ಅಂತಾರಾಷ್ಟ್ರೀಯ ಖ್ಯಾತಿಯ ಹಂಪಿ ಉತ್ಸವಕ್ಕೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಡಾ. ಅನುರಾಧಾ ಕುರುಂಜಿ ಆಯ್ಕೆ | ಮಹಿಳಾ ವಿಚಾರ ಗೋಷ್ಠಿಯಲ್ಲಿ ಪ್ರಬಂಧ ಮಂಡನೆ
ಸುಳ್ಯ : ಅಂತಾರಾಷ್ಟ್ರೀಯ ಖ್ಯಾತಿಯ ಜಗದ್ವಿಖ್ಯಾತ ಹಂಪಿ ಉತ್ಸವದ ಮಹಿಳಾ ವಿಚಾರ ಗೋಷ್ಠಿಯಲ್ಲಿ ಪ್ರಬಂಧ ಮಂಡಿಸಲು ದಕ್ಷಿಣ ಕನ್ನಡ ಜಿಲ್ಲೆಯಿಂದ ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕರು, ಲೇಖಕರು, ವ್ಯಕ್ತಿತ್ವವ ವಿಕಸನ ತರಬೇತುದಾರರಾದ ಡಾ. ಅನುರಾಧಾ ಕುರುಂಜಿಯವರು ಆಯ್ಕೆಯಾಗಿದ್ದಾರೆ. ಹಿಂದಿನ ವಿಜಯನಗರ ಸಾಮ್ರಾಜ್ಯದ ಭವ್ಯತೆಯನ್ನು ಮರು ಸೃಷ್ಟಿಸುವ ಸಲುವಾಗಿ ರಾಜ್ಯ ಸರ್ಕಾರವು ಆರಂಭಿಸಿರುವ ಹಂಪಿ ಉತ್ಸವಕ್ಕೆ ದೇಶ ವಿದೇಶಗಳಿಂದ ಸಾಗರೋಪಾದಿಯಲ್ಲಿ ಜನರು ಆಗಮಿಸಿ ಸಾಕ್ಷಿಯಾಗುತ್ತಿದ್ದು, 2025ರ ಹಂಪಿ ಉತ್ಸವವು ಫೆಬ್ರುವರಿ 28 ರಿಂದ ಮಾರ್ಚ್ 2 […]