ಸುದ್ದಿ

ಪ್ರೀತಿಸಿ ಮದುವೆಯಾದ ಪತ್ನಿಯನ್ನೇ ಕತ್ತು ಹಿಸುಕಿ ಬಾವಿಗೆ ಹಾಕಿದ ಪತಿ

ಬೆಳ್ತಂಗಡಿ:  ಏಳು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾದ ಪತ್ನಿಯನ್ನೇ ಕಿರಾತಕ ಪತಿರಾಯನೇ ಕತ್ತು ಹಿಸುಕಿ ಬಾವಿಗೆ ಹಾಕಿ ಕೊಂದ ಅಮಾನುಷ ಘಟನೆ ಬೆಳ್ತಂಗಡಿ ತಾಲೂಕು, ಬೆಳಾಲು ಗ್ರಾಮದ ಕೆಂಪನೊಟ್ಟು ಎಂಬಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಬೆಳಾಲು ನಿವಾಸಿ ಶಶಿಕಲಾ (27) ಎಂದು  ಗುರುತಿಸಲಾಗಿದ್ದು, ಆರೋಪಿ ಕಿರಾತಕ ಪತಿಯನ್ನು ಸುಧಾಕರ ಎಂದು ಗುರುತಿಸಲಾಗಿದೆ. ಸುಧಾಕರ ಏಳು ವರ್ಷಗಳ ಹಿಂದೆ ಶಶಿಕಲಾಳನ್ನು ಪ್ರೀತಿಸಿ ಮದುವೆಯಾಗಿದ್ದು, ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಕೆಂಪನೊಟ್ಟು ಎಂಬಲ್ಲಿ 6 ವರ್ಷದ ಮಗಳೊಂದಿಗೆ ವಾಸವಾಗಿದ್ದರು. ಸುಧಾಕರನಿಗೆ […]

ಪ್ರೀತಿಸಿ ಮದುವೆಯಾದ ಪತ್ನಿಯನ್ನೇ ಕತ್ತು ಹಿಸುಕಿ ಬಾವಿಗೆ ಹಾಕಿದ ಪತಿ Read More »

ಇಲಿ ಜ್ವರದಿಂದ ಮಹಿಳೆ ಮೃತ್ಯು

ಉಜಿರೆ: ಇಲಿ ಜ್ವರದಿಂದ ಬಳಲುತ್ತಿದ್ದ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಉಜಿರೆ ಗ್ರಾಮದ ಬೆಳಾಲುನಲ್ಲಿ ನಡೆದಿದೆ. ಬೆಳಾಲು ಗ್ರಾಮದ ತುರ್ಕೆರೊಟ್ಟು ಮನೆಯ ಆಶಾ (27) ಮೃತಪಟ್ಟವರು. ಇಲಿ ಜ್ವರದಿಂದ ಬಳಲುತ್ತಿದ್ದು ಚಿಕಿತ್ಸೆ ಫಲಕಾರಿಯಾಗಿದೆ ಮಂಗಳೂರಿನ ದೇರಳಕಟ್ಟೆ ಖಾಸಗಿ ಅಸ್ಪತ್ರೆಯಲ್ಲಿ ನಿಧನರಾದರು. ಮೃತರು ಪತಿ, ಇಬ್ಬರು ಗಂಡು ಮಕ್ಕಳನ್ನು ಅಗಲಿದ್ದಾರೆ.

ಇಲಿ ಜ್ವರದಿಂದ ಮಹಿಳೆ ಮೃತ್ಯು Read More »

ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯರಿಂದ ರಾಜೀವಗಾಂಧಿ ಗ್ರಾಮೀಣ ವಸತಿ ನಿಗಮದ ವ್ಯವಸ್ಥಾಪಕರಿಗೆ ಮನವಿ

ಸುಳ್ಯ: ಸುಳ್ಯ ವಿಧಾನಸಭಾ ಕ್ಷೇತ್ರದ ಸುಳ್ಯ ಹಾಗೂ ಕಡಬ ತಾಲೂಕು ವ್ಯಾಪ್ತಿಯಲ್ಲಿ ವಿವಿಧ ವಸತಿ ಯೋಜನೆಯಡಿ ಆಯ್ಕೆಯಾದ ಫಲಾನುಭವಿಗಳ ಸಹಾಯಧನವನ್ನು ನಿಗಮದಿಂದ ತಡೆಹಿಡಿಯಲಾಗಿದ್ದು, ಸಮಸ್ಯೆ ಬಗೆಹರಿಸಿ ಅನುದಾನ ಬಿಡುಗಡೆಗೊಳಿಸುವಂತೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ರಾಜೀವಗಾಂಧಿ ಗ್ರಾಮೀಣ ವಸತಿ ನಿಗಮದ ವ್ಯವಸ್ಥಾಪಕರಿಗೆ ಮನವಿ ಮಾಡಿದ್ದಾರೆ. ಬೆಂಗಳೂರಿನಲ್ಲಿ ವ್ಯವಸ್ಥಾಪಕರನ್ನು ಭೇಟಿ ಮಾಡಿದ ಅವರು, ಈ ಕುರಿತು ಸಮಸ್ಯೆ ಬಗೆಹರಿಸಿ ಅನುದಾನ ಬಿಡುಗಡೆಗೊಳಿಸುವಂತೆ ಹಲವಾರು ಬಾರಿ ಮನವಿ ಮಾಡಲಾಗಿದೆ. ಆದರೂ ತಾಂತ್ರಿಕ ಕಾರಣಗಳಿಂದಾಗಿ ನಿಗಮದ ವತಿಯಿಂದ ಸಮಸ್ಯೆ ಈ

ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯರಿಂದ ರಾಜೀವಗಾಂಧಿ ಗ್ರಾಮೀಣ ವಸತಿ ನಿಗಮದ ವ್ಯವಸ್ಥಾಪಕರಿಗೆ ಮನವಿ Read More »

ವೈದ್ಯಾಧಿಕಾರಿ ಹಾಗೂ ಡಯಾಲಿಸಿಸ್ ಟೆಕ್ನಿಷಿಯನ್ ನೇಮಿಸುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಿಗೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯರಿಂದ ಮನವಿ

ಸುಳ್ಯ: ಸುಳ್ಯ ವಿಧಾಸಭಾ ಕ್ಷೇತ್ರದ ಬೆಳ್ಳಾರೆಯಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ವೈದ್ಯಾಧಿಕಾರಿ ನೇಮಕದ ಜತೆ ಕಡಬ ಸಮುದಾಯ ಆರೋಗ್ಯ ಕೇಂದ್ರಕ್ಕೆ ಡಯಾಲಿಸಿಸ್ ಟೆಕ್ನಿಷಿಯನ್ ಒದಗಿಸಿಕೊಡಬೇಕೆಂದು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಮನವಿ ಮಾಡಿದ್ದಾರೆ. ಬೆಂಗಳೂರಿನಲ್ಲಿ ಸಚಿವರನ್ನು ಭೇಟಿ ಮಾಡಿದ ಶಾಸಕಿ, ಬೆಳ್ಳಾರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯಾಧಿಕಾರಿ ಇಲ್ಲದಿರುವ ಕಾರಣ ಗ್ರಾಮೀಣ ಜನರಿಗೆ ಆರೋಗ್ಯ ಸೇವೆ ಪಡೆಯಲು ತೊಂದರೆ ಪಡುವಂತಾಗಿದೆ. ಅಲ್ಲದೆ ಕಡಬ ಸಮುದಾಯ ಆರೋಗ್ಯ

ವೈದ್ಯಾಧಿಕಾರಿ ಹಾಗೂ ಡಯಾಲಿಸಿಸ್ ಟೆಕ್ನಿಷಿಯನ್ ನೇಮಿಸುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಿಗೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯರಿಂದ ಮನವಿ Read More »

ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಉರುಳಿದ ಬಸ್ | ಮಹಿಳೆ ಮೃತ್ಯು

ಮೂಡಿಗೆರೆ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ಸೊಂದು ಪ್ರಪಾತಕ್ಕೆ ಉರುಳಿಬಿದ್ದು ಮಹಿಳೆಯೋರ್ವರು ಮೃತಪಟ್ಟು, ಐವರು ಗಂಭೀರ ಗಾಯಗೊಂಡ ಘಟನೆ ಶನಿವಾರ ಮುಂಜಾನೆ ನಡೆದಿದೆ. ಬೆಂಗಳೂರಿನ ಯಲಹಂಕ ನಿವಾಸಿ ಸುರೇಖಾ(45) ಮೃತ ದುರ್ದೈವಿಯಾಗಿದ್ದಾರೆ. ಗಂಭೀರ ಗಾಯಗೊಂಡವರನ್ನು ಮೂಡಿಗೆರೆ, ಬೇಲೂರು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಚೀಕನಹಳ್ಳಿ – ಕಸ್ಕೆಬೈಲು ಕ್ರಾಸ್ ಬಳಿ ಈ ಅಪಘಾತ ಸಂಭವಿಸಿದೆ. ಬೆಂಗಳೂರಿನಿಂದ ಬೆಂಗಳೂರು- ಹಾಸನ-ಮೂಡಿಗೆರೆ ಮಾರ್ಗವಾಗಿ ಹೊರನಾಡಿಗೆ ಪ್ರವಾಸ ಹೊರಟಿದ್ದ ಈ ಬಸ್ಸಿನಲ್ಲಿ 48ಕ್ಕೂ

ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಉರುಳಿದ ಬಸ್ | ಮಹಿಳೆ ಮೃತ್ಯು Read More »

ನೇಪಾಳದಲ್ಲಿ ಪ್ರಬಲ ಭೂಕಂಪ | 128 ಮಂದಿ ಮೃತ್ಯು, 140 ಮಂದಿಗೆ ಗಾಯ

ನೇಪಾಳ: ನೇಪಾಳದ ಕಂಡು, ಪಶ್ಚಿಮ ರುಕುಂ, ಜಾಜರಕೋಟ್ ಸೇರಿದಂತೆ ಹಲವೆಡೆ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 6.4 ತೀವ್ರತೆ ದಾಖಲಾಗಿದೆ. ಘಟನೆಯಲ್ಲಿ 128 ಮಂದಿ ಸಾವನ್ನಪ್ಪಿದ್ದು, 140 ಮಂದಿ ಗಾಯಗೊಂಡಿದ್ದಾರೆ. ಇದೇ ವೇಳೆ ದೆಹಲಿ-ಎನ್‌ಸಿಆರ್ ಪ್ರದೇಶ, ಬಿಹಾರ, ಉತ್ತರ ಪ್ರದೇಶ ಮತ್ತು ಮಧ್ಯಪ್ರದೇಶ ಸೇರಿದಂತೆ ಉತ್ತರ ಭಾರತದಲ್ಲಿ ಪ್ರಬಲ ಕಂಪನಗಳು ಸಂಭವಿಸಿವೆ. ಭೂಕಂಪವು ನ.3ರ ರಾತ್ರಿ 11:32 ಕ್ಕೆ ಸಂಭವಿಸಿದೆ. ಪರ್ವತ ಶ್ರೇಣಿಗಳಿಂದ ಕೂಡಿದ ಈ ಪ್ರದೇಶದಲ್ಲಿ ಪರಿಹಾರ ಕಾರ್ಯಾಚರಣೆ ಮುಂದುವರಿದಿದೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ

ನೇಪಾಳದಲ್ಲಿ ಪ್ರಬಲ ಭೂಕಂಪ | 128 ಮಂದಿ ಮೃತ್ಯು, 140 ಮಂದಿಗೆ ಗಾಯ Read More »

ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ | ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

ಪಡುಬಿದ್ರೆ : ನಿಂತಿದ್ದ ಬಸ್ಸಿಗೆ ಹಿಂದಿನಿಂದ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರನ ಮೇಲೆ ಟ್ಯಾಂಕರ್ ಹರಿದು ಸ್ಥಳದಲ್ಲೇ ಮೃತಪಟ್ಟ ಘಟನೆ ಪಡುಬಿದ್ರಿ ಬಸ್ ನಿಲ್ದಾಣದಲ್ಲಿ ನಡೆದಿದೆ. ಕಂಚಿನಡ್ಕ ನಿವಾಸಿ ಪ್ರಜ್ವಲ್ ಮೃತಪಟ್ಟು ಯುವಕ ಎಂದು ಗುರುತಿಸಲಾಗಿದೆ. ಪ್ರಯಾಣಿಕರನ್ನು ಇಳಿಸಲು ನಿಂತಿದ್ದ ಬಸ್ ಗೆ ಹಿಂಬದಿಯಿಂದ ಬೈಕ್ ಡಿಕ್ಕಿ ಹೊಡೆದು ರಸ್ತೆಗೆ ಎಸೆಲ್ಪಟ್ಟು ಬೈಕ್‌ ಸವಾರನ ಮೇಲೆ ಟ್ಯಾಂಕರ್ ಲಾರಿ ಹರಿದಿದೆ. ಪಡುಬಿದ್ರೆ ಪೊಲೀಸರು ಸ್ಥಳಕ್ಕೆ ಧಾವಿಸಿ ಸ್ಥಳ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ | ಬೈಕ್ ಸವಾರ ಸ್ಥಳದಲ್ಲೇ ಮೃತ್ಯು Read More »

ದೈವದ ಮಂಚದಲ್ಲಿ ವಿರಾಜಮಾನರಾಗಿ ಪೂಜಿಸಲ್ಪಡುವ ಏಕೈಕ ಸ್ವಾಮೀಜಿ | ಮಂಗಳೂರಿನ ಜೋಗಿ ಮಠದ ವಿಶೇಷತೆ

ಮಂಗಳೂರು: ದೈವದ ಮಂಚದಲ್ಲಿ ವಿರಾಜಮಾನರಾಗಿ ಪೂಜಿಸಲ್ಪಡುವ ಏಕೈಕ ಸ್ವಾಮೀಜಿ ಎಂಬುವುದಕ್ಕೆ ಇಲ್ಲಿದೆ ಒಂದು ವಿಶೇಷತೆ. ಇಂತಹ ಒಂದು ವಿಶಿಷ್ಟ ಸಂಪ್ರದಾಯವಿರುವುದು ಮಂಗಳೂರಿನ ಕದ್ರಿಯಲ್ಲಿರುವ ಜೋಗಿ ಮಠದಲ್ಲಿ. ಮರಳು ಧೂಮಾವತಿ ಎಂಬ ದೈವ, ಜೋಗಿ ಮಠ ಕ್ಷೇತ್ರದ ದೈವವಾಗಿದ್ದು,ವರ್ಷಂಪ್ರತಿ ನವರಾತ್ರಿಯ ಕೊನೆಯ ದಿನ ಅಂದರೆ ಮಹಾನವಮಿಯಂದು ನಾಥ ಪಂಥದ ಸ್ವಾಮೀಜಿಯವರು ದೈವದ ಮಂಚದಲ್ಲಿ ವಿರಾಜಮಾನರಾಗುವರು. ಅಲ್ಲದೇ ಆ ಸಂಧರ್ಭದಲ್ಲಿ ಸ್ವಾಮೀಜಿಯವರಿಗೆ ವಿಶೇಷ ಪೂಜೆ ಸಲ್ಲಿಸಲಾಗುವುದು. ಅದರಂತೆ ಈ ಬಾರಿಯೂ ಮಹಾನವಮಿಯಂದು ಜೋಗಿ ಮಠ ನಾಥ ಪಂಥದ ಸ್ವಾಮೀಜಿಗಳಾದ ರಾಜಾ

ದೈವದ ಮಂಚದಲ್ಲಿ ವಿರಾಜಮಾನರಾಗಿ ಪೂಜಿಸಲ್ಪಡುವ ಏಕೈಕ ಸ್ವಾಮೀಜಿ | ಮಂಗಳೂರಿನ ಜೋಗಿ ಮಠದ ವಿಶೇಷತೆ Read More »

ತುಲಾಭಾರ ವೇಳೆ ತಕ್ಕಡಿ ಹಗ್ಗ ಕಳಚಿ ಕೆಳಗೆ ಬಿದ್ದ ಪೇಜಾವರ ಶ್ರೀಗಳು

ದೆಹಲಿ: ದೆಹಲಿ ಪ್ರವಾಸದಲ್ಲಿರುವ ಪೇಜಾವರ ಮಠದ ಶ್ರೀ ವಿಶ್ವತೀರ್ಥ ಪ್ರಸನ್ನ ಸ್ವಾಮೀಜಿಗಳು ತುಲಾಭಾರದ ವೇಳೆ ತಕ್ಕಡಿಯ ಹಗ್ಗ ಕಳಚಿ ಕೆಳಗೆ ಬಿದ್ದ ಘಟನೆ ನಡೆದಿದೆ. ದೆಹಲಿಯ ಪೇಜಾವರ ಮಠಕ್ಕೆ ಭೇಟಿ ನೀಡಿದ ಸಂದರ್ಭ ತುಲಾಭಾರ ಸೇವೆ ಸಲ್ಲಿಸಿದ್ದರು. ಈ ಸಂದರ್ಭದಲ್ಲಿ ತಕ್ಕಡಿಯ ಹಗ್ಗ ಕಳಚಿ ಬಿದ್ದಿದ್ದು, ತಲೆಗೆ ತರಚಿದ ಗಾಯವಾಗಿರುವುದಾಗಿ ತಿಳಿದು ಬಂದಿದೆ. ಈ ಕುರಿತು ಹೆಚ್ಚಿನ ಗಾಯಗಳಾಗಿಲ್ಲ ಎಂದು ಸ್ವಾಮೀಜಿಯವರು ತಿಳಿಸಿದ್ದಾರೆ.

ತುಲಾಭಾರ ವೇಳೆ ತಕ್ಕಡಿ ಹಗ್ಗ ಕಳಚಿ ಕೆಳಗೆ ಬಿದ್ದ ಪೇಜಾವರ ಶ್ರೀಗಳು Read More »

ಉಜಿರೆಯಲ್ಲಿ ಮಹಿಳೆಯೊಬ್ಬರ ಶವ ಬಾವಿಯಲ್ಲಿ ಪತ್ತೆ

ಉಜಿರೆ: ವಿವಾಹಿತ ಮಹಿಳೆಯೊಬ್ಬರ ಶವ ಬಾವಿಯಲ್ಲಿ ಪತ್ತೆಯಾಗಿರುವ ಘಟನೆ ಉಜಿರೆ ಗ್ರಾಮದ ಗಡಿ ಪ್ರದೇಶವಾದ ಮಾಚಾರು ಸಮೀಪದ ಕೆಂಪನೊಟ್ಟುವಿನಲ್ಲಿ ಶುಕ್ರವಾರ ನಡೆದಿದೆ. ಮಾಚಾರು ನಿವಾಸಿ ಶಶಿಕಲಾ ಎಂಬವರ ಶವವೇ ಬಾವಿಯಲ್ಲಿ ಅನುಮಾನಾಸ್ಪದವಾಗಿ  ಪತ್ತೆಯಾಗಿರುವುದು. ಹತ್ಯೆ ಮಾಡಿ ಬಾವಿಗೆ ಹಾಕಿರುವ ಕುರಿತು ಆರೋಪಗಳು ಸಾರ್ವಜನಿಕ ವಲಯದಿಂದ ಕೇಳಿಬರುತ್ತಿದೆ. ಇದು ಆಕಸ್ಮಿಕ ಘಟನೆಯೇ ಅಥವಾ ಕೊಲೆಯೇ ಎಂಬ ಬಗ್ಗೆ ಪೊಲೀಸ್ ತನಿಖೆಯಿಂದಷ್ಟೇ ತಿಳಿದು ಬರಬೇಕಿದೆ. ಧರ್ಮಸ್ಥಳ ಠಾಣಾ ಪೊಲೀಸರು, ಉನ್ನತಾಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದು, ತನಿಖೆ ನಡೆಸುತ್ತಿದ್ದಾರೆ.

ಉಜಿರೆಯಲ್ಲಿ ಮಹಿಳೆಯೊಬ್ಬರ ಶವ ಬಾವಿಯಲ್ಲಿ ಪತ್ತೆ Read More »

error: Content is protected !!
Scroll to Top