ಸುದ್ದಿ

ಭಾರಿ ಪ್ರಚಾರವೇ ಮೊನಾಲಿಸಾಗೆ ಮುಳುವಾಯಿತು

ಜನರ ಕಾಟ ತಡೆಯಲಾಗದೆ ಕುಂಭಮೇಳದಿಂದಲೇ ದೂರ ಹೋದ ಅದ್ಭುತ ಸುಂದರಿ ಪ್ರಯಾಗರಾಜ್: ರಾತ್ರಿ ಬೆಳಗಾಗುವುದರೊಳಗೆ ಸಿಗುವ ಜನಪ್ರಿಯತೆ ಹೇಗೆ ಕೆಲವೊಮ್ಮೆ ಮಾರಕವಾಗಿ ಪರಿಣಮಿಸುತ್ತದೆ ಎಂಬುದಕ್ಕೆ ಮಹಾಕುಂಭಮೇಳದ ಈ ಮೊನಾಲಿಸಾ ಸಾಕ್ಷಿ. ಕಳೆದ 2-3 ದಿನಗಳಿಂದ ಈ ಹದಿಹರೆಯದ ಯುವತಿ ಸೋಷಿಯಲ್‌ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್‌ ಆಗಿದ್ದಾಳೆ. ಫೇಸ್‌ಬುಕ್‌, ಇನ್‌ಸ್ಟಾಗ್ರಾಂ, ಫೇಸ್‌ಬುಕ್‌, ಟ್ವಿಟ್ಟರ್‌ ಸೇರಿದಂತೆ ಯಾವ ಸೋಷಿಯಲ್‌ ಮೀಡಿಯಾ ತೆರೆದರೂ ಈ ಯುವತಿಯ ವೀಡಿಯೊಗಳು, ಮತ್ತು ಫೋಟೊಗಳು ಕಾಣಿಸಿಕೊಳ್ಳುತ್ತವೆ. ಯಾವ ದೊಟ್ಟ ನಟಿಗೂ ಸಿಗದ ಪ್ರಚಾರ ಎರಡು ದಿನದಲ್ಲಿ […]

ಭಾರಿ ಪ್ರಚಾರವೇ ಮೊನಾಲಿಸಾಗೆ ಮುಳುವಾಯಿತು Read More »

ಇಂದಿನಿಂದ ರಾಜ್ಯದಲ್ಲಿ ಬಿಯರ್‌ ಬಹಳ ದುಬಾರಿ

ಬಾಟಲಿಗೆ 15ರಿಂದ 50 ರೂ. ತನಕ ಹೆಚ್ಚಳ ಬೆಂಗಳೂರು : ಇಂದಿನಿಂದ ರಾಜ್ಯದಲ್ಲಿ ಮದ್ಯ ಎಣ್ಣೆಪ್ರಿಯರ ಜೇಬು ಸುಡಲಿದೆ. ಸರ್ಕಾರ ಮತ್ತೊಮ್ಮೆ ಬಿಯರ್‌ ಬೆಲೆ ಪರಿಷ್ಕರಿಸಿದ್ದು, ಹೊಸ ಬೆಲೆ ಇಂದಿನಿಂದ ಜಾರಿಗೆ ಬರಲಿದೆ.ಅಬಕಾರಿ ಇಲಾಖೆಯಿಂದ ನಿರೀಕ್ಷಿತ ಮಟ್ಟದ ಆದಾಯ ಬರದೆ ಇರುವುದರಿಂದ ಸದ್ಯಕ್ಕೆ ಬಿಯರ್‌ ಬೆಲೆಯನ್ನು ಹೆಚ್ಚಿಸಲಾಗಿದೆ. ಪ್ರೀಮಿಯಂ (ಸ್ಟ್ರಾಂಗ್ ಬಿಯರ್‌) ಬಿಯರ್‌ ಬಾಟಲ್​ ಒಂದಕ್ಕೆ ಕನಿಷ್ಠ 15 ರಿಂದ 50 ರೂಪಾಯಿವರೆಗೆ ಹೆಚ್ಚಾಗಲಿದೆ ಎಂದು ಹೇಳಲಾಗಿದೆ. ಕರ್ನಾಟಕದಲ್ಲಿ ಬಿಯರ್‌ ಬೆಲೆ ಜಾಸ್ತಿ ಮಾಡಬೇಕು ಎನ್ನುವ ಪ್ರಸ್ತಾವನೆ

ಇಂದಿನಿಂದ ರಾಜ್ಯದಲ್ಲಿ ಬಿಯರ್‌ ಬಹಳ ದುಬಾರಿ Read More »

ಇಂದಿನಿಂದ ಅಮೆರಿಕದಲ್ಲಿ ಡೊನಾಲ್ಡ್‌ ಟ್ರಂಪ್‌ ರಾಜ್ಯಭಾರ

ಅಮೆರಿಕದ 47ನೇ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕಾರ ; ವಿದೇಶಗಳ ಗಣ್ಯರು, ಕಂಪನಿ ಸಿಇಒಗಳು ಭಾಗಿ ವಾಷಿಂಗ್ಟನ್: ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್ ಇಂದು ವಾಷಿಂಗ್ಟನ್ ಡಿಸಿಯ ಕ್ಯಾಪಿಟಲ್‌ನಲ್ಲಿ ನಡೆಯುವ ಐತಿಹಾಸಿಕ ಸಮಾರಂಭದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಎರಡನೇ ಬಾರಿಗೆ ಟ್ರಂಪ್‌ ಅಮೆರಿಕದ ಅಧ್ಯಕ್ಷರಾಗಲಿದ್ದಾರೆ. ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಸೆಲೆಬ್ರಿಟಿಗಳು, ವಿದೇಶಿ ಗಣ್ಯರು ಮತ್ತು ಕಂಪನಿಗಳ ಮುಖ್ಯಸ್ಥರು ಭಾಗಿಯಾಗಲಿದ್ದಾರೆ. ಭಾರತದ ವಿದೇಶಾಂಗ ಸಚಿವ ಎಸ್.ಜೈಶಂಕರ್ ಭಾರತವನ್ನು ಪ್ರತಿನಿಧಿಸಲಿದ್ದಾರೆ. ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್, ಇಟಲಿ

ಇಂದಿನಿಂದ ಅಮೆರಿಕದಲ್ಲಿ ಡೊನಾಲ್ಡ್‌ ಟ್ರಂಪ್‌ ರಾಜ್ಯಭಾರ Read More »

ಮಹಾಕುಂಭಮೇಳದಲ್ಲಿ ಬೆಂಕಿ ಅವಘಡ : ಉನ್ನತ ತನಿಖೆಗೆ ಆದೇಶ

ಸಿಲಿಂಡರ್‌ಗಳು ಸ್ಫೋಟಿಸಿ ಕನಿಷ್ಠ 25 ಟೆಂಟ್‌ಗಳು ಭಸ್ಮ ಪ್ರಯಾಗ್‌ರಾಜ್‌: ಮಹಾಕುಂಭಮೇಳ ನಡೆಯುವ ಸ್ಥಳದಲ್ಲಿ ಸಾಧುಗಳಿಗೆ ತಂಗಲು ನಿರ್ಮಿಸಿದ್ದ ಕನಿಷ್ಠ 25 ಟೆಂಟ್‌ಗಳು ನಿನ್ನೆ ಮಧ್ಯಾಹ್ನ ಸಂಭವಿಸಿದ ಭೀಕರ ಬೆಂಕಿ ದುರಂತದಲ್ಲಿ ಭಸ್ಮವಾಗಿವೆ. ಮಹಾಕುಂಭಮೇಳದ ಸೆಕ್ಟರ್ 19ರಲ್ಲಿ 2-3 ಸಿಲಿಂಡರ್‌ಗಳು ಸ್ಫೋಟಗೊಂಡು ಟೆಂಟ್‌ಗಳಿಗೆ ಬೆಂಕಿ ಹತ್ತಿಕೊಂಡಿತ್ತು. ಅದೃಷ್ಟವಶಾತ್ ಯಾವುದೇ ಸಾವು ಸಂಭವಿಸಿಲ್ಲ. ಟೆಂಟ್​ಗಳು ಮಾತ್ರ ಬೆಂಕಿಗೆ ಆಹುತಿಯಾಗಿವೆ. ಎಲ್ಲರೂ ಸುರಕ್ಷಿತವಾಗಿದ್ದಾರೆ. ಯಾರಿಗೂ ಕೂಡ ಗಾಯಗಳಾಗಿಲ್ಲ. ಪರಿಸ್ಥಿತಿ ಹತೋಟಿಗೆ ತರಲಾಗಿದೆ ಎಂದು ಪ್ರಯಾಗ್​ರಾಜ್​​ ಎಡಿಜಿಪಿ ಭಾನು ಭಾಸ್ಕರ್ ತಿಳಿಸಿದ್ದಾರೆ. ಅಗ್ನಿ

ಮಹಾಕುಂಭಮೇಳದಲ್ಲಿ ಬೆಂಕಿ ಅವಘಡ : ಉನ್ನತ ತನಿಖೆಗೆ ಆದೇಶ Read More »

ಕೋಟೆಕಾರು ಬ್ಯಾಂಕ್‌ ದರೋಡೆ : ಸ್ಥಳೀಯ ವ್ಯಕ್ತಿಯ ಕೈವಾಡ ಶಂಕೆ

ಪಕ್ಕಾ ಪ್ಲಾನ್‌ ಮಾಡಿ ನಡೆಸಿದ ಪರ್ಫೆಕ್ಟ್‌ ದರೋಡೆ ಮಂಗಳೂರು: ಇಡೀ ರಾಜ್ಯದಲ್ಲಿ ಸಂಚಲನಕ್ಕೆ ಕಾರಣವಾಗಿರುವ ಕೋಟೆಕಾರು ಸಹಕಾರಿ ಬ್ಯಾಂಕ್‌ ದರೋಡೆ ಕೃತ್ಯದ ಹಿಂದೆ ಸ್ಥಳೀಯರ ಕೈವಾಡವಿರುವ ಬಲವಾದ ಶಂಕೆ ವ್ಯಕ್ತವಾಗಿದ್ದು, ಈ ನಿಟ್ಟಿನಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇದು ಬಹಳ ವ್ಯವಸ್ಥಿತವಾಗಿ ಪ್ಲಾನ್‌ ರೂಪಿಸಿ ಮಾಡಿದ ದರೋಡೆ. ಸ್ಥಳೀಯ ಎಲ್ಲ ವಿಚಾರಗಳನ್ನು ತಿಳಿದುಕೊಂಡು ಹಾಡಹಗಲೇ ದರೋಡೆ ಮಾಡಲಾಗಿದೆ. ಬ್ಯಾಂಕ್‌ ಇರುವ ಸ್ಥಳ, ಬ್ಯಾಂಕಿನಲ್ಲಿರುವ ಚಿನ್ನ ಮತ್ತು ನಗದು ಹಣದ ಮಾಹಿತಿ ಮತ್ತು ತಪ್ಪಿಸಿಕೊಳ್ಳುವ ದಾರಿ ತಿಳಿದವರು ಯಾರೋ

ಕೋಟೆಕಾರು ಬ್ಯಾಂಕ್‌ ದರೋಡೆ : ಸ್ಥಳೀಯ ವ್ಯಕ್ತಿಯ ಕೈವಾಡ ಶಂಕೆ Read More »

ಸೈಫ್‌ಗೆ ಇರಿದ ಆರೋಪಿ ಬಾಂಗ್ಲಾದೇಶದ ಅಕ್ರಮ ನುಸುಳುಕೋರ

ಹಿಂದು ಹೆಸರು ಇಟ್ಟುಕೊಂಡು ನೌಕರಿಗೆ ಸೇರುತ್ತಿದ್ದ ಆರೋಪಿ ಮುಂಬಯಿ: ಬಾಲಿವುಡ್ ನಟ ಸೈಫ್ ಅಲಿ ಖಾನ್ ಮೇಲೆ ಹತ್ಯಾಯತ್ನ ಮಾಡಿದ ವ್ಯಕ್ತಿಯನ್ನು ಘಟನೆ ನಡೆದ 70 ಗಂಟೆಗಳ ಬಳಿಕ ಮುಂಬಯಿ ಪೊಲೀಸರು ಬಂಧಿಸಿದ್ದಾರೆ. ಭಾನುವಾರ ಬೆಳ್ಳಂಬೆಳಗ್ಗೆ ಥಾಣೆಯಲ್ಲಿ ಈತ ಸಿಕ್ಕಿಬಿದ್ದಿದ್ದಾನೆ. ವಿಚಾರಣೆಯಿಂದ ಈತ ಬಾಂಗ್ಲಾದೇಶದ ಅಕ್ರಮ ನುಸುಳುಕೋರ ಎಂಬ ಮಾಹಿತಿ ಹೊರಬಿದ್ದಿದೆ.ಬಂಧಿತ ಆರೋಪಿ ಭಾರತೀಯನಲ್ಲ, ಬದಲಿಗೆ ಬಾಂಗ್ಲಾದೇಶದ ನುಸುಳುಕೋರ ಎಂಬ ಅನುಮಾನವಿದೆ ಎಂದು ಡಿಸಿಪಿ ದೀಕ್ಷಿತ್ ಗೆಡಾಮ್‌ ತಿಳಿಸಿದ್ದಾರೆ. ಆರೋಪಿ ಬಳಿ ಭಾರತಕ್ಕೆ ಸಂಬಂಧಿಸಿದ ಆಧಾರ್ ಕಾರ್ಡ್

ಸೈಫ್‌ಗೆ ಇರಿದ ಆರೋಪಿ ಬಾಂಗ್ಲಾದೇಶದ ಅಕ್ರಮ ನುಸುಳುಕೋರ Read More »

ಥೈರಾಯ್ಡ್‌, ಬಿಪಿ, ಶುಗರ್‌ನಿಂದ ಬಳಲುತ್ತಿದ್ದಾರೆ ಶರಣಾದ ನಕ್ಸಲರು

ವೈದ್ಯಕೀಯ ಪರೀಕ್ಷೆ ವೇಳೆ ತೀವ್ರ ಆರೋಗ್ಯ ಸಮಸ್ಯೆಯಿರುವುದು ಪತ್ತೆ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಎದುರು ಇತ್ತೀಚೆಗೆ ಶರನಾಗಿರುವ ಮಲೆನಾಡಿನ ಆರು ನಕ್ಸಲರು ವಿವಿಧ ಅನಾರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದಾರೆ ಎನ್ನಲಾಗಿದೆ. ಆರು ನಕ್ಸಲರನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಚಿಕ್ಕಮಗಳೂರು ನಗರದ ಮಲ್ಲೇಗೌಡ ಜಿಲ್ಲಾ ಆಸ್ಪತ್ರೆಯಲ್ಲಿ ಆರೋಗ್ಯ ತಪಾಸಣೆಗೆ ಒಳಪಡಿಸಲಾಗಿದೆ. ಈ ವೇಳೆ ಅವರು ವೈದ್ಯರ ಬಳಿ ತಮ್ಮ ಅನಾರೋಗ್ಯ ಸಮಸ್ಯೆಗಳನ್ನು ಹೇಳಿಕೊಂಡಿದ್ದಾರೆ. ತನಿಖಾಧಿಕಾರಿ ಕೊಪ್ಪದ ಡಿವೈಎಸ್ಪಿ ಬಾಲಾಜಿ ಸಿಂಗ್ ನೇತೃತ್ವದಲ್ಲಿ ಬಿಗಿ ಬಂದೋಬಸ್ತಿನಲ್ಲಿ ನಕ್ಸಲರನ್ನು ಗುರುವಾರ ರಾತ್ರಿಯೇ

ಥೈರಾಯ್ಡ್‌, ಬಿಪಿ, ಶುಗರ್‌ನಿಂದ ಬಳಲುತ್ತಿದ್ದಾರೆ ಶರಣಾದ ನಕ್ಸಲರು Read More »

ವರದಕ್ಷಿಣೆ ಕಿರುಕುಳ, ಅನೈತಿಕ ಸಂಬಂಧ : ಎಸ್‌ಐ ವಿರುದ್ಧ ಪತ್ನಿ ದೂರು

ಕಾಪು ಠಾಣೆಯಲ್ಲಿರುವಾಗ ಅನೈತಿಕ ಸಂಬಂಧವಿತ್ತು ಎಂದು ಆರೋಪಿಸಿದ ಪತ್ನಿ ಚಿಕ್ಕಮಗಳೂರು: ಕಳಸ ಪಿಎಸ್‌ಐ ನಿತ್ಯಾನಂದ ಗೌಡ ವಿರುದ್ಧ ಅವರ ಪತ್ನಿ ವರದಕ್ಷಿಣೆ ಕಿರುಕುಳ ಮತ್ತು ಅನೈತಿಕ ಸಂಬಂಧದ ಕುರಿತು ದೂರು ನೀಡಿದ್ದಾರೆ. ನ್ಯಾಯ ಕೇಳಿಕೊಂಡು ಪೊಲೀಸ್ ಠಾಣೆಗೆ ಬರುವ ಮಹಿಳೆಯರನ್ನು ನಿತ್ಯಾನಂದ ಗೌಡ ಶೋಷಿಸುತ್ತಾರೆ. ತನಗೆ50 ಲಕ್ಷ ರೂ. ವರದಕ್ಷಿಣೆ ತರಲು ಕಿರುಕುಳ ನೀಡುತ್ತಿದ್ದಾರೆ ಎಂದು ಪತ್ನಿ ಗಂಭೀರ ಆರೋಪ ಮಾಡಿದ್ದಾರೆ. ಈ ದೂರಿನ ಆಧಾರದ ಮೇಲೆ ಎಸ್‌ಐ ನಿತ್ಯಾನಂದ ಗೌಡ ವಿರುದ್ಧ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ

ವರದಕ್ಷಿಣೆ ಕಿರುಕುಳ, ಅನೈತಿಕ ಸಂಬಂಧ : ಎಸ್‌ಐ ವಿರುದ್ಧ ಪತ್ನಿ ದೂರು Read More »

ಕಡಿಮೆ ಮಕ್ಕಳಿರುವ ಶಾಲೆಗಳಿಗೆ ಬೀಗ?

ಶಾಲೆಗಳನ್ನು ಸಂಯೋಜಿಸಲು ಸುತ್ತೋಲೆ ಹೊರಡಿಸಿದ ಶಿಕ್ಷಣ ಇಲಾಖೆ ಬೆಂಗಳೂರು: ಕಡಿಮೆ ಮಕ್ಕಳಿರುವ ಶಾಲೆಗಳನ್ನು ಮುಚ್ಚಲು ರಾಜ್ಯ ಸರ್ಕಾರ ಮುಂದಾಗಿದೆ ಎನ್ನುವ ಅನುಮಾನವೊಂದು ಶಿಕ್ಷಣ ಇಲಾಖೆ ಹೊರಡಿಸಿದ ಸುತ್ತೋಲೆಯಿಂದ ಉಂಟಾಗಿದೆ. ಕಡಿಮೆ ಮಕ್ಕಳು ಇರುವ ಶಾಲೆಯನ್ನು ಹತ್ತಿರದ ಮತ್ತೊಂದು ಶಾಲೆ ಜೊತೆ ಸಂಯೋಜಿಸಲು ಶಿಕ್ಷಣ ಇಲಾಖೆ ಸಿದ್ಧತೆ ಶುರು ಮಾಡಿದೆ. ಅದಕ್ಕಾಗಿ ಸಮಿತಿಯೊಂದನ್ನು ರಚನೆ ಮಾಡಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದ್ದು, ಇದು ಭಾರಿ ಕಳವಳಕ್ಕೆ ಕಾರಣವಾಗಿದೆ. ಈ ಹಿಂದೆ ಬಿಜೆಪಿ ಸರ್ಕಾರ ಕಡಿಮೆ ಮಕ್ಕಳಿರುವ 2-3 ಶಾಲೆಗಳನ್ನು

ಕಡಿಮೆ ಮಕ್ಕಳಿರುವ ಶಾಲೆಗಳಿಗೆ ಬೀಗ? Read More »

ಸೈಫ್‌ ಅಲಿಖಾನ್‌ ಹಲ್ಲೆ ಪ್ರಕರಣ: ಕೊನೆಗೂ ನಿಜವಾದ ಆರೋಪಿ ಸೆರೆ

ಮುಂಬಯಿಯ ಪಕ್ಕದಲ್ಲೇ ಇದ್ದ ಆರೋಪಿ ಮುಂಬಯಿ: ಬಾಲಿವುಡ್‌ ನಟ ಸೈಫ್ ಅಲಿ ಖಾನ್‌ ಮನೆಗೆ ನುಗ್ಗಿ ನಟನಿಗೆ ಇರಿದು ಪಲಾಯನ ಮಾಡಿದ್ದ ಆರೋಪಿಯನ್ನು ಕೊನೆಗೂ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಪಕ್ಕದ ಥಾಣೆಯಲ್ಲೇ ಇದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಆತನನ್ನು ಬಾಂದ್ರಾ ಪೊಲೀಸ್‌ ಠಾಣೆಗೆ ತಂದು ಪ್ರಶ್ನಿಸಿದ್ದು, ಈ ವೇಳೆ ಆತ ತಾನು ಸೈಫ್‌ ಅಲಿ ಖಾನ್‌ ಮನೆಗೆ ನುಗ್ಗಿದ್ದನ್ನು ಒಪ್ಪಿಕೊಂಡಿದ್ದಾನೆ. ಮೂಲತಃ ಪಶ್ಚಿಮ ಬಂಗಾಳದವನಾದ ಆತ ಮುಂಬಯಿಯಲ್ಲಿ ಬೇರೆ ಬೇರೆ ಹೆಸರಿಟ್ಟುಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.ಬಂಧಿತ ಆರೋಪಿಯನ್ನು

ಸೈಫ್‌ ಅಲಿಖಾನ್‌ ಹಲ್ಲೆ ಪ್ರಕರಣ: ಕೊನೆಗೂ ನಿಜವಾದ ಆರೋಪಿ ಸೆರೆ Read More »

error: Content is protected !!
Scroll to Top