ಸುದ್ದಿ

ಮಹಿಳೆಯರನ್ನು ಬೆದರಿಸಿ ಹಣ ಸುಲಿಗೆ : ಆರೋಪಿ ಸೆರೆ

ಮಂಗಳೂರು : ಅಶ್ಲೀಲ ವೀಡಿಯೊ ಇರುವುದಾಗಿ ಯುವತಿಯರನ್ನು ಬೆದರಿಸಿ ಹಣ ಸುಲಿಯುತ್ತಿದ್ದ ಕಾರ್ಕಳದ ಈದು ಗ್ರಾಮದ ವ್ಯಕ್ತಿಯನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಈದು ಗ್ರಾಮದ ಸತೀಶ್‌ ಹೊಸ್ಮಾರು (36) ಎಂದು ಗುರುತಿಸಲಾಗಿದೆ.ಈತ ಸೋಷಿಯಲ್‌ ಮೀಡಿಯಾದ ಮೂಲಕ ಯುವತಿಯರ ಮತ್ತು ಮಹಿಳೆಯರ ಮೊಬೈಲ್‌ ನಂಬರ್‌ ಸಂಪಾದಿಸಿ ಫೋನ್‌ ಮಾಡಿ ನಿಮ್ಮ ಅಶ್ಲೀಲ ವೀಡಿಯೊ ಇದೆ, ಹಣ ಕೊಡದಿದ್ದರೆ ಅದನ್ನು ಸೋಷಿಯಲ್‌ ಮೀಡಿಯಾದಲ್ಲಿ ಅಪ್‌ಲೋಡ್‌ ಮಾಡುತ್ತೇನೆ ಎಂದು ಬೆದರಿಸುತ್ತಿದ್ದ. ಈ ರೀತಿ ಹಲವು ಯುವತಿಯರಿಂದ ಹಣ ಸುಲಿಗೆ ಮಾಡಿದ್ದಾನೆ. […]

ಮಹಿಳೆಯರನ್ನು ಬೆದರಿಸಿ ಹಣ ಸುಲಿಗೆ : ಆರೋಪಿ ಸೆರೆ Read More »

15 ವರ್ಷಕ್ಕಿಂತ ಹಳೆಯ ವಾಹನಗಳಿಗೆ ಪೆಟ್ರೋಲ್‌, ಡೀಸೆಲ್‌ ಇಲ್ಲ

ವಾಯುಮಾಲಿನ್ಯ ನಿಯಂತ್ರಣಕ್ಕೆ ಸರಕಾರದ ದಿಟ್ಟ ಕ್ರಮ ನವದೆಹಲಿ: ಪ್ರತಿವರ್ಷ ದಿಲ್ಲಿಯನ್ನು ಕಾಡುತ್ತಿರುವ ವಾಯುಮಾಲಿನ್ಯ ನಿಯಂತ್ರಿಸಲು ದಿಟ್ಟ ಕ್ರಮಕ್ಕೆ ಮುಂದಾಗಿರುವ ದಿಲ್ಲಿಯ ಬಿಜೆಪಿ ಸರಕಾರ 15 ವರ್ಷಕ್ಕಿಂತ ಹಳೆಯದಾಗಿರುವ ವಾಹನಗಳಿಗೆ ಪೆಟ್ರೋಲ್‌, ಡೀಸೆಲ್‌ ನೀಡದಿರಲು ನಿರ್ಧರಿಸಿದೆ. 15 ವರ್ಷಕ್ಕಿಂತ ಹಳೆಯದಾದ ವಾಹನಗಳಿಗೆ ಪೆಟ್ರೋಲ್‌, ಡೀಸೆಲ್‌ ನೀಡುವುದಿಲ್ಲ ಎಂದು ಪರಿಸರ ಸಚಿವ ಮಂಜಿಂದರ್‌ ಸಿಂಗ್‌ ಸಿರ್ಸಾ ಹೇಳಿದ್ದಾರೆ.ಮಾರ್ಚ್ 31ರ ನಂತರ ಈ ನಿಯಮ ಜಾರಿಗೆ ಬರಲಿದೆ. ನಗರದಾದ್ಯಂತ ಪೆಟ್ರೋಲ್‌ ಬಂಕ್‌ಗಳಲ್ಲಿ 15 ವರ್ಷಕ್ಕಿಂತ ಹಳೆಯ ವಾಹನಗಳಿಗೆ ಪೆಟ್ರೋಲ್ ನೀಡುವುದನ್ನು ಸರ್ಕಾರ

15 ವರ್ಷಕ್ಕಿಂತ ಹಳೆಯ ವಾಹನಗಳಿಗೆ ಪೆಟ್ರೋಲ್‌, ಡೀಸೆಲ್‌ ಇಲ್ಲ Read More »

ಚಾಂಪಿಯನ್ಸ್‌ ಟ್ರೋಫಿ : ಇಂದು ಭಾರತ-ನ್ಯೂಜಿಲ್ಯಾಂಡ್‌ ಪಂದ್ಯ

ಸೆಮಿಫೈನಲ್‌ ತಲುಪಿದ ಎರಡು ತಂಡಗಳ ಮುಖಾಮುಖಿ ದುಬೈ : ಚಾಂಪಿಯನ್ಸ್ ಟ್ರೋಫಿಯ ಗುಂಪು ಹಂತದ ಕೊನೆಯ ಪಂದ್ಯ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವೆ ಇಂದು ದುಬೈಯ ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಎರಡೂ ತಂಡಗಳು ಈಗಾಗಲೇ ಸೆಮಿಫೈನಲ್‌ಗೆ ತಲುಪಿವೆ. ಗುಂಪು ಹಂತದಲ್ಲಿ ಅಗ್ರಸ್ಥಾನ ಪಡೆಯಲು ಎರಡೂ ತಂಡಗಳ ನಡುವೆ ಪೈಪೋಟಿ ನಡೆಯುತ್ತಿದೆ. ಆದಾಗ್ಯೂ, ಮುಂಬರುವ ನಾಕೌಟ್ ಪಂದ್ಯಗಳನ್ನು ಗಮನದಲ್ಲಿಟ್ಟುಕೊಂಡು ಈ ಪಂದ್ಯದ ಗೆಲುವು ಉಭಯ ತಂಡಗಳಿಗೆ ಅವಶ್ಯಕವಾಗಿದೆ. ಹೀಗಾಗಿ ಭಾರತ ತಂಡ ಬಲಿಷ್ಠ

ಚಾಂಪಿಯನ್ಸ್‌ ಟ್ರೋಫಿ : ಇಂದು ಭಾರತ-ನ್ಯೂಜಿಲ್ಯಾಂಡ್‌ ಪಂದ್ಯ Read More »

ಕಾಣಿಯೂರು ಶ್ರೀ ರಾಮತೀರ್ಥ ಮಠದ ಜಾತ್ರೋತ್ಸವ

ಕಾಣಿಯೂರು : ಕಾಣಿಯೂರು  ಶ್ರೀ ಮನ್ಮಧ್ವಾಚಾರ್ಯ ಮೂಲ ಮಹಾಸಂಸ್ಥಾನಮ್ ಉಡುಪಿ, ಕಾಣಿಯೂರು ಶ್ರೀ ರಾಮತೀರ್ಥ ಮಠದ ಜಾತ್ರೆಯು ಫೆ. 28ರಂದು ಪ್ರಾರಂಭಗೊಂಡಿದೆ.   ಫೆ.28ರಂದು ಸಂಜೆ ಕಾಣಿಯೂರು ಮಠದಲ್ಲಿ ರಂಗಪೂಜೆ, ರಾತ್ರಿ ಉಳ್ಳಾಕುಲು ದೈವಗಳ ಭಂಡಾರ ತೆಗೆದು ಶ್ರೀ ಕಾಣಿಯೂರು ಉಳ್ಳಾಕುಲು ಮಾಡದಲ್ಲಿ ಧ್ವಜಾರೋಹಣ ನಡೆಯಿತು.  ಈ ಸಂದರ್ಭದಲ್ಲಿ ಕಾಣಿಯೂರು ಮಠದ ವ್ಯವಸ್ಥಾಪಕರಾದ ಶ್ರೀನಿಧಿ ಆಚಾರ್ಯ, ಅರ್ಚಕ ಬಾಲಕೃಷ್ಣ ಅಸ್ರಣ್ಣ ಹಾಗೂ ಉತ್ಸವ ಸಮಿತಿ ಪದಾಧಿಕಾರಿಗಳು, ಕೊಡುಕಟ್ಟಿನವರು, ಗ್ರಾಮಸ್ಥರು, ಭಕ್ತಾಧಿಗಳು ಉಪಸ್ಥಿತರಿದ್ದರು. ಮಾ.1ರಂದು ಬೆಳಿಗ್ಗೆ ಕಾಣಿಯೂರು ಮಾಡದಲ್ಲಿ

ಕಾಣಿಯೂರು ಶ್ರೀ ರಾಮತೀರ್ಥ ಮಠದ ಜಾತ್ರೋತ್ಸವ Read More »

ಇತಿಹಾಸ ಪ್ರಸಿದ್ಧ ಪುತ್ತೂರು ಕೋಟಿ-ಚೆನ್ನಯ ಜೋಡುಕರೆ ಕಂಬಳಕ್ಕೆ ಚಾಲನೆ | ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ಕಂಬಳ ಕರೆಗೆ ಹಾಲು ಎರೆದು, ತೆಂಗಿನಕಾಯಿ ಒಡೆಯುವ ಮೂಲಕ ಚಾಲನೆ ನೀಡಿದ ಈಶ್ವರ ಭಟ್‍ ಪಂಜಿಗುಡ್ಡೆ | ರಾಜ್ಯಮಟ್ಟದ ಕೆಸರುಗದ್ದೆ ಓಟಕ್ಕೆ ಚಾಲನೆ

ಪುತ್ತೂರು : ಇತಿಹಾಸ ಪ್ರಸಿದ್ಧ ಮಹಾತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ  ನಡೆಯುವ 32ನೇ ವರ್ಷದ ಇತಿಹಾಸ ಪ್ರಸಿದ್ಧ ಜಾನಪದ ಕ್ರೀಡೆಗಳಲ್ಲೊಂದಾದ ಪುತ್ತೂರು ಕೋಟಿ- ಚೆನ್ನಯ ಜೋಡುಕರೆ ಕಂಬಳಕ್ಕೆ ಶನಿವಾರ ಬೆಳಿಗ್ಗೆ ಅದ್ದೂರಿ ಚಾಲನೆ ನೀಡಲಾಯಿತು. ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ಶುಭಾಶೀರ್ವಾದದೊಂದಿಗೆ ನಡೆಯುವ ಕಂಬಳಕ್ಕೆ ಶ್ರೀಮಹಾಲಿಂಗೇಶ್ವರ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ, ಕಂಬಳ ಸಮಿತಿ ಕೋಶಾಧಿಕಾರಿ ಈಶ್ವರ ಭಟ್ ಪಂಜಿಗುಡ್ಡೆ ಕಂಬಳ ಕರೆಗೆ ಹಾಲು ಎರೆದು, ತೆಂಗಿನಕಾಯಿ

ಇತಿಹಾಸ ಪ್ರಸಿದ್ಧ ಪುತ್ತೂರು ಕೋಟಿ-ಚೆನ್ನಯ ಜೋಡುಕರೆ ಕಂಬಳಕ್ಕೆ ಚಾಲನೆ | ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ಕಂಬಳ ಕರೆಗೆ ಹಾಲು ಎರೆದು, ತೆಂಗಿನಕಾಯಿ ಒಡೆಯುವ ಮೂಲಕ ಚಾಲನೆ ನೀಡಿದ ಈಶ್ವರ ಭಟ್‍ ಪಂಜಿಗುಡ್ಡೆ | ರಾಜ್ಯಮಟ್ಟದ ಕೆಸರುಗದ್ದೆ ಓಟಕ್ಕೆ ಚಾಲನೆ Read More »

ಬಂದ್‌ ದಿನ ಪರೀಕ್ಷೆ ಮುಂದೂಡಿಕೆ ಇಲ್ಲ : ಮಧು ಬಂಗಾರಪ್ಪ

ಮಾ.22ರಂದು 7,8,9ನೇ ತರಗತಿ ಪರೀಕ್ಷೆ ನಿಗದಿಯಾಗಿರುವಂತೆ ನಡೆಯಲಿದೆ ಬೆಂಗಳೂರು: ಮಾರ್ಚ್‌ 22ರಂದು ಕರ್ನಾಟಕ ಬಂದ್‌ ಇದ್ದರೂ ಈಗಾಗಲೇ ನಿಗದಿಯಾಗಿರುವ ಯಾವುದೇ ಪರೀಕ್ಷೆಗಳನ್ನು ಮುಂದೂಡಲು ಸಾಧ್ಯವಿಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.ಮಾ.22 ರಂದು 7,8,9ನೇ ತರಗತಿ ಪರೀಕ್ಷೆಗಳ ನಿಗದಿಯಾಗಿದೆ. ಬಂದ್ ಎಂದು ಈಗ ಮುಂದೂಡಿಕೆ ಸಾಧ್ಯವಿಲ್ಲ. ಬಂದ್ ಇದ್ದರೂ ಯಾವುದೇ ಪರೀಕ್ಷೆ ಮುಂದೂಡಿಕೆ ಮಾಡುವುದಿಲ್ಲ. ಪರೀಕ್ಷೆ ಅದರ ಪಾಡಿಗೆ ನಡೆಯಲಿದೆ ಎಂದು ಹೇಳಿದರು.ಮಕ್ಕಳಿಗೆ ತೊಂದರೆ ಆಗದ ರೀತಿ ಸಹಕಾರ ನೀಡಬೇಕೆಂದು ಹೋರಾಟಗಾರರಿಗೆ ಮನವಿ ಮಾಡುತ್ತೇನೆ. ಹೋರಾಟ

ಬಂದ್‌ ದಿನ ಪರೀಕ್ಷೆ ಮುಂದೂಡಿಕೆ ಇಲ್ಲ : ಮಧು ಬಂಗಾರಪ್ಪ Read More »

ಬಿಜೆಪಿ ರಾಜ್ಯಾಧ್ಯಕ್ಷ  ವಿಜೇಯೇಂದ್ರ ಕಾರು ಅಪಘಾತ | ಪ್ರಾಣಪಾಯದಿಂದ ಪಾರಾದ ಕಾರು ಚಾಲಕ

ಚಿಕ್ಕಮಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರಿಗೆ ಸೇರಿದ ಕಾರು ಅಪಘಾತಕ್ಕೀಡಾಗಿದ್ದು ಚಿಕ್ಕಮಗಳೂರು ಬಳಿ ಲಕ್ಯ ಕ್ರಾಸ್ ನಲ್ಲಿ ಲಾರಿ ಡಿಕ್ಕಿಯಾಗಿದೆ ಎನ್ನಲಾಗಿದೆ. ವಿಜಯೇಂದ್ರ ಅವರು ಫೆಬ್ರವರಿ 28ರಂದು ಚಿಕ್ಕಮಗಳೂರಿನಲ್ಲಿ ಬಸವ ತತ್ವ ಕಾರ್ಯಕ್ರಮ ಮುಗಿಸಿ ವಾಪಸ್ ಚಿಕ್ಕಮಗಳೂರು ನಗರದಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಕಾರಿನ ಹಿಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಇನ್ನು ಅದೃಷ್ಟವಶಾತ್ ವಿಜಯೇಂದ್ರ ಅವರು ಬೇರೊಂದು ಕಾರಿನಲ್ಲಿ ಪ್ರಯಾಣಿಸುತ್ತಿದ್ದರಿಂದ ಬಚಾವ್ ಆಗಿದ್ದಾರೆ. ವಿಜಯೇಂದ್ರಗೆ ಸೇರಿದ ಕಾರಿನ ಚಾಲಕ ಪ್ರಾಣಾಪಾಯದಿಂದ

ಬಿಜೆಪಿ ರಾಜ್ಯಾಧ್ಯಕ್ಷ  ವಿಜೇಯೇಂದ್ರ ಕಾರು ಅಪಘಾತ | ಪ್ರಾಣಪಾಯದಿಂದ ಪಾರಾದ ಕಾರು ಚಾಲಕ Read More »

ವಿಟ್ಲ ಸ್ವರ ಸಿಂಚನ ಕಲಾ ತಂಡದದಿಂದ ನಾದೋಪಾಸನ  ಹಾಗೂ ತ್ಯಾಗರಾಜರ ಆರಾಧನೆ…..!

 ಪೆರ್ನಾಜೆ: ಶ್ರೀ ವಿಟ್ಲ ಭಗವತಿ ದೇವಸ್ಥಾನದ ಸಭಾಂಗಣದಲ್ಲಿ ನಾದೋಪಾಸನ ಹಾಗೂ ತ್ಯಾಗರಾಜರ ಆರಾಧನೆ ಶಾಸ್ತ್ರೀಯ ಸಂಗೀತ ಕಾರ್ಯಕ್ರಮವು ಸ್ವರ ಸಿಂಚನ ಸಂಗೀತ ಶಾಲೆ ವಿದ್ಯಾರ್ಥಿಗಳಿಂದ ಫೆ.23ರಂದು ಬೆಳಿಗ್ಗೆಯಿಂದ ದಿನಪೂರ್ತಿ ನಡೆಯಿತು. ಶ್ರೀ ಭಗವತಿ ದೇವಸ್ಥಾನದ ವ್ಯವಸ್ಥಾಪಕರಾದ ಕೇಶವ ಆರ್ ವಿ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು.  ಮುಖ್ಯ ಶಿಕ್ಷಕಿ ಸವಿತಾ ಕೋಡಂದೂರ್ ಮಾರ್ಗದರ್ಶನದಲ್ಲಿ ನಡೆಯಿತು.  ಪಕ್ಕ ವಾದ್ಯದಲ್ಲಿ ಮೃದಂಗ ವಾದಕರಾಗಿ ಕ್ಷಿತಿಶ ರಾಮ ಕೆ ಎಸ್, ವಯಲಿನ್ ನಲ್ಲಿ ಶ್ರೀ ಪ್ರಿಯಾ ಪರಕ್ಕಜೆ ಸಹಕರಿಸಿದರು. ರಮ್ಯಾ ಜೆಡ್ಡು

ವಿಟ್ಲ ಸ್ವರ ಸಿಂಚನ ಕಲಾ ತಂಡದದಿಂದ ನಾದೋಪಾಸನ  ಹಾಗೂ ತ್ಯಾಗರಾಜರ ಆರಾಧನೆ…..! Read More »

ಲೈಂಗಿಕ ಕಿರುಕುಳ ಅಪರಾಧಿಗೆ 133 ವರ್ಷ ಜೈಲು

ಕಾಸರಗೋಡು ನ್ಯಾಯಾಲಯದ ಮಹತ್ವದ ತೀರ್ಪು ಕಾಸರಗೋಡು: ಆರು ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಮಂಜೇಶ್ವರದ ವರ್ಕಾಡಿ ಉದ್ದಂಬೆಟ್ಟು ನಿವಾಸಿ ವಿಕ್ಟರ್ ಮೊಂತೆರೊ (43) ಎಂಬಾತನಿಗೆ ಕಾಸರಗೋಡು ತ್ವರಿತಗತಿ ವಿಶೇಷ ನ್ಯಾಯಾಲಯ 133 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ಮಹತ್ವದ ತೀರ್ಪು ನೀಡಿದೆ. 4.5 ಲಕ್ಷ ದಂಡವನ್ನೂ ವಿಧಿಸಿದ್ದು, ದಂಡ ಪಾವತಿಸಲು ವಿಫಲವಾದರೆ ಹೆಚ್ಚುವರಿಯಾಗಿ 18 ತಿಂಗಳ ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದು ನ್ಯಾಯಾಲಯ ತಿಳಿಸಿದೆ. ಸೆಪ್ಟೆಂಬರ್ 10, 2021 ಮೊದಲು ನಡೆದ

ಲೈಂಗಿಕ ಕಿರುಕುಳ ಅಪರಾಧಿಗೆ 133 ವರ್ಷ ಜೈಲು Read More »

ಮರಾಠಿಗರ ದೌರ್ಜನ್ಯ ಖಂಡಿಸಿ ಮಾ.22ರಂದು ಕರ್ನಾಟಕ ಬಂದ್‌

ವಾಟಾಲ್‌ ನಾಗರಾಜ್‌ ನೇತೃತ್ವದಲ್ಲಿ ಬಂದ್‌ಗೆ ಕರೆ ಬೆಂಗಳೂರು: ಬೆಳಗಾವಿಯಲ್ಲಿ ಮರಾಠಿಗರಿಂದ ಕನ್ನಡಿಗರ ಮೇಲಾಗುತ್ತಿರುವ ದೌರ್ಜನ್ಯ ಖಂಡಿಸಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗಾರಾಜ್ ನೇತೃತ್ವದಲ್ಲಿ ಮಾ.22ರಂದು ಕರ್ನಾಟಕ ಬಂದ್‌ಗೆ ಕರೆ ನೀಡಲಾಗಿದೆ. ಅನೇಕ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ. ಇನ್ನು ಕೆಲವರು ಬೆಂಬಲಿಸುವುದಾಗಿ ತಿಳಿಸಿದ್ದಾರೆ. ಕನ್ನಡ ಫಿಲ್ಮ್ ಚೇಂಬರ್ ಸಹ ಬೆಂಬಲ ನೀಡುವುದಾಗಿ ತಿಳಿಸಿದೆ. ಈ ಸಂಬಂಧ ಮಾರ್ಚ್3ರಂದು ಸಭೆ ನಡೆಸಿ ತಿರ್ಮಾನ ಪ್ರಕಟಿಸುವುದಾಗಿ ಹೇಳಿದೆ. ಬೆಳಗಾವಿಯಲ್ಲಿ ಇತ್ತೀಚೆಗೆ ಕರ್ನಾಟಕ ಸಾರಿಗೆ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿರುವುದು, ಕನ್ನಡಿಗರಿಗೆ ಅಪಮಾನ

ಮರಾಠಿಗರ ದೌರ್ಜನ್ಯ ಖಂಡಿಸಿ ಮಾ.22ರಂದು ಕರ್ನಾಟಕ ಬಂದ್‌ Read More »

error: Content is protected !!
Scroll to Top