ಸುದ್ದಿ

ಫೋಟೊ ಶೂಟ್ ವೇಳೆ ಯುವಕನಿಗೆ ಅಪರಿಚಿತರಿಂದ ಚೂರಿ ಇರಿತ | ಯುವಕ ಮೃತ್ಯು

ಬೆಂಗಳೂರು: ಅಪರಿಚಿತರ ಗುಂಪೊಂದು ಯುವಕನೊಬ್ಬನಿಗೆ ಚೂರಿಯಿಂದ ಇರಿದು ಹತ್ಯೆ ಮಾಡಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ರಾಮೇಶ್ವರ ಸಮೀಪ ರೆಸ್ಟೋರೆಂಟ್ ಒಂದರಲ್ಲಿ ನಡೆದಿದೆ. ಸೂರ್ಯ (22) ಹತ್ಯೆಯಾದ ಯುವಕ. ಭಾನುವಾರ ರಾಮೇಶ್ವರ ಸಮೀಪದ ರೆಸ್ಟೋರೆಂಟ್ ಒಂದಲ್ಲಿ ಸೂರ್ಯ ನಾಲ್ವರು ಸ್ನೇಹಿತರೊಂದಿಗೆ ಫೋಟೊ ಶೂಟ್ ಮಾಡುತ್ತಿದ್ದ ವೇಳೆ ಅಪರಿಚಿತರ ಗುಂಪೊಂದು ಅವರ ಜತೆ ಕಿರಿಕ್ ತೆಗೆದಿದೆ. ಅಪರಿಚಿತರ ತಂಡ ಫೋಟೋ ತೆಗೆದಿದ್ದ ಕ್ಯಾಮೆರಾ ಕಿತ್ತುಕೊಂಡು ನಾಲ್ವರು ಯುವಕರ ಮೇಲೆ ಹಲ್ಲೆ ಮಾಡಿ, ಸೂರ್ಯನಿಗೆ ಚಾಕುವಿನಿಂದ ಇರಿದಿದ್ದಾರೆ. […]

ಫೋಟೊ ಶೂಟ್ ವೇಳೆ ಯುವಕನಿಗೆ ಅಪರಿಚಿತರಿಂದ ಚೂರಿ ಇರಿತ | ಯುವಕ ಮೃತ್ಯು Read More »

ದುಷ್ಕರ್ಮಿಗಳಿಂದ ನಾಲ್ವರ ಹತ್ಯೆ | ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು

ಮಲ್ಪೆ: ದುಷ್ಮರ್ಮಿಗಳು ನಾಲ್ವರನ್ನು ಕೊಲೆ ಮಾಡಿದ ಘಟನೆ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ನೇಜಾರಿನಲ್ಲಿ ನಡೆದಿದೆ. ಮುಸ್ಲಿ ಸಮುದಾಯದ ಇಬ್ಬರು ಮಹಿಳೆಯರು ಹಾಗೂ ಇಬ್ಬರು ಮಕ್ಕಳನ್ನು ಹತ್ಯೆ ಮಾಡಿರುವುದಾಗಿ ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಮಲ್ಪೆ ಪೊಲೀಸರು ಭೇಟಿ ನೀಡಿ ಮಾಹಿತಿ ಕಲೆ ಹಾಕುತ್ತಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.

ದುಷ್ಕರ್ಮಿಗಳಿಂದ ನಾಲ್ವರ ಹತ್ಯೆ | ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು Read More »

ಬಿಜೆಪಿ ನೂತನ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಶ್ರೀ ಆದಿಚುಂಚನಗಿರಿ ಮಠಕ್ಕೆ ಭೇಟಿ | ಆಶೀರ್ವಾದ ನೀಡಿದ ಶ್ರೀ ಡಾ.ನಿರ್ಮಲಾನಂದನಾಥ ಮಹಾಸ್ವಾಮೀಜಿ

ಬೆಂಗಳೂರು: ರಾಜ್ಯ ಬಿಜೆಪಿ ನೂತನ ಅಧ್ಯಕ್ಷರಾಗಿ ನೇಮಕಗೊಂಡ ಬಿ.ವೈ.ವಿಜಯೇಂದ್ರ ಅವರು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಜಗದ್ಗುರು ಶ್ರೀ ಡಾ.ನಿರ್ಮಲಾನಂದನಾಥ ಮಹಾ ಸ್ವಾಮೀಜಿಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. ಕರ್ನಾಟಕದ ರಾಜ್ಯಾಧ್ಯಕ್ಷರಾಗಿ ನೇಮಕಗೊಂಡ ಬಳಿಕ ಶನಿವಾರ ಬೆಂಗಳೂರಿನ ವಿಜಯನಗರದ ಶ್ರೀ ಆದಿಚುಂಚನಗಿರಿ ಶಾಖಾ ಮಠಕ್ಕೆ ಭೇಟಿ ನೀಡಿ ಮಹಾ ಸ್ವಾಮೀಜಿಯವರಿಂದ ಆಶೀರ್ವಾದ ಪಡೆದುಕೊಂಡರು. ಈ ಸಂದರ್ಭದಲ್ಲಿ ಬಿ.ವೈ. ವಿಜಯೇಂದ್ರ ಅವರ ಆಪ್ತ ಬೆಂಬಲಿಗರು ಉಪಸ್ಥಿತರಿದ್ದರು.

ಬಿಜೆಪಿ ನೂತನ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಶ್ರೀ ಆದಿಚುಂಚನಗಿರಿ ಮಠಕ್ಕೆ ಭೇಟಿ | ಆಶೀರ್ವಾದ ನೀಡಿದ ಶ್ರೀ ಡಾ.ನಿರ್ಮಲಾನಂದನಾಥ ಮಹಾಸ್ವಾಮೀಜಿ Read More »

ಸುಬ್ರಹ್ಮಣ್ಯ ಲಯನ್ಸ್ ಕ್ಲಬ್ ಗೆ ಪ್ರಾಂತೀಯ ಅಧ್ಯಕ್ಷರ ಅಧಿಕೃತ ಭೇಟಿ | ಮೂಕ ಪ್ರಾಣಿ ಪಕ್ಷಿಗಳ ಮನಸ್ಸನ್ನ ಅರಿತು ಸೇವೆ ಸಲ್ಲಿಸೋಣ : ರೇಣುಕಾ ಸದಾನಂದ ಜಾಕೆ

ಸುಬ್ರಹ್ಮಣ್ಯ: ದೀನ ದಲಿತರ ಮತ್ತು ಬಡವರ ಮುಖದಲ್ಲಿ ನಗು ತರುವ ನಮ್ಮ ಅಂತರಾಷ್ಟ್ರೀಯ ಲಯನ್ಸ್ ನ ಉದ್ದೇಶದೊಂದಿಗೆ ಬಡವರ ಸೇವೆಯನ್ನು ನಿರಂತರವಾಗಿ ಮುಂದುವರಿಸೋಣ. ಹಾಗೆಯೇ ಮೂಕ ಪ್ರಾಣಿ ಪಕ್ಷಿಗಳ ಮನಸ್ಸನ್ನು ಅರ್ಥೈಸಿಕೊಂಡು ಅವುಗಳಿಗೆ ಬೇಕಾದ ಆಹಾರವನ್ನು ಕಾಡಿನ ಅಂಚಿನಲ್ಲಿ ಸುಲಭವಾಗಿ ಸಿಗುವ ಹಾಗೆ ಬೀಜ ಬಿತ್ತನೆ ಹಾಗೂ ಹಣ್ಣಿನ ಗಿಡಗಳನ್ನು ಹೆಚ್ಚಾಗಿ ನೆಡುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳೋಣ ಎಂದು ಅಂತರಾಷ್ಟ್ರೀಯ ಲಯನ್ಸ್  ಜಿಲ್ಲೆಯ 317 ಡಿ ಪ್ರಾಂತೀಯ ಅಧ್ಯಕ್ಷೆ ರೇಣುಕಾ ಸದಾನಂದ ಜಾಕೆ ಹೇಳಿದರು. ಅವರು ಕುಕ್ಕೆ ಸುಬ್ರಹ್ಮಣ್ಯ

ಸುಬ್ರಹ್ಮಣ್ಯ ಲಯನ್ಸ್ ಕ್ಲಬ್ ಗೆ ಪ್ರಾಂತೀಯ ಅಧ್ಯಕ್ಷರ ಅಧಿಕೃತ ಭೇಟಿ | ಮೂಕ ಪ್ರಾಣಿ ಪಕ್ಷಿಗಳ ಮನಸ್ಸನ್ನ ಅರಿತು ಸೇವೆ ಸಲ್ಲಿಸೋಣ : ರೇಣುಕಾ ಸದಾನಂದ ಜಾಕೆ Read More »

ಜಾಲ್ಸೂರು-ಕಾಸರಗೋಡು ರಸ್ತೆಯಲ್ಲಿ ಆನೆ ಪ್ರತ್ಯಕ್ಷ | ಕೂದಲೆಳೆ ಅಂತರದಿಂದ ತಪ್ಪಿಸಿಕೊಂಡ ಬೈಕ್ ಸವಾರ

ಜಾಲ್ಸೂರು: ಜಾಲ್ಲೂರು- ಕಾಸರಗೋಡು ಅಂತರಾಜ್ಯ ರಸ್ತೆಯಲ್ಲಿ ಒಂಟಿ ಸಲಗ ಪ್ರತ್ಯಕ್ಷವಾಗಿದ್ದು, ತಿರುವಿನಲ್ಲಿ ಎದುರಿನಿಂದ ಬಂದ ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರಾದ ಘಟನೆ ಸುಳ್ಯ ಸಮೀಪದ ಪಂಜಿಕಲ್ಲಿನಲ್ಲಿ ಶನಿವಾರ ನಡೆದಿದೆ. ದೇಲಂಪಾಡಿ ಗ್ರಾಮದ ಬೆಳ್ಳಿಪಾಡಿ ಗ್ರಾಮ ಸುತ್ತ ಮುತ್ತ ಕಾಡಿನಿಂದ  ಆವರಿಸಿದ್ದು, ಈ ಪರಿಸರದಲ್ಲಿ ರಾತ್ರಿ, ಹಗಲೆನ್ನದೆ ಆನೆಗಳು ಓಡಾಡುತ್ತಿರುತ್ತವೆ. ಇಲ್ಲಿನ ಜನ ಪ್ರತಿ ದಿನ ಆತಂಕದಲ್ಲೇ ಬದುಕುವಂತಾಗಿದೆ. ಹಲವು ದಿನಗಳಿಂದ ನಿರಂತರವಾಗಿ ಕಾಡಾನೆಗಳು ಕೃಷಿಕರ ತೋಟಗಳಿಗೆ ದಾಳಿ ಇಡುತ್ತಿದ್ದು, ಕೃಷಿಯನ್ನು ಹಾನಿ ಮಾಡುತ್ತಿವೆ. ಕಾಸರಗೋಡು

ಜಾಲ್ಸೂರು-ಕಾಸರಗೋಡು ರಸ್ತೆಯಲ್ಲಿ ಆನೆ ಪ್ರತ್ಯಕ್ಷ | ಕೂದಲೆಳೆ ಅಂತರದಿಂದ ತಪ್ಪಿಸಿಕೊಂಡ ಬೈಕ್ ಸವಾರ Read More »

ಡಿ.21 : ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ 4ನೇ ಜಿಲ್ಲಾ ಸಮ್ಮೇಳನ | ಲಾಂಛನ ಬಿಡುಗಡೆ

ಧರ್ಮಸ್ಥಳ: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನಡೆಯಲಿರುವ 4ನೇ ಜಿಲ್ಲಾ ಸಮ್ಮೇಳನದ ಲಾಂಛನ ಬಿಡುಗಡೆ ನ.11 ರಂದು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಬಿಡುಗಡೆಗೊಳಿಸಲಾಯಿತು. ಡಿ.21ರಂದು ಮಂಗಳೂರಿನ ಕುದ್ಮುಲ್ ರಂಗ ರಾವ್ ಪುರಭವನದಲ್ಲಿ ಜಿಲ್ಲಾ ಸಮ್ಮೇಳನ ನಡೆಯಲಿದ್ದು, ಲಾಂಛನವನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ, ರಾಜ್ಯ ಸಭಾ ಸದಸ್ಯ ಡಾ.ಡಿ.ವೀರೇಂದ್ರ ಹೆಗ್ಗಡೆ ಬಿಡುಗಡೆಗೊಳಿಸಿ ಶುಭಹಾರೈಸಿದರು. ಈ ಸಂದರ್ಭದಲ್ಲಿ ದ.ಕ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಮಂಗಳೂರು ಪ್ರೆಸ್‌ಕ್ಲಬ್ ಅಧ್ಯಕ್ಷ

ಡಿ.21 : ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ 4ನೇ ಜಿಲ್ಲಾ ಸಮ್ಮೇಳನ | ಲಾಂಛನ ಬಿಡುಗಡೆ Read More »

ಉಡುಪಿ ಮಾಜಿ ಶಾಸಕರ ಪತ್ನಿ ಪದ್ಮಪ್ರಿಯ ನಾಪತ್ತೆ, ಆತ್ಮಹತ್ಯೆ ಪ್ರಕರಣ | ಆರೋಪಿ ಅತುಲ್ ರಾವ್‍ ಗೆ ಜೈಲು ಶಿಕ್ಷೆ ವಿಧಿಸಿದ ಉಡುಪಿ ನ್ಯಾಯಾಲಯ

ಉಡುಪಿ: ಉಡುಪಿಯ ಮಾಜಿ ಶಾಸಕ ಕೆ.ರಘುಪತಿ ಭಟ್ ಅವರ ಪತ್ನಿ ಪದ್ಮಪ್ರಿಯ ನಾಪತ್ತೆ ಹಾಗೂ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮೋಸ, ವಂಚನೆ ಹಾಗೂ ನಕಲಿ ದಾಖಲೆ ಸೃಷ್ಠಿಸಿರುವ ಆರೋಪದಲ್ಲಿ ಅತುಲ್ ರಾವ್‌ಗೆ ಒಂದು ವರ್ಷ ಜೈಲುಶಿಕ್ಷೆ, ದಂಡ ವಿಧಿಸಿ ಉಡುಪಿ ನ್ಯಾಯಾಲಯ ಆದೇಶ ನೀಡಿದೆ. 15 ವರ್ಷಗಳ ಹಿಂದೆ ನಡೆದ ಈ ಪ್ರಕರಣದಲ್ಲಿ ಸಿಒಡಿ ಪರ ವಿಶೇಷ ಸರಕಾರಿ ಅಭಿಯೋಜಕರಾಗಿ ಮಂಗಳೂರು ವಲಯದ ಹಿರಿಯ ಕಾನೂನು ಅಧಿಕಾರಿ ಪುತ್ತೂರಿನ ಕೆ.ಶಿವಪ್ರಸಾದ್ ಆಳ್ವ ಅವರು ವಾದ ಮಂಡನೆ ಮಾಡಿ

ಉಡುಪಿ ಮಾಜಿ ಶಾಸಕರ ಪತ್ನಿ ಪದ್ಮಪ್ರಿಯ ನಾಪತ್ತೆ, ಆತ್ಮಹತ್ಯೆ ಪ್ರಕರಣ | ಆರೋಪಿ ಅತುಲ್ ರಾವ್‍ ಗೆ ಜೈಲು ಶಿಕ್ಷೆ ವಿಧಿಸಿದ ಉಡುಪಿ ನ್ಯಾಯಾಲಯ Read More »

ತಲವಾರು ಝಳಪಿಸಿದ 9 ಮಂದಿ ಪೊಲೀಸ್ ವಶಕ್ಕೆ!!!

ಪುತ್ತೂರು: ಪುತ್ತಿಲ ಪರಿವಾರದ ಕಚೇರಿ ಮುಂಭಾಗ ತಲವಾರು ಝಳಪಿಸಿದ ಪ್ರಕರಣದಲ್ಲಿ 9 ಮಂದಿಯನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಘಟನೆ‌‌ ನಡೆಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ

ತಲವಾರು ಝಳಪಿಸಿದ 9 ಮಂದಿ ಪೊಲೀಸ್ ವಶಕ್ಕೆ!!! Read More »

ಪಿಲಿಕುಳ ಜೈವಿಕ ಉದ್ಯಾನವನಕ್ಕೆ ಆಗಮಿಸಿದ ಅಪರೂಪದ ಪ್ರಾಣಿ ಪಕ್ಷಿಗಳು ಕ್ಯಾಮರಾ ಕಣ್ಣಲ್ಲಿ ಸೆರೆ!!

ಮಂಗಳೂರು: ದೇಶದ ಪ್ರಮುಖ ಮೃಗಾಲಯಗಳಲ್ಲಿ ಒಂದಾಗಿರುವ ಪಿಲಿಕುಳ ಜೈವಿಕ ಉದ್ಯಾನವನಕ್ಕೆ ಅಳಿವಿನಂಚಿನಲ್ಲಿರುವ ತೋಳಗಳ ಸೇರ್ಪಡೆಯಾಗಿವೆ. ಪ್ರಾಣಿ ವಿನಿಮಯ ಯೋಜನೆಯಲ್ಲಿ ಆಂಧ್ರ ಪ್ರದೇಶದ ವಿಶಾಖಪಟ್ಟಣದ ಮೃಗಾಲಯದಿಂದ ಒಂದು ಜತೆ ತೋಳ ಪಿಲಿಕುಳ ಮೃಗಾಲಯಕ್ಕೆ ತರಿಸಲಾಗಿದೆ. ಹೊಸ ಜಗತ್ತಿನ ಮಂಗಗಳೆಂದು ಕರೆಯಲ್ಪಡುವ 4 ಜತೆ ಅಳಿಲು ಮಂಗ ಮಾರ್ಮಸೆಟ್, ಟಾಮರಿಂನ್ ಗಳು ಕೂಡ ಸೇರ್ಪಡೆಯಾಗಿದ್ದು, ಇವು ಮಧ್ಯ ಮತ್ತು ದಕ್ಷಿಣ ಅಮೆರಿಕದಲ್ಲಿ ಕಂಡು ಬರುವ ಚಿಕ್ಕ ಜಾತಿಯ ಮಂಗಗಳಾಗಿವೆ. ಮೆಕ್ಸಿಕೋ ದೇಶದಲ್ಲಿ ಕಂಡು ಬರುವ ಬ್ಲೂ ಗೋಲ್ಡ್ ಮಕಾವ್, ಆಸ್ಟ್ರೇಲಿಯಾದಲ್ಲಿ

ಪಿಲಿಕುಳ ಜೈವಿಕ ಉದ್ಯಾನವನಕ್ಕೆ ಆಗಮಿಸಿದ ಅಪರೂಪದ ಪ್ರಾಣಿ ಪಕ್ಷಿಗಳು ಕ್ಯಾಮರಾ ಕಣ್ಣಲ್ಲಿ ಸೆರೆ!! Read More »

ಉದ್ಯಮಿ ಸೊಸೆ ಆತ್ಮಹತ್ಯೆ | ಆರೋಪಿಗಳಿಗೆ ಜಾಮೀನು !

ಸುಳ್ಯ; ಉದ್ಯಮಿ ಸೊಸೆ ಐಶ್ವರ್ಯಾ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳಿಗೆ ಬೆಂಗಳೂರಿನ ಸಿಟಿ ಏಳನೇ ಹೆಚ್ಚುವರಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿ ಆದೇಶ ನೀಡಿದೆ. ಪ್ರಕರಣಕ್ಕೆ ಸಂಬಂಧಿಸಿ ಐಶ್ವರ್ಯಾ ಮಾವ ಗಿರಿಯಪ್ಪ ಗೌಡ ಕಾಪಿಲ, ಅತ್ತೆ ಸೀತಮ್ಮ, ಗಂಡ ರಾಜೇಶ್, ಮೈದುನ ವಿಜಯ್, ಮೈದುನನ ಪತ್ನಿ ತಸ್ಮಯ್ ಅವರನ್ನು ಪೊಲೀಸರು ಗೋವಾದಲ್ಲಿ ಬಂಧಿಸಿದ್ದರು. ಇನ್ನುಳಿದ ಆರೋಪಿಗಳಾದ ಐಶ್ವರ್ಯಾ ಅವರ ತಂದೆಯ ಅಕ್ಕ ಗೀತಾ, ಅವರ ಪತಿ ರವೀಂದ್ರನಾಥ ಕೇವಳ ಹಾಗೂ

ಉದ್ಯಮಿ ಸೊಸೆ ಆತ್ಮಹತ್ಯೆ | ಆರೋಪಿಗಳಿಗೆ ಜಾಮೀನು ! Read More »

error: Content is protected !!
Scroll to Top