ಅಪಘಾತ

ವಿಷ ಸೇವಿಸಿ ಮಹಿಳೆ ಆತ್ಮಹತ್ಯೆಗೆ ಶರಣು

ಸುಳ್ಯ : ವಿಷ ಸೇವಿಸಿ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸುಳ್ಯದ ನಲ್ಲೂರು ಕಮ್ರಾಜೆಯ ಪೊಲ್ಲಾಜೆ ಎಂಬಲ್ಲಿ ನಡೆದಿದೆ . ಮೃತಪಟ್ಟ ಮಹಿಳೆಯನ್ನು ರೇವತಿ (51) ಎನ್ನಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ಏನು ಎಂಬುವುದು ತಿಳಿದು ಬಂದಿಲ್ಲ. ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ವಿಷ ಸೇವಿಸಿ ಮಹಿಳೆ ಆತ್ಮಹತ್ಯೆಗೆ ಶರಣು Read More »

ಶಾರ್ಟ್ ಸರ್ಕ್ಯೂಟ್ ನಿಂದ ಮನೆಗೆ ತಗುಲಿದ ಬೆಂಕಿ

ಕಾಸರಗೋಡು: ಮನೆಯೊಂದಕ್ಕೆ ಬೆಂಕಿ ತಗುಲಿದ ಘಟನೆ ಚೆಂಗಳದಲ್ಲಿ ನಡೆದಿದೆ. ಚೆಂಗಳದ ಶಾಫಿ ಎಂಬವರ ಮನೆಯಲ್ಲಿ ಈ ಘಟನೆ ನಡೆದಿದ್ದು ಶಾರ್ಟ್ ಸರ್ಕ್ಯೂಟ್ ಘಟನೆಗೆ ಕಾರಣ ಎನ್ನಲಾಗಿದೆ. ಬೆಂಕಿ ತಗುಲಿದ ಹಿನ್ನಲೆ ಮನೆ ಅಪಾರ ಹಾನಿಯಾಗಿದೆ ಎಂದು ತಿಳಿದು ಬಂದಿದೆ. ಅಡುಗೆ ಕೋಣೆ ಸಂಪೂರ್ಣ ಅಗ್ನಿಗಾಹುತಿಯಾಗಿದ್ದು, ಮನೆಯವರು ಅಪಾಯದಿಂದ ಪಾರಾಗಿದ್ದಾರೆ. ಕೂಡಲೇ ಕಾಸರಗೋಡಿನಿಂದ ಆಗಮಿಸಿದ ಅಗ್ನಿ ಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸಿ ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ.

ಶಾರ್ಟ್ ಸರ್ಕ್ಯೂಟ್ ನಿಂದ ಮನೆಗೆ ತಗುಲಿದ ಬೆಂಕಿ Read More »

ವಿದ್ಯುತ್‍ ಕಂಬಕ್ಕೆ ಬೈಕ್‍ ಡಿಕ್ಕಿಯಾಗಿ ಯುವಕರಿಬ್ಬರ ದುರ್ಮರಣ

ಮಂಗಳೂರು:  ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾಗಿ ಯುವಕರಿಬ್ಬರು ಸಾವನ್ನಪ್ಪಿರುವ ಘಟನೆ ಕಿನ್ನಿಗೋಳಿಯ ಬಟ್ಟಕೋಡಿಯಲ್ಲಿ ನಡೆದಿದೆ. ಧಾರವಾಡದ ಕಲ್ಲೂರು ನಿವಾಸಿ ಆತ್ಮಾನಂದ ಅಂಬಿಗರ (27) ಹಾಗೂ ನವೀನ್ ಹೂಗಾರ (26) ಮೃತ ದುರ್ದೈವಿಗಳು. ಅತೀ ವೇಗವಾಗಿ ಬಂದ ಬೈಕ್ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದೆ. ಪರಿಣಾಮ ಆತ್ಮಾನಂದ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ನವೀನ್ ಹೂಗಾರ ಅವರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಅಪಘಾತ ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮಂಗಳೂರು ಉತ್ತರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿದ್ಯುತ್‍ ಕಂಬಕ್ಕೆ ಬೈಕ್‍ ಡಿಕ್ಕಿಯಾಗಿ ಯುವಕರಿಬ್ಬರ ದುರ್ಮರಣ Read More »

ದನದ  ಹಟ್ಟಿಗೆ ಬೆಂಕಿ ಅವಘಡ | ರಸ್ತೆಯಿಲ್ಲದೆ ಬೆಂಕಿ ನಂದಿಸಲು ಅಗ್ನಿಶಾಮಕದಳದವರ ಹರಸಾಹಸ

ಪುತ್ತೂರು : ಆರ್ಯಾಪು ಗ್ರಾಮದ ಕಾರ್ಪಾಡಿ ಬೈಲಿನ ಮನೆ ಪಕ್ಕದ ದನದ ಕೊಟ್ಟಿಗೆಗೆ ಬೆಂಕಿ ಹೊತ್ತಿಕೊಂಡು, ಉರಿದ ಘಟನೆ ಭಾನುವಾರ ಸಂಜೆ ನಡೆದಿದೆ. ಮೋಹನ್ ಭಂಡಾರಿ ಎಂಬವರ ಮನೆ ಇದಾಗಿದ್ದು, ಘಟನೆ ಸಂದರ್ಭ ಮನೆಯಲ್ಲಿ ಯಾರೂ ಇರಲಿಲ್ಲ ಎಂದು ಹೇಳಲಾಗಿದೆ. ಮನೆ ಪಕ್ಕದಲ್ಲೇ ಇದ್ದ ಹಟ್ಟಿಗೆ ಬೆಂಕಿ ಹೊತ್ತಿಕೊಂಡ ತಕ್ಷಣ ಸ್ಥಳಕ್ಕಾಗಮಿಸಿದ ನೆರೆಮನೆಯವರು ತಕ್ಷಣ ಜಾಗೃತರಾಗಿ ದನಗಳನ್ನು ಹೊರ ಕರೆದೊಯ್ದಿದ್ದಾರೆ. ಆದರೆ ಬೆಂಕಿ ಆರಿಸಲು ಹರಸಾಹಸ ಪಟ್ಟ ಘಟನೆ ಮಾತ್ರ ಅರಣ್ಯ ರೋಧನವಾಯಿತು. ಕಾರ್ಪಾಡಿ ದೇವಸ್ಥಾನದ ಮಗ್ಗುಲಲ್ಲೇ

ದನದ  ಹಟ್ಟಿಗೆ ಬೆಂಕಿ ಅವಘಡ | ರಸ್ತೆಯಿಲ್ಲದೆ ಬೆಂಕಿ ನಂದಿಸಲು ಅಗ್ನಿಶಾಮಕದಳದವರ ಹರಸಾಹಸ Read More »

ಅಪಘಾತದಿಂದ ಚಿಕಿತ್ಸೆ ಫಲಿಸದೆ ಯುವ ನ್ಯಾಯವಾದಿ ಮೃತ್ಯು | ಅಂಗಾಂಗ ದಾನ ಮಾಡಿದ ಕುಟುಂಬ

ಬಂಟ್ವಾಳ : ಕಳೆದ ವಾರ ಬಿ.ಸಿ.ರೋಡಿನಲ್ಲಿ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಬಿ.ಸಿ.ರೋಡಿನ ಯುವ ನ್ಯಾಯವಾದಿ ಪ್ರಥಮ್ ಬಂಗೇರ (27) ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಮೃತ ಪ್ರಥಮ್ ಅವರ ಅಂಗಾಂಗಗಳನ್ನು ದಾನ ಮಾಡುವ ಮೂಲಕ ಅವರ ಕುಟುಂಬ ಮಾನವೀಯತೆಯನ್ನು  ತೋರಿದೆ. ಮೃತರ ಎರಡು ಕಣ್ಣು, ಕಿಡ್ನಿ, ಲಿವರ್ ಮತ್ತು ಕರುಳಿನ ಭಾಗವನ್ನು ದಾನವಾಗಿ ನೀಡಲಾಗಿದೆ ಎಂದು ಕುಟುಂಬದ ಮೂಲಗಳು ತಿಳಿಸಿದೆ.

ಅಪಘಾತದಿಂದ ಚಿಕಿತ್ಸೆ ಫಲಿಸದೆ ಯುವ ನ್ಯಾಯವಾದಿ ಮೃತ್ಯು | ಅಂಗಾಂಗ ದಾನ ಮಾಡಿದ ಕುಟುಂಬ Read More »

ಮನೆಯಲ್ಲಿದ್ದ ಕಾರು ಹಿಂದಕ್ಕೆ ಚಲಿಸಿ ವ್ಯಕ್ತಿಯೋರ್ವ ಮೃತ್ಯು

ಸುಳ್ಯ : ಅಂಗಳದಲ್ಲಿ ನಿಂತಿದ್ದ ಕಾರು ಹಿಂದಕ್ಕೆ ಚಲಿಸಿದಾಗ ವ್ಯಕ್ತಿಯೋರ್ವರು ಮೇಲೇ ಹರಿದುಹೋಗಿರುವ ಪರಿಣಾಮ ಮೃತಪಟ್ಟ ಘಟನೆ ಸುಳ್ಯದಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ನಿವೃತ್ತ ರೇಂಜರ್ ಜೋಸೆಫ್ (74) ಎಂದು ಪತ್ತೆಹಚ್ಚಲಾಗಿದೆ. ಸುಳ್ಯ ಕರಿಕ್ಕಳದ ಮುಚ್ಚಿಲದಲ್ಲಿರುವ ತಮ್ಮ ಮನೆಯ ಅಂಗಳದಲ್ಲಿ ನಿಂತಿದ್ದಾಗ ಕಾರು ಹಿಮ್ಮುಖ ಚಲಿಸಿ ನಿವೃತ್ತ ಜೋಸೇಫ್ ಅವರಿಗೆ ಗುದ್ದಿದಾಗ ಕುಸಿದು ಬಿದ್ದರೆನ್ನಲಾಗಿದೆ. ಮನೆಯಲ್ಲಿ ಅವರ ಪತ್ನಿ ಮಾತ್ರ ಇದ್ದು ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯುವ ವೇಳೆ ದಾರಿ ಮಧ್ಯೆ ಮೃತಪಟ್ಟರು ಎನ್ನಲಾಗಿದೆ. ಅರಣ್ಯ ಇಲಾಖೆಯಲ್ಲಿ

ಮನೆಯಲ್ಲಿದ್ದ ಕಾರು ಹಿಂದಕ್ಕೆ ಚಲಿಸಿ ವ್ಯಕ್ತಿಯೋರ್ವ ಮೃತ್ಯು Read More »

ರೈಲು ಡಿಕ್ಕಿ ಹೊಡೆದು ಮೃತ್ಯು

ಪುತ್ತೂರು: ರೈಲು ಡಿಕ್ಕಿ ಹೊಡೆದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಎಡಮಂಗಲ ಮರ್ದೂರಡ್ಕ ಎಂಬಲ್ಲಿ ನಡೆದಿದೆ. ಸ್ಥಳೀಯ ನಿವಾಸಿ ವಿಶ್ವನಾಥ ಮೃತಪಟ್ಟವರು. ವಿಶ್ವನಾಥರು ರೈಲ್ವೆ ಟ್ರ್ಯಾಕ್ ಬಳಿ ಕುಳಿತು ಮೊಬೈಲ್ ನೋಡುತ್ತಿದ್ದಾಗ ರಾತ್ರಿ 10 ಗಂಟೆ ಸುಮಾರಿಗೆ ಮಂಗಳೂರು ಕಡೆಯಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ರೈಲು ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಈ ಕುರಿತು ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.

ರೈಲು ಡಿಕ್ಕಿ ಹೊಡೆದು ಮೃತ್ಯು Read More »

ಚಾಲಕನ ನಿಯಂತ್ರಣ ತಪ್ಪಿ ಗ್ಯಾಸ್ ಸಿಲಿಂಡರ್ ಲಾರಿ ಪಲ್ಟಿ

ಸುಳ್ಯ: ತಾಲೂಕಿನ ಕುಂಬರ್ಚೋಡು ತಿರುವಿನಲ್ಲಿ ತಡ ರಾತ್ರಿ ಭಾರತ್ ಗ್ಯಾಸ್ ಸಿಲಿಂಡರ್ ಸರಬರಾಜು ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಅಪಘಾತಕ್ಕೀಡಾಗಿದೆ. ಅಪಘಾತದಲ್ಲಿ ಲಾರಿ ಚಾಲಕನಿಗೆ ಗಾಯಗಳಾಗಿದ್ದು, ಸ್ಥಳೀಯರ ಸಹಾಯದಿಂದ ಅವರನ್ನು ಹತ್ತಿರದ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದೂ ತಿಳಿದುಬಂದಿದೆ. ಅಪಘಾತದ ಕಾರಣವಾಗಿ ಸ್ಥಳದಲ್ಲಿ ಅಲ್ಪ ಸಮಯ ರಸ್ತೆ ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಲಾರಿಯಲ್ಲಿ ಇದ್ದ ಗ್ಯಾಸ್ ಸಿಲಿಂಡರ್‌ ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿದೆ ಮತ್ತು ಅಲ್ಲಿ ಬದಿಯ ಕಂದಕಕ್ಕೂ ಉರುಳಿದೆ ಎನ್ನಲಾಗಿದೆ.

ಚಾಲಕನ ನಿಯಂತ್ರಣ ತಪ್ಪಿ ಗ್ಯಾಸ್ ಸಿಲಿಂಡರ್ ಲಾರಿ ಪಲ್ಟಿ Read More »

ಬೈಕ್ ಮತ್ತು ಆಕ್ಟಿವಾ ನಡುವೆ ಅಪಘಾತ

ಪುತ್ತೂರು: ಬೈಕ್ ಮತ್ತು ಆಕ್ಟಿವಾ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಸಂಟ್ಯಾರ್ ನಲ್ಲಿ ನಡೆದಿದೆ. ಡಿಕ್ಕಿಯ ರಭಸಕ್ಕೆ ವಾಹನಗಳು ನುಜ್ಜು ಗುಜ್ಜಾಗಿದೆ. ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

ಬೈಕ್ ಮತ್ತು ಆಕ್ಟಿವಾ ನಡುವೆ ಅಪಘಾತ Read More »

ರಿಕ್ಷಾ – ಕಾರು ನಡುವೆ ಡಿಕ್ಕಿ | ರಿಕ್ಷಾ ಚಾಲಕ ಗಂಭೀರ ಗಾಯ

ಮಾಣಿ: ಕಾರೊಂದು ರಿಕ್ಷಾಗೆ ಡಿಕ್ಕಿ ಹೊಡೆದ ಪರಿಣಾಮ ರಿಕ್ಷಾ ಪಲ್ಟಿಯಾಗಿ ಆಟೋ ಚಾಲಕ ಗಂಭೀರ ಗಾಯಗೊಂಡ ಘಟನೆ ಸೂರಿಕುಮೇರು ಜಂಕ್ಷನ್‍ ಬಳಿ ನಡೆದಿದೆ. ರಿಕ್ಷಾ ಚಾಲಕ ಗಂಭೀರ ಗಾಯಗೊಂಡಿದ್ದು ಕೂಡಲೇ ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತ ಪರಿಣಾಮ ಆಟೋ ರಿಕ್ಷಾ ಸಂಪೂರ್ಣ ನಜ್ಜುಗುಜ್ಜಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿಯಬೇಕಿದೆ.

ರಿಕ್ಷಾ – ಕಾರು ನಡುವೆ ಡಿಕ್ಕಿ | ರಿಕ್ಷಾ ಚಾಲಕ ಗಂಭೀರ ಗಾಯ Read More »

error: Content is protected !!
Scroll to Top