲ್ಲಿ ಕೌಶಲ್ಯಗಳು ಬಹುಮುಖ್ಯವಾಗಿದ್ದು ಕೌಶಲ್ಯಗಳ ಬೆಳವಣಿಗೆಗೆ ವಿಮರ್ಶಾತ್ಮಕ ಚಿಂತನೆಯ ಅಗತ್ಯವಿದೆ.  ವಿದ್ಯಾರ್ಥಿಗಳು ಕೇವಲ ತರಗತಿ ಚಟುವಟಿಗಳಲ್ಲಿ ಮಾತ್ರ ತೊಡಗಿಕೊಳ್ಳದೆ ಇಂತಹ ಫೆಸ್ಟ್ ಗಳನ್ನು ಆಯೋಜನೆ ಮಾಡಿ ತಮ್ಮನ್ನು ತಾವು ತೊಡಗಿಸಿಕೊಂಡರೆ ಪ್ರತಿಯೊಬ್ಬರಲ್ಲೂ ಕೌಶಲ್ಯಗಳ ಅಭಿವೃದ್ಧಿ ಸಾಧ್ಯ

ಕೌಶಲ್ಯಗಳ ಬೆಳವಣಿಗೆಗೆ ವಿಮರ್ಶಾತ್ಮಕ ಚಿಂತನೆ ಅಗತ್ಯ – ಬಲರಾಮ ಆಚಾರ್ಯ | ಫಿಲೋಕಾರ್ನಿವಾಲ್- 2025 ಪಿಜಿಫೆಸ್ಟ್ ಉದ್ಘಾಟನೆ Read More »

ಹಿಂದೂ ದ್ವೇಷದ ಪೋಸ್ಟ್‌ ಹಾಕಿದ ಮಂಗಳೂರಿನ ವೈದ್ಯೆ ವಿರುದ್ಧ ಎಫ್‌ಐಆರ್‌

ನೌಕರಿಯಿಂದ ವಜಾಗೊಳಿಸಿದ ಹೈಲ್ಯಾಂಡ್‌ ಆಸ್ಪತ್ರೆ ಮಂಗಳೂರು : ಪಹಲ್ಗಾಮ್‌ ಉಗ್ರ ದಾಳಿಯ ಬಳಿಕ ಸೋಷಿಯಲ್‌ ಮೀಡಿಯಾದಲ್ಲಿ ವಿವಾದಾತ್ಮಕ ಪೋಸ್ಟ್‌ ಒಂದನ್ನು ಹಾಕಿದ್ದ ಮಂಗಳೂರಿನ ಪ್ರತಿಷ್ಠಿತ ಖಾಸಗಿ ಆಸ್ಪತ್ರೆಯ ವೈದ್ಯೆಯನ್ನು ನೌಕರಿಯಿಂದ ವಜಾ ಮಾಡಲಾಗಿದೆ. ಡಾ.ಅಫೀಫ ಫಾತಿಮಾ ಎಂಬಾಕೆ ಜಮ್ಮು ಕಾಶ್ಮೀರದ ಪಹಲ್ಗಾಮ್ ದಾಳಿ ನಂತರ ಭಾರತ ಹಾಗೂ ಪಾಕಿಸ್ಥಾನ ಮಧ್ಯೆ ಉದ್ವಿಗ್ನ ಪರಿಸ್ಥಿತಿ ಇರುವ ಸಂದರ್ಭದಲ್ಲಿಯೇ ʼಕಾಪಾಡಿ, ಕೊಳಕು ಹಿಂದೂಗಳು ನನ್ನ ಹಿಂದೆ ಬಿದ್ದಿದ್ದಾರೆ. ಹೌದು ನಾನು ಭಾರತೀಯಳು, ಹೌದು ನಾನು ಭಾರತವನ್ನು ದ್ವೇಷಿಸುತ್ತೇನೆ’ ಎಂದು ಸೋಷಿಯಲ್‌

ಹಿಂದೂ ದ್ವೇಷದ ಪೋಸ್ಟ್‌ ಹಾಕಿದ ಮಂಗಳೂರಿನ ವೈದ್ಯೆ ವಿರುದ್ಧ ಎಫ್‌ಐಆರ್‌ Read More »

ವೇದಿಕೆ ಮೇಲೆ ಎಸ್‌ಪಿಗೆ ಹೊಡೆಯಲು ಕೈ ಎತ್ತಿದ ಸಿದ್ದರಾಮಯ್ಯ : ವೀಡಿಯೊ ವೈರಲ್‌

ಕಾಂಗ್ರೆಸ್‌ ಸಭೆಯೊಳಗೆ ಬಂದು ಸಿಎಂಗೆ ಕಪ್ಪು ಬಾವುಟ ತೋರಿಸಿ ಗೋ ಗೋ ಪಾಕಿಸ್ಥಾನ ಎಂದು ಘೋಷಣೆ ಕೂಗಿದ ಬಿಜೆಪಿ ಕಾರ್ಯಕರ್ತೆಯರು ಬೆಳಗಾವಿ : ಬೆಳಗಾವಿಯಲ್ಲಿ ನಿನ್ನೆ ಕಾಂಗ್ರೆಸ್‌ ಹಮ್ಮಿಕೊಂಡಿದ್ದ ಕಾಂಗ್ರೆಸ್‌ನ ಪ್ರತಿಭಟನಾ ಸಭೆ ಗೊಂದಲದ ಗೂಡಾಯಿತು. ಬಿಜೆಪಿಯ ಮಹಿಳಾ ಕಾರ್ಯಕರ್ತರು ಸಭೆಯೊಳಗೆ ಬಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಕಪ್ಪು ಬಾವುಟ ಪ್ರದರ್ಶಿಸಿದ್ದು, ಇದರಿಂದ ಕೆರಳಿ ಕೆಂಡವಾದ ಸಿದ್ದರಾಮಯ್ಯನವರು ಬೆಳಗಾವಿ ಎಸ್‌ಪಿಯನ್ನು ವೇದಿಕೆಗೆ ಕರೆದು ಹೊಡೆಯಲು ಕೈ ಎತ್ತಿದ ವೀಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್‌ ಆಗಿದೆ. ಸಿದ್ದರಾಮಯ್ಯನವರ ಸಾರ್ವಜನಿಕ

ವೇದಿಕೆ ಮೇಲೆ ಎಸ್‌ಪಿಗೆ ಹೊಡೆಯಲು ಕೈ ಎತ್ತಿದ ಸಿದ್ದರಾಮಯ್ಯ : ವೀಡಿಯೊ ವೈರಲ್‌ Read More »

ಕಾರಿನಲ್ಲೇ ಗುಂಡು ಹಾರಿಸಿಕೊಂಡು ಉದ್ಯಮಿ ಆತ್ಮಹತ್ಯೆ

ಕಾರ್ಕಳ : ಮಂಗಳೂರಿನಲ್ಲಿ ವಾಸವಿದ್ದ ಮೂಲತಃ ಕಾರ್ಕಳದವರಾದ ಉದ್ಯಮಿ ದಿಲೀಪ್‌ ಎನ್‌.ಆರ್‌. ಎಂಬವರು ಮಂಗಳವಾರ ನಸುಕಿನ ಹೊತ್ತು ಕಾರ್ಕಳದ ನಿಟ್ಟೆ ಸಮೀಪ ಕಾರಿನಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಸಂಭವಿಸಿದೆ. ಕಾರ್ಕಳ ಪುರಸಭೆಯ ಮಾಜಿ ಉಪಾಧ್ಯಕ್ಷರಾಗಿದ್ದರು.ವಾರ ನಸುಕಿನ ಹೊತ್ತು ಕಾರ್ಕಳದ ನಿಟ್ಟೆ ಸಮೀಪ ಕಾರಿನಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಸಂಭವಿಸಿದೆ. ಮಂಗಳೂರಿನಲ್ಲಿ ವಾಸವಿದ್ದ ದಿಲೀಪ್‌ ಎನ್‌.ಆರ್‌. ಅವರು ನಿನ್ನೆ ರಾತ್ರಿ ಅಲ್ಲಿಂದ ತನ್ನ ಕ್ವಿಡ್‌ ಕಾರಿನಲ್ಲಿ ಹೊರಟವರು ನಿಟ್ಟೆ ದೂಪಕಟ್ಟೆಯ

ಕಾರಿನಲ್ಲೇ ಗುಂಡು ಹಾರಿಸಿಕೊಂಡು ಉದ್ಯಮಿ ಆತ್ಮಹತ್ಯೆ Read More »

ವೈಭವ್ ಸೂರ್ಯವಂಶಿ ವೈಭವದ ಆಟಕ್ಕೆ ಕ್ರಿಕೆಟ್‌ ಜಗತ್ತು ಫಿದಾ

14ರ ಹರೆಯದ ಪೋರ ಮುರಿದ ದಾಖಲೆಗಳೆಷ್ಟು ಗೊತ್ತೆ? ಜೈಪುರ: ನಿನ್ನೆ ರಾತ್ರಿ ನಡೆದ ಐಪಿಎಲ್‌ನ 47ನೇ ಪಂದ್ಯದಲ್ಲಿ ಇನ್ನೂ ಮೀಸೆ ಮೂಡದ 14 ವರ್ಷದ ಬಾಲಕ ವೈಭವ್‌ ಸೂರ್ಯವಂಶಿಯ ಸಿಡಿಲಬ್ಬರದ ಶತಕದ ಆಟ ಇಡೀ ಕ್ರಿಕೆಟ್‌ ಜಗತ್ತನ್ನು ಮೋಡಿ ಮಾಡಿಬಿಟ್ಟಿದೆ. ಇದರೊಂದಿಗೆ ವೈಭವ್‌ ಎಂಬ ಬಾಲಕ ದಾಖಲೆಗಳ ಮೇಲೆ ದಾಖಲೆಗಳನ್ನು ಸೃಷ್ಟಿಸಿದ್ದಾನೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್ ತಂಡ 20 ಓವರ್​ಗಳಲ್ಲಿ 209 ರನ್​ ಕಲೆಹಾಕಿತು. ಈ ಗುರಿ ಬೆನ್ನತ್ತಿದ ರಾಜಸ್ಥಾನ್ ರಾಯಲ್ಸ್

ವೈಭವ್ ಸೂರ್ಯವಂಶಿ ವೈಭವದ ಆಟಕ್ಕೆ ಕ್ರಿಕೆಟ್‌ ಜಗತ್ತು ಫಿದಾ Read More »

ಶರವೂರಿನಲ್ಲಿ ಇಂದ್ರಜಿತು ಕಾಳಗ ತಾಳಮದ್ದಳೆ

ಶ್ರೀ ದುರ್ಗಾಂಬ ಕಲಾಸಂಗಮ ಶ್ರೀ ಕ್ಷೇತ್ರ ಶರವೂರು ಆಲಂಕಾರು ವತಿಯಿಂದ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಭಕ್ತರ ಇಷ್ಟಾರ್ಥ ಸಿದ್ಧಿಗಾಗಿ  ಇಂದ್ರಜಿತು ಕಾಳಗ ತಾಳಮದ್ದಳೆ ಜರಗಿತು. ಭಾಗವತರಾಗಿ ಡಿ. ಕೆ ಆಚಾರ್ಯ ಹಳೆನೇರೆಂಕಿ ಹಿಮ್ಮೇಳದಲ್ಲಿ  ಮುರಳೀಧರ ಕಲ್ಲೂರಾಯ,  ಚಂದ್ರ ದೇವಾಡಿಗ ನಗ್ರಿ ಅರ್ಥದಾರಿಗಳಾಗಿ (ರಾಮ1)  ಜಯರಾಮ ಗೌಡ ಬಲ್ಯ (ಇಂದ್ರಜಿತು), ಜಬ್ಬಾರ್ ಸಮೋ ಸಂಪಾಜೆ(ಹನುಮಂತ), ದಿವಾಕರ ಆಚಾರ್ಯ ಹಳೆನೇರೆಂಕಿ (ಮಾಯಾ ಸೀತೆ 1),  ಗುರು ಪ್ರಸಾದ್ ಆಲಂಕಾರು (ಮಾಯಾ ಸೀತೆ 2), ರಾಘವೇಂದ್ರ ಭಟ್ ತೋಟಂತಿಲ (ವಿಭೀಷಣ), ರಾಮ್

ಶರವೂರಿನಲ್ಲಿ ಇಂದ್ರಜಿತು ಕಾಳಗ ತಾಳಮದ್ದಳೆ Read More »

ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ವೈದ್ಯಾಧಿಕಾರಿಗೆ ಅವಾಚ್ಯ ಶಬ್ದಗಳಿಂದ ನಿಂದನೆ | ಪತ್ರಿಕಾಗೋಷ್ಠಿಯಲ್ಲಿ ಸ್ಪಷ್ಟನೆ ನೀಡಿದ ಆರೋಗ್ಯಾಧಿಕಾರಿ ಡಾ.ದೀಪಕ್‍ ರೈ

ಪುತ್ತೂರು: ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಸಾರ್ವಜನಿಕರಿಂದ ಪದೇ ಪದೇ ಆಗುತ್ತಿರುವ ತೊಂದರೆಯ ನಿಟ್ಟಿನಲ್ಲಿ  ಆಸ್ಪತ್ರೆಯ ಪ್ರಮುಖ ಬಾಗಿಲುಗಳನ್ನು ಮುಚ್ಚಲಾಗುವುದು. ಅಲ್ಲದೆ ನಾಲ್ವರು ಭದ್ರತಾ ಸಿಬ್ಬಂದಿಗಳನ್ನು ನೇಮಿಸಲಾಗುವುದು. ಈ ಕುರಿತು ಇಂದಿನಿಂದಲೇ ಕ್ರಮ ಕೈಗೊಳ್ಳಲಾಗುವುದು ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ದೀಪಕ್ ರೈ ತಿಳಿಸಿದ್ದಾರೆ. ಅವರು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಏ.25 ಶುಕ್ರವಾರ ನಡೆದ ಘಟನೆಯ ಕುರಿತು ಸ್ಪಷ್ಟನೆ ನೀಡಿ, ಮುಖ್ಯವಾಗಿ ಹೆರಿಗೆ ವಾರ್ಡಿನಲ್ಲಿ ಗಂಡಸರಿಗೆ ಎಂಟ್ರಿ ಇಲ್ಲ. ವೈದ್ಯಾಧಿಕಾರಿ ಡಾ. ಆಶಾ ಪುತ್ತೂರಾಯ ಅವರು ಘಟನೆಗೆ ಕಾರಣರಾದವರಿಗೆ ಹೊರಗೆ ಹೋಗುವಂತೆ

ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ವೈದ್ಯಾಧಿಕಾರಿಗೆ ಅವಾಚ್ಯ ಶಬ್ದಗಳಿಂದ ನಿಂದನೆ | ಪತ್ರಿಕಾಗೋಷ್ಠಿಯಲ್ಲಿ ಸ್ಪಷ್ಟನೆ ನೀಡಿದ ಆರೋಗ್ಯಾಧಿಕಾರಿ ಡಾ.ದೀಪಕ್‍ ರೈ Read More »

ಇತಿಹಾಸ ಪ್ರಸಿದ್ಧ ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ಹಾಗೂ ಪರಿವಾರ ದೈವಗಳ ನೇಮೋತ್ಸವ | ಸಹಸ್ರಾರು ಸಂಖ್ಯೆಯಲ್ಲಿ ಪಾಲ್ಗೊಂಡ ಭಕ್ತಾದಿಗಳಿಂದ ಮಲ್ಲಿಗೆ, ಪಟ್ಟೆಸೀರೆ, ಹರಕೆ ಸಮರ್ಪಣೆ

ಪುತ್ತೂರು: ಇತಿಹಾಸ ಪ್ರಸಿದ್ಧ ಬಲ್ನಾಡು ಶ್ರೀದಂಡನಾಯಕ ಉಳ್ಳಾಲ್ತಿ ದೈವಸ್ಥಾನದಲ್ಲಿ ಶ್ರೀ ದಂಡನಾಯಕ ಉಳ್ಳಾಲ್ತಿ ಹಾಗೂ ಪರಿವಾರ ದೈವಗಳ ವರ್ಷಾವಧಿ ನೇಮ ನಡಾವಳಿಯು ಎ.28 ರಂದು ಪೂರ್ವಶಿಷ್ಟ ಸಂಪ್ರದಾಯದಂತೆ ನೆರವೇರಿತು. ನೇಮ ನಡಾವಳಿಯ ಪೂರ್ವಭಾವಿಯಾಗಿ ಎ.27ರಂದು ಮಧ್ಯಾಹ್ನ ಬಲ್ನಾಡು ಶ್ರೀ ವಿನಾಯಕ ದೇವಸ್ಥಾನದಲ್ಲಿ ದೇವತಾ ಪ್ರಾರ್ಥನೆ, ವಿಶೇಷ ಮಹಾಪೂಜೆ, ಸಂಜೆ ರಂಗಪೂಜೆ, ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದಲ್ಲಿ ಶ್ರೀ ದೈವಗಳ ಭಂಡಾರ ತೆಗೆದು ನೇಮೋತ್ಸವ ನಡೆಯುವ ದೈವಸ್ಥಾನಕ್ಕೆ ಆಗಮಿಸಿದ ಬಳಿಕ ತಂಬಿಲ ಸೇವೆಗಳು ನಡೆದ ಬಳಿಕ ಅನ್ನಸಂತರ್ಪಣೆ ನೆರವೇರಿತು.

ಇತಿಹಾಸ ಪ್ರಸಿದ್ಧ ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ಹಾಗೂ ಪರಿವಾರ ದೈವಗಳ ನೇಮೋತ್ಸವ | ಸಹಸ್ರಾರು ಸಂಖ್ಯೆಯಲ್ಲಿ ಪಾಲ್ಗೊಂಡ ಭಕ್ತಾದಿಗಳಿಂದ ಮಲ್ಲಿಗೆ, ಪಟ್ಟೆಸೀರೆ, ಹರಕೆ ಸಮರ್ಪಣೆ Read More »

error: Content is protected !!
Scroll to Top