ಸುಳ್ಯ ಶ್ರೀ ವೆಂಕಟರಮಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಮಹಾಸಭೆ | 1.51 ಕೋಟಿ ರೂ. ಲಾಭ: ಶೇ. 20 ಡಿವಿಡೆಂಡ್ ಘೋಷಣೆ
ಸುಳ್ಯ: ಗೌಡರ ಯುವ ಸೇವಾಸಂಘ ಸುಳ್ಯ ಪ್ರವರ್ತಿತ ಶ್ರೀ ವೆಂಕಟರಮಣ ಕ್ರೆಡಿಟ್ ಕೋ.ಆ. ಸೊಸೈಟಿಯ ವಾರ್ಷಿಕ ಮಹಾಸಭೆ ಸೆ.16ರಂದು ಗೌಡ ಸಮುದಾಯ ಭವನ ಕೊಡಿಯಾಲಬೈಲು ಇಲ್ಲಿ ನಡೆಯಿತು. ಸಂಘವು 2022-23ನೇ ಆರ್ಥಿಕ ವರ್ಷದಲ್ಲಿ 1.51 ಕೋಟಿ ಲಾಭ ಗಳಿಸಿದ್ದು, ಶೇ. 20 ಲಾಭಾಂಶ ಹಂಚಿಕೆ ಮಾಡಲಾಗಿದೆ ಎಂದು ಸಂಘದ ಅಧ್ಯಕ್ಷ ಪಿ.ಸಿ ಜಯರಾಮ ಘೋಷಿಸಿದರು. ಸಭೆಯಲ್ಲಿ ಉಪಾಧ್ಯಕ್ಷ ಮೋಹನ್ ರಾಂ ಸುಳ್ಯ , ಮುಖ್ಯಕಾರ್ಯನಿರ್ವಹಣಾಧಿಕಾರಿ ಕೆ.ಟಿ.ವಿಶ್ವನಾಥ್ ಹಾಗೂ ನಿರ್ದೇಶಕರು, ಸದಸ್ಯರು ಉಪಸ್ಥಿತರಿದ್ದರು.