ಸುದ್ದಿ

ಸ್ಕೂಟರ್-ಜೀಪು ಅಪಘಾತ | ಸ್ಕೂಟರ್ ಹಿಂಬದಿ ಸವಾರ ಇಫ್ರಾಝ್ ಮೃತ್ಯು

ಕಾಸರಗೋಡು: ಸ್ಕೂಟರ್ – ಜೀಪು ನಡುವೆ ಅಪಘಾತ ಸಂಭವಿಸಿದ ಪರಿಣಾಮ ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ಕಾಸರಗೋಡಿನ ಪೈವಳಿಕೆಯಲ್ಲಿ ನಡೆದಿದೆ. ಪೈವಳಿಕೆ ಲಾಲ್ ಬಾಗ್ ನಿವಾಸಿ ಇಫ್ರಾಝ್ ಮೃತಪಟ್ಟ ವಿದ್ಯಾರ್ಥಿ. ಈತ ಉಪ್ಪಳ ತಹಾನಿ ಆಂಗ್ಲ ಮಾಧ್ಯಮ ಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿಯಾಗಿದ್ದು, ಗೆಳೆಯನೊಂದಿಗೆ ಮಸೀದಿಯಿಂದ ಮರಳುತ್ತಿದ್ದಾಗ ಮನೆ ಸಮೀಪವೇ ಈ ಅಪಘಾತ ನಡೆದಿದೆ. ಮುಂಭಾಗದಲ್ಲಿ ತೆರಳುತ್ತಿದ್ದ ಜೀಪು ತಿರುವೊಂದರಲ್ಲಿ ಏಕಾಏಕಿ ಬ್ರೇಕ್ ಹಾಕಿದೆ. ಆಗ ಹಿಂಭಾಗದಲ್ಲಿ ಬರುತ್ತಿದ್ದ ಸ್ಕೂಟರ್ ಜೀಪಿಗೆ ಢಿಕ್ಕಿ ಹೊಡೆದು ಈ ಅಪಘಾತ ನಡೆದಿದೆ. […]

ಸ್ಕೂಟರ್-ಜೀಪು ಅಪಘಾತ | ಸ್ಕೂಟರ್ ಹಿಂಬದಿ ಸವಾರ ಇಫ್ರಾಝ್ ಮೃತ್ಯು Read More »

ಆಟೋ ರಿಕ್ಷಾ-ಓಮ್ನಿ ಡಿಕ್ಕಿ : ರಿಕ್ಷಾ ಚಾಲಕ ಮೃತ್ಯು

ಸುಳ್ಯ: ಓಮ್ನಿ ಹಾಗೂ ಅಟೋ ರಿಕ್ಷಾ ಡಿಕ್ಕಿ ಹೊಡೆದ ಪರಿಣಾಮ ರಿಕ್ಷಾ ಚಾಲಕ ಗಂಭೀರ ಗಾಯಗೊಂಡು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟ ಘಟನೆ ಹಳೆಗೇಟಿನಲ್ಲಿ ಭಾನುವಾರ ರಾತ್ರಿ ನಡೆದಿದೆ. ಜಾಲ್ಸೂರು ಗ್ರಾಮದ ಅರಿಯಡ್ಕ ನಿವಾಸಿ ಬಾಬು ಪಾಟಾಳಿ ಅಪಘಾತದಿಂದ ಮೃತಪಟ್ಟವರು. ಜಾಲ್ಲೂರಿನಿಂದ ಸುಳ್ಯಕ್ಕೆ ಪ್ರಯಾಣಿಕರೋರ್ವರನ್ನು ಬಿಟ್ಟು ಹಿಂತಿರುಗುತ್ತಿದ್ದ ಬಾಬು ಪಾಟಾಳಿಯವರು ಚಲಾಯಿಸುತ್ತಿದ್ದ ಅಟೋರಿಕ್ಷಾ ಹಳೆಗೇಟು ಪೆಟ್ರೋಲ್ ಪಂಪ್ ಬಳಿ ಮುಂಭಾಗದಿಂದ ಬರುತ್ತಿದ್ದ ಓಮ್ಮಿಗೆ ಢಿಕ್ಕಿ ಹೊಡೆದಿದ್ದು, ಚಾಲಕ ಬಾಬು ಪಾಟಾಳಿ ಅವರನ್ನು ಆಸ್ಪತ್ರೆಗೆ ಸಾಗಿಸುವ ದಾರಿ

ಆಟೋ ರಿಕ್ಷಾ-ಓಮ್ನಿ ಡಿಕ್ಕಿ : ರಿಕ್ಷಾ ಚಾಲಕ ಮೃತ್ಯು Read More »

ಪಂಜದ ಯುವಕ ಪಾಂಡಿಚೇರಿಯಲ್ಲಿ ಸಮುದ್ರಪಾಲು

ಸುಳ್ಯ, ನ.5: ಬೆಂಗಳೂರಿನಲ್ಲಿ ಉದ್ಯೋಗಿಯಾಗಿರುವ ಸುಳ್ಯ ತಾಲೂಕಿನ ಪಂಜದ ಯುವಕನೊಬ್ಬ ಪಾಂಡಿಚೇರಿಯಲ್ಲಿ ಸಮುದ್ರ ಪಾಲಾದ ಘಟನೆ ಸಂಭವಿಸಿದೆ. ಪಂಜದ ಕೂತ್ಕುಂಜ ಗ್ರಾಮದ ಚಿದ್ಗಲ್ಲು ಗೋಪಾಲ್ ಎಂಬವರ ಪುತ್ರ ಬಿಪಿನ್ ನೀರುಪಾಲಾದ ಯುವಕ. ಬಿಪಿನ್ ಬೆಂಗಳೂರಿನ ಕಂಪೆನಿಯೊಂದರಲ್ಲಿ ಉದ್ಯೋಗಿಯಾಗಿದ್ದು, ಶನಿವಾರ ಗೆಳೆಯರೊಂದಿಗೆ ಪಾಂಡಿಚೇರಿಗೆ ಹೋಗಿದ್ದು ಬಳಿಕ ಅಲ್ಲಿನ ಬೀಚ್‌ಗೆ ತೆರಳಿದ್ದ ವೇಳೆ ಸಮುದ್ರಪಾಲಾಗಿದ್ದಾರೆ. ರವಿವಾರ ಯುವಕನ ಮೃತದೇಹ ಪತ್ತೆಯಾಗಿದೆ. ಮೃತರು ತಂದೆ, ತಾಯಿ, ಸಹೋದರಿಯನ್ನು ಅಗಲಿದ್ದಾರೆ.

ಪಂಜದ ಯುವಕ ಪಾಂಡಿಚೇರಿಯಲ್ಲಿ ಸಮುದ್ರಪಾಲು Read More »

ಸುಬ್ರಹ್ಮಣ್ಯದಲ್ಲಿ ಸ್ವಚ್ಛತಾ ಕಾರ್ಯಕ್ರಮ    

ಸುಬ್ರಹ್ಮಣ್ಯ: ಡಾlರವಿ ಕಕ್ಕೆ ಪದವು ಸಮಾಜ ಸೇವಾ ಟ್ರಸ್ಟ್ ಹಾಗೂ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಲಿಜನ್ ವತಿಯಿಂದ ಭಾನುವಾರ ಸುಬ್ರಹ್ಮಣ್ಯದ ಸ್ಥಾನಘಟ್ಟ, ಪರ್ವತಮಕಿ, ಪಾರ್ಕಿಂಗ್ ಸ್ಥಳ ,ಹಾಗೂ ಕುಲುಕುಂದ ರಸ್ತೆ ಭಾಗಗಳಲ್ಲಿ ಸ್ವಚ್ಛತಾ ಕಾರ್ಯಕ್ರಮ ಏರ್ಪಡಿಸಲಾಯಿತು. ಪ್ರತಿ ವಾರದ ಭಾನುವಾರ ಹಾಗೂ ವಿಶೇಷ ದಿನಗಳಲ್ಲಿ ಈ ಸ್ಥಾನಘಟ್ಟ ಹಾಗೂ ಆಸುಪಾಸಿನಲ್ಲಿ ಭಕ್ತಾದಿಗಳು ಪ್ಲಾಸ್ಟಿಕ್, ಕಸಕಡ್ಡಿಗಳು, ಬ್ಯಾಗ್, ಕಾಗದ, ನೀರಿನ ಬಾಟಲಿಗಳು ಹಾಗೂ ಇನ್ನಿತರ ಕಚ್ಚಾ ವಸ್ತುಗಳನ್ನ ಎಲ್ಲೆಂದರಲ್ಲಿ ಬಿಸಾಡಿ ಇಡೀ ಪರಿಸರ ಮಾಲಿನ್ಯವಾಗಿದ್ದು,

ಸುಬ್ರಹ್ಮಣ್ಯದಲ್ಲಿ ಸ್ವಚ್ಛತಾ ಕಾರ್ಯಕ್ರಮ     Read More »

ಜಿಂಕೆ ಮಾಂಸ ಸಾಗಾಟ | ಇಬ್ಬರು ಆರೋಪಿಗಳ ಬಂಧನ

ವಿರಾಜಪೇಟೆ: ರಕ್ಷಿತಾರಣ್ಯದಿಂದ ಬೇಟೆಯಾಡಿ ಎರಡು ಜಿಂಕೆಗಳನ್ನು ಕೊಂದು ಮಾಂಸ ಮಾಡಿ ಕಾರಿನಲ್ಲಿ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ವಿರಾಜಪೇಟೆ ಪೊಲೀಸ್ ಅರಣ್ಯ ಸಂಚಾರಿ ದಳದವರು ಯಶಸ್ವಿಯಾಗಿದ್ದು, ಬಂಧಿತರಿಂದ ಮಾಂಶ ವಶಪಡಿಸಿಕೊಂಡಿದ್ದಾರೆ. ಬೇಟೋಳಿ ಗ್ರಾಮದ ನಿವಾಸಿ ವಿರಾಜಪೇಟೆ ಬೇಕರಿಯೊಂದರ ಮಾಲೀಕ ಎಂ.ಎಂ ಅಜೀಜ್ (45), ನೆಹರು ನಗರ ನಿವಾಸಿ ಆಟೋ ಚಾಲಕ ಹುಸೈನ್ ಸಿ.ಎ.ಅಲಿಯಾಸ್ ಜಂಶೀರ್ (32) ಬಂಧಿತ ಆರೋಪಿಗಳು. ಪೊಲೀಸ್ ಅರಣ್ಯ ಸಂಚಾರಿ ದಳದ ಉಪನಿರೀಕ್ಷಕ ಎಂ.ಸಿ.ಮುತ್ತಣ್ಣ ಅವರಿಗೆ ದೊರೆತ ಖಚಿತ ಮಾಹಿತಿ ಮೇಲೆ ಪೆರುಂಬಾಡಿ ಕಡೆಯಿಂದ

ಜಿಂಕೆ ಮಾಂಸ ಸಾಗಾಟ | ಇಬ್ಬರು ಆರೋಪಿಗಳ ಬಂಧನ Read More »

ಗಣಿ-ಭೂ ವಿಜ್ಞಾನ ಇಲಾಖೆ ಅಧಿಕಾರಿ ಪ್ರತಿಮಾ ದುಷ್ಕರ್ಮಿಗಳಿಂದ ಹತ್ಯೆ

ಬೆಂಗಳೂರು: ಗಣಿ-ಭೂ ವಿಜ್ಞಾನ ಇಲಾಖೆಯ ಮಹಿಳಾ ಅಧಿಕಾರಿಯೋರ್ವರನ್ನು ಚಾಕುವಿನಿಂದ ಇರಿದು ಭೀಕರವಾಗಿ ಕೊಲೆ ಮಾಡಿರುವ ಘಟನೆ ಇಂದು ಬೆಂಗಳೂರಿನ ಸುಬ್ರಹ್ಮಣ್ಯನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಗಣಿ-ಭೂ ವಿಜ್ಞಾನ ಇಲಾಖೆಯ ಉಪ ನಿರ್ದೇಶಕಿ ಪ್ರತಿಮಾ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಅಧಿಕಾರಿ. ಪ್ರತಿಮಾ ಅವರು ದೊಡ್ಡಕಲ್ಲಸಂದ್ರದ ಅಪಾರ್ಟೆಂಟ್‌ವೊಂದರಲ್ಲಿ ಒಬ್ಬರೇ ವಾಸಿಸುತ್ತಿದ್ದರು. ವಿವಾಹಿತರಾಗಿದ್ದು, ಪ್ರತಿಮಾ ಪತಿ ಮತ್ತು ಮಗ ತೀರ್ಥಹಳ್ಳಿಯಲ್ಲಿ ವಾಸವಿದ್ದರು. ರಾತ್ರಿ ಪ್ರತಿಮಾ ಅವರಿಗೆ ಸಹೋದರ ಕರೆ ಮಾಡಿದ್ದ ಆದರೆ ಕರೆ ಸ್ವೀಕರಿಸಿರಲಿಲ್ಲ. ಬೆಳಿಗ್ಗೆ ಮನೆ ಬಳಿ ಬಂದು ನೋಡಿದಾಗ

ಗಣಿ-ಭೂ ವಿಜ್ಞಾನ ಇಲಾಖೆ ಅಧಿಕಾರಿ ಪ್ರತಿಮಾ ದುಷ್ಕರ್ಮಿಗಳಿಂದ ಹತ್ಯೆ Read More »

ಸತ್ಯಕ್ಕೆ ದೂರವಾದ ವರದಿ ಬಿತ್ತರ : ಕನ್ನಡ ನ್ಯೂಸ್ ಚಾನೆಲ್ ವಿರುದ್ಧ ಜಿಲ್ಲೆಯ ಸಮಸ್ತ ಒಕ್ಕಲಿಗ ಸಮುದಾಯದಿಂದ ಖಂಡನೆ | ಪತ್ರಿಕಾಗೋಷ್ಠಿಯಲ್ಲಿ ಸಂಘದ ಅಧ್ಯಕ್ಷ ಗುರುದೇವ್ ಯು.ಬಿ.

ಮಂಗಳೂರು: ಜಿಲ್ಲೆಯಲ್ಲಿ ಒಕ್ಕಲಿಗ ಸಮುದಾಯ 3.75 ಲಕ್ಷಕ್ಕಿಂತ ಅಧಿಕ ಮತದಾರರನ್ನು ಹೊಂದಿದ್ದು, ಇದು ಒಕ್ಕಲಿಗ ಅಭಿವೃದ್ಧಿ ನಿಗಮಕ್ಕೆ ಆಯೋಗ ನೀಡಿದ ವರದಿ ಹಾಗೂ ಒಕ್ಕಲಿಗರ ಸಂಘವು ನೀಡಿದ ಆಂತರಿಕ ಅಂಕಿಅಂಶವಾಗಿದೆ. ಆದರೆ ಕನ್ನಡ ನ್ಯೂಸ್ ಚಾನೆಲ್ ಒಂದು ತನ್ನ ವರದಿಯಲ್ಲಿ ದ.ಕ.ಜಿಲ್ಲೆಯಲ್ಲಿ ಕೇವಲ 80 ಸಾವಿರ ಅಂತ ಬಿಂಬಿಸಿ ನಿಕೃಷ್ಟ ಮತ್ತು ತಾತ್ಸಾರ ವರದಿ ನೀಡಿರುವುದು ಸಮುದಾಯದಲ್ಲಿ ಆಕ್ರೋಶ ಮತ್ತು ತಳಮಳಕ್ಕೆ ಕಾರಣವಾಗಿದೆ. ಅಧ್ಯಯನ ಪೂರಕ, ವಸ್ತುನಿಷ್ಠ ಸಂತ್ಯಾಂಶರಹಿತ ವರದಿ ಪ್ರಕಟಿಸಿರುವುದು ಮಾಧ್ಯಮದ ಘನತೆಗೆ ತಕ್ಕುದಲ್ಲ ಎಂದು

ಸತ್ಯಕ್ಕೆ ದೂರವಾದ ವರದಿ ಬಿತ್ತರ : ಕನ್ನಡ ನ್ಯೂಸ್ ಚಾನೆಲ್ ವಿರುದ್ಧ ಜಿಲ್ಲೆಯ ಸಮಸ್ತ ಒಕ್ಕಲಿಗ ಸಮುದಾಯದಿಂದ ಖಂಡನೆ | ಪತ್ರಿಕಾಗೋಷ್ಠಿಯಲ್ಲಿ ಸಂಘದ ಅಧ್ಯಕ್ಷ ಗುರುದೇವ್ ಯು.ಬಿ. Read More »

ಪ್ರೀತಿಸಿ ಮದುವೆಯಾದ ಪತ್ನಿಯನ್ನೇ ಕತ್ತು ಹಿಸುಕಿ ಬಾವಿಗೆ ಹಾಕಿದ ಪತಿ

ಬೆಳ್ತಂಗಡಿ:  ಏಳು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾದ ಪತ್ನಿಯನ್ನೇ ಕಿರಾತಕ ಪತಿರಾಯನೇ ಕತ್ತು ಹಿಸುಕಿ ಬಾವಿಗೆ ಹಾಕಿ ಕೊಂದ ಅಮಾನುಷ ಘಟನೆ ಬೆಳ್ತಂಗಡಿ ತಾಲೂಕು, ಬೆಳಾಲು ಗ್ರಾಮದ ಕೆಂಪನೊಟ್ಟು ಎಂಬಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಬೆಳಾಲು ನಿವಾಸಿ ಶಶಿಕಲಾ (27) ಎಂದು  ಗುರುತಿಸಲಾಗಿದ್ದು, ಆರೋಪಿ ಕಿರಾತಕ ಪತಿಯನ್ನು ಸುಧಾಕರ ಎಂದು ಗುರುತಿಸಲಾಗಿದೆ. ಸುಧಾಕರ ಏಳು ವರ್ಷಗಳ ಹಿಂದೆ ಶಶಿಕಲಾಳನ್ನು ಪ್ರೀತಿಸಿ ಮದುವೆಯಾಗಿದ್ದು, ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಕೆಂಪನೊಟ್ಟು ಎಂಬಲ್ಲಿ 6 ವರ್ಷದ ಮಗಳೊಂದಿಗೆ ವಾಸವಾಗಿದ್ದರು. ಸುಧಾಕರನಿಗೆ

ಪ್ರೀತಿಸಿ ಮದುವೆಯಾದ ಪತ್ನಿಯನ್ನೇ ಕತ್ತು ಹಿಸುಕಿ ಬಾವಿಗೆ ಹಾಕಿದ ಪತಿ Read More »

ಇಲಿ ಜ್ವರದಿಂದ ಮಹಿಳೆ ಮೃತ್ಯು

ಉಜಿರೆ: ಇಲಿ ಜ್ವರದಿಂದ ಬಳಲುತ್ತಿದ್ದ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಉಜಿರೆ ಗ್ರಾಮದ ಬೆಳಾಲುನಲ್ಲಿ ನಡೆದಿದೆ. ಬೆಳಾಲು ಗ್ರಾಮದ ತುರ್ಕೆರೊಟ್ಟು ಮನೆಯ ಆಶಾ (27) ಮೃತಪಟ್ಟವರು. ಇಲಿ ಜ್ವರದಿಂದ ಬಳಲುತ್ತಿದ್ದು ಚಿಕಿತ್ಸೆ ಫಲಕಾರಿಯಾಗಿದೆ ಮಂಗಳೂರಿನ ದೇರಳಕಟ್ಟೆ ಖಾಸಗಿ ಅಸ್ಪತ್ರೆಯಲ್ಲಿ ನಿಧನರಾದರು. ಮೃತರು ಪತಿ, ಇಬ್ಬರು ಗಂಡು ಮಕ್ಕಳನ್ನು ಅಗಲಿದ್ದಾರೆ.

ಇಲಿ ಜ್ವರದಿಂದ ಮಹಿಳೆ ಮೃತ್ಯು Read More »

ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯರಿಂದ ರಾಜೀವಗಾಂಧಿ ಗ್ರಾಮೀಣ ವಸತಿ ನಿಗಮದ ವ್ಯವಸ್ಥಾಪಕರಿಗೆ ಮನವಿ

ಸುಳ್ಯ: ಸುಳ್ಯ ವಿಧಾನಸಭಾ ಕ್ಷೇತ್ರದ ಸುಳ್ಯ ಹಾಗೂ ಕಡಬ ತಾಲೂಕು ವ್ಯಾಪ್ತಿಯಲ್ಲಿ ವಿವಿಧ ವಸತಿ ಯೋಜನೆಯಡಿ ಆಯ್ಕೆಯಾದ ಫಲಾನುಭವಿಗಳ ಸಹಾಯಧನವನ್ನು ನಿಗಮದಿಂದ ತಡೆಹಿಡಿಯಲಾಗಿದ್ದು, ಸಮಸ್ಯೆ ಬಗೆಹರಿಸಿ ಅನುದಾನ ಬಿಡುಗಡೆಗೊಳಿಸುವಂತೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ರಾಜೀವಗಾಂಧಿ ಗ್ರಾಮೀಣ ವಸತಿ ನಿಗಮದ ವ್ಯವಸ್ಥಾಪಕರಿಗೆ ಮನವಿ ಮಾಡಿದ್ದಾರೆ. ಬೆಂಗಳೂರಿನಲ್ಲಿ ವ್ಯವಸ್ಥಾಪಕರನ್ನು ಭೇಟಿ ಮಾಡಿದ ಅವರು, ಈ ಕುರಿತು ಸಮಸ್ಯೆ ಬಗೆಹರಿಸಿ ಅನುದಾನ ಬಿಡುಗಡೆಗೊಳಿಸುವಂತೆ ಹಲವಾರು ಬಾರಿ ಮನವಿ ಮಾಡಲಾಗಿದೆ. ಆದರೂ ತಾಂತ್ರಿಕ ಕಾರಣಗಳಿಂದಾಗಿ ನಿಗಮದ ವತಿಯಿಂದ ಸಮಸ್ಯೆ ಈ

ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯರಿಂದ ರಾಜೀವಗಾಂಧಿ ಗ್ರಾಮೀಣ ವಸತಿ ನಿಗಮದ ವ್ಯವಸ್ಥಾಪಕರಿಗೆ ಮನವಿ Read More »

error: Content is protected !!
Scroll to Top