ಪಂಜದ ಯುವಕ ಪಾಂಡಿಚೇರಿಯಲ್ಲಿ ಸಮುದ್ರಪಾಲು
ಸುಳ್ಯ, ನ.5: ಬೆಂಗಳೂರಿನಲ್ಲಿ ಉದ್ಯೋಗಿಯಾಗಿರುವ ಸುಳ್ಯ ತಾಲೂಕಿನ ಪಂಜದ ಯುವಕನೊಬ್ಬ ಪಾಂಡಿಚೇರಿಯಲ್ಲಿ ಸಮುದ್ರ ಪಾಲಾದ ಘಟನೆ ಸಂಭವಿಸಿದೆ. ಪಂಜದ ಕೂತ್ಕುಂಜ ಗ್ರಾಮದ ಚಿದ್ಗಲ್ಲು ಗೋಪಾಲ್ ಎಂಬವರ ಪುತ್ರ ಬಿಪಿನ್ ನೀರುಪಾಲಾದ ಯುವಕ. ಬಿಪಿನ್ ಬೆಂಗಳೂರಿನ ಕಂಪೆನಿಯೊಂದರಲ್ಲಿ ಉದ್ಯೋಗಿಯಾಗಿದ್ದು, ಶನಿವಾರ ಗೆಳೆಯರೊಂದಿಗೆ ಪಾಂಡಿಚೇರಿಗೆ ಹೋಗಿದ್ದು ಬಳಿಕ ಅಲ್ಲಿನ ಬೀಚ್ಗೆ ತೆರಳಿದ್ದ ವೇಳೆ ಸಮುದ್ರಪಾಲಾಗಿದ್ದಾರೆ. ರವಿವಾರ ಯುವಕನ ಮೃತದೇಹ ಪತ್ತೆಯಾಗಿದೆ. ಮೃತರು ತಂದೆ, ತಾಯಿ, ಸಹೋದರಿಯನ್ನು ಅಗಲಿದ್ದಾರೆ.
ಪಂಜದ ಯುವಕ ಪಾಂಡಿಚೇರಿಯಲ್ಲಿ ಸಮುದ್ರಪಾಲು Read More »










