ಅಪಘಾತ

ಸಿಡಿಲು ಬಡಿದು ಕಾರ್ಮಿಕ ಸಾವು

ಸೇತುವೆ ಕಾಮಗಾರಿ ವೇಳೆ ಸಂಭವಿಸಿದ ದುರಂತ ಉಡುಪಿ: ರಾಷ್ಟ್ರೀಯ ಹೆದ್ದಾರಿ-66ರ ಕುಂದಾಪುರ ಸಮೀಪ ಅರಾಟೆ ಸೇತುವೆ ಸಮೀಪ ಗುರುವಾರ ಸಂಜೆ ಸಿಡಿಲು ಬಡಿದು ಕಾರ್ಮಿಕನೊಬ್ಬ ಮೃತಪಟ್ಟ ದಾರುಣ ಘಟನೆ ನಡೆದಿದೆ. ಪಂಜಾಬ್ ಮೂಲದ ಕಾರ್ಮಿಕ ಅಶುತೋಷ್ (35) ಮೃತ ವ್ಯಕ್ತಿ. ಮತ್ತೋರ್ವ ಕಾರ್ಮಿಕ ಲವಜೋತ್ ಸಿಂಗ್ (28) ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಅರಾಟೆ ಹಳೆ ಸೇತುವೆಯ ದುರಸ್ತಿ ಕಾಮಗಾರಿ ಕಳೆದ ಕೆಲವು ದಿನಗಳಿಂದ ನಡೆಯುತ್ತಿದ್ದು, ಗುರುವಾರ ಸಂಜೆ ಪಂಜಾಬ್ ಮೂಲದ ಕಾರ್ಮಿಕರು ಕಾಮಗಾರಿಯಲ್ಲಿ ತೊಡಗಿದ್ದ ವೇಳೆ ಈ […]

ಸಿಡಿಲು ಬಡಿದು ಕಾರ್ಮಿಕ ಸಾವು Read More »

ಸಿಡಿಲು ಬಡಿದು ಚಾರಣಕ್ಕೆ ಹೋದ ನಾಲ್ವರು ವಿದ್ಯಾರ್ಥಿಗಳು ಸಾವು

ಬೆಟ್ಟದ ವ್ಯೂ ಪಾಯಿಂಟ್‌ನಲ್ಲಿ ಸಂಭವಿಸಿದ ಭೀಕರ ದುರಂತ ಮಲಪ್ಪುರಂ : ಬೆಟ್ಟದ ವ್ಯೂ ಪಾಯಿಂಟ್‌ಗೆ ಚಾರಣ ಹೋಗಿದ್ದ ನಾಲ್ವರು ವಿದ್ಯಾರ್ಥಿಗಳು ಸಿಡಿಲು ಬಡಿದು ಮೃತಪಟ್ಟ ದಾರುಣ ಘಟನೆ ಕೇರಳದ ಮಲಪ್ಪುರಂ ಜಿಲ್ಲೆಯ ಮಂಕಡದಲ್ಲಿ ಮಂಗಳವಾರ ಸಂಜೆ ನಡೆದಿದೆ. ಅವರ ಜೊತೆಗಿದ್ದ ಇತರ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತರನ್ನು ರಹೀಸ್(20), ಫಹಾದ್(19), ಬಹಾಸ್(18) ಮತ್ತು ಜಿಯಾದ್(18) ಎಂದು ಗುರುತಿಸಲಾಗಿದೆ. ವಿದ್ಯಾರ್ಥಿಗಳೆಲ್ಲರೂ ಮಲಪುರಂದವರಾಗಿದ್ದಾರೆ. 7 ವಿದ್ಯಾರ್ಥಿಗಳ ಗುಂಪು ಮಂಕಡದ ಕುರುಂಗನ್‌ಚೋಳ ವ್ಯೂ ಪಾಯಿಂಟ್‌ಗೆ ತಲುಪಿದ ವೇಳೆ ಈ ಅವಘಡ ಸಂಭವಿಸಿದೆ.

ಸಿಡಿಲು ಬಡಿದು ಚಾರಣಕ್ಕೆ ಹೋದ ನಾಲ್ವರು ವಿದ್ಯಾರ್ಥಿಗಳು ಸಾವು Read More »

ಬೈಕ್‌-ಕಾರು ಡಿಕ್ಕಿ : ಗಂಡ ಸ್ಥಳದಲ್ಲೇ ಸಾವು, ಪತ್ನಿಗೆ ಗಂಭೀರ ಗಾಯ

ನೆಲ್ಯಾಡಿ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಗೋಳಿತ್ತೊಟ್ಟು ಜಂಕ್ಷನ್‌ನಲ್ಲಿ ಬೈಕ್‌ ಹಾಗೂ ಸ್ವಿಫ್ಟ್ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿ ಬೈಕ್‌ ಸವಾರ ಸ್ಥಳದಲ್ಲೇ ಮೃತಪಟ್ಟು ಸಹಸವಾರೆ ಪತ್ನಿ ಗಂಭೀರವಾಗಿ ಗಾಯಗೊಂಡ ಘಟನೆ ಭಾನುವಾರ ಅಪರಾಹ್ನ ನಡೆದಿದೆ. ಉಪ್ಪಿನಂಗಡಿ ಕಡೆಗೆ ಬರುತ್ತಿದ್ದ ಬೈಕ್ ಹಾಗೂ ಉಪ್ಪಿನಂಗಡಿಯಿಂದ ಶಿರಾಡಿ ಕಡೆಗೆ ಸಾಗುತ್ತಿದ್ದ ಸ್ವಿಫ್ಟ್ ಕಾರಿನ ನಡುವೆ ಗೋಳಿತ್ತೊಟ್ಟು ಜಂಕ್ಷನ್‌ನಲ್ಲಿ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಡಿಕ್ಕಿಯ ತೀವ್ರತೆಗೆ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಮೃತಪಟ್ಟವರನ್ನು ಅರಸಿನಮಕ್ಕಿ ಹತ್ಯಡ್ಕ

ಬೈಕ್‌-ಕಾರು ಡಿಕ್ಕಿ : ಗಂಡ ಸ್ಥಳದಲ್ಲೇ ಸಾವು, ಪತ್ನಿಗೆ ಗಂಭೀರ ಗಾಯ Read More »

ಹೋಟೆಲ್‌ನಲ್ಲಿ ಭೀಕರ ಬೆಂಕಿ ಅವಘಡ : ಓರ್ವ ಸಾವು, ನಾಲ್ವರಿಗೆ ಗಂಭೀರ ಸುಟ್ಟ ಗಾಯ

ತಡರಾತ್ರಿ ಶಾರ್ಟ್‌ ಸರ್ಕ್ಯೂಟ್‌ನಿಂದ ಹತ್ತಿಕೊಂಡ ಬೆಂಕಿ ಬೆಂಗಳೂರು: ನಾಗರಬಾವಿಯ ರಿಂಗ್ ರೋಡ್ ಬಳಿಯ ಸರ್ವೀಸ್ ರೋಡ್‌ನಲ್ಲಿರುವ ಹೋಟೆಲ್‌ಗೆ ಬೆಂಕಿ ತಗುಲಿ ಓರ್ವ ಸಿಬ್ಬಂದಿ ಸಾವನ್ನಪ್ಪಿದ್ದು, ನಾಲ್ವರ ಸ್ಥಿತಿ ಗಂಭೀರವಾಗಿದೆ. ಮೃತ ಸಿಬ್ಬಂದಿಯನ್ನು ರಾಜ್‌ಕುಮಾರ್ ಎಂದು ಗುರುತಿಸಲಾಗಿದ್ದು, ನಾಲ್ವರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಶುಕ್ರವಾರ ತಡರಾತ್ರಿ ಹೋಟೆಲ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಹೋಟೆಲ್‌ನಲ್ಲಿ ಕೆಲಸ ಮಾಡುವ ಎಂಟು ಜನ ಸಿಬ್ಬಂದಿ ಅದೇ ಹೋಟೆಲ್‌ನ ಮೇಲಿನ ಫ್ಲೋರ್‌ನಲ್ಲಿ ವಾಸವಿದ್ದರು. ಬೆಂಕಿಯ ಕೆನ್ನಾಲಿಗೆ ಮೇಲಿನ ಮಹಡಿಗೂ ಹಬ್ಬಿದ್ದು, ತಕ್ಷಣ ಅಲ್ಲಿದ್ದ

ಹೋಟೆಲ್‌ನಲ್ಲಿ ಭೀಕರ ಬೆಂಕಿ ಅವಘಡ : ಓರ್ವ ಸಾವು, ನಾಲ್ವರಿಗೆ ಗಂಭೀರ ಸುಟ್ಟ ಗಾಯ Read More »

ಪ್ರಾಣಕ್ಕೆ ಎರವಾದ ರಜೆಯ ಮೋಜು : ನದಿಯಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿಯನಿಯರ ಸಾವು

ಮಂಗಳೂರು: ರಜೆಯ ಮೋಜು ಇಬ್ಬರು ವಿದ್ಯಾರ್ಥಿನಿಯರ ಪ್ರಾಣಕ್ಕೆ ಎರವಾದ ಘಟನೆ ಕಡಬದಲ್ಲಿ ಶುಕ್ರವಾರ ಸಂಜೆ ಸಂಭವಿಸಿದೆ. ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ನಾಲ್ವರಲ್ಲಿ ಇಬ್ಬರು ವಿದ್ಯಾರ್ಥಿನಿಯರು ನೀರಲ್ಲಿ ಮುಳುಗಿ ದಾರುಣವಾಗಿ ಸಾವನ್ನಪ್ಪಿದ್ದಾರೆ. ಕಡಬದ ಕುಟ್ರುಪ್ಪಾಡಿ ಗ್ರಾಮದ ಕೊಲ್ಯದಕಟ್ಟ ಎಂಬಲ್ಲಿ ಗುಂಡ್ಯ ಹೊಳೆಯಲ್ಲಿ ಈ ದಾರುಣ ಘಟನೆ ನಡೆದಿದೆ. ಕುಟ್ರುಪ್ಪಾಡಿ ನಿವಾಸಿಗಳಾದ ಸುನೀತಾ (21), ಅರ್ಪಿತಾ (15) ಎಂಬ ವಿದ್ಯಾರ್ಥಿನಿಯರು ಮೃತಪಟ್ಟಿದ್ದಾರೆ. ನಾಲ್ವರು ವಿದ್ಯಾರ್ಥಿನಿಯರು ಶಾಲೆ-ಕಾಲೇಜಿಗೆ ರಜೆ ಇರುವ ಕಾರಣ ಸಂಜೆ ಹೊತ್ತು ಈಜಾಡಲು ನದಿಗಿಳಿದಿದ್ದರು. ಈ ಪೈಕಿ ಸುನೀತಾ

ಪ್ರಾಣಕ್ಕೆ ಎರವಾದ ರಜೆಯ ಮೋಜು : ನದಿಯಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿಯನಿಯರ ಸಾವು Read More »

ಖಾಸಗಿ ಬಸ್ಸಿಗೆ ‌ರಿಕ್ಷಾ ಅಡ್ಡ ಇರಿಸಿ ಚಾಲಕನ ಮೇಲೆ ಹಲ್ಲೆ: ದೂರು ದಾಖಲು

ಪುತ್ತೂರು: ವಿವಾಹದ ದಿಬ್ಬಣ ಕರೆದುಕೊಂಡು ಹೋಗುತ್ತಿದ್ದ ಖಾಸಗಿ ಬಸ್ಸಿಗೆ ರಿಕ್ಷಾ ಅಡ್ಡವಿರಿಸಿ ಚಾಲಕನ ಮೇಲೆ ಹಲ್ಲೆ ನಡೆಸಿದ ಘಟನೆ ಮಧುರ ಎಂಬಲ್ಲಿ ಮೇ 6 ರಂದು ನಡೆದಿದೆ. ಹಲ್ಲೆಗೊಳಗಾದ ಚಾಲಕನನ್ನು ಸಾಮೆತ್ತಡ್ಕದ ರಾಕೇಶ್ ಡಿ’ಸೋಜಾ ಎಂದು ಗುರುತಿಸಲಾಗಿದೆ. ಈ ಬಗ್ಗೆ ದೂರು ನೀಡಿರುವ ರಾಕೇಶ್, ವಿಟ್ಲದಿಂದ ಮಡಿಕೇರಿಗೆ ಮದುವೆ ದಿಬ್ಬಣವನ್ನು ಬಸ್‌ನಲ್ಲಿ ಕರೆದುಕೊಂಡು ಹೋಗುತ್ತಿದ್ದ ವೇಳೆ ಉರಿಮಜಲು ಸಮೀಪ ಬಸ್‌ನ ಎದುರಿನಿಂದ ಆಟೋ ರಿಕ್ಷಾವೊಂದು ಹೋಗುತ್ತಿದ್ದು, ಅದರ ಚಾಲಕನು ಒಮ್ಮೆಲೇ ಬ್ರೇಕ್ ಹಾಕಿ ನಿಲ್ಲಿಸಿ ಜನರನ್ನು ತುಂಬಿಸುತ್ತಿದ್ದ

ಖಾಸಗಿ ಬಸ್ಸಿಗೆ ‌ರಿಕ್ಷಾ ಅಡ್ಡ ಇರಿಸಿ ಚಾಲಕನ ಮೇಲೆ ಹಲ್ಲೆ: ದೂರು ದಾಖಲು Read More »

ಚಲಿಸುತ್ತಿದ್ದ ಬಸ್‌ನ ಚಾಲಕ ಹೃದಯಾಘಾತದಿಂದ ಸಾವು: ಪ್ರಯಾಣಿಕರು ಅಪಾಯದಿಂದ ಪಾರು

ಅರಂತೋಡು: ಸುಳ್ಯ ಮಾರ್ಗವಾಗಿ ಬೆಂಗಳೂರಿನಿಂದ ಕುಕ್ಕೆಗೆ ಹೋಗುತ್ತಿದ್ದ ಖಾಸಗಿ ಬಸ್ಸಿನ ಚಾಲಕನಿಗೆ ಹೃದಯಾಘಾತವಾಗಿ ನಿಧನ ಹೊಂದಿದ್ದು, ಬಸ್ಸು ಬರೆಗೆ ಗುದ್ದಿ ‌ನಿಂತ ಪರಿಣಾಮ ಅದೃಷ್ಟವಶಾತ್ ಪ್ರಯಾಣಿಕರು ಪಾರಾದ ಘಟನೆ ಕಾಟಕೇರಿಯಲ್ಲಿ ಇಂದು ಮುಂಜಾನೆ ನಡೆದಿದೆ. ಮೃತ ಚಾಲಕನನ್ನು ಶಿವಕುಮಾರ್ ಎಂದು ಗುರುತಿಸಲಾಗಿದೆ. ಬೆಂಗಳೂರಿನಿಂದ ಗುರುವಾರ ರಾತ್ರಿ ಈ ಬಸ್ಸು ಸುಳ್ಯದತ್ತ ಹೊರಟಿತ್ತು. ಶುಕ್ರವಾರ ಮುಂಜಾನೆ ವೇಳೆ ಮಡಿಕೇರಿ ಕಳೆದು ಕಾಟಕೇರಿಯ ತಿರುವಿನಲ್ಲಿ ಬರುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಚಾಲಕನಿಗೆ ಹೃದಯಾಘಾತವಾದ ಪರಿಣಾಮ ಬಸ್ಸು ನಿಯಂತ್ರಣ ಕಳೆದುಕೊಂಡು

ಚಲಿಸುತ್ತಿದ್ದ ಬಸ್‌ನ ಚಾಲಕ ಹೃದಯಾಘಾತದಿಂದ ಸಾವು: ಪ್ರಯಾಣಿಕರು ಅಪಾಯದಿಂದ ಪಾರು Read More »

ಸವಣೂರಿನಲ್ಲಿ ಭೀಕರ ಅಪಘಾತ : ಯುವಕರಿಬ್ಬರು ಸಾವು

ಸ್ಕೂಟಿಗೆ ನೀರಿನ ಟ್ಯಾಂಕರ್‌ ಡಿಕ್ಕಿಯಾಗಿ ಸಂಭವಿಸಿದ ಅಪಘಾತ ಕಡಬ: ಸ್ಕೂಟಿಗೆ ಟಾಂಕರ್‌ ಡಿಕ್ಕಿಯಾಗಿ ಸ್ಕೂಟಿ ಸವಾರಿ ಮಾಡುತ್ತಿದ್ದ ಯುವಕರಿಬ್ಬರು ಮೃತಪಟ್ಟ ಭೀಕರ ಅಪಘಾತ ಮಂಗಳವಾರ ಸಂಜೆ ಸುಬ್ರಹ್ಮಣ್ಯ-ಮಂಜೇಶ್ವರ ಹೆದ್ದಾರಿಯಲ್ಲಿ ಸವಣೂರು ಸಮೀಪ ಚಾಪಳ್ಳ ತಿರುವಿನಲ್ಲಿ ಸಂಭವಿಸಿದೆ. ಬಂಟ್ವಾಳದ ಕಲ್ಲಡ್ಕ ಸಮೀಪದ ಗೋಳ್ತಮಜಲಿನ ಯಜ್ಞೇಶ್‌ (20) ಮತ್ತು ಪಾಣಾಜೆ ಗ್ರಾಮದ ಭರಣ್ಯ ನಿವಾಸಿ ಜಗನ್‌ (21) ಮೃತಪಟ್ಟಿರುವ ದುರ್ದೈವಿಗಳು. ಯುವಕರಿಬ್ಬರು ಸ್ಕೂಟಿಯಲ್ಲಿ ಆಲಂಕಾರಿನ ದೇವಸ್ಥಾನಕ್ಕೆ ಹೋಗಿ ವಾಪಸು ಬರುವಾಗ ಈ ಭೀಕರ ಅಪಘಾತ ಸಂಭವಿಸಿದೆ. ಯಜ್ಞೇಶ್‌ ಡೆಲಿವರಿ ಬಾಯ್‌

ಸವಣೂರಿನಲ್ಲಿ ಭೀಕರ ಅಪಘಾತ : ಯುವಕರಿಬ್ಬರು ಸಾವು Read More »

ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ : 21 ಮಂದಿ ಸಾವು

ಬೀಜಿಂಗ್: ಚೀನಾದ ಹುನಾನ್ ಪ್ರಾಂತ್ಯದ ಲಿಯುಯಾಂಗ್ ನಗರದಲ್ಲಿರುವ ಪಟಾಕಿ ಉತ್ಪಾದನಾ ಘಟಕದಲ್ಲಿ ಪ್ರಬಲ ಸ್ಫೋಟ ಸಂಭವಿಸಿ 21 ಮಂದಿ ದಾರುಣ ಸಾವಿಗೀಡಾಗಿದ್ದಾರೆ. ಹುನಾನ್ ಪ್ರಾಂತ್ಯದ ಲಿಯುಯಾಂಗ್ ನಗರದಲ್ಲಿ ಸೋಮವಾರ ಸಂಜೆ 5 ಗಂಟೆ ಸುಮಾರಿಗೆ ಈ ಘಟನೆ ಸಂಭವಿಸಿದೆ. ಈ ದುರಂತದಲ್ಲಿ 21 ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. 61 ಜನ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಚೀನಾ ಅಧ್ಯಕ್ಷ ಜಿನ್‌ಪಿಂಗ್ ತನಿಖೆಗೆ ಆದೇಶಿಸಿದ್ದಾರೆ.

ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ : 21 ಮಂದಿ ಸಾವು Read More »

ನಡುರಸ್ತೆಯಲ್ಲಿ ಹೊತ್ತಿ ಉರಿದ ಕೆಎಸ್‌ಆರ್‌ಟಿಸಿ ಬಸ್‌

ಚಾಲಕನ ಸಮಯ ಪ್ರಜ್ಞೆಯಿಂದ 17 ಪ್ರಯಾಣಿಕರು ಪಾರು ಹಾವೇರಿ : ಬೆಂಗಳೂರಿನಿಂದ ಗದಗಕ್ಕೆ ಪ್ರಯಾಣಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ ಹೊತ್ತಿ ಉರಿದ ಘಟನೆ ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲ್ಲೂಕಿನ ದೇವರಗುಡ್ಡ ಗ್ರಾಮದ ಬಳಿ ನಡೆದಿದೆ. ಬಸ್ ಚಾಲಕನ ಸಮಯಪ್ರಜ್ಞೆಯಿಂದಾಗಿ ಬಸ್ಸಿನಲ್ಲಿದ್ದ 17 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಂಗಳೂರಿನಿಂದ ಗದಗಕ್ಕೆ ಹೊರಟಿದ್ದ ಈ ಪಲ್ಲಕ್ಕಿ ಬಸ್ ರಾಜ್ಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದಾಗ ದೇವರಗುಡ್ಡದ ಬಳಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಎಚ್ಚೆತ್ತುಕೊಂಡ ಚಾಲಕ ಪಕ್ಕೀರಪ್ಪ ಬಸ್ಸನ್ನು ರಸ್ತೆ ಬದಿಗೆ ನಿಲ್ಲಿಸಿ ಪ್ರಯಾಣಿಕರನ್ನು

ನಡುರಸ್ತೆಯಲ್ಲಿ ಹೊತ್ತಿ ಉರಿದ ಕೆಎಸ್‌ಆರ್‌ಟಿಸಿ ಬಸ್‌ Read More »

error: Content is protected !!
Scroll to Top