ಅಪಘಾತ

ಬೆಂಗಳೂರಿನಲ್ಲಿ ಬೈಕ್‍ ಅಪಘಾತ | ಬೆಳ್ತಂಗಡಿ ಇಂದಬೆಟ್ಟು ನಿವಾಸಿ ಮೃತ್ಯು

ಬೆಳ್ತಂಗಡಿ: ಬೆಂಗಳೂರಿನಲ್ಲಿ ನಡೆದ ಬೈಕ್‌ ಮತ್ತು ಕಂಟೈನ‌ರ್ ನಡುವೆ ಭೀಕರ ಅಪಘಾತದಲ್ಲಿ ಬೆಳ್ತಂಗಡಿ ತಾಲೂಕಿನ ಇಂದಬೆಟ್ಟುವಿನ ಯುವಕ ಸಾವನ್ನಪ್ಪಿದ್ದ ಘಟನೆ ಗುರುವಾರ ರಾತ್ರಿ ನಡೆದಿದೆ. ಇಂದಬೆಟ್ಟು ಗ್ರಾಮದ ವಸಂತ ಗೌಡ ರವರ ಪುತ್ರ ತುಷಾರ್ (22ವ) ಮೃತ ಪಟ್ಟವರು. ಬೆಂಗಳೂರಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು ರಾತ್ರಿ ವೇಳೆ ಬೈಕ್ ನಲ್ಲಿ ಹೋಗುವಾಗ ಈ ಘಟನೆ ನಡೆದಿದೆ. ಬೈಕ್ ನಲ್ಲಿದ್ದ ಇನೋರ್ವ ವ್ಯಕ್ತಿ ಬೆಳಾಲು ನಿವಾಸಿ ಸೃಜನ್ ಸುರುಳಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೆಂಗಳೂರಿನಲ್ಲಿ ಬೈಕ್‍ ಅಪಘಾತ | ಬೆಳ್ತಂಗಡಿ ಇಂದಬೆಟ್ಟು ನಿವಾಸಿ ಮೃತ್ಯು Read More »

ಅಪಘಾತ : ಸುಬ್ರಹ್ಮಣ್ಯದಿಂದ ವಾಪಸಾಗುತ್ತಿದ್ದ ದಂಪತಿ ಸಾವು

ಗದಗ: ಲಾರಿ ಮತ್ತು ಕಾರು ನಡುವೆ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರು ಮಕ್ಕಳು ಗಾಯಗೊಂಡಿರುವ ದಾರುಣ ಘಟನೆ ಗದಗ ಜಿಲ್ಲೆ ನರಗುಂದ ತಾಲೂಕಿನ ಭೈರನಹಟ್ಟಿ ಗ್ರಾಮದ ಬಳಿ ನಡೆದಿದೆ. ಕಾರಿನಲ್ಲಿದ್ದವರು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿಯಿತ್ತು ವಾಪಸಾಗುತ್ತಿದ್ದಾಗ ಈ ಭೀಕರ ಅಪಘಾತ ಸಂಭವಿಸಿದೆ.ಬಾಗಲಕೋಟೆ ಮೂಲದ ಸಿದ್ದರಾಮ ಹಾಗೂ ಹೇಮಾ ಮೃತ ದಂಪತಿ. ಮಕ್ಕಳಾದ ಮಲ್ಲಿಕಾರ್ಜುನ ಹಾಗೂ ಸಹನಾ ಗಾಯಗೊಂಡು ನರಗುಂದ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಕುಟುಂಬಸ್ಥರು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಿಂದ ಪೂಜೆ ಮುಗಿಸಿಕೊಂಡು

ಅಪಘಾತ : ಸುಬ್ರಹ್ಮಣ್ಯದಿಂದ ವಾಪಸಾಗುತ್ತಿದ್ದ ದಂಪತಿ ಸಾವು Read More »

ಬೈಕ್ – ಖಾಸಗಿ ಬಸ್ ಡಿಕ್ಕಿ | ಓರ್ವ ಮೃತ್ಯು, ಮತ್ತೋರ್ವನಿಗೆ ಗಂಭೀರ ಗಾಯ

ಬಂಟ್ವಾಳ: ಬೈಕ್ ಹಾಗೂ ಖಾಸಗಿ ಬಸ್ ಡಿಕ್ಕಿ ಹೊಡೆದುಕೊಂಡ ಪರಿಣಾಮ ಓರ್ವ ಮೃತಪಟ್ಟು, ಇನ್ನೊರ್ವ ಗಂಭೀರವಾಗಿ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ ತುಂಬೆ ಬಳಿ ನಡೆದಿದೆ. ಕಡೆಗೋಳಿ ನಿವಾಸಿ ಪ್ರವೀಣ (30) ಸ್ಥಳದಲ್ಲೇ ಮೃತಪಟ್ಟವರು. ಸಂದೀಪ ಗಂಭೀರ ಗಾಯಗೊಂಡಿದ್ದಾರೆ. ಗಾಯಾಳು ಮಂಗಳೂರು ಖಾಸಗಿ ಆಸ್ಪತ್ರೆಯ ತೀವ್ರನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೆಲಸವನ್ನು ಮುಗಿಸಿ ಮನೆಗೆ ಜೊತೆಯಾಗಿ ಪ್ರಯಾಣಿಸುತ್ತಿದ್ದ ವೇಳೆ ರಾಷ್ಟ್ರೀಯ ಹೆದ್ದಾರಿ ಮಂಗಳೂರು ಬೆಂಗಳೂರು ರಸ್ತೆಯ ತುಂಬೆ ಸಮೀಪದ ಕಡೆಗೋಳಿ ಎಂಬಲ್ಲಿ ಮಂಗಳೂರಿನಿಂದ ಬಿಸಿರೋಡಿನ ಕಡೆಗೆ ಬರುತ್ತಿದ್ದ

ಬೈಕ್ – ಖಾಸಗಿ ಬಸ್ ಡಿಕ್ಕಿ | ಓರ್ವ ಮೃತ್ಯು, ಮತ್ತೋರ್ವನಿಗೆ ಗಂಭೀರ ಗಾಯ Read More »

ಚಾಲಕನ ನಿದ್ರೆಯ ಮಂಪರಿನಲ್ಲಿ ಪ್ರಪಾತಕ್ಕೆ ಬಿದ್ದ ಕಾರು | ಅದೃಷ್ಟವಶಾತ್ ಚಾಲಕ ಅಪಾಯದಿಂದ ಪಾರು

ಪುತ್ತೂರು: ಸಂಟ್ಯಾರ್ ಪಾಣಾಜೆ ಹೆದ್ದಾರಿಯ ಕೈಕಾರ ಎಂಬಲ್ಲಿ ಚಾಲಕನಿಗೆ ನಿದ್ದೆ ಮಂಪರು ಆವರಿಸಿ ಹತೋಟಿ ತಪ್ಪಿದ ಕಾರು ರಸ್ತೆ ಅಂಚಿನಲ್ಲಿದ್ದ 50 ಅಡಿ ಆಳದ ಕಂದಕಕ್ಕೆ ಉರುಳಿ ಬಿದ್ದಿದೆ. ಶನಿವಾರ ತಡರಾತ್ತಿ ಈ ಘಟನೆ ನಡೆದಿದ್ದು, ಪ್ರಪಾತಕ್ಕೆ ಕಾರು ಉರುಳಿ ಬಿದ್ದರೂ, ಯಾವುದೇ ಆಪಾಯಗಳಿಲ್ಲದೇ ಚಾಲಕ ಪಾರಾಗಿದ್ದಾನೆ. ಕಾರು ಕಾಸರಗೋಡು ಜಿಲ್ಲೆಯ ಬದಿಯಡ್ಕ ಬಳಿಯ ಡಾ. ಚಂದ್ರಶೇಖರ್ ಅವರ ಪುತ್ರ ಡಾ. ವಿವೇಕ್ ಅವರಿಗೆ ಸೇರಿದಾಗಿದೆ. ರಾತ್ರಿ ಬದಿಯಡ್ಕದಿಂದ ಅವರು ಪುತ್ತೂರಿಗೆ ಕಾರ್ಯ ನಿಮಿತ್ತ ಬರುತ್ತಿದ್ದರು. ಬಳಕ್ಕೆ

ಚಾಲಕನ ನಿದ್ರೆಯ ಮಂಪರಿನಲ್ಲಿ ಪ್ರಪಾತಕ್ಕೆ ಬಿದ್ದ ಕಾರು | ಅದೃಷ್ಟವಶಾತ್ ಚಾಲಕ ಅಪಾಯದಿಂದ ಪಾರು Read More »

ಎಕ್ಸ್ ಪ್ರೆಸ್ ರೈಲು ಡಿಕ್ಕಿ : ನಾಲ್ವರು ಕಾರ್ಮಿಕರು ಮೃತ್ಯು

ತಿರುವನಂತಪುರಂ: ಎಕ್ಸ್ ಪ್ರೆಸ್ ರೈಲು ಡಿಕ್ಕಿ ಹೊಡೆದು ನಾಲ್ವರು ಕಾರ್ಮಿಕರು ಮೃತಪಟ್ಟ ಘಟನೆ ಕೇರಳದ ಚೋರನೂರ್ ರೈಲು ನಿಲ್ದಾಣದಲ್ಲಿ ಶನಿವಾರ ಸಂಜೆ ನಡೆದಿದೆ. ತಿರುವನಂತಪುರಂ ಕಡೆಗೆ ಸಾಗುತ್ತಿದ್ದ ಕೇರಳ ಎಕ್ಸ್‌ಪ್ರೆಸ್ ಡಿಕ್ಕಿ ಹೊಡೆದ ಪರಿಣಾಮ ತಮಿಳುನಾಡಿನ ಇಬ್ಬರು ಮಹಿಳೆಯರು ಸೇರಿದಂತೆ ನಾಲ್ವರು ಪೌರ ಕಾರ್ಮಿಕರು ಮೃತಪಟ್ಟಿದ್ದಾರೆ. ರೈಲು ನಿಲ್ದಾಣದಿಂದ ಕೆಲವೇ ಕಿ.ಮೀ. ದೂರದಲ್ಲಿರುವ ತೋರನೂರ್ ಸೇತುವೆ ಬಳಿ ಹಳಿಯಿಂದ ಕಸವನ್ನು ತೆರವುಗೊಳಿಸುತ್ತಿದ್ದಾಗ ನವದೆಹಲಿ- ತಿರುವನಂತಪುರಂ ಮಾರ್ಗದ ಎಕ್ಸ್ ಪ್ರೆಸ್ ರೈಲು ಮಧ್ಯಾಹ್ನ ಕಾರ್ಮಿಕರಿಗೆ ಡಿಕ್ಕಿ ಹೊಡೆದಿದೆ ಎಂದು

ಎಕ್ಸ್ ಪ್ರೆಸ್ ರೈಲು ಡಿಕ್ಕಿ : ನಾಲ್ವರು ಕಾರ್ಮಿಕರು ಮೃತ್ಯು Read More »

ದ್ವಿಚಕ್ರ ವಾಹನದ ಮೇಲೆ ಬಿದ್ದ ಮರ : ಸವಾರ ಮೃತ್ಯು

ಕಡಬ: ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಸಂದರ್ಭ ಮರ ಬಿದ್ದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಕಡಬದಲ್ಲಿ ನಡೆದಿದೆ. ಕಡಬ ತಾಲೂಕಿನ ಸ್ಪಂದನ ಸಮುದಾಯ ಸಹಕಾರಿ ಸಂಘದ ಪಿಗ್ಮಿ ಸಂಗ್ರಾಹಕರಾದ ಸೀತಾರಾಮ ಗೌಡ ದೇವಸ್ಯ ಮೃತಪಟ್ಟವರು. ಕಡಬ ಸ್ಪಂದನ ಸಮುದಾಯ ಸಹಕಾರಿ ಸಂಘದ ಸಿಬ್ಬಂದಿ ಶಿಲ್ಪಾ ಅವರ ತಂದೆಯಾಗಿದ್ದಾರೆ.

ದ್ವಿಚಕ್ರ ವಾಹನದ ಮೇಲೆ ಬಿದ್ದ ಮರ : ಸವಾರ ಮೃತ್ಯು Read More »

ಡಿಸೇಲ್ ಟ್ಯಾಂಕರ್ ಪಲ್ಟಿ : ಡೀಸೆಲ್ ಸೋರಿಕೆ

ಸುಳ್ಯ : ಡೀಸೆಲ್ ಸಾಗಾಟದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಮಧ್ಯೆ ಪಲ್ಟಿಯಾದ ಘಟನೆ ಮಾಣಿ-ಮೈಸೂರು ಹೆದ್ದಾರಿಯ ಜಾಲ್ಸೂರು ಗ್ರಾಮದ ಬೈತಡ್ಕ ತಿರುವಿನಲ್ಲಿ ನಡೆದಿದೆ. ಮಂಗಳೂರಿನಿಂದ ಮಡಿಕೇರಿ ಕಡೆಗೆ ಡೀಸೆಲ್ ಹೊತ್ತೊಯ್ಯುತ್ತಿದ್ದ ಟ್ಯಾಂಕರ್ ಬೈತಡ್ಕ ತಿರುವಿನಲ್ಲಿ ರಸ್ತೆ ಮಧ್ಯೆ ಪಲ್ಟಿಯಾಗಿದೆ. ಪರಿಣಾಮ ಟ್ಯಾಂಕರ್ ನಲ್ಲಿ ಡೀಸಲ್ ಸೋರಿಕೆಯಾಗಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದವರು ಆಗಮಿಸಿ, ಕಾರ್ಯಾಚರಣೆ ನಡೆಸುತ್ತಿದ್ದಾರೆ. ಟ್ಯಾಂಕರ್ ಚಾಲಕನಿಗೆ ಗಾಯವಾಗಿದ್ದು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಸ್ವಲ್ಪ ಹೊತ್ತು ವಾಹನ ಸಂಚಾರಕ್ಕೆ ಅಡ್ಡಿ ಉಂಟಾಯಿತು.

ಡಿಸೇಲ್ ಟ್ಯಾಂಕರ್ ಪಲ್ಟಿ : ಡೀಸೆಲ್ ಸೋರಿಕೆ Read More »

ಎರಡು ಬೈಕ್‍ ಗಳ ನಡುವೆ ಡಿಕ್ಕಿ | ಓರ್ವರಿಗೆ ಗಂಭೀರ ಗಾಯ

ಪುತ್ತೂರು: ಮುಕ್ರುಂಪಾಡಿಯಲ್ಲಿ ಬೈಕ್ ಗಳ ನಡುವೆ ಭೀಕರ ಅಪಘಾತ ಸಂಭವಿಸಿ  ಓರ್ವ ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಪುತ್ತೂರು ಖಾಸಗಿ ಆಸ್ಪತ್ರೆಯ ಸಿಬ್ಬಂದಿ ಸಂತೋಷ್ ಶೆಟ್ಟಿ ಮತ್ತು ಕಾಸರಗೋಡಿನ ಉದಯ ಎಂಬವರ ಬೈಕ್ ಗಳು ಮಾಣಿ ಮೈಸೂರು ಹೈವೇಯ ಪುತ್ತೂರಿನ ಮುಕ್ರುಂಪಾಡಿಯಲ್ಲಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಇಬ್ಬರಿಗೂ ಗಾಯವಾಗಿದೆ. ಓರ್ವರು ಗಂಭೀರ ಗಾಯಗೊಂಡಿದ್ದಾರೆ. ಅಪಘಾತದಲ್ಲಿ ಗಾಯಗೊಂಡವರನ್ನು ಕೂಡಲೇ ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ಮಹಾವೀರ ಆಸ್ಪತ್ರೆಗೆ ತನ್ನ ಕಾರಿನಲ್ಲೇ ಸಾಗಿಸಿದ್ದಾರೆ ಎನ್ನಲಾಗಿದೆ.

ಎರಡು ಬೈಕ್‍ ಗಳ ನಡುವೆ ಡಿಕ್ಕಿ | ಓರ್ವರಿಗೆ ಗಂಭೀರ ಗಾಯ Read More »

ಪಾದಚಾರಿಗೆ ದ್ವಿಚಕ್ರ ವಾಹನ ಡಿಕ್ಕಿ

ಪುತ್ತೂರು : ರಸ್ತೆ ಬದಿ ನಿಂತಿದ್ದ ವ್ಯಕ್ತಿಯೊಬ್ಬರಿಗೆ ಡಿಕ್ಕಿ ಹೊಡೆದ ಘಟನೆ ಕೋಡಿಂಬಾಡಿ ಸಿಂಗಾರ ಮಂಟಪದ ಬಳಿ ನಡೆದಿದೆ. ಬೆಳಿಗ್ಗೆ ದ್ವಿಚಕ್ರ ವಾಹನ  ಸವಾರ ರೌಶೀನ್ ಎಂಬವರು ಉಪ್ಪಿನಂಗಡಿ ಕಡೆಯಿಂದ ಪುತ್ತೂರು ಕಡೆಗೆ ಅಜಾಗರೂಕತೆ ಹಾಗೂ ನಿರ್ಲಕ್ಷ್ಯತನದಿಂದ ಸವಾರಿ ಮಾಡಿದ ಪರಿಣಾಮ ರಸ್ತೆಬದಿ ನಡೆದುಕೊಂಡು ಹೋಗುತ್ತಿದ್ದ ಪಾದಾಚಾರಿ ಹರಿಯಪ್ಪ ನಾಯ್ಕ ಎಂಬವರಿಗೆ ಹಿಂಬದಿಯಿಂದ ಡಿಕ್ಕಿಯಾಗಿದೆ. ಅಪಘಾತದಲ್ಲಿ ಹರಿಯಪ್ಪ ನಾಯ್ಕ ಮತ್ತು ದ್ವಿಚಕ್ರ ವಾಹನ ಸವಾರ ರೌಶೀನ್‌ ರಸ್ತೆಯಲ್ಲಿ ಬಿದ್ದು ಹರಿಯಪ್ಪ ನಾಯ್ಕ ರವರಿಗೆ ಗಾಯಗಳಾಗಿದ್ದು ಗಾಯಾಳು ಹರಿಯಪ್ಪ

ಪಾದಚಾರಿಗೆ ದ್ವಿಚಕ್ರ ವಾಹನ ಡಿಕ್ಕಿ Read More »

ಸ್ಕೂಟರ್–ಬೈಕ್ ಅಪಘಾತ : ಮೂರು ಮಂದಿಗೆ ಗಾಯ

ಪುತ್ತೂರು: ಬೈಕ್ ಹಾಗೂ ಸ್ಕೂಟರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಮೂವರು ಗಾಯಗೊಂಡ ಘಟನೆ ಪುತ್ತೂರು – ಉಪ್ಪಿನಂಗಡಿ ರಸ್ತೆಯ ಕೇಪುಳು ಜಂಕ್ಷನ್ ನಲ್ಲಿ ನಡೆದಿದೆ. ಪುತ್ತೂರಿನಿಂದ ಉಪ್ಪಿನಂಗಡಿಗೆ ತೆರಳುತ್ತಿದ್ದ ಬೈಕ್ ಮತ್ತು ಕೇವುಳು ರಸ್ತೆಯಿಂದ ಮುಖ್ಯ ರಸ್ತೆಗೆ ಬರುತ್ತಿದ್ದ ಸ್ಕೂಟರ್ ನಡುವೆ ಅಪಘಾತ ಸಂಭವಿಸಿದೆ. ಸ್ಕೂಟರ್ ನಲ್ಲಿದ್ದ ಸವಾರ ಮತ್ತು ಹಿಂಬದಿ ಸವಾರ ಹಾಗು ಬೈಕ್ ಸವಾರನಿಗೆ ಗಾಯವಾಗಿದೆ.

ಸ್ಕೂಟರ್–ಬೈಕ್ ಅಪಘಾತ : ಮೂರು ಮಂದಿಗೆ ಗಾಯ Read More »

error: Content is protected !!
Scroll to Top