ಸುದ್ದಿ

ನೂರಾರು ಎಕರೆ ಕೃಷಿ ಭೂಮಿ ವಕ್ಫ್‌ ವಶ : ರೈತರು ಕಂಗಾಲು

ಪಹಣಿಯಲ್ಲಿ ವಕ್ಫ್‌ ಮಂಡಳಿಗೆ ಸೇರಿದ್ದು ಎಂದು ಸೇರ್ಪಡೆ ವಿಜಯಪುರ : ವಿಜಯಪುರ ಜಿಲ್ಲೆಯಲ್ಲಿ ನೂರಾರು ಎಕರೆ ಕೃಷಿಭೂಮಿಯನ್ನು ವಕ್ಫ್‌ ಆಸ್ತಿ ಎಂದು ನೋಟಿಸ್‌ ನೀಡಿರುವುದು ರಾಜ್ಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಬಿಜೆಪಿ ಈ ಕ್ರಮದ ವಿರುದ್ಧ ಕಿಡಿಕಾರಿದ್ದು, ಕಾಂಗ್ರೆಸ್‌ ಆಡಳಿತದಲ್ಲಿ ಕರ್ನಾಟಕ ಪಾಕಿಸ್ಥಾನವಾಗಿ ಬದಲಾಗುತ್ತಿದೆ ಎಂದು ಹೇಳಿದೆ.ರೈತರು ತಲೆಮಾರುಗಳಿಂದ ಕೃಷಿ ಮಾಡಿಕೊಂಡು ಬಂದಿದ್ದ ನೂರಾರು ಎಕರೆ ಜಮೀನು ವಕ್ಫ್‌ ಮಂಡಳಿಗೆ ಸೇರಿದ್ದು ಎಂದು ಪಹಣಿಯಲ್ಲಿ ದಾಖಲಾಗಿದೆ. ರೈತರಿಗೆ ಕಂದಾಯ ಇಲಾಖೆಯಿಂದ ವಕ್ಫ್‌ ಆಸ್ತಿಯ ಬಗ್ಗೆ ದಾಖಲೆಗಳನ್ನು ಸಲ್ಲಿಸಲು […]

ನೂರಾರು ಎಕರೆ ಕೃಷಿ ಭೂಮಿ ವಕ್ಫ್‌ ವಶ : ರೈತರು ಕಂಗಾಲು Read More »

ಇರಾನ್‌ ರಾಜಧಾನಿ ಟೆಹ್ರಾನ್‌ ಮೇಲೆ ಇಸ್ರೇಲ್‌ ದಾಳಿ

ಸೇನಾನೆಲೆಗಳನ್ನು ಗುರಿಯಾಗಿಸಿ ವೈಮಾನಿಕ ದಾಳಿ; ಭೀಕರ ಸ್ಫೋಟ ಟೆಹ್ರಾನ್‌: ಕಳೆದ ಅಕ್ಟೋಬರ್ 1 ರಂದು ನಡೆದಿದ್ದ ಕ್ಷಿಪಣಿ ದಾಳಿಗೆ ಪ್ರತೀಕಾರವಾಗಿ ಇರಾನ್‌ನ ಮಿಲಿಟರಿ ನೆಲೆಗಳನ್ನು ಗುರಿಯಾಗಿಸಿ ಇಸ್ರೇಲ್ ಶನಿವಾರ ಮುಂಜಾನೆ ವೈಮಾನಿಕ ದಾಳಿ ಆರಂಭಿಸಿದೆ. ದಾಳಿಯಿಂದಾದ ಸಾವುನೋವಿನ ಬಗ್ಗೆ ತಕ್ಷಣದ ಮಾಹಿತಿ ಸಿಕ್ಕಿಲ್ಲ. ಇರಾನ್‌ನ ಮಿಲಿಟರಿ ಗುರಿಗಳ ಮೇಲೆ ನಡೆಸಲಾದ ನಿಖರವಾದ ದಾಳಿ ಎಂದು ಇಸ್ರೇಲ್ ಮಿಲಿಟರಿ ಹೇಳಿಕೊಂಡಿದೆ. ಇರಾನಿನ ರಾಜಧಾನಿ ಟೆಹ್ರಾನ್‌ನಲ್ಲಿ ಭೀಕರ ಸ್ಫೋಟದ ಸದ್ದು ಕೇಳಿಸಿದೆ. ಕನಿಷ್ಠ ಏಳು ಸ್ಫೋಟಗಳು ಮುಂಜಾನೆ ವೇಳೆ ಸಂಭವಿಸಿವೆ.

ಇರಾನ್‌ ರಾಜಧಾನಿ ಟೆಹ್ರಾನ್‌ ಮೇಲೆ ಇಸ್ರೇಲ್‌ ದಾಳಿ Read More »

24 ತುಂಡು ಮಾಡುತ್ತೇನೆ ಎಂದು ಹಿಂದೂ ಯುವತಿಗೆ ಬೆದರಿಕೆಯೊಡ್ಡಿದ ಆರೋಪಿ ಬಂಧನ

ಯುವತಿಯ ಅಂಗಡಿ ಎದುರು ಬಂದು ಕಿರುಕುಳ ನೀಡುತ್ತಿದ್ದ ಯುವಕರ ತಂಡ ಮಂಗಳೂರು: ಸುರತ್ಕಲ್‌ನ ಹಿಂದು ಯುವತಿಗೆ ಕಿರುಕುಳ ನೀಡಿದ ಆರೋಪಿ ಸುರತ್ಕಲ್‌ ಗ್ರಾಮದ ಇಡ್ಯಾ ಗ್ರಾಮದ ಶಾರೀಕ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ನಿರಂತರ ಕಿರುಕುಳದಿಂದ ಬೇಸತ್ತು ಯುವತಿ ನಿನ್ನೆ ಮುಂಜಾನೆ ನಿದ್ದೆ ಮಾತ್ರ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಬಳಿಕ ಈ ಘಟನೆ ಬೆಳಕಿಗೆ ಬಂದಿತ್ತು. ಹಿಂದೂ ಸಂಘಟನೆಗಳು ಲವ್‌ ಜಿಹಾದ್‌ ಕೃತ್ಯ ಎಂದು ಆರೋಪಿಸಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಬಳಿಕ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಯುವತಿಗೆ ಬೆದರಿಕೆಯೊಡ್ಡುತ್ತಿದ್ದ

24 ತುಂಡು ಮಾಡುತ್ತೇನೆ ಎಂದು ಹಿಂದೂ ಯುವತಿಗೆ ಬೆದರಿಕೆಯೊಡ್ಡಿದ ಆರೋಪಿ ಬಂಧನ Read More »

ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರನ್ನು ಸುಲಿಗೆ ಮಾಡಿದರೆ ಪರ್ಮಿಟ್‌ ರದ್ದು

ಟಿಕೆಟ್‌ ದರ ಹೆಚ್ಚಿಸಿ ಪ್ರಯಾಣಿಕರನ್ನು ಸುಲಿಗೆ ಮಾಡುವ ಬಸ್‌ ಮಾಲೀಕರಿಗೆ ಕಠಿಣ ಎಚ್ಚರಿಕೆ ಬೆಂಗಳೂರು : ಹಬ್ಬ, ಸಾಲು ಸಾಲು ರಜೆಗಳು ಬಂದ ಸಂದರ್ಭದಲ್ಲಿ ಟಿಕೆಟ್‌ ದರ ಹೆಚ್ಚಿಸಿ ಜನರನ್ನು ಸುಲಿಗೆ ಮಾಡುವ ಖಾಸಗಿ ಬಸ್‌ ಮಾಲೀಕರಿಗೆ ಸರಕಾರ ಖಡಕ್‌ ಎಚ್ಚರಿಕೆ ನೀಡಿದೆ. ಈಗ ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ತಿಂಗಳಾಂತ್ಯ ಹಾಗೂ ನವೆಂಬರ್‌ ಮೊದಲ ವಾರದಲ್ಲಿ ಸಾಲುಸಾಲು ರಜೆಗಳಿದ್ದು, ಖಾಸಗಿ ಬಸ್‌ಗಳ ಟಿಕೆಟ್‌ ದರ ದುಪ್ಪಟ್ಟು ಆಗಿದೆ. ಇದಕ್ಕೆ ರಾಜ್ಯ ಸಾರಿಗೆ ಇಲಾಖೆ ಕಡಿವಾಣ ಹಾಕಲು ಮುಂದಾಗಿದ್ದು,

ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರನ್ನು ಸುಲಿಗೆ ಮಾಡಿದರೆ ಪರ್ಮಿಟ್‌ ರದ್ದು Read More »

ಯುವಕನ ಕಿರುಕುಳದಿಂದ ಬೇಸತ್ತು ಯುವತಿ ಆತ್ಮಹತ್ಯೆಗೆ ಯತ್ನ

24 ತುಂಡು ಮಾಡುತ್ತೇನೆ ಎಂದು ಬೆದರಿಕೆ ಹಾಕಿದ್ದ ಅನ್ಯಕೋಮಿನ ಯುವಕ ಮಂಗಳೂರು: ಅನ್ಯಕೋಮಿನ ಯುವಕನೊಬ್ಬನ ಕಿರುಕುಳದಿಂದ ಬೇಸತ್ತು ಸುರತ್ಕಲ್‌ ಸಮೀಪದ ಇಡ್ಯದ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ ಘಟನೆ ಸಂಭವಿಸಿದ್ದು, ಇದು ಲವ್‌ ಜಿಹಾದ್‌ ಕೃತ್ಯ ಎಂಬ ಆರೋಪ ಕೇಳಿಬಂದಿದೆ. ಅನ್ಯಕೋಮಿನ ಯುವಕ ಯುವತಿಯ ಸಹೋದರನಿಗೆ ಸಂದೇಶ ಕಳುಹಿಸಿ ತಂಗಿಯನ್ನು ಪ್ರೀತಿಸಲು ಹೇಳು ಇಲ್ಲದಿದ್ದರೆ 24 ತುಂಡು ಮಾಡುತ್ತೇನೆ ಎಂದು ಬೆದರಿಕೆ ಕಳುಹಿಸಿದ್ದಾನೆ ಎಂದು ಆರೋಪಿಸಲಾಗಿದೆ.ನನ್ನನ್ನು ಪ್ರೀತಿಸುವಂತೆ ನಿನ್ನ ಸಹೋದರಿಗೆ ಹೇಳು, ಇಲ್ಲ ನಿನ್ನನ್ನು 24 ತುಂಡು

ಯುವಕನ ಕಿರುಕುಳದಿಂದ ಬೇಸತ್ತು ಯುವತಿ ಆತ್ಮಹತ್ಯೆಗೆ ಯತ್ನ Read More »

ಒಂದೇ ಪ್ರಕರಣದಲ್ಲಿ 98 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ : ನ್ಯಾಯಾಲಯದ ಅಪರೂಪದ ತೀರ್ಪು

ಕೊಪ್ಪಳ ಜಿಲ್ಲೆಯ ಗಂಗಾವತಿಯ ಮರಕುಂಬಿ ದಲಿತ ದೌರ್ಜನ್ಯ ಪ್ರಕರಣ ಕೊಪ್ಪಳ: ಒಂದೇ ಪ್ರಕರಣದಲ್ಲಿ ಬರೋಬ್ಬರಿ 98 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸುವ ಮೂಲಕ ಕೊಪ್ಪಳ ಜಿಲ್ಲೆಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನ್ಯಾಯಾಂಗ ಇತಿಹಾಸದಲ್ಲಿ ಅಪರೂಪದ ತೀರ್ಪ ನೀಡಿದ ಹಿರಿಮೆಗೆ ಪಾತ್ರವಾಗಿದೆ. ಗಂಗಾವತಿಯ ಮರುಕುಂಬಿ ದಲಿತ ದೌರ್ಜನ್ಯ ಪ್ರಕರಣದ 98 ಅಪರಾಧಿಗಳಿಗೆ ಗುರುವಾರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಎಸ್‌ಸಿ ಮತ್ತು ಎಸ್‌ಟಿ ಸಮುದಾಯಕ್ಕೆ ಸೇರಿದ ಇತರ ಮೂವರು ಆರೋಪಿಗಳಿಗೆ ಐದು ವರ್ಷಗಳ ಜೈಲು ಶಿಕ್ಷೆ

ಒಂದೇ ಪ್ರಕರಣದಲ್ಲಿ 98 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ : ನ್ಯಾಯಾಲಯದ ಅಪರೂಪದ ತೀರ್ಪು Read More »

ನ್ಯಾ.ಸಂಜೀವ್‌ ಖನ್ನಾ ಸುಪ್ರೀಂ ಕೋರ್ಟ್‌ನ ಮುಂದಿನ ಮುಖ್ಯ ನ್ಯಾಯಾಧೀಶ

ಹೊಸದಿಲ್ಲಿ: ಸುಪ್ರೀಂ ಕೋರ್ಟ್‌ನ ಮುಂದಿನ ಮುಖ್ಯನ್ಯಾಯಾಧೀಶರಾಗಿ (ಸಿಜೆಐ) ನ್ಯಾ.ಸಂಜೀವ್‌ ಖನ್ನಾ ಆಯ್ಕೆಯಾಗಿದ್ದು, ಅವರನ್ನು ನೇಮಕ ಮಾಡಲು ರಾಷ್ಟ್ರಪತಿ ದ್ರೌಪದಿ ಮುರ್ಮು ಅಧಿಸೂಚನೆ ಹೊರಡಿಸಿದ್ದಾರೆ. ನವೆಂಬರ್‌ 11ರಂದು ಹಾಲಿ ಮುಖ್ಯ ನ್ಯಾಯಾಧೀಶ ಡಿ.ವೈ.ಚಂದ್ರಚೂಡ್‌ ನಿವೃತ್ತಿಯಾಗಲಿದ್ದಾರೆ. ಅಂದೇ ಸಂಜೀವ್‌ ಖನ್ನಾ ಅಧಿಕಾರ ವಹಿಸಿಕೊಳ್ಳಲಿದ್ದು, 2025ರ ಮೇ 13ರ ವರೆಗೆ ಕರ್ತವ್ಯ ನಿರ್ವಹಿಸಲಿದ್ದಾರೆ. 2019ರ ಜನವರಿ 18ರಂದು ನ್ಯಾ. ಸಂಜೀವ್‌ ಖನ್ನಾ ಅವರನ್ನು ದೆಹಲಿ ಹೈಕೋರ್ಟ್‌ನಿಂದ ಸುಪ್ರೀಂ ಕೋರ್ಟ್‌‌ ಹುದ್ದೆಗೆ ನೇಮಿಸಲಾಗಿತ್ತು. 2022ರ ನವೆಂಬರ್ 8ರಂದು ಸಿಜೆಐ ಉದಯ್ ಉಮೇಶ್ ಲಲಿತ್

ನ್ಯಾ.ಸಂಜೀವ್‌ ಖನ್ನಾ ಸುಪ್ರೀಂ ಕೋರ್ಟ್‌ನ ಮುಂದಿನ ಮುಖ್ಯ ನ್ಯಾಯಾಧೀಶ Read More »

ಒಡಿಶಾ ಕರಾವಳಿಗೆ ಅಪ್ಪಳಿಸಿದ ಡಾನಾ ಚಂಡಮಾರುತ

120 ಕಿ.ಮೀ. ಪ್ರಚಂಡ ವೇಗದ ಗಾಳಿ; 6 ಲಕ್ಷ ಮಂದಿ ಸ್ಥಳಾಂತರ ಭುವನೇಶ್ವರ : ಬಂಗಾಳಕೊಲ್ಲಿಯ ವಾಯವ್ಯ ಭಾಗದಲ್ಲಿ ಸೃಷ್ಟಿಯಾಗಿರುವ ಡಾನಾ ಚಂಡಮಾರುತ ನಿರೀಕ್ಷೆಯಂತೆ ಮಧ್ಯರಾತ್ರಿ ಒಡಿಶಾ ಕರಾವಳಿಗೆ ಅಪ್ಪಳಿಸಿದೆ. ಕೇಂದ್ರಪಾರ ಜಿಲ್ಲೆಯ ಭಿತರ್ಕಾನಿಕಾ ಮತ್ತು ಭದ್ರಕ್‌ನ ಧಮ್ರಾ ನಡುವೆ ಅಪ್ಪಳಿಸಿ ಜೋರು ಮಳೆಯಾಗುತ್ತಿದೆ. ಚಂಡಮಾರುತ ತೀವ್ರ ಸ್ವರೂಪ ಪಡೆದಿದ್ದು ಒಡಿಶಾ, ಬಂಗಾಳದ ತೀರ ಪ್ರದೇಶಗಳಲ್ಲಿ ಬಿರುಗಾಳಿಯೊಂದಿಗೆ ಭಾರಿ ಮಳೆಯಾಗುತ್ತಿದೆ. ಗಂಟೆಗೆ 120 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದ್ದು ಉತ್ತರ ವಾಯವ್ಯ ದಿಕ್ಕಿನತ್ತ ಚಲಿಸುತ್ತಿದೆ.ನೆರೆಯ ಪಶ್ಚಿಮ ಬಂಗಾಳದ

ಒಡಿಶಾ ಕರಾವಳಿಗೆ ಅಪ್ಪಳಿಸಿದ ಡಾನಾ ಚಂಡಮಾರುತ Read More »

17 ಬುಲೆಟ್‌ಗಳು ಹೊಕ್ಕಿದ್ದರೂ ಟೈಗರ್ ಹಿಲ್ ಗೆದ್ದು ಬಂದ ಸೈನಿಕ

19 ವರ್ಷ ಪ್ರಾಯದಲ್ಲೇ ಪರಮವೀರ ಚಕ್ರ ಪಡೆದ ವೀರ ಯೋಧ ಆತನ ತಂದೆ ಕರಣ್ ಸಿಂಗ್‌ ಯಾದವ್ 1965-71ರ ಅವಧಿಯಲ್ಲಿ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿದ್ದರು. ಹಾಗೆಯೇ ಎರಡು ಇಂಡೋ-ಪಾಕ್ ಯುದ್ಧಗಳಲ್ಲಿ ಧೀರೋದಾತ್ತವಾಗಿ ಹೋರಾಡಿ ಭಾರತವನ್ನು ಗೆಲ್ಲಿಸಿದ್ದರು. ಅದರಿಂದ ಮಗನಿಗೆ ರಾಷ್ಟ್ರಪ್ರೇಮವು ರಕ್ತದಲ್ಲಿಯೇ ಬಂದಿತ್ತು ಅನ್ನಿಸುತ್ತದೆ. ಅದರಿಂದ ಆತ ಭಾರತೀಯ ಸೇನೆಗೆ ಆಯ್ಕೆಯಾಗುವಾಗ ಆತನ ವಯಸ್ಸು ಕೇವಲ 16 ವರ್ಷ 5 ತಿಂಗಳು ಆಗಿತ್ತು. ಅಪ್ಪನ ಭುಜದ ಮೇಲೆ ಮಿಂಚುತ್ತಿದ್ದ ಮೆಡಲ್‌ಗಳೇ ಆತನಿಗೆ ಪ್ರೇರಣೆ ಆತನ ಹೆಸರು

17 ಬುಲೆಟ್‌ಗಳು ಹೊಕ್ಕಿದ್ದರೂ ಟೈಗರ್ ಹಿಲ್ ಗೆದ್ದು ಬಂದ ಸೈನಿಕ Read More »

ತುಳು ಚಿತ್ರರಂಗಕ್ಕೆ ಗೋಲ್ಡನ್‌ ಸ್ಟಾರ್‌ ಗಣೇಶ್‌ ದಂಪತಿ

ಹರಿಕೃಷ್ಣ ಬಂಟ್ವಾಳ್‌ ಪುತ್ರ ನಾಯಕನಾಗಿರುವ ಚಿತ್ರ ಶಿಲ್ಪಾ ಗಣೇಶ್‌ ನಿರ್ಮಾಣ ಮಂಗಳೂರು: ಮುಂಗಾರು ಮಳೆ ಖ್ಯಾತಿಯ ಗೋಲ್ಡನ್ ಸ್ಟಾರ್ ಗಣೇಶ್ ಈಗ ತುಳು ಚಿತ್ರರಂಗಕ್ಕೆ ಕಾಲಿಟ್ಟಿದ್ದಾರೆ. ಅವರ ಪತ್ನಿ ಶಿಲ್ಪಾ ಗಣೇಶ್ ತುಳು ಚಿತ್ರವೊಂದನ್ನು ನಿರ್ಮಿಸಲಿದ್ದು, ಅದರಲ್ಲಿ ಅತಿಥಿ ನಟನಾಗಿ ಗಣೇಶ್‌ ನಟಿಸಲಿದ್ದಾರೆ. ಕನ್ನಡ ಚಿತ್ರರಂಗದಲ್ಲಿ ಶಿಲ್ಪಾ ಗಣೇಶ್‌ ಈಗಾಗಲೇ ನಿರ್ಮಾಪಕಿಯಾಗಿ ಹಲವು ಚಿತ್ರಗಳನ್ನು ನಿರ್ಮಿಸಿದ್ದಾರೆ. ಈಗ ಮೊದಲ ಬಾರಿಗೆ ತುಳು ಸಿನಿಮಾ ನಿರ್ಮಾಣಕ್ಕೆ ಕೈ ಹಾಕಿದ್ದಾರೆ. ಶಿಲ್ಪಾ ಗಣೇಶ್‌ ಕರಾವಳಿ ಮೂಲದವರು.ಉತ್ತಮ ಬಜೆಟ್​ನಲ್ಲಿ ಗುಣಮಟ್ಟದ ಸಿನಿಮಾ

ತುಳು ಚಿತ್ರರಂಗಕ್ಕೆ ಗೋಲ್ಡನ್‌ ಸ್ಟಾರ್‌ ಗಣೇಶ್‌ ದಂಪತಿ Read More »

error: Content is protected !!
Scroll to Top