ಇತಿಹಾಸ ಪ್ರಸಿದ್ದ ಮಹತೋಭಾರ ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪುತ್ತೂರು ಜಾತ್ರೆಗೆ ಬ್ರಹ್ಮರಥ ಮಂದಿರದಿಂದ ರಥವನ್ನು ಹೊರ ತರುವ ಮುಹೂರ್ತ | ರಥ ಕಟ್ಟುವ ಸ್ಥಳ ಸೂಚಿಸಿದ ಪುಷ್ಪ
ಪುತ್ತೂರು: ಇತಿಹಾಸ ಪ್ರಸಿದ್ದ ಮಹತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಏ.10ರಿಂದ ನಡೆಯುವ ಜಾತ್ರೋತ್ಸವ ಸೇರಿದಂತೆ ಏ.17ರ ಬ್ರಹ್ಮರಥೋತ್ಸವಕ್ಕೆ ಸಿದ್ಧತೆಗಾಗಿ ಮಾ.17ರಂದು ಬೆಳಿಗ್ಗೆ ಬ್ರಹ್ಮರಥ ಮಂದಿರದಿಂದ ಬ್ರಹ್ಮರಥವನ್ನು ರಥ ಬೀದಿಗೆ ತಂದು ನಿಲ್ಲಿಸುವ ಮೂಲಕ ಪುತ್ತೂರು ಜಾತ್ರೆಗೆ ಮುನ್ಸೂಚನೆ ನೀಡಲಾಗಿದೆ. ಪ್ರತಿ ವರ್ಷದಂತೆ ರಥ ಕಟ್ಟುವ ಸ್ಥಳದಲ್ಲಿ ಬಿಲ್ವಪತ್ರೆ ಭೂಸ್ಪರ್ಶ ಮಾಡುತ್ತಿದ್ದು, ಈ ಭಾರಿ ಪುಷ್ಪದ ಮಾಲೆಯೊಂದು ಭೂ ಸ್ಪರ್ಶ ಮಾಡಿದೆ. ಇಂದು ಬೆಳಿಗ್ಗೆ ಶುಭ ಮುಹೂರ್ತದಲ್ಲಿ ದೇವಳದ ಪ್ರಧಾನ ಅರ್ಚಕ ವೇ.ಮೂ ವಸಂತ ಕೆದಿಲಾಯ ಅವರು […]










