ಸುದ್ದಿ

ನರಿಮೊಗರಿನ ಸರಸ್ವತಿ ವಿದ್ಯಾಮಂದಿರದಲ್ಲಿ ವಿಶೇಷ ಉಪನ್ಯಾಸ

ಪುತ್ತೂರು : ನರಿಮೊಗರಿನ ಸರಸ್ವತಿ ವಿದ್ಯಾಮಂದಿರದಲ್ಲಿ ಅಖಿಲ ಭಾರತೀಯ ಸಾಹಿತ್ಯ ಪರಿಷತ್ ಕರ್ನಾಟಕ ಇದರ ಪುತ್ತೂರು ತಾಲೂಕು ಘಟಕದ ವತಿಯಿಂದ ನೂತನ ವರ್ಷದ ಕಾರ್ಯಕ್ರಮ ಮತ್ತು ವಿಶೇಷ ಉಪನ್ಯಾಸ ಕಾರ್ಯಕ್ರಮ ನಡೆಯಿತು.  ಶಾಲಾ ಸಂಚಾಲಕ ಅವಿನಾಶ್ ಕೊಡಂಕಿರಿಯವರು ದೀಪ ಪ್ರಜ್ವಲಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಾ ಸಾಹಿತ್ಯದ ಬಲಗೊಳ್ಳುವಿಕೆಯೊಂದೇ ಸ್ವಸ್ಥ ಸಮಾಜದ ನಿರ್ಮಾಣಕ್ಕೆ ಹೆದ್ದಾರಿ ಎಂದರು. ಇಂತಹ ಕೈಂಕರ್ಯಗಳಲ್ಲಿ ಸರಸ್ವತಿ ವಿದ್ಯಾಮಂದಿರ ಯಾವತ್ತೂ ಮುಂಚೂಣಿಯಲ್ಲಿ ನಿಲ್ಲುತ್ತದೆ ಎಂದು ಹೇಳಿ ಸಂಘಟಕರ ಕಾರ್ಯವನ್ನು ಶ್ಲಾಘಿಸಿದರು ಶಾಂತಿಗೋಡಿನ ಖ್ಯಾತ ಚಿಂತಕರೂ, ವಿಮರ್ಶಕರೂ ಆಗಿರುವ […]

ನರಿಮೊಗರಿನ ಸರಸ್ವತಿ ವಿದ್ಯಾಮಂದಿರದಲ್ಲಿ ವಿಶೇಷ ಉಪನ್ಯಾಸ Read More »

ವಿಶೇಷ ಚೇತನೆಯ ಬಾಳಿಗೆ ಬೆಳಕಾದ ಧಮ೯ಸ್ಥಳ ಗ್ರಾಮಾಭಿವೃದ್ಧಿ ಯೋಜನೆ | ಕೆಯ್ಯೂರಿನ ಬೇಬಿಯವರಿಗೆ ವಾತ್ಸಲ್ಯ ಮನೆ ಹಸ್ತಾಂತರ

ಪುತ್ತೂರು: ಗ್ರಾಮ ಪಂಚಾಯತ್ ಗೆ ಸೇರಿದ ಬಾಡಿಗೆ ಕೊಠಡಿಯೊಂದರಲ್ಲಿ ಕಳೆದ ಹಲವು ವಷ೯ಗಳಿಂದ ತನ್ನ ತಾಯಿಯೊಂದಿಗೆ ವಾಸ್ತವ್ಯವಿದ್ದ ವಿಶೇಷ ಚೇತನೆಯ ಬಾಳಿಗೆ ಶ್ರೀ ಕ್ಷೇತ್ರ ಧಮ೯ಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬೆಳಕಾಗಿದೆ ಪುತ್ತೂರು ತಾಲೂಕಿನ ಕೆಯ್ಯೂರು ಗ್ರಾಮದ ಮಾಡವು ನಿವಾಸಿ ಬೇಬಿ ಅವರಿಗೆ ಜ್ಞಾನವಿಕಾಸ ಕಾರ್ಯಕ್ರಮದ ವಾತ್ಸಲ್ಯ ಕಾರ್ಯಕ್ರಮದಡಿಯಲ್ಲಿ ರಚನೆಯಾದ “ವಾತ್ಸಲ್ಯ ಮನೆ” ಯನ್ನು ಸೋಮವಾರ ಕೇಯ್ಯೂರು ದೇವಳದ ಮಾಜಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಶಶಿಧರ್ ರಾವ್ ಬೊಳಿಕ್ಕಲ ಹಸ್ತಾಂತರ ಮಾಡಿ, ಯೋಜನೆಯಿಂದ ಹಲವಾರು ಸಮಾಜಮುಖಿ ಕಾರ್ಯಕ್ರಮ ನಡೆಯುತ್ತಿದ್ದು

ವಿಶೇಷ ಚೇತನೆಯ ಬಾಳಿಗೆ ಬೆಳಕಾದ ಧಮ೯ಸ್ಥಳ ಗ್ರಾಮಾಭಿವೃದ್ಧಿ ಯೋಜನೆ | ಕೆಯ್ಯೂರಿನ ಬೇಬಿಯವರಿಗೆ ವಾತ್ಸಲ್ಯ ಮನೆ ಹಸ್ತಾಂತರ Read More »

ಜ್ಯೂಸ್‍ ಕುಡಿತಯುತ್ತಿದ್ದ ಅನ್ಯಕೋಮಿನ ಜೋಡಿ | ಪೋಲಿಸರಿಗೊಪ್ಪಿಸಿದ ಹಿಂದೂ ಕಾರ್ಯಕರ್ತರು

ಪುತ್ತೂರು: ಬಸ್ ನಿಲ್ದಾಣದ ಬಳಿಯ ಹೋಟೆಲ್ ಒಂದರಲ್ಲಿ ಅನ್ಯಕೋಮಿನ ಯುವಕನೋರ್ವ ಹಿಂದು ಯುವತಿಯೊಂದಿಗೆ ಜ್ಯೂಸ್ ಕುಡಿಯುತ್ತಿದ್ದ ಸಂದರ್ಭ ಸಂಘಟನೆಗಳ ಕಾರ್ಯಕರ್ತರು ಪೊಲೀಸರಿಗೆ ಮಾಹಿತಿ ನೀಡಿ ಪೊಲೀಸರಿಗೊಪ್ಪಿಸಿದ ಘಟನೆ ನಡೆದಿದೆ. ಇಬ್ಬರು ಶಿವಮೊಗ್ಗ ಮೂಲದವರು ಎಂದು ತಿಳಿದು ಬಂದಿದ್ದು, ಯುವತಿ ನಗರದಲ್ಲಿ ಪಿಜಿ ಯಿಂದ ಕಾಲೇಜಿಗೆ ತೆರಳುತ್ತಿದ್ದಳು ಎನ್ನಲಾಗಿದೆ. ಠಾಣೆಗೆ ಪುತ್ತೂರು ಬಿಜೆಪಿ ನಿಯೋಗ ಬೇಟಿ ನೀಡಿದರು. ಆದರೆ ಯಾವುದೇ ಪ್ರಕರಣ ದಾಖಲಾಗಿಲ್ಲ. ಸದ್ಯ ಪೊಲೀಸರು ಇಬ್ಬರ ಮನೆಯವರಿಗೆ ಮಾಹಿತಿ ನೀಡಿ ವಿಚಾರಣೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಜ್ಯೂಸ್‍ ಕುಡಿತಯುತ್ತಿದ್ದ ಅನ್ಯಕೋಮಿನ ಜೋಡಿ | ಪೋಲಿಸರಿಗೊಪ್ಪಿಸಿದ ಹಿಂದೂ ಕಾರ್ಯಕರ್ತರು Read More »

ಬಿಕ್ಷಾಟನೆ ನಿರ್ಮೂಲನೆ ಹಾಗೂ ಭಿಕ್ಷುಕರ ಪುನರ್ವಸತಿ ಕುರಿತಾಗಿ ಆಗ್ರಹಿಸಿದ ಕಿಶೋರ್ ಕುಮಾರ್ ಪುತ್ತೂರು

ಪುತ್ತೂರು : ಬಿಕ್ಷಾಟನೆ ನಿರ್ಮೂಲನೆ ಹಾಗೂ ಭಿಕ್ಷುಕರ ಪುನರ್ವಸತಿ ಕುರಿತಾಗಿ ಎಂ.ಎಲ್‍.ಸಿ ಕಿಶೋರ್ ಕುಮಾರ್ ಪುತ್ತೂರು ಮಾ.18(ಇಂದು) ವಿಧಾನ ಪರಿಷತ್‍ ನಲ್ಲಿ ಧ್ವನಿ ಎತ್ತಿದ್ದಾರೆ. ಮಾ. 17 2025 ರ ವಿಜಯಕರ್ನಾಟಕ ದಿನಪತ್ರಿಕೆಯಲ್ಲಿ “ಭಿಕ್ಷಾಟನೆ : 306 ಮಕ್ಕಳ ರಕ್ಷಣೆ” ಕೈಗೂಡದ ದಶಕಗಳ ಪ್ರಯತ್ನ ಎಂಬ ಶಿರೋನಾಮೆಯಡಿ ಬಂದಿರುವ ವರದಿಯನ್ನು ಶೂನ್ಯವೇಳೆಯಲ್ಲಿ ಪ್ರಸ್ತಾಪಿಸಿ,  ಈ ವರದಿಯ ಪ್ರಕಾರ ಕಳೆದ ಏಪ್ರಿಲ್ ನಿಂದ  ಡಿಸೆಂಬರ್ ತಿಂಗಳ (2024 – 25ರ ತನಕ 206  ಮಕ್ಕಳನ್ನು ಮಹಿಳಾ ಮತ್ತು ಮಕ್ಕಳ

ಬಿಕ್ಷಾಟನೆ ನಿರ್ಮೂಲನೆ ಹಾಗೂ ಭಿಕ್ಷುಕರ ಪುನರ್ವಸತಿ ಕುರಿತಾಗಿ ಆಗ್ರಹಿಸಿದ ಕಿಶೋರ್ ಕುಮಾರ್ ಪುತ್ತೂರು Read More »

ದನದ  ಹಟ್ಟಿಗೆ ಬೆಂಕಿ ಅವಘಡ | ರಸ್ತೆಯಿಲ್ಲದೆ ಬೆಂಕಿ ನಂದಿಸಲು ಅಗ್ನಿಶಾಮಕದಳದವರ ಹರಸಾಹಸ

ಪುತ್ತೂರು : ಆರ್ಯಾಪು ಗ್ರಾಮದ ಕಾರ್ಪಾಡಿ ಬೈಲಿನ ಮನೆ ಪಕ್ಕದ ದನದ ಕೊಟ್ಟಿಗೆಗೆ ಬೆಂಕಿ ಹೊತ್ತಿಕೊಂಡು, ಉರಿದ ಘಟನೆ ಭಾನುವಾರ ಸಂಜೆ ನಡೆದಿದೆ. ಮೋಹನ್ ಭಂಡಾರಿ ಎಂಬವರ ಮನೆ ಇದಾಗಿದ್ದು, ಘಟನೆ ಸಂದರ್ಭ ಮನೆಯಲ್ಲಿ ಯಾರೂ ಇರಲಿಲ್ಲ ಎಂದು ಹೇಳಲಾಗಿದೆ. ಮನೆ ಪಕ್ಕದಲ್ಲೇ ಇದ್ದ ಹಟ್ಟಿಗೆ ಬೆಂಕಿ ಹೊತ್ತಿಕೊಂಡ ತಕ್ಷಣ ಸ್ಥಳಕ್ಕಾಗಮಿಸಿದ ನೆರೆಮನೆಯವರು ತಕ್ಷಣ ಜಾಗೃತರಾಗಿ ದನಗಳನ್ನು ಹೊರ ಕರೆದೊಯ್ದಿದ್ದಾರೆ. ಆದರೆ ಬೆಂಕಿ ಆರಿಸಲು ಹರಸಾಹಸ ಪಟ್ಟ ಘಟನೆ ಮಾತ್ರ ಅರಣ್ಯ ರೋಧನವಾಯಿತು. ಕಾರ್ಪಾಡಿ ದೇವಸ್ಥಾನದ ಮಗ್ಗುಲಲ್ಲೇ

ದನದ  ಹಟ್ಟಿಗೆ ಬೆಂಕಿ ಅವಘಡ | ರಸ್ತೆಯಿಲ್ಲದೆ ಬೆಂಕಿ ನಂದಿಸಲು ಅಗ್ನಿಶಾಮಕದಳದವರ ಹರಸಾಹಸ Read More »

ನಾಗಪುರ ಹಿಂಸಾಚಾರಕ್ಕೆ ಕುರಾನ್‌ ಸುಟ್ಟ ವದಂತಿ ಕಾರಣ

ಹಿಂಸಾಚಾರಕ್ಕೆ ಮೊದಲೇ ತಯಾರಿ ನಡೆದಿತ್ತು ಎಂದು ಬಿಜೆಪಿ ಆರೋಪ ಮುಂಬಯಿ: ಆರ್‌ಎಸ್‌ಎಸ್‌ ಕೇಂದ್ರ ಕಚೇರಿಯಿರುವ ನಾಗಪುರ ನಗರದ ಮಹಲ್‌ನಲ್ಲಿ ನಿನ್ನೆ ತಡರಾತ್ರಿ ನಡೆದಿರುವ ಕೋಮು ಹಿಂಸಾಚಾರ ಪೂರ್ವ ನಿಯೋಜಿತ ಎಂದು ಬಿಜೆಪಿ ಆರೋಪಿಸಿದೆ. ಹಿಂದುಗಳ ಅಂಗಡಿ, ಮನೆ ಮತ್ತು ವಾಹನಗಳನ್ನು ಗುರಿಮಾಡಿಕೊಂಡು ದಾಳಿ ಮಾಡಲಾಗಿದೆ. ಇದಕ್ಕೂ ಮೊದಲು ಈ ಭಾಗದಲ್ಲಿರುವ ಎಲ್ಲ ಸಿಸಿಟಿವಿಗಳನ್ನು ಧ್ವಂಸ ಮಾಡಿದ್ದಾರೆ. ಭಾರಿ ಪ್ರಮಾಣದಲ್ಲಿ ಕಲ್ಲು ತೂರಾಟವಾಗಿದ್ದು ಪೊಲೀಸರ ಸಹಿತ ಅನೇಕ ಮಂದಿ ಗಾಯಗೊಂಡಿದ್ದಾರೆ. ಇವೆಲ್ಲ ಪೂರ್ವ ನಿಯೋಜಿತ ಕೃತ್ಯ. ಗಲಭೆಗೆ ಮೊದಲೇ

ನಾಗಪುರ ಹಿಂಸಾಚಾರಕ್ಕೆ ಕುರಾನ್‌ ಸುಟ್ಟ ವದಂತಿ ಕಾರಣ Read More »

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ, ಸಂಶೋಧನಾ ಸಮಿತಿಯ ವತಿಯಿಂದ ಸಂಶೋಧನಾ ಪ್ರಬಂಧ ಬರೆಯುವ ಕುರಿತು ಕಾರ್ಯಾಗಾರ

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ, ಆಂತರಿಕ ಗುಣಮಟ್ಟ ಭರವಸಾಕೋಶದ ಸಹಯೋಗದೊಂದಿಗೆ ಸಂಶೋಧನಾ ಸಮಿತಿಯ ವತಿಯಿಂದ ಮಾ.17, 2024ರಂದು ಸಂಶೋಧನಾ ಪ್ರಬಂಧ ಬರವಣಿಗೆ ಎಂಬ ವಿಷಯದ ಕುರಿತು ಕಾರ್ಯಗಾರ ನಡೆಯಿತು. ಶ್ರೀ  ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ಇತಿಹಾಸ ವಿಭಾಗದ ಮುಖ್ಯಸ್ಥರು ಹಾಗೂ ಸಹ ಪ್ರಾಧ್ಯಾಪಕರಾದ ಡಾ.ಸನ್ಮತಿ ಕುಮಾರ್ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದರು. ಕಾರ್ಯಕ್ರಮದಲ್ಲಿ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ದಿನೇಶ ಪಿ .ಟಿ, ಸಂಶೋಧನಾ ಸಮಿತಿಯ ಸಂಯೋಜಕರಾದ ಡಾ. ಪ್ರಸಾದ ಎನ್ ಹಾಗೂ ಸದಸ್ಯರು ಉಪಸ್ಥಿತರಿದ್ದರು. ವಿದ್ಯಾರ್ಥಿನಿ ,

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ, ಸಂಶೋಧನಾ ಸಮಿತಿಯ ವತಿಯಿಂದ ಸಂಶೋಧನಾ ಪ್ರಬಂಧ ಬರೆಯುವ ಕುರಿತು ಕಾರ್ಯಾಗಾರ Read More »

ನಿಶಾಗೌರಿ ಯೂತ್ ಫೆಸ್ಟಿವಲ್ ಗೆ ಆಯ್ಕೆ

ಕೆ ಎಸ್ ಎಸ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ಸ್ವಯಂ ಸೇವಕಿ ನಿಶಾಗೌರಿ ಯೂತ್ ಫೆಸ್ಟಿವಲ್ ಗೆ ಆಯ್ಕೆಯಾಗಿದ್ದಾರೆ. ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಸ್ವಯಂ ಸೇವಕಿ ನಿಶಾ ಗೌರಿ ಅವರು ಮೈಸೂರು ವಿಶ್ವವಿದ್ಯಾನಿಲಯದಲ್ಲಿ ದಿನಾಂಕ 17.03.2025 ರಿಂದ 21.03.2025 ರವರೆಗೆ ನಡೆಯುವ ಯೂಥ್ ಫೆಸ್ಟಿವಲ್ ನಲ್ಲಿ ಭಾಗವಹಿಸಲು ಆಯ್ಕೆಯಾಗಿರುತ್ತಾರೆ.

ನಿಶಾಗೌರಿ ಯೂತ್ ಫೆಸ್ಟಿವಲ್ ಗೆ ಆಯ್ಕೆ Read More »

ಮತ್ತೆ ಮುನ್ನೆಲೆಗೆ ಬಂದ ಸೌಜನ್ಯಾ ಪ್ರಕರಣ : 14 ವರ್ಷವಾದರೂ ತಗ್ಗದ ಕಾವು

ಹೋರಾಟಗಾರರ ಸಭೆಗೆ ಮತ್ತೊಮ್ಮೆ ಅನುಮತಿ ನಿರಾಕರಿಸಿದ ಪೊಲೀಸರು ಮಂಗಳೂರು : ಕೆಲ ಸಮಯದಿಂದ ತಣ್ಣಗಾದಂತೆ ಕಾಣಿಸುತ್ತಿದ್ದ ಸೌಜನ್ಯಾ ಪರ ಹೋರಾಟ ಈಗ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಸಮೀರ್‌ ಎಂ.ಡಿ. ಎಂಬ ಯೂಟ್ಯೂಬರ್‌ ಸೌಜನ್ಯಳಿಗೆ ನ್ಯಾಯ ಸಿಗಬೇಕು ಎಂದು ಹೇಳಿಕೊಂಡು ಧರ್ಮಸ್ಥಳ ಕ್ಷೇತ್ರ ಮತ್ತು ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆಯವರನ್ನು ಗುರಿಯಾಗಿಸಿಕೊಂಡು ಮಾಡಿದ ವೀಡಿಯೊದಿಂದಾಗಿ ಮತ್ತೆ ಸೌಜನ್ಯಾ ಪ್ರಕರಣ ಜೀವ ಪಡೆದುಕೊಂಡಿದೆ.39 ನಿಮಿಷ 8 ಸೆಕೆಂಡುಗಳ ಈ ವೀಡಿಯೊ ಆರಂಭದಲ್ಲಿ ಸಮೀರ್‌ನ ಚಾನೆಲ್‌ನಲ್ಲಿ ಮಾತ್ರ ಇತ್ತು ಹಾಗೂ ಮೊದಲ ನಾಲ್ಕು

ಮತ್ತೆ ಮುನ್ನೆಲೆಗೆ ಬಂದ ಸೌಜನ್ಯಾ ಪ್ರಕರಣ : 14 ವರ್ಷವಾದರೂ ತಗ್ಗದ ಕಾವು Read More »

ಅಪಘಾತದಿಂದ ಚಿಕಿತ್ಸೆ ಫಲಿಸದೆ ಯುವ ನ್ಯಾಯವಾದಿ ಮೃತ್ಯು | ಅಂಗಾಂಗ ದಾನ ಮಾಡಿದ ಕುಟುಂಬ

ಬಂಟ್ವಾಳ : ಕಳೆದ ವಾರ ಬಿ.ಸಿ.ರೋಡಿನಲ್ಲಿ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಬಿ.ಸಿ.ರೋಡಿನ ಯುವ ನ್ಯಾಯವಾದಿ ಪ್ರಥಮ್ ಬಂಗೇರ (27) ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಮೃತ ಪ್ರಥಮ್ ಅವರ ಅಂಗಾಂಗಗಳನ್ನು ದಾನ ಮಾಡುವ ಮೂಲಕ ಅವರ ಕುಟುಂಬ ಮಾನವೀಯತೆಯನ್ನು  ತೋರಿದೆ. ಮೃತರ ಎರಡು ಕಣ್ಣು, ಕಿಡ್ನಿ, ಲಿವರ್ ಮತ್ತು ಕರುಳಿನ ಭಾಗವನ್ನು ದಾನವಾಗಿ ನೀಡಲಾಗಿದೆ ಎಂದು ಕುಟುಂಬದ ಮೂಲಗಳು ತಿಳಿಸಿದೆ.

ಅಪಘಾತದಿಂದ ಚಿಕಿತ್ಸೆ ಫಲಿಸದೆ ಯುವ ನ್ಯಾಯವಾದಿ ಮೃತ್ಯು | ಅಂಗಾಂಗ ದಾನ ಮಾಡಿದ ಕುಟುಂಬ Read More »

error: Content is protected !!
Scroll to Top