ಮುಡಾ ಹಗರಣ: ಸಿದ್ದರಾಮಯ್ಯಗೆ ಲೋಕಾಯುಕ್ತ ಕ್ಲೀನ್ಚಿಟ್
ಇದು ನಿರೀಕ್ಷಿತ ತನಿಖಾ ವರದಿ ಎಂದ ಸ್ನೇಹಮಯಿ ಕೃಷ್ಣ ಬೆಂಗಳೂರು: ಮುಡಾ ಹಗರಣದ ಲೋಕಾಯುಕ್ತ ತನಿಖೆ ಪೂರ್ಣಗೊಂಡಿದ್ದು, ನಿರೀಕ್ಷಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಪತ್ನಿ ಪಾವರ್ತಿಯವರಿಗೆ ಕ್ಲೀನ್ಚಿಟ್ ನೀಡಿದೆ. ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಪಾತ್ರ ಎಲ್ಲೂ ಕಂಡು ಬಂದಿಲ್ಲ. ಡಿನೋಟಿಫೈ ಮಾಡುವಾಗ, ಭೂಪರಿವರ್ತನೆ ಮಾಡುವಾಗ ಅಧಿಕಾರಿಗಳು ನಿಯಮಗಳನ್ನು ಉಲ್ಲಂಘನೆ ಮಾಡಿದ್ದಾರೆ ಎಂದು ಲೋಕಾಯುಕ್ತ ತನಿಖಾ ವರದಿಯಲ್ಲಿ ಉಲ್ಲೇಖಿಸಲಾಗಿದೆ ಎಂದು ಮೂಲವೊಂದು ತಿಳಿಸಿದೆ. ಮುಡಾ ಆಯುಕ್ತರು, ರೆವಿನ್ಯೂ ಅಧಿಕಾರಿಗಳು ನಿಯಮಗಳನ್ನು ಗಾಳಿಗೆ ತೂರಿರುವುದು ಕಂಡು ಬಂದಿದೆ. […]
ಮುಡಾ ಹಗರಣ: ಸಿದ್ದರಾಮಯ್ಯಗೆ ಲೋಕಾಯುಕ್ತ ಕ್ಲೀನ್ಚಿಟ್ Read More »










