ಸುದ್ದಿ

ಎಂಟು ದಿನಗಳಲ್ಲಿ ಗೃಹಲಕ್ಷ್ಮಿ ಹಣ ಜಮೆ : ಲಕ್ಷ್ಮಿ ಹೆಬ್ಬಾಳ್ಕರ್‌

ಬೆಂಗಳೂರು: ಎಂಟು ದಿನಗಳಲ್ಲಿ ಗೃಹಲಕ್ಷ್ಮಿ ಯೋಜನೆ ಹಣ ಬಿಡುಗಡೆ ಮಾಡುವುದಾಗಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಹೇಳಿದ್ದಾರೆ. ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಅಪಪ್ರಚಾರ ಮಾಡಲಿ. ನಾವು ಈಗಾಗಲೇ ಗೃಹಲಕ್ಷ್ಮಿ ಹಣ ಬಿಡುಗಡೆ ಮಾಡುವುದಾಗಿ ಹೇಳಿದ್ದೇವೆ. ತಾಲೂಕು ಪಂಚಾಯಿತಿ ಮುಖಾಂತರ ಬಿಡುಗಡೆಯಾಗಬೇಕಿರುವುದರಿಂದ ಸ್ವಲ್ಪ ತಡವಾಗಿದೆ. ಯಾವುದೇ ಕಾರಣಕ್ಕೂ ಮಹಿಳೆಯರಿಗೆ ಗೃಹಲಕ್ಷ್ಮಿ ಹಣ ನಿಲ್ಲೋದಿಲ್ಲ. 8-10 ದಿನಗಳಲ್ಲಿ ಬರುತ್ತೆ ಅಂತ ಹೇಳಿದ್ದೆ. 2 ದಿನ ಕಳೆದಿದೆ. ಇನ್ನು 8 ದಿನಗಳಲ್ಲಿ ಗೃಹಲಕ್ಷ್ಮಿ ಹಣ ಬಿಡುಗಡೆ ಮಾಡುತ್ತೇವೆ ಎಂದು ಭರವಸೆ […]

ಎಂಟು ದಿನಗಳಲ್ಲಿ ಗೃಹಲಕ್ಷ್ಮಿ ಹಣ ಜಮೆ : ಲಕ್ಷ್ಮಿ ಹೆಬ್ಬಾಳ್ಕರ್‌ Read More »

ಜನರ ನಿರೀಕ್ಷೆ, ಅಪೇಕ್ಷೆಗಳೆಲ್ಲ ಮಣ್ಣುಪಾಲು : ಬಹಿರಂಗ ಪತ್ರದಲ್ಲಿ ವಿಜಯೇಂದ್ರ ಟೀಕೆ

ಈ ಬಾರಿ ಎಷ್ಟು ಸಾಲ ಮಾಡಲಿದ್ದೀರಿ ಎಂದು ಜನ ಆತಂಕದಿಂದ ನೋಡುತ್ತಿದ್ದಾರೆ ಎಂದು ಲೇವಡಿ ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಮಾರ್ಚ್ 7ರಂದು ದಾಖಲೆಯ 16ನೇ ಬಜೆಟ್ ಮಂಡನೆ ಮಾಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ನಾಲ್ಕು ಪುಟಗಳ ಬಹಿರಂಗ ಪತ್ರ ಬರೆದಿದ್ದಾರೆ. ಈ ಬಾರಿಯ ಬಜೆಟ್​ನಲ್ಲಿ ಎಷ್ಟು ಸಾಲ ಮಾಡಲಿದ್ದೀರಿ ಎಂದು ಜನ ಆತಂಕದಿಂದ ನೋಡುತ್ತಿದ್ದಾರೆ. ನೌಕರರಿಗೆ ಸಂಬಳ ಕೊಡಲಾಗದ, ವಿದ್ಯುತ್ ಬಿಲ್ ಭರಿಸಲಾಗದ, ಗುತ್ತಿಗೆದಾರರ ಬಾಕಿ ಪಾವತಿಸಲಾಗದ ದಾರುಣ

ಜನರ ನಿರೀಕ್ಷೆ, ಅಪೇಕ್ಷೆಗಳೆಲ್ಲ ಮಣ್ಣುಪಾಲು : ಬಹಿರಂಗ ಪತ್ರದಲ್ಲಿ ವಿಜಯೇಂದ್ರ ಟೀಕೆ Read More »

ಎಪಿಎಂಸಿ ರಸ್ತೆಯಲ್ಲಿ ಸರಣಿ ಕಳ್ಳತನ

ಪುತ್ತೂರು : ಆದರ್ಶ ಆಸ್ಪತ್ರೆಯ ಬಳಿ ಇರುವ ಮೆಡಿಕಲ್, ಸೆಲೂನ್ ಮತ್ತು ಪಕ್ಕದ ಕಟ್ಟಡದಲ್ಲಿರುವ ಕ್ಲಿನಿಕ್ ಹಾಗೂ ಅಂಗಡಿಗಳಿಗೆ ಕಳ್ಳರು ನುಗ್ಗಿ ನಗದು ಕಳವು ಮಾಡಿರುವುದಾಗಿ ಇಂದು ಬೆಳಗ್ಗೆ ಮಾಹಿತಿ ಲಭಿಸಿದೆ. ಘಟನೆಗೆ ಸಂಬಂಧಿಸಿ ಪೊಲೀಸರು ತೆರಳಿ ಮಾಹಿತಿ ಸಂಗ್ರಹಿಸುತ್ತಿದ್ದಾರೆ.

ಎಪಿಎಂಸಿ ರಸ್ತೆಯಲ್ಲಿ ಸರಣಿ ಕಳ್ಳತನ Read More »

ತಂಪು ಪಾನೀಯ ಸಾಗಾಟದ ಲಾರಿ ಪಲ್ಟಿ | ಪಲ್ಟಿಯಾದ ಹಿನ್ನಲೆ ಹೊತ್ತಿ ಉರಿದ ಲಾರಿ ಚಕ್ರ

ಬಂಟ್ವಾಳ: ತಂಪು ಪಾನೀಯ ಸಾಗಾಟದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಬಿದ್ದ ಪರಿಣಾಮ ಬೆಂಕಿ ಕಾಣಿಸಿಕೊಂಡ ಘಟನೆ ಬಂಟ್ವಾಳದ ರಾ.ಹೆ.75ರ ಮಾಣಿ ಸಮೀಪದ ಸತ್ತಿಕಲ್ಲಿನಲ್ಲಿ ನಡೆದಿದೆ. ಪರಿಣಾಮ ಲಾರಿಯ ಚಕ್ರಗಳು ಸೇರಿದಂತೆ ಕೆಲವು ಭಾಗ ಹೊತ್ತಿ ಉರಿದಿದೆ ಎನ್ನಲಾಗಿದೆ. ಘಟನಾ ದುರಂತದಲ್ಲಿದ್ದ  ಲಾರಿ ಚಾಲಕ 37 ವರ್ಷದ ಇರ್ಫಾನ್ ಎಂಬವರಿಗೆ ಗಾಯಗಳಾಗಿದ್ದು, ಪುತ್ತೂರು ಆಸ್ಪತ್ರೆಗೆ ದಾಖಲಿಸಲಾ ಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಗೂಡಿನ ಬಳಿಯ ಅಥಾವುಲ್ಲ ಅವರಿಗೆ ಸೇರಿದ ಸಂಸ್ಥೆಯಿಂದ ತಂಪು ಪಾನೀಯಗಳನ್ನು ಲಾರಿಯ ಮೂಲಕ ಸಾಗಾಟ

ತಂಪು ಪಾನೀಯ ಸಾಗಾಟದ ಲಾರಿ ಪಲ್ಟಿ | ಪಲ್ಟಿಯಾದ ಹಿನ್ನಲೆ ಹೊತ್ತಿ ಉರಿದ ಲಾರಿ ಚಕ್ರ Read More »

ಅಚನಕ್ಕಾಗಿ ಫಲ್ಗುಣಿ ನದಿಗೆ ಬಿದ್ದು ಬಾಲಕನ ದುರ್ಮರಣ

ಬೆಳ್ತಂಗಡಿ: ಬಾಲಕನೊಬ್ಬ ಅಚನಕ್ಕಾಗಿ ಫಲ್ಗುಣಿ ನದಿಗೆ ಬಿದ್ದು ಸಾವನ್ನಪ್ಪಿರುವ ಘಟನೆ ಆರಂಬೋಡಿ ಗ್ರಾಮದಲ್ಲಿ ನಡೆದಿದೆ. ಮೃತಪಟ್ಟ ಬಾಲಕ ಉಪ್ಪಿನಂಗಡಿಯ ರಾಮಕುಂಜ ಸಮೀಪದ ಆತೂರು ವಸಂತ ಮತ್ತು ವಿಜಯ ದಂಪತಿಯ ಪುತ್ರ  ಪವನ್ (16) ಎಂದು ಪತ್ತೆಹಚ್ಚಲಾಗಿದೆ. ಮೃತ ಪವನ್ ಎಂಬ  ಆರಂಬೋಡಿ ಗ್ರಾಮದಲ್ಲಿರುವ ಸೂರಂಟೆ ಮನೆಯ ಅಜ್ಜಿಯ ಮನೆಯಲ್ಲಿದ್ದು ಸಿದ್ದಕಟ್ಟೆ ಪ್ರೌಢಶಾಲೆಯಲ್ಲಿ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ. ಅಜ್ಜಿ ಮನೆಗೆಂದು ಬಂದವ ಆಕಸ್ಮಿಕವಾಗಿ ನದಿಯ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ. ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ

ಅಚನಕ್ಕಾಗಿ ಫಲ್ಗುಣಿ ನದಿಗೆ ಬಿದ್ದು ಬಾಲಕನ ದುರ್ಮರಣ Read More »

ಮಹಾರಾಷ್ಟ್ರದಲ್ಲಿ ಕರ್ನಾಟಕದ ಬಸ್‌ಗಳಿಗೆ ಮಸಿ : ಶಿವಸೇನೆ ಪುಂಡರಿಂದ ಚಾಲಕ, ನಿರ್ವಾಹಕರಿಗೆ ಬೆದರಿಕೆ

ಗಡಿ ವಿವಾದವಾಗಿ ಬದಲಾದ ಕಂಡಕ್ಟರ್‌ ಮೇಲಿನ ಹಲ್ಲೆ ಘಟನೆ ಬೆಳಗಾವಿ: ಮರಾಠಿ ಗೊತ್ತಿಲ್ಲ ಕನ್ನಡದಲ್ಲಿ ಮಾತನಾಡು ಎಂದ ಬಸ್ ಕಂಡಕ್ಟರ್ ಮೇಲೆ ಮರಾಠಿ ಪುಂಡರು ಬೆಳಗಾವಿಯಲ್ಲಿ ಹಲ್ಲೆ ನಡೆಸಿದ ವಿಚಾರ ಈಗ ಎರಡು ರಾಜ್ಯಗಳ ನಡುವೆ ಗಡಿ ಉದ್ವಿಗ್ನತೆ ಸೃಷ್ಟಿಗೆ ಕಾರಣವಾಗಿದೆ. ಕರ್ನಾಟಕದಿಂದ ಮಹಾರಾಷ್ಟ್ರಕ್ಕೆ ಸಂಚರಿಸುವ ಬಸ್‌ಗಳನ್ನು ಅಲ್ಲಿನ ಮರಾಠಿ ಪುಂಡರು ಟಾರ್ಗೆಟ್ ಮಾಡುತ್ತಿದ್ದು, ಉದ್ಧವ್ ಠಾಕ್ರೆ ಬಣದ ಶಿವಸೇನೆ ಪುಂಡರು ಕರ್ನಾಟಕ ಬಸ್ಸುಗಳಿಗೆ ಮಸಿ ಬಳಿದು ಹಾನಿ ಎಸಗಿದ್ದಾರೆ. ಪುಣೆಯ ಸ್ವಾರ್‌ಗೇಟ್‌ ಬಳಿ ಪುಂಡಾಟಿಕೆ ಮಾಡಿರುವ

ಮಹಾರಾಷ್ಟ್ರದಲ್ಲಿ ಕರ್ನಾಟಕದ ಬಸ್‌ಗಳಿಗೆ ಮಸಿ : ಶಿವಸೇನೆ ಪುಂಡರಿಂದ ಚಾಲಕ, ನಿರ್ವಾಹಕರಿಗೆ ಬೆದರಿಕೆ Read More »

ಭೀಕರ ಅಪಘಾತ : ಕುಂಭಮೇಳಕ್ಕೆ ಹೋಗುತ್ತಿದ್ದ ಬೆಳಗಾವಿಯ 7 ಮಂದಿ ಸಾವು

ಬೆಳಗಾವಿ: ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಪುಣ್ಯಸ್ನಾನಕ್ಕೆ ತೆರಳುತ್ತಿದ್ದ ಬೆಳಗಾವಿಯ ಗೋಕಾಕ್‌ ನಗರದ 7 ಮಂದಿ ಭೀಕರ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಮಧ್ಯ ಪ್ರದೇಶದ ಜಬಲಪುರ ಪೆಹರಾ ಟೋಲ್ ನಾಕಾ ಬಳಿ ಇಂದು ಬೆಳಗಿನ ಜಾವ ಕ್ರೂಸರ್‌ ವಾಹನ ಬಸ್‌ಗೆ ಡಿಕ್ಕಿ ಹೊಡೆದ ಪರಿಣಾಮ ದುರಂತ ಸಂಭವಿಸಿದೆ. 7 ಮಂದಿ ಕನ್ನಡಿಗರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ ಎಂದು ಮೂಲಗಳು ತಿಳಿಸಿವೆ. ಎರಡು ದಿನಗಳ ಹಿಂದೆ ಗೋಕಾಕ್‌ ನಗರದಿಂದ 10 ಮಂದಿ ಕ್ರೂಸರ್‌ನಲ್ಲಿ ಮಹಾಕುಂಭಮೇಳಕ್ಕೆ ಹೊರಟಿದ್ದರು. ಇಂದು ಮುಂಜಾನೆ

ಭೀಕರ ಅಪಘಾತ : ಕುಂಭಮೇಳಕ್ಕೆ ಹೋಗುತ್ತಿದ್ದ ಬೆಳಗಾವಿಯ 7 ಮಂದಿ ಸಾವು Read More »

280 ಪ್ರಯಾಣಿಕರಿದ್ದ ವಿಮಾನಕ್ಕೆ ಬಾಂಬ್‌ ಬೆದರಿಕೆ : ರೋಮ್‌ನಲ್ಲಿ ತುರ್ತು ಭೂಸ್ಪರ್ಶ

ಅಮೆರಿಕದಿಂದ ದಿಲ್ಲಿಗೆ ಬರುತ್ತಿದ್ದ ಡ್ರೀಮ್‌ಲೈನರ್ ವಿಮಾನ ನವದೆಹಲಿ: ನ್ಯೂಯಾರ್ಕ್‌ನ ಜಾನ್ ಎಫ್ ಕೆ ಕೆನಡಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ನವದೆಹಲಿಗೆ ಹೊರಟ್ಟಿದ್ದ ಅಮೆರಿಕದ ವಿಮಾನಕ್ಕೆ ಬಾಂಬ್ ಬೆದರಿಕೆ ಹಾಕಿದ್ದರಿಂದ ವಿಮಾನವನ್ನು ರೋಮ್‌ನಲ್ಲಿ ಭಾನುವಾರ ಸಂಜೆ ತುರ್ತು ಭೂ ಸ್ಪರ್ಶ ಮಾಡಲಾಗಿದೆ. 280 ಪ್ರಯಾಣಿಕರಿದ್ದ ಬೋಯಿಂಗ್ 787-9 ಡ್ರೀಮ್‌ಲೈನರ್ ವಿಮಾನ ಕ್ಯಾಸ್ಪಿಯನ್ ಸಮುದ್ರದ ಮೇಲೆ ಪಶ್ಚಿಮಕ್ಕೆ ಹೋಗುವ ಮೊದಲು ಇಟಲಿಯ ಕಡೆಗೆ ತನ್ನ ಮಾರ್ಗವನ್ನು ತಿರುಗಿಸಿದೆ. ನ್ಯೂಯಾರ್ಕ್ ನಿಂದ ಶನಿವಾರ ರಾತ್ರಿ 8.30ರ ಸಮಯದಲ್ಲಿ ಟೇಕ್ ಆಫ್ ಆದ

280 ಪ್ರಯಾಣಿಕರಿದ್ದ ವಿಮಾನಕ್ಕೆ ಬಾಂಬ್‌ ಬೆದರಿಕೆ : ರೋಮ್‌ನಲ್ಲಿ ತುರ್ತು ಭೂಸ್ಪರ್ಶ Read More »

ದಾವಣಗೆರೆಯ ಮಠಕ್ಕೆ ನಟ ಸುನಿಲ್‌ ಶೆಟ್ಟಿಯಿಂದ ರೋಬೋಟಿಕ್‌ ಆನೆ ಕೊಡುಗೆ

ದಾವಣಗೆರೆ : ಜಿಲ್ಲೆಯ ಚನ್ನಗಿರಿ ತಾಲೂಕಿನ ತಾವರೆಕೆರೆಯ ಶಿಲಾಮಠಕ್ಕೆ ಬಾಲಿವುಡ್‌ ನಟ ಸುನಿಲ್‌ ಶೆಟ್ಟಿ ರೋಬೋಟಿಕ್​ ಆನೆಯೊಂದನ್ನು ಕೊಡುಗೆಯಾಗಿ ನೀಡಿದ್ದಾರೆ. ಭಾನುವಾರ ಶ್ರೀಮಠಕ್ಕೆ ಆಗಮಿಸಿದ ಆನೆಯನ್ನು ಸ್ವಾಮೀಜಿಗಳು ಅದ್ದೂರಿಯಾಗಿ ಸ್ವಾಗತಿಸಿದರು. ರೋಬೋಟಿಕ್ ಆನೆಗೆ ಉಮಾಮಹೇಶ್ವರ ಎಂದು ನಾಮಕರಣ ಮಾಡಲಾಯಿತು. ಗ್ರಾಮಸ್ಥರೆಲ್ಲರೂ ಸೇರಿ ಆನೆಯ ಮೆರವಣಿಗೆ ಮಾಡಿ ಸಂಭ್ರಮಿಸಿದ್ದಾರೆ. ರೋಬೋಟಿಕ್ ಆನೆಯ ಪಕ್ಕದಲ್ಲಿ ನಿಂತು ಫೋಟೋ ತೆಗೆಸಿಕೊಳ್ಳಲು ಜನರು ಮುಗಿಬಿದ್ದರು.ಮುಂಬೈನ ಕುಪಾ ಆ್ಯಂಡ್ ಪೀಠಾ ಇಂಡಿಯಾ ಎಂಬ ಸಂಸ್ಥೆ ವತಿಯಿಂದ ನಟ ಸುನೀಲ್ ಶೆಟ್ಟಿ ಅವರು ರೋಬೋಟಿಕ್​ ಆನೆಯನ್ನು

ದಾವಣಗೆರೆಯ ಮಠಕ್ಕೆ ನಟ ಸುನಿಲ್‌ ಶೆಟ್ಟಿಯಿಂದ ರೋಬೋಟಿಕ್‌ ಆನೆ ಕೊಡುಗೆ Read More »

ಮೂಡೂರು-ಪಡೂರು ಬಯಲು ಕಂಬಳಕ್ಕೆ ಆಗಮಿಸಲಿದ್ದಾರೆ ಸಿದ್ದರಾಮಯ್ಯ

ಮಾ.8ರಂದು ಬಂಟ್ವಾಳದ ಕೊಡಿಬೈಲಿನಲ್ಲಿ ಜೋಡುಕರೆ ಕಂಬಳ ಬಂಟ್ವಾಳ : ಬಂಟ್ವಾಳ ತಾಲೂಕಿನ ನಾವೂರು ಗ್ರಾಮದ ಕೂಡಿಬೈಲಿನಲ್ಲಿ ನಡೆಯಲಿರುವ 14ನೇ ವರ್ಷದ ಮೂಡೂರು-ಪಡೂರು ಜೋಡುಕರೆ ಬಯಲು ಕಂಬಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಹಿತ ಹಲವು ರಾಜಕೀಯ ಗಣ್ಯರು ಭಾಗವಹಿಸಲಿದ್ದಾರೆ. ಮಾರ್ಚ್ 8ರಂದು ಈ ಕಂಬಳ ನಡೆಯಲಿದ್ದು, ಅಧಿವೇಶನ ಇದ್ದರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಬರಲು ಒಪ್ಪಿದ್ದಾರೆ ಎಂದು ಕಂಬಳ ಸಮಿತಿ ಗೌರವಾಧ್ಯಕ್ಷ ಬಿ.ರಮಾನಾಥ ರೈ ತಿಳಿಸಿದ್ದಾರೆ. ದಿ.ಆಲ್ಬರ್ಟ್ ಪಾಯಸ್ ಕೂಡಿಬೈಲು ವೇದಿಕೆಯಲ್ಲಿ ಅಂದು ಬೆಳಗ್ಗೆ 8.45ಕ್ಕೆ ಸೋಲೂರು ಆರ್ಯ-ಈಡಿಗ ಮಹಾ ಸಂಸ್ಥಾನ

ಮೂಡೂರು-ಪಡೂರು ಬಯಲು ಕಂಬಳಕ್ಕೆ ಆಗಮಿಸಲಿದ್ದಾರೆ ಸಿದ್ದರಾಮಯ್ಯ Read More »

error: Content is protected !!
Scroll to Top