ಸುದ್ದಿ

ವಿಟ್ಲ ಸ್ವರ ಸಿಂಚನ ಕಲಾ ತಂಡದದಿಂದ ನಾದೋಪಾಸನ  ಹಾಗೂ ತ್ಯಾಗರಾಜರ ಆರಾಧನೆ…..!

 ಪೆರ್ನಾಜೆ: ಶ್ರೀ ವಿಟ್ಲ ಭಗವತಿ ದೇವಸ್ಥಾನದ ಸಭಾಂಗಣದಲ್ಲಿ ನಾದೋಪಾಸನ ಹಾಗೂ ತ್ಯಾಗರಾಜರ ಆರಾಧನೆ ಶಾಸ್ತ್ರೀಯ ಸಂಗೀತ ಕಾರ್ಯಕ್ರಮವು ಸ್ವರ ಸಿಂಚನ ಸಂಗೀತ ಶಾಲೆ ವಿದ್ಯಾರ್ಥಿಗಳಿಂದ ಫೆ.23ರಂದು ಬೆಳಿಗ್ಗೆಯಿಂದ ದಿನಪೂರ್ತಿ ನಡೆಯಿತು. ಶ್ರೀ ಭಗವತಿ ದೇವಸ್ಥಾನದ ವ್ಯವಸ್ಥಾಪಕರಾದ ಕೇಶವ ಆರ್ ವಿ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು.  ಮುಖ್ಯ ಶಿಕ್ಷಕಿ ಸವಿತಾ ಕೋಡಂದೂರ್ ಮಾರ್ಗದರ್ಶನದಲ್ಲಿ ನಡೆಯಿತು.  ಪಕ್ಕ ವಾದ್ಯದಲ್ಲಿ ಮೃದಂಗ ವಾದಕರಾಗಿ ಕ್ಷಿತಿಶ ರಾಮ ಕೆ ಎಸ್, ವಯಲಿನ್ ನಲ್ಲಿ ಶ್ರೀ ಪ್ರಿಯಾ ಪರಕ್ಕಜೆ ಸಹಕರಿಸಿದರು. ರಮ್ಯಾ ಜೆಡ್ಡು […]

ವಿಟ್ಲ ಸ್ವರ ಸಿಂಚನ ಕಲಾ ತಂಡದದಿಂದ ನಾದೋಪಾಸನ  ಹಾಗೂ ತ್ಯಾಗರಾಜರ ಆರಾಧನೆ…..! Read More »

ಲೈಂಗಿಕ ಕಿರುಕುಳ ಅಪರಾಧಿಗೆ 133 ವರ್ಷ ಜೈಲು

ಕಾಸರಗೋಡು ನ್ಯಾಯಾಲಯದ ಮಹತ್ವದ ತೀರ್ಪು ಕಾಸರಗೋಡು: ಆರು ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಮಂಜೇಶ್ವರದ ವರ್ಕಾಡಿ ಉದ್ದಂಬೆಟ್ಟು ನಿವಾಸಿ ವಿಕ್ಟರ್ ಮೊಂತೆರೊ (43) ಎಂಬಾತನಿಗೆ ಕಾಸರಗೋಡು ತ್ವರಿತಗತಿ ವಿಶೇಷ ನ್ಯಾಯಾಲಯ 133 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ಮಹತ್ವದ ತೀರ್ಪು ನೀಡಿದೆ. 4.5 ಲಕ್ಷ ದಂಡವನ್ನೂ ವಿಧಿಸಿದ್ದು, ದಂಡ ಪಾವತಿಸಲು ವಿಫಲವಾದರೆ ಹೆಚ್ಚುವರಿಯಾಗಿ 18 ತಿಂಗಳ ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದು ನ್ಯಾಯಾಲಯ ತಿಳಿಸಿದೆ. ಸೆಪ್ಟೆಂಬರ್ 10, 2021 ಮೊದಲು ನಡೆದ

ಲೈಂಗಿಕ ಕಿರುಕುಳ ಅಪರಾಧಿಗೆ 133 ವರ್ಷ ಜೈಲು Read More »

ಮರಾಠಿಗರ ದೌರ್ಜನ್ಯ ಖಂಡಿಸಿ ಮಾ.22ರಂದು ಕರ್ನಾಟಕ ಬಂದ್‌

ವಾಟಾಲ್‌ ನಾಗರಾಜ್‌ ನೇತೃತ್ವದಲ್ಲಿ ಬಂದ್‌ಗೆ ಕರೆ ಬೆಂಗಳೂರು: ಬೆಳಗಾವಿಯಲ್ಲಿ ಮರಾಠಿಗರಿಂದ ಕನ್ನಡಿಗರ ಮೇಲಾಗುತ್ತಿರುವ ದೌರ್ಜನ್ಯ ಖಂಡಿಸಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗಾರಾಜ್ ನೇತೃತ್ವದಲ್ಲಿ ಮಾ.22ರಂದು ಕರ್ನಾಟಕ ಬಂದ್‌ಗೆ ಕರೆ ನೀಡಲಾಗಿದೆ. ಅನೇಕ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ. ಇನ್ನು ಕೆಲವರು ಬೆಂಬಲಿಸುವುದಾಗಿ ತಿಳಿಸಿದ್ದಾರೆ. ಕನ್ನಡ ಫಿಲ್ಮ್ ಚೇಂಬರ್ ಸಹ ಬೆಂಬಲ ನೀಡುವುದಾಗಿ ತಿಳಿಸಿದೆ. ಈ ಸಂಬಂಧ ಮಾರ್ಚ್3ರಂದು ಸಭೆ ನಡೆಸಿ ತಿರ್ಮಾನ ಪ್ರಕಟಿಸುವುದಾಗಿ ಹೇಳಿದೆ. ಬೆಳಗಾವಿಯಲ್ಲಿ ಇತ್ತೀಚೆಗೆ ಕರ್ನಾಟಕ ಸಾರಿಗೆ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿರುವುದು, ಕನ್ನಡಿಗರಿಗೆ ಅಪಮಾನ

ಮರಾಠಿಗರ ದೌರ್ಜನ್ಯ ಖಂಡಿಸಿ ಮಾ.22ರಂದು ಕರ್ನಾಟಕ ಬಂದ್‌ Read More »

ವಿದ್ಯಾರಶ್ಮಿಯಲ್ಲಿ ‘ರಾಷ್ಟ್ರೀಯ ವಿಜ್ಞಾನ ದಿನಾಚರಣೆ’

ಸವಣೂರು : ಸವಣೂರು ವಿದ್ಯಾರಶ್ಮಿ ವಿದ್ಯಾಲಯದಲ್ಲಿ ಇಂದು ರಾಷ್ಟ್ರೀಯ ವಿಜ್ಞಾನ ದಿನಾಚರಣೆ’ಯ ಅಂಗವಾಗಿ ‘ವಿಜ್ಞಾನ ರಶ್ಮಿ’ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿದ ಪುತ್ತೂರು ವಿವೇಕಾನಂದ ಪದವಿಪೂರ್ವ ಕಾಲೇಜಿನ ಬೌತಶಾಸ್ತ್ರ ವಿಭಾಗದ ಉಪನ್ಯಾಸಕ ಹರೀಶ್ ಶಾಸ್ತ್ರಿ ಇವರು ಮಾನವನ ಮತ್ತು ವಿಜ್ಞಾನದ ನಡುವಿನ ಸಂಬಂಧ, ದಿನನಿತ್ಯ ಜೀವನದಲ್ಲಿ ವಿಜ್ಞಾನದ ಪ್ರಾಮುಖ್ಯತೆ, ಗಣಿತದ ಅಗತ್ಯತೆಯ ಬಗ್ಗೆ ಪ್ರಾಯೋಗಿಕವಾಗಿ ವಿವರಿಸಿದರು. ಕಾರ್ಯಕ್ರಮದ ಅಧ್ಯಕ್ಷರಾದ ಸಂಸ್ಥೆಯ ಆಡಳಿತಾಧಿಕಾರಿ ಅಶ್ವಿನ್ ಎಲ್ ಶೆಟ್ಟಿ ಅವರು ವಿಜ್ಞಾನವು ಬರೀ ಕಲಿಕೆಯ ವಿಷಯವಾಗದೆ ವಿದ್ಯಾರ್ಥಿಯ ಕ್ರಿಯಾತ್ಮಕ ಅಲೋಚನೆಗಳನ್ನು

ವಿದ್ಯಾರಶ್ಮಿಯಲ್ಲಿ ‘ರಾಷ್ಟ್ರೀಯ ವಿಜ್ಞಾನ ದಿನಾಚರಣೆ’ Read More »

ಉಕ್ರೇನ್‌ ಅಧ್ಯಕ್ಷ ಜೆಲೆನ್‌ಸ್ಕಿಯನ್ನು ಶ್ವೇತಭವನದಿಂದ ಹೊರದಬ್ಬಿದ ಟ್ರಂಪ್‌

ಉಭಯ ನಾಯಕರ ದ್ವಿಪಕ್ಷೀಯ ಮಾತುಕತೆ ವೇಳೆ ಮಾತಿನ ಚಕಮಕಿ ನಾವು ಸಾವು ತಡೆಯಲು ಯತ್ನಿಸಿದರೆ, ನೀವು ಹೆಣಗಳನ್ನು ನೋಡಲು ಹೋಗುತ್ತಿದ್ದೀರಿ ಎಂದು ಕೆಂಡಾಮಂಡಲವಾದ ಟ್ರಂಪ್‌ ವಾಷಿಂಗ್ಟನ್‌ : ಅಮೆರಿಕ ಮತ್ತು ಉಕ್ರೇನ್‌ ನಡುವೆ ನಡೆದ ದ್ವಿಪಕ್ಷೀಯ ಮಾತುಕತೆ ಉಭಯ ದೇಶಗಳ ಧ್ಯಕ್ಷರ ಮಾತಿನ ಚಕಮಕಿಯಲ್ಲಿ ಅಂತ್ಯಗೊಂಡಿದ್ದು, ವ್ಲಾದಿಮಿರ್‌ ಜೆಲೆನ್‌ಸ್ಕಿಯನ್ನು ಡೊನಾಲ್ಡ್‌ ಟ್ರಂಪ್‌ ಅಕ್ಷರಶಃ ಶ್ವೇತಭವನದಿಂದ ಹೊರದಬ್ಬಿದ್ದಾರೆ. ಉಭಯ ದೇಶಗಳ ದ್ವಪಕ್ಷೀಯ ಮಾತುಕತೆ ಸಂದರ್ಭದಲ್ಲಿ ಈಂಥ ಘಟನೆ ನಡೆದಿರುವುದು ಅಪರೂಪದ ವಿದ್ಯಮಾನದ ಎನ್ನಲಾಗಿದೆ.ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಮತ್ತು

ಉಕ್ರೇನ್‌ ಅಧ್ಯಕ್ಷ ಜೆಲೆನ್‌ಸ್ಕಿಯನ್ನು ಶ್ವೇತಭವನದಿಂದ ಹೊರದಬ್ಬಿದ ಟ್ರಂಪ್‌ Read More »

ವಿಟ್ಲದಲ್ಲಿ ಅಪರೂಪದ ಶಾಸನ ಪತ್ತೆ

ವಿಟ್ಲ :  ಕಸಬಾ ಗ್ರಾಮ ವ್ಯಾಪ್ತಿಗೆ ಸೇರುವ ಶ್ರೀಗಣಪತಿ ಲಕ್ಷ್ಮೀನಾರಾಯಣ ಉಮಾಮಹೇಶ್ವರ ದೇವರ ಮಠದ ಜೀರ್ಣೋದ್ಧಾರದ ಸಂದರ್ಭದಲ್ಲಿ ಎರಡು ಶಿಲಾಫಲಕಗಳಲ್ಲಿ ಶಾಸನಗಳು ದೊರೆತಿದೆ ಇದರ ಪ್ರಾಥಮಿಕ ಮಾಹಿತಿ ಯನ್ನು ಡಾ. ವೆಂಕಟೇಶ ಮಂಜುಳಗಿರಿ ಅವರಿಂದ ಪಡೆದುಕೊಂಡ ಕುಕ್ಕೆಸುಬ್ರಹ್ಮಣ್ಯದ ಶ್ರೀನಿಕೇತನ ವಸ್ತು ಸಂಗ್ರಹಾಲಯ ಮತ್ತು ಸಂಶೋಧನ ಕೇಂದ್ರದ ನಿರ್ದೇಶಕ ಡಾ.ಜಿ.ವಿ. ಕಲ್ಲಾಪುರ ಅವರು ಈ ಅಪರೂಪದ ಶಾಸನ ಅಧ್ಯಯನ ಮಾಡಿದ್ದಾರೆ. ಶಾಸನವನ್ನು ಎರಡು ಕಣಶಿಲೆಯಲ್ಲಿ (ಗ್ರಾನೈಟ್) ಕೊರೆಯಲಾಗಿದ್ದು, ತುಳು ಲಿಪಿ ಮತ್ತು ಕನ್ನಡ ಭಾಷೆಯಲ್ಲಿದೆ. ಶಾಸನದ ಒಂದು ಫಲಕದಲ್ಲಿ

ವಿಟ್ಲದಲ್ಲಿ ಅಪರೂಪದ ಶಾಸನ ಪತ್ತೆ Read More »

ರಾಜ್ಯದಲ್ಲಿ ತೀವ್ರಗೊಂಡ ಹಕ್ಕಿಜ್ವರ : ಸಾವಿರಾರು ಕೋಳಿಗಳು ನಾಶ

ಮಾಂಸಾಹಾರ ಪ್ರಿಯರಿಗೆ ಆತಂಕ ತಂದೊಡ್ಡಿದ್ದ ಹಕ್ಕಿಜ್ವರ ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಕೋಳಿಗಳಲ್ಲಿ ಹಕ್ಕಿಜ್ವರದ ಹಾವಳಿ ಕಾಣಿಸಿಕೊಂಡಿದ್ದು, ಸಾವಿರಾರು ಕೋಳಿಗಳನ್ನು ನಾಶ ಮಾಡಲಾಗಿದೆ. ಚಿಕ್ಕಬಳ್ಳಾಪುರ ದಲ್ಲಿ ಕಾಣಿಸಿಕೊಂಡ ಹಕ್ಕಿಜ್ವರ ರಾಯಚೂರು, ಬಳ್ಳಾರಿ ಜಿಲ್ಲೆಗಳಿಗೂ ಹರಡಿದೆ. ಬಳ್ಳಾರಿಯ ಸಂಡೂರು ತಾಲೂಕಿನ ಕುರೇಕುಪ್ಪ ಗ್ರಾಮದ ಬಳಿಯ ಸರ್ಕಾರಿ ಪಾಲ್ಟ್ರಿಫಾರ್ಮ್‌ನಲ್ಲಿ 2400 ಕೋಳಿಗಳು ಹಕ್ಕಿಜ್ವರದಿಂದ ಮೃತಪಟ್ಟಿವೆ ಎಂದು ಜಿಲ್ಲಾಧಿಕಾರಿ ಪ್ರಶಾಂತ್​ ಕುಮಾರ್ ಮಿಶ್ರಾ ಮಾಹಿತಿ ನೀಡಿದ್ದಾರೆ. ಫೆಬ್ರವರಿ 21ರಿಂದ ಇಲ್ಲಿಯವರೆಗೆ 2400 ಕೋಳಿಗಳ ಮೃತಪಟ್ಟಿವೆ. ಸತ್ತ ಕೋಳಿಗಳ ಮಾದರಿ ಸಂಗ್ರಹಿಸಿ ಮಧ್ಯಪ್ರದೇಶದ

ರಾಜ್ಯದಲ್ಲಿ ತೀವ್ರಗೊಂಡ ಹಕ್ಕಿಜ್ವರ : ಸಾವಿರಾರು ಕೋಳಿಗಳು ನಾಶ Read More »

ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ

ವೆಬ್‌ ಕಾಸ್ಟಿಂಗ್‌, ಸಿಸಿ ಕ್ಯಾಮರಾ ಕಣ್ಗಾವಲಿನಲ್ಲಿ ಪರೀಕ್ಷೆ ಬೆಂಗಳೂರು: ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಲಿದ್ದು, ಮಾರ್ಚ್ 20ರ ವರೆಗೆ ನಡೆಯಲಿದೆ. ಇಂದು ಕನ್ನಡ/ಅರೇಬಿಕ್‌ ಪರೀಕ್ಷೆ ನಡೆಯಲಿದೆ. ಈಗಾಗಲೇ ಶಿಕ್ಷಣ ಇಲಾಖೆ ಮತ್ತು ಪರೀಕ್ಷಾ ಮಂಡಳಿ ಪರೀಕ್ಷೆಗೆ ಸಕಲ ಸಿದ್ಧತೆ ಮಾಡಿಕೊಂಡಿದೆ. ಪರೀಕ್ಷೆ ಅಕ್ರಮ ತಡೆಗೆ ಮೊದಲ ಬಾರಿಗೆ ದ್ವಿತೀಯ ಪಿಯುಸಿ ಪರೀಕ್ಷೆಗೂ ವೆಬ್ ಕಾಸ್ಟಿಂಗ್ ಕಣ್ಗಾವಲು ಇರಲಿದೆ. ಒಟ್ಟು 7,13,862 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ. ಈ ಪೈಕಿ 3,35,468 ಗಂಡು ಮಕ್ಕಳು, 3,78,389 ಹೆಣ್ಣು ಮಕ್ಕಳು

ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ Read More »

ನೂರಕ್ಕೂ ಅಧಿಕ ಬೈಕ್‌ ಕದ್ದ ಕಳ್ಳ ಸೆರೆ

ಮೋಜು ಮಾಡಲು ದ್ವಿಚಕ್ರ ವಾಹನಗಳ ಕಳ್ಳತನ ಮಾಡುತ್ತಿದ್ದ ಖತರ್‌ನಾಕ್‌ ಕಳ್ಳ ಬೆಂಗಳೂರು : ನೂರಕ್ಕೂ ಅಧಿಕ ದ್ವಿಚಕ್ರ ವಾಹನಗಳನ್ನು ಕಳ್ಳತನ ಮಾಡಿದ್ದ ಖತರ್‌ನಾಕ್‌ ಕಳ್ಳನೊಬ್ಬನನ್ನು ಬೆಂಗಳೂರಿನ ಕೆ.ಆರ್​. ಪುರ ಪೊಲೀಸರು ಬಂಧಿಸಿದ್ದಾರೆ. ಈ ಕಳ್ಳ ಉಳಿದವರಂತೆ ಸಾಮಾನ್ಯ ಕಳ್ಳನಲ್ಲ. ಬೈಕ್ ಕದಿಯುವುದರಲ್ಲಿ ಸೆಂಚುರಿಯನ್ನೇ ಬಾರಿಸಿದ್ದಾನೆ. ಮೂರು ವರ್ಷದಲ್ಲಿ ಈತ ಕಳ್ಳತ ಮಾಡಿದ್ದು ಬರೋಬ್ಬರಿ ನೂರು ಬೈಕ್​.ಆಂಧ್ರ ಪ್ರದೇಶದ ಬಂಗಾರುಪಾಳ್ಯಂನ ನಿವಾಸಿಯಾದ ಪ್ರಸಾದ್‌ ಬಾಬು ಈ ಖತರ್‌ನಾಕ್‌ ಬೈಕ್ ಕಳ್ಳ. ದುಬಾರಿ ಬೈಕ್​ಗಳನ್ನೇ ಟಾರ್ಗೆಟ್​ ಕದಿಯುತ್ತಿದ್ದ ಈತ ಲಕ್ಷಾಂತರ

ನೂರಕ್ಕೂ ಅಧಿಕ ಬೈಕ್‌ ಕದ್ದ ಕಳ್ಳ ಸೆರೆ Read More »

ಕರ್ನಾಟಕದಲ್ಲಿ ತಯಾರಾಗುವ ಉತ್ಪನ್ನಗಳಿಗೆ ಕನ್ನಡ ಲೇಬಲ್ ಕಡ್ಡಾಯ

ಇತರ ಭಾಷೆಗಳ ಜೊತೆಗೆ ಕನ್ನಡದಲ್ಲಿ ಹೆಸರು, ನಿರ್ದೇಶನಗಳನ್ನು ಮುದ್ರಿಸಲು ಸೂಚನೆ ಬೆಂಗಳೂರು: ಕರ್ನಾಟಕದಲ್ಲಿ ತಯಾರಾಗುವ ಉತ್ಪನ್ನಗಳಿಗೆ ಕನ್ನಡ ಲೇಬಲ್, ಹೆಸರು ಡೈರೆಕ್ಷನ್​ ಸೇರಿದಂತೆ ಎಲ್ಲವೂ ಕನ್ನಡದಲ್ಲಿ ಇರಬೇಕೆಂದು ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದೆ. ರಾಜ್ಯದೊಳಗೆ ತಯಾರಿಸಿದ ಮತ್ತು ಮಾರಾಟವಾಗುವ ಎಲ್ಲ ಕೈಗಾರಿಕಾ ಮತ್ತು ಇತರ ಗ್ರಾಹಕ ಉತ್ಪನ್ನಗಳ ಹೆಸರು ಮತ್ತು ಅವುಗಳ ಬಳಕೆಯ ಕುರಿತಾದ ನಿರ್ದೇಶನಗಳು ಯಾವುದಾದರೂ ಇದ್ದಲ್ಲಿ ಇತರ ಭಾಷೆಯ ಜೊತೆಗೆ ಕನ್ನಡದಲ್ಲಿ ಇರತಕ್ಕದ್ದು ಎಂದು ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ ಕಾರ್ಯದರ್ಶಿ ಉಮಾದೇವಿ ಸುತ್ತೋಲೆಯಲ್ಲಿ

ಕರ್ನಾಟಕದಲ್ಲಿ ತಯಾರಾಗುವ ಉತ್ಪನ್ನಗಳಿಗೆ ಕನ್ನಡ ಲೇಬಲ್ ಕಡ್ಡಾಯ Read More »

error: Content is protected !!
Scroll to Top