ಸುದ್ದಿ

ರಾಮಕುಂಜದಲ್ಲಿ ಮಲೇರಿಯಾ, ಡೆಂಗ್ಯು ದಿನಾಚರಣೆ | ಆಶಾ ಕಾರ್ಯಕರ್ತೆಯರಿಗೆ ಟಾರ್ಚ್ ಲೈಟ್ ವಿತರಣೆ

 ರಾಮಕುಂಜ: ಮುತ್ತೂಟ್ ಫೈನಾನ್ಸ್, ಕಸ್ವಿ ಹಸಿರು ದಿಬ್ಬಣ, ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆ ಹಾಗೂ ಪುತ್ತೂರು ತಾಲೂಕು ಆರೋಗ್ಯಕೇಂದ್ರದ ಆಶ್ರಯದಲ್ಲಿ ಮಲೇರಿಯಾ, ಡೆಂಗ್ಯು ದಿನಾಚರಣೆ ಹಾಗೂ ಆಶಾ ಕಾರ್ಯಕರ್ತೆಯರಿಗೆ ಟಾರ್ಚ್ ಲೈಟ್ ವಿತರಣೆ ಮತ್ತು ತರಬೇತಿ ಕಾರ್ಯಕ್ರಮ ಶುಕ್ರವಾರ  ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ ನಡೆಯಿತು. ಸುಳ್ಯ ನೂತನ ಶಾಸಕಿ ಭಾಗೀರಥಿ ಮುರುಳ್ಯ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಮುತ್ತೂಟ್ ಫೈನಾನ್ಸ್ ಹಲವು ಸಾಮಾಜಿಕ ಕೆಲಸ ಮಾಡುತ್ತಿದೆ. ಕತ್ತಲೆಯಿಂದ ಬೆಳಕಿನೆಡೆ ಬರಬೇಕೆಂಬ ದೃಷ್ಟಿಯಲ್ಲಿ ಆಶಾ ಕಾರ್ಯಕರ್ತೆಯರಿಗೆ […]

ರಾಮಕುಂಜದಲ್ಲಿ ಮಲೇರಿಯಾ, ಡೆಂಗ್ಯು ದಿನಾಚರಣೆ | ಆಶಾ ಕಾರ್ಯಕರ್ತೆಯರಿಗೆ ಟಾರ್ಚ್ ಲೈಟ್ ವಿತರಣೆ Read More »

ಇಂದು ಮಲೇರಿಯಾ, ಡೆಂಗ್ಯೂ ಡೇ | ತಾಲೂಕಿನ ಆಶಾ ಕಾರ್ಯಕರ್ತರಿಗೆ ಟಾರ್ಚ್ ಲೈಟ್ ವಿತರಣೆ

ಪುತ್ತೂರು: ಮಲೇರಿಯಾ, ಡೆಂಗ್ಯೂ ಡೇ ಹಾಗೂ ತಾಲೂಕಿನ ಆಶಾ ಕಾರ್ಯಕರ್ತರಿಗೆ ಟಾರ್ಚ್ ಲೈಟ್ ವಿತರಣೆ ಸಮಾರಂಭ ಮೇ 19ರಂದು ಮಧ್ಯಾಹ್ನ 2.30ಕ್ಕೆ ಪುತ್ತೂರು ತಾಲೂಕು ಆರೋಗ್ಯ ಇಲಾಖೆಯ ಸಭಾಂಗಣದಲ್ಲಿ ನಡೆಯಲಿದೆ. ಮುತ್ತೂಟ್ ಫೈನಾನ್ಸ್, ಕಶ್ವಿ ಹಸಿರು ದಿಬ್ಬಣ, ಪುತ್ತೂರು ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ ಹಾಗೂ ಪುತ್ತೂರು ರೋಟರ್ಯಾಕ್ಟ್ ಕ್ಲಬ್ ಕಾರ್ಯಕ್ರಮ ಆಯೋಜಿಸಿದೆ. ಎಸ್.ಆರ್.ಕೆ. ಲ್ಯಾಡರ್ಸಿನ ಕೇಶವ್ ಅಮೈ ಕಾರ್ಯಕ್ರಮ ಉದ್ಘಾಟಿಸುವರು. ಡಿ.ಸಿ.ಆರ್.ಆರ್. ರತ್ನಾಕರ್ ರೈ, ಮಂಗಳೂರು ಮುತ್ತೂಟ್ ಫೈನಾನ್ಸ್ ರೀಜನಿನ ರೀಜನಲ್ ಮ್ಯಾನೇಜರ್ ಉದಯ್ ಶ್ಯಾಮ್ ಖಂಡಿಗೆ,

ಇಂದು ಮಲೇರಿಯಾ, ಡೆಂಗ್ಯೂ ಡೇ | ತಾಲೂಕಿನ ಆಶಾ ಕಾರ್ಯಕರ್ತರಿಗೆ ಟಾರ್ಚ್ ಲೈಟ್ ವಿತರಣೆ Read More »

ಪಯಸ್ವಿನಿ ಹೊಳೆಯಲ್ಲಿ ಪತ್ತೆಯಾಯ್ತು ಬಿಜೆಪಿ ಮುಖಂಡನ ಶವ!

ಸುಳ್ಯ: ಬಿಜೆಪಿ ಮುಖಂಡ, ಜಿಲ್ಲಾ ಪಂಚಾಯತಿಯ ಮಾಜಿ ಸದಸ್ಯ ನವೀನ್ ರೈ ಮೇನಾಲ ಅವರ ಮೃತದೇಹ ಸುಳ್ಯದ ಹೊಳೆಯಲ್ಲಿ ಪತ್ತೆಯಾಗಿದೆ. ಪಯಸ್ವಿನಿ ಹೊಳೆಯಲ್ಲಿ ಮೃತದೇಹ ಪತ್ತೆಯಾಗಿದ್ದು, ಸಾವಿಗೆ ನಿಖರ ಕಾರಣ ಪತ್ತೆಯಾಗಿಲ್ಲ. ಪಂಪ್ ರಿಪೇರಿಗೆ ತೆರಳಿದ್ದ ಅವರು ನೀರಿಗೆ ಬಿದ್ದು ಮೃತಪಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ. ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ತನಿಖೆ ಕೈಗೆತ್ತಿಕೊಂಡಿದ್ದಾರೆ.

ಪಯಸ್ವಿನಿ ಹೊಳೆಯಲ್ಲಿ ಪತ್ತೆಯಾಯ್ತು ಬಿಜೆಪಿ ಮುಖಂಡನ ಶವ! Read More »

ಕಾರ್ಯಕರ್ತರ ಮೇಲೆ ಪೊಲೀಸ್ ದೌರ್ಜನ್ಯ ಇಲಾಖೆಗೇ ಕಪ್ಪುಚುಕ್ಕಿ: ಸಂಸದ ನಳಿನ್ ಕುಮಾರ್ ಕಟೀಲ್

ಪುತ್ತೂರು: ಹಿಂದೂ ಯುವಕರ ಮೇಲೆ ಪುತ್ತೂರಿನಲ್ಲಿ ದಾಖಲಾದ ಪ್ರಕರಣದಲ್ಲಿ ಪೊಲೀಸರ ವರ್ತನೆ ಪೊಲೀಸ್ ಇಲಾಖೆಗೆ ಕಪ್ಪುಚುಕ್ಕಿ ಎಂದು ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪ್ರತಿಕ್ರಿಯಿಸಿದ್ದಾರೆ. ಸರ್ಕಾರಿ ಬಸ್ ನಿಲ್ದಾಣದ ಮುಂಭಾಗ ಬಿಜೆಪಿ ನಾಯಕರ ಫೋಟೋವಿದ್ದ ಬ್ಯಾನರ್ ಗೆ ಚಪ್ಪಲಿ ಹಾರ ಹಾಕಿದ ಪ್ರಕರಣದಲ್ಲಿ ಒಂಭತ್ತು ಮಂದಿಯನ್ನು ವಶಕ್ಕೆ ಪಡೆದ ಪೊಲೀಸರು ಅವರಿಗೆ ಥಳಿಸಿ ದೌರ್ಜನ್ಯ ಎಸಗಿದ್ದಾರೆಂಬ ಆರೋಪ ಕೇಳಿ ಬರುತ್ತಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ರವರು ಪ್ರತಿಕ್ರಿಯಿಸಿದ್ದಾರೆ.

ಕಾರ್ಯಕರ್ತರ ಮೇಲೆ ಪೊಲೀಸ್ ದೌರ್ಜನ್ಯ ಇಲಾಖೆಗೇ ಕಪ್ಪುಚುಕ್ಕಿ: ಸಂಸದ ನಳಿನ್ ಕುಮಾರ್ ಕಟೀಲ್ Read More »

ಪೊಲೀಸ್ ದೌರ್ಜನ್ಯದ ಫೊಟೋ, ವೀಡಿಯೋದ ಮಾಹಿತಿ ತಿಳಿದುಕೊಂಡು ಕ್ರಮ: ಶಾಸಕ ಅಶೋಕ್ ಕುಮಾರ್ ರೈ

ಪುತ್ತೂರು: ಅವಹೇಳನಕಾರಿಯಾಗಿ ಬ್ಯಾನರ್ ಹಾಕಿ ಚಪ್ಪಲಿ ಹಾರ ಹಾಕಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸ್ ದೌರ್ಜನ್ಯದ ಬಗೆಗಿನ ಫೊಟೋ, ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವುದು ಗಮನಕ್ಕೆ ಬಂದಿದೆ ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದ್ದಾರೆ. ಮಾಧ್ಯಮದೊಂದಿಗೆ ಮಾತನಾಡಿದ ಅವರು, ಒಟ್ಟು ಪ್ರಕರಣದ ಮಾಹಿತಿ ಪಡೆದುಕೊಂಡು, ಘಟನೆಯ ಸತ್ಯಾಂಶದ ಬಗ್ಗೆ ತಿಳಿದುಕೊಳ್ಳಲಾಗುವುದು. ನಂತರ ಮುಂದಿನ ಕ್ರಮ ಕೈಗೊಳ‍್ಳಲಾಗುವುದು ಎಂದು ತಿಳಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಫೊಟೋ, ವೀಡಿಯೋದ ಬಗ್ಗೆ ಶಾಸಕರನ್ನು ಕೇಳಿದಾಗ, ಅವರು ಈ ರೀತಿಯಾಗಿ ಪ್ರತಿಕ್ರಿಯಿಸಿದರು.

ಪೊಲೀಸ್ ದೌರ್ಜನ್ಯದ ಫೊಟೋ, ವೀಡಿಯೋದ ಮಾಹಿತಿ ತಿಳಿದುಕೊಂಡು ಕ್ರಮ: ಶಾಸಕ ಅಶೋಕ್ ಕುಮಾರ್ ರೈ Read More »

ಮರ್ಧಾಳ ಸಮೀಪ ರಾಜ್ಯ ಹೆದ್ದಾರಿಯಲ್ಲಿ ಮೋರಿ ರಚನೆ: ವಾಹನ ಸಂಚಾರಕ್ಕೆ ಅಡಚಣೆ

ಕಡಬ: ಉಪ್ಪಿನಂಗಡಿ-ಕಡಬ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯಲ್ಲಿ ಬರುವ ಮರ್ಧಾಳ ಸಮೀಪದ ನೆಕ್ಕಿತಡ್ಕ ಎಂಬಲ್ಲಿ ರಸ್ತೆಗೆ  ಮೋರಿ ಅಳವಡಿಸಲು ಪ್ರಾರಂಭಿಸಿ ಎರಡು ತಿಂಗಳಾದರೂ ಕಾಮಗಾರಿ ಮುಗಿಯದೆ ವಾಹನ ಸಂಚಾರಕ್ಕೆ ಅಡಚಣೆಯಾಗುತ್ತಿದ್ದು, ಅಪಘಾತಗಳು ಸಂಭವಿಸುತ್ತಲೇ ಇದೆ. ಈಗ ಮೋರಿ ಅಳವಡಿಸುತ್ತಿರುವ  ಸ್ಥಳದಲ್ಲಿ ಈ ಹಿಂದೆ ಎರಡು ಫೀಟ್ ಸುತ್ತಳತೆಯ ಪೈಪ್ ಅಳವಡಿಸಿರುವುದರಿಂದ ಮಳೆಗಾಲದಲ್ಲಿ ಇಲ್ಲಿ ನೀರು ಸರಾಗವಾಗಿ ಹರಿಯದೆ ಮಳೆ ನೀರು ಶೇಕರಣೆಯಾಗಿ ಸಮಸ್ಯೆ ತಲೆದೋರುತ್ತಿತ್ತು. ಈ ಬಗ್ಗೆ  ಲೋಕೋಪಯೋಗಿ ಇಲಾಖಾಧಿಕಾರಿಗಳಿಗೆ ಸಾರ್ವಜನಿಕರು ದೂರು ನೀಡಿ ಸದೃಢ ಮೋರಿ ಅಳವಡಿಸುವಂತೆ ಕೇಳಿಕೊಂಡಿದ್ದರು.

ಮರ್ಧಾಳ ಸಮೀಪ ರಾಜ್ಯ ಹೆದ್ದಾರಿಯಲ್ಲಿ ಮೋರಿ ರಚನೆ: ವಾಹನ ಸಂಚಾರಕ್ಕೆ ಅಡಚಣೆ Read More »

ಕಾಂಗ್ರೆಸ್ ಗ್ಯಾರೆಂಟಿ ಕಾರ್ಡ್ | ಗ್ರಾಮಸ್ಥರ ಪಟ್ಟು : ಅಧಿಕಾರಿಗಳು ಪೆಚ್ಚು

ಬೆಂಗಳೂರು: ಚುನಾವಣಾ ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ಸರಕಾರ ನೀಡಿದ ಗ್ಯಾರೆಂಟಿ ಕಾರ್ಡ್ ಇದೀಗ ಅಧಿಕಾರಿಗಳನ್ನು ಹೊಸ ಇಕ್ಕಟ್ಟಿಗೆ ಸಿಲುಕಿಸಿದೆ. ಚಿತ್ರದುರ್ಗ ಜಿಲ್ಲೆಯ ಜಾಲಿಕಟ್ಟೆ ಎಂಬಲ್ಲಿ ಗ್ರಾಮಸ್ಥರು ವಿದ್ಯುತ್ ಬಿಲ್ ಕಟ್ಟಲ್ಲ ಎಂದು ಆವಾಜ್ ಹಾಕಿದ್ದು, ಅಧಿಕಾರಿಗಳು ಹ್ಯಾಪ್ ಮೋರೆ ಹಾಕಿಕೊಂಡು ಹಿಂದೆ ಬಂದಿದ್ದಾರೆ. ಚುನಾವಣಾ ಸಂದರ್ಭ ಕಾಂಗ್ರೆಸ್ ನಾಯಕರು ಭರವಸೆ ನೀಡಿದಂತೆ – ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕರೆಂಟ್ ಬಿಲ್ ಕಟ್ಟೋದು ಬೇಡ ಎಂದು ಹೇಳಿಕೆ ನೀಡುತ್ತಿದ್ದರು. ಇದರ ಜೊತೆಗೆ ಬಡ ಕುಟುಂಬದ ಮಹಿಳೆಯರಿಗೆ ಮಾಸಿಕ ನೆರವು, ಸಿಲಿಂಡರ್

ಕಾಂಗ್ರೆಸ್ ಗ್ಯಾರೆಂಟಿ ಕಾರ್ಡ್ | ಗ್ರಾಮಸ್ಥರ ಪಟ್ಟು : ಅಧಿಕಾರಿಗಳು ಪೆಚ್ಚು Read More »

ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಆಗಲಿ: ಡಾ. ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಒತ್ತಾಯ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರೇ ಮುಖ್ಯಮಂತ್ರಿ ಆಗಬೇಕು ಎನ್ನುವುದು ಸಂಪ್ರದಾಯ. ಇದನ್ನು ಮುರಿಯಬಾರದು. ಆದ್ದರಿಂದ ಡಿ.ಕೆ. ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ ಎಂದು ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ನಿರ್ಮಲಾನಂದನಾಥ ಸ್ವಾಮೀಜಿ ಹಾಗೂ ಪಟ್ಟನಾಯಕನಹಳ್ಳಿಯ ಸ್ಫಟಿಕಪುರಿ ಸಂಸ್ಥಾನ ಮಠದ ನಂಜಾವಧೂತ ಸ್ವಾಮೀಜಿ ಆಗ್ರಹಿಸಿದ್ದಾರೆ. ವಿಜಯನಗರದ ಆದಿಚುಂಚನಗಿರಿ ಮಠದಲ್ಲಿ ಭಾನುವಾರ ನಡೆದ ಒಕ್ಕಲಿಗರ ಸಂಘದ ಪದಾಧಿಕಾರಿಗಳ ಸಭೆಯ ಬಳಿಕ ಅವರು ಮಾತನಾಡಿದರು. ಹಿಂದಿನಿಂದ ಬಂದ ಸಂಪ್ರದಾಯವನ್ನು ಪಾಲಿಸುವ ಪರಿಪಾಠ ಬೆಳೆಸಿಕೊಳ್ಳಬೇಕು. ಈ ಹಿಂದೆಯೂ ಕಾಂಗ್ರೆಸ್ ಚುನಾವಣೆಯಲ್ಲಿ ಬಹುಮತ ಪಡೆದುಕೊಂಡಾಗ, ಕೆಪಿಸಿಸಿ ಅಧ್ಯಕ್ಷರನ್ನೇ

ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಆಗಲಿ: ಡಾ. ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಒತ್ತಾಯ Read More »

ಪ್ರವೀಣ್ ಸೂದ್ ಸಿಬಿಐ ನಿರ್ದೇಶಕರಾಗಿ ನೇಮಕ

ಹೊಸದಿಲ್ಲಿ: ಕರ್ನಾಟಕ ಕೇಡರ್‌ ನ 1986ರ ಬ್ಯಾಚ್‌ನ ಐಪಿಎಸ್ ಅಧಿಕಾರಿ ಪ್ರವೀಣ್ ಸೂದ್ ಅವರನ್ನು ಉನ್ನತ ಮಟ್ಟದ ಆಯ್ಕೆ ಸಮಿತಿಯು ಕೇಂದ್ರೀಯ ತನಿಖಾ ದಳದ (ಸಿಬಿಐ) ನಿರ್ದೇಶಕರನ್ನಾಗಿ ನೇಮಿಸಲಾಗಿದೆ. ಪ್ರಸ್ತುತ ಕರ್ನಾಟಕದಲ್ಲಿ ಪೊಲೀಸ್ ಮಹಾನಿರ್ದೇಶಕರಾಗಿ (ಡಿಜಿಪಿ) ಸೇವೆ ಸಲ್ಲಿಸುತ್ತಿರುವ ಸೂದ್ ಅವರಿಗೆ ಹೊಸ ಜವಾಬ್ದಾರಿ ನೀಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರನ್ನೊಳಗೊಂಡ ಆಯ್ಕೆ ಸಮಿತಿ, ಭಾರತದ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ಅಧೀರ್ ರಂಜನ್ ಚೌಧರಿ ಅವರು ಪ್ರವೀಣ್ ಸೂದ್

ಪ್ರವೀಣ್ ಸೂದ್ ಸಿಬಿಐ ನಿರ್ದೇಶಕರಾಗಿ ನೇಮಕ Read More »

ಬೆಳ್ತಂಗಡಿ: ಗೆಲುವಿನ ಹಾದಿಯಲ್ಲಿ ಪೂಂಜಾ ಓಟ | 13100 ಮತಗಳ ಮುನ್ನಡೆ

ಪುತ್ತೂರು: ಬೆಳ್ತಂಗಡಿಯ ಅಭಿವೃದ್ಧಿಯ ಹರಿಕಾರ ಎಂದೇ ಕರೆಸಿಕೊಂಡಿರುವ ಹಾಲಿ ಶಾಸಕ ಹರೀಶ್ ಪೂಂಜಾ ಅವರು 74896 ಮತಗಳನ್ನು ಪಡೆದುಕೊಂಡು, 13100 ಮತಗಳ ಅಂತರದಿಂದ ಮುನ್ನಡೆ ಕಾಯ್ದುಕೊಂಡಿದ್ದಾರೆ. ಕಾಂಗ್ರೆಸಿನ ರಕ್ಷಿತ್ ಶಿವರಾಂ 61734 ಮತ ಪಡೆದುಕೊಂಡು ಎರಡನೇ ಸ್ಥಾನದಲ್ಲಿದ್ದಾರೆ. ಉಳಿದಂತೆ ಜೆಡಿಎಸ್‍ ನ ಅಶ್ರಫ್ ಆಲಿಕುಂಞಿ 406, ಆಮ್ ಆದ್ಮಿಯ ಜನಾರ್ದನ ಬಂಗೇರ 207, ಅಕ್ಬರ್ ಬೆಳ್ತಂಗಡಿ 1808, ಆದಿತ್ಯ ನಾರಾಯಣ ಕೊಲ್ಲಾಜೆ 296 ಮತ, ಶೈಲೇಶ್ 226, ಮಹೇಶ್ 163 ಹಾಗೂ ನೋಟಾ ಪರವಾಗಿ 685 ಮತ

ಬೆಳ್ತಂಗಡಿ: ಗೆಲುವಿನ ಹಾದಿಯಲ್ಲಿ ಪೂಂಜಾ ಓಟ | 13100 ಮತಗಳ ಮುನ್ನಡೆ Read More »

error: Content is protected !!
Scroll to Top