ಅಪಘಾತ

ಆಸ್ತಿ ಆಸೆಗೆ ಜನ್ಮದಾತನನ್ನೇ ಕೊಂದ ಪಾಪಿ ಪುತ್ರ

ಬೆಂಗಳೂರು: ಆಸ್ತಿ ಪಡೆಯುವ ಹುಚ್ಚಿಗೆ ಜನ್ಮ ಕೊಟ್ಟ ತಂದೆಯನ್ನೇ ಮಗನೊಬ್ಬ ಇರಿದು ಹತ್ಯೆ ಮಾಡಿರುವ ಘಟನೆ ಇಂದಿರಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮುನಿಕೃಷ್ಣ(70) ಎಂಬವರೇ ‌ಮೃತ ದುರ್ದೈವಿ. ಕೊಲೆಗೈದ ಆರೋಪಿಯನ್ನು ಮೋಹನ್ ಕುಮಾರ್ ಎಂದು ಗುರುತಿಸಲಾಗಿದೆ. ತಂದೆ ಮತ್ತು ಮಕ್ಕಳ ನಡುವೆ ಆಸ್ತಿಗಾಗಿ ಹಲವು ಬಾರಿ ಗಲಾಟೆ ನಡೆದಿತ್ತು ಎಂದು ತಿಳಿದು ಬಂದಿದೆ. ಆರೋಪಿ ಮೋಹನ್ ಕಳೆದ ಎರಡು ದಿನಗಳ ಹಿಂದೆ ತಂದೆಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದ. ಗಂಭೀರ ಪ್ರಮಾಣದಲ್ಲಿ ಗಾಯಗೊಂಡಿದ್ದ ಮುನಿಕೃಷ್ಣ ಅವರನ್ನು […]

ಆಸ್ತಿ ಆಸೆಗೆ ಜನ್ಮದಾತನನ್ನೇ ಕೊಂದ ಪಾಪಿ ಪುತ್ರ Read More »

ಅತಿವೇಗದಿಂದ ಬಂದ ಬೈಕ್ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ: ಸವಾರರಿಬ್ಬರು ಪವಾಡ ಸದೃಶ ಪಾರು

ಮಂಗಳೂರು: ಅತಿ ವೇಗದಿಂದ ಬಂದ ಬೈಕ್ ಒಂದು ಸವಾರನ ‌ನಿಯಂತ್ರಣಕ್ಕೆ ಸಿಗದೆ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದಿದ್ದು, ಬೈಕ್ ಸವಾರರಾದ ವಿದ್ಯಾರ್ಥಿಗಳಿಬ್ಬರು ಪವಾಡ ಎಂಬಂತೆ ಪಾರಾದ ಘಟನೆ ಉಳ್ಳಾಲದ ಕಿನ್ಯ ಸಂಕೇಶದಲ್ಲಿ ‌ನಡೆದಿದೆ. ಢಿಕ್ಕಿಯಾದ ರಭಸಕ್ಕೆ ವಿದ್ಯುತ್ ಕಂಬ ಮುರಿದು ಬಿದ್ದಿದೆ. ಅಪಘಾತದ ದೃಶ್ಯಾವಳಿಗಳು ಸಿಸಿಟಿವಿಯಲ್ಲೂ ಲಭ್ಯವಾಗಿವೆ. ದ್ವಿಚಕ್ರ ವಾಹನದಲ್ಲಿ ಬಿಜಾಪುರ ಮೂಲದ ಇಬ್ಬರು ಯುವಕರಿದ್ದರು ಎಂದು ತಿಳಿದು ಬಂದಿದೆ. ವಿದ್ಯುತ್ ಕಂಬ ಮುರಿದು ತಂತಿಗಳು ರಸ್ತೆಗೆ ಬಿದ್ದಿದ್ದು ‌ಅದರಲ್ಲಿ ವಿದ್ಯುತ್ ಪ್ರವಹಿಸುತ್ತಿರುವ ಭಯದಿಂದ ಸಾರ್ವಜನಿಕರು ಅತ್ತ

ಅತಿವೇಗದಿಂದ ಬಂದ ಬೈಕ್ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ: ಸವಾರರಿಬ್ಬರು ಪವಾಡ ಸದೃಶ ಪಾರು Read More »

ವಿದ್ಯುತ್ ಕಂಬಕ್ಕೆ ಗುದ್ದಿದ ಕಾರು

ವಿಟ್ಲ: ಉಕ್ಕುಡದಲ್ಲಿ ವಿದ್ಯುತ್ ಕಂಬಕ್ಕೆ ಕಾರೊಂದು ಗುದ್ದಿದ ಘಟನೆ ನಡೆದಿದೆ. ಕಾರು ಢಿಕ್ಕಿಯಾದ ರಭಸಕ್ಕೆ ವಿದ್ಯುತ್ ಕಂಬ ಮುರಿದಿದ್ದು, ಕಾರಿನ ಮುಂಭಾಗ ಸಹ ಸಂಪೂರ್ಣ ನಜ್ಜುಗುಜ್ಜಾಗಿದೆ. ಘಟನೆಯಲ್ಲಿ ವಿದ್ಯುತ್ ತಂತಿಗಳು ರಸ್ತೆಗೆ ಬಿದ್ದಿವೆ. ಇದರಿಂದ ಯಾವುದೇ ಅಪಾಯ ಸಂಭವಿಸಿಲ್ಲ. ಜೊತೆಗೆ ಕಾರಿನಲ್ಲಿದ್ದ ಪ್ರಯಾಣಿಕರಿಗೆ ‌ಸಣ್ಣ ಪುಟ್ಟ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.

ವಿದ್ಯುತ್ ಕಂಬಕ್ಕೆ ಗುದ್ದಿದ ಕಾರು Read More »

ಮೆಟ್ರೋ ಸ್ಲ್ಯಾಬ್‌ ಕುಸಿತ ಪ್ರಕರಣ : ಗುತ್ತಿಗೆದಾರನಿಗೆ 6 ಕೋ. ರೂ. ದಂಡ

ಮುಂಬೈಯಲ್ಲಿ ಮೆಟ್ರೋ ಸ್ಲ್ಯಾಬ್‌ ಆಟೋ, ಕಾರಿನ ಮೇಲೆ ಬಿದ್ದು ಓರ್ವ ಸಾವಿಗೀಡಾದ ಘಟನೆ ಮುಂಬೈ: ಉಪನಗರ ಮುಲುಂಡ್‌ ಪ್ರದೇಶದಲ್ಲಿ ಮೆಟ್ರೋ ಸ್ಲ್ಯಾಬ್‌ ಕುಸಿದು ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಪ್ರಕರಣ ಸಂಬಂಧ ಯೋಜನಾ ನಿರ್ದೇಶಕರು, ಗುತ್ತಿಗೆದಾರರು ಸೇರಿ ಐವರನ್ನ ಬಂಧಿಸಲಾಗಿದೆ. ಅಲ್ಲದೇ ಕಾರ್ಯನಿರ್ವಾಹಕ ಇಂಜಿನಿಯರ್‌ನನ್ನು ಅಮಾನತುಗೊಳಿಸಿದ್ದು, ಯೋಜನೆಯಲ್ಲಿ ಭಾಗಿಯಾಗಿರುವ ಗುತ್ತಿಗೆದಾರರು ಮತ್ತು ಸಲಹೆಗಾರರಿಗೆ 6 ಕೋಟಿ ದಂಡ ವಿಧಿಸಿದೆ. ಯೋಜನಾ ನಿರ್ದೇಶಕ ಹರೀಶ್ ಚೌಹಾಣ್, ಇಬ್ಬರು ಯೋಜನಾ ವ್ಯವಸ್ಥಾಪಕರು ಸೇರಿದಂತೆ ಮಿಲನ್ ರೋಡ್ ಬಿಲ್ಡ್‌ಟೆಕ್‌ನ ನಾಲ್ವರು ಉದ್ಯೋಗಿಗಳು ಮತ್ತು ಡಿಬಿ

ಮೆಟ್ರೋ ಸ್ಲ್ಯಾಬ್‌ ಕುಸಿತ ಪ್ರಕರಣ : ಗುತ್ತಿಗೆದಾರನಿಗೆ 6 ಕೋ. ರೂ. ದಂಡ Read More »

ಗೂಗಲ್‌ ಮ್ಯಾಪ್‌ ನಂಬಿ ಗುಂಡಿಗೆ ಬಿದ್ದ ಕಾರು

ಹೆದ್ದಾರಿ ಬಿಟ್ಟು ಒಳ ರಸ್ತೆಗಳಲ್ಲಿ ಹೋಗಿ ಅಪಘಾತ ಉಡುಪಿ: ಗೂಗಲ್‌ ಮ್ಯಾಪ್‌ ಎಡವಟ್ಟಿನಿಂದ ಕಾರೊಂದು ಹೊಳೆಗೆ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಘಟನೆ ಶುಕ್ರವಾರ ರಾತ್ರಿ ಕೋಟ ಸಾೖಬ್ರಕಟ್ಟೆ ಮುಖ್ಯ ರಸ್ತೆಯ ಉಪ್ಲಾಡಿ ಹೊಳೆ ಬದಿಯಲ್ಲಿ ಸಂಭವಿಸಿದೆ. ಕೇರಳ ಮೂಲದ ಕುಟುಂಬವೊಂದು ಕೊಲ್ಲೂರು ಮೂಕಾಂಬಿಕೆ ದರ್ಶನಕ್ಕಾಗಿ ಪ್ರಯಾಣಿಸುತ್ತಿದ್ದು, ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಂಚರಿಸುತ್ತಿದ್ದ ವೇಳೆ ಗೂಗಲ್‌ ಮ್ಯಾಪ್‌ ತೋರಿದ ಡೈವರ್ಶನ್‌ ಅನುಸರಿಸಿ ಬ್ರಹ್ಮಾವರ ಬಳಿ ಬಾರಕೂರು ಮಾರ್ಗವಾಗಿ ಸಾೖಬ್ರಕಟ್ಟೆ ಮೂಲಕ ಕೋಟದತ್ತ ಸಾಗಿತ್ತು. ಉಪ್ಲಾಡಿ ಹೊಳೆ ಸಮೀಪ ತಲುಪಿದಾಗ

ಗೂಗಲ್‌ ಮ್ಯಾಪ್‌ ನಂಬಿ ಗುಂಡಿಗೆ ಬಿದ್ದ ಕಾರು Read More »

ಬಸ್‌ಗೆ ಡಿಕ್ಕಿ ಹೊಡೆದ ಕಾರು : ಐವರು ಯುವಕರು ಸಾವು

ಡಿವೈಡರ್‌ ಹಾರಿ ಎದುರಿನಿಂದ ಬರುತ್ತಿದ್ದ ಬಸ್‌ಗೆ ಡಿಕ್ಕಿ ಹೊಡೆದ ಕಾರು ಬೆಂಗಳೂರು: ನೆಲಮಂಗಲದ ನವಯುಗ ಟೋಲ್ ಸಮೀಪದ ಫ್ಲೈಓವರ್ ಬಳಿ ಡಿವೈಡರ್‌ಗೆ ಹಾರಿ ಕೆಎಸ್‌ಆರ್‌ಟಿಸಿ ಬಸ್‌ಗೆ ಟಾಟಾ ಇಂಡಿಕಾ ಕಾರು ಡಿಕ್ಕಿ ಹೊಡೆದಿದೆ. ಪರಿಣಾಮ ಕಾರಿನಲ್ಲಿದ್ದ ಐವರು ಯುವಕರು ಮೃತಪಟ್ಟಿದ್ದಾರೆ. ನಡುರಾತ್ರಿ 12 ಗಂಟೆ ಸುಮಾರಿಗೆ ಈ ಅಪಘಾತ ನಡೆದಿದ್ದು, ಬಸ್ ಡ್ರೈವರ್, ಕಂಡೆಕ್ಟರ್‌ಗೆ ಸಣ್ಣಪುಟ್ಟ ಗಾಯಗಳಾಗಿವೆ. ಮೃತರನ್ನು ದೊಡ್ಡಬಳ್ಳಾಪುರದ ದುರ್ಗಾ ಪ್ರಸಾದ್ (20), ಕೇಶವ್ (19), ಲಲಿತ್ (22), ಹರ್ಷಿತ್ (20) ಎಂದು ಗುರುತಿಸಲಾಗಿದೆ. ತುಮಕೂರು

ಬಸ್‌ಗೆ ಡಿಕ್ಕಿ ಹೊಡೆದ ಕಾರು : ಐವರು ಯುವಕರು ಸಾವು Read More »

ಬೆಳ್ತಂಗಡಿ : ಗ್ಯಾಸ್‌ ಸೋರಿಕೆಯಾಗಿ ಅಂಗಡಿ ಬೆಂಕಿಗಾಹುತಿ

ಬಲೂನ್‌ಗಳಿಗೆ ಗ್ಯಾಸ್ ತುಂಬಿಸುವಾಗ ಹೀಲಿಯಂ ಗ್ಯಾಸ್ ಸೋರಿಕೆ ಬೆಳ್ತಂಗಡಿ : ಹೀಲಿಯಂ ಗ್ಯಾಸ್ ಸೋರಿಕೆಯಾದ ಪರಿಣಾಮ ಬೆಂಕಿಹತ್ತಿಕೊಂಡು ಅಂಗಡಿ ಸುಟ್ಟು ಭಸ್ಮವಾದ ಘಟನೆ ಬೆಳ್ತಂಗಡಿಯಲ್ಲಿ ಶನಿವಾರ ಬೆಳಗ್ಗೆ ನಡೆದಿದೆ. ಬೆಳ್ತಂಗಡಿ ನಗರದ ಸಂತೆಕಟ್ಟೆಯಲ್ಲಿರುವ ಹೇರಾಜೆ ಕಾಂಪ್ಲೆಕ್ಸ್‌ನಲ್ಲಿ ಮೊದಲ ಮಹಡಿಯ ಮೊಹಮ್ಮದ್ ಸಮೀಲ್ ಎಂಬವರ ಮಾಲೀಕತ್ವದ KAF ಕ್ರಿಯೇಟಿವ್ ಅರ್ಟ್ & ಕ್ರಾಫ್ಟ್ ಸ್ಟೋರ್‌ನಲ್ಲಿ ಇಬ್ಬರು ಕೆಲಸದವರು ಫೆ.14ರಂದು ಬೆಳಗ್ಗೆ 7.30ಕ್ಕೆ ಕಾರ್ಯಕ್ರಮವೊಂದಕ್ಕೆ ಬಲೂನ್‌ಗಳಿಗೆ ಗ್ಯಾಸ್ ತುಂಬಿಸುವಾಗ ಹೀಲಿಯಂ ಗ್ಯಾಸ್ ಸೋರಿಕೆಯಾಗಿ ಬೆಂಕಿ ಉಂಟಾಗಿ ಸಂಪೂರ್ಣ ಸುಟ್ಟು ಹೋಗಿದೆ.

ಬೆಳ್ತಂಗಡಿ : ಗ್ಯಾಸ್‌ ಸೋರಿಕೆಯಾಗಿ ಅಂಗಡಿ ಬೆಂಕಿಗಾಹುತಿ Read More »

ಪಿಯುಸಿ ವಿದ್ಯಾರ್ಥಿಗಳ ಜಾಲಿರೈಡ್‌ ಭೀಕರ ಅಪಘಾತಕ್ಕೆ ಕಾರಣ

ಅತಿವೇಗ, ನಿರ್ಲಕ್ಷ್ಯದ ಚಾಲನೆಗೆ ಬೆಳ್ಳಂಬೆಳಗ್ಗೆ 7 ಜೀವಗಳು ಬಲಿ ಬೆಂಗಳೂರು: ಹೊಸಕೋಟೆ ತಾಲೂಕಿನ ಎಂ ಸತ್ಯವರ ಗ್ರಾಮದ ಬಳಿ ಶುಕ್ರವಾರ ಬೆಳಗ್ಗೆ ಸಂಭವಿಸಿದ ಭೀಕರ ಸರಣಿ ಅಪಘಾತ ಬೆಂಗಳೂರಿನ ಕಾಲೇಜೊಂದರ ಪಿಯುಸಿ ವಿದ್ಯಾರ್ಥಿಗಳ ಜಾಲಿ ರೈಡ್, ಅತಿ ವೇಗದ ಚಾಲನೆ ಕಾರಣ ಎಂಬುದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ. ಎಕ್ಸ್‌ಯುವಿ 700 ಕಾರಿನಲ್ಲಿ ಬಂದಿದ್ದ ಆರು ವಿದ್ಯಾರ್ಥಿಗಳು ಬೆಂಗಳೂರಿನ ಕಾಲೇಜೊಂದರಲ್ಲಿ ಪಿಯುಸಿ ವ್ಯಾಸಂಗ ಮಾಡುತ್ತಿದ್ದವರು ಎಂಬುದು ಗೊತ್ತಾಗಿದೆ. ನೂತನ ಹೆದ್ದಾರಿಯಲ್ಲಿ ಲಾಂಗ್ ಡ್ರೈವ್‌ಗೆ ಬಂದಿದ್ದ ವೇಳೆ ಅತಿವೇಗವಾಗಿ

ಪಿಯುಸಿ ವಿದ್ಯಾರ್ಥಿಗಳ ಜಾಲಿರೈಡ್‌ ಭೀಕರ ಅಪಘಾತಕ್ಕೆ ಕಾರಣ Read More »

ಪಿಕಪ್‌ ಪಲ್ಟಿಯಾಗಿ ಚಾಲಕ ಸಾವು

ಉಪ್ಪಿನಂಗಡಿ: ತೆಕ್ಕಾರು ಗ್ರಾಮದ ಕನರಾಜೆ ಎಂಬಲ್ಲಿ ಪಿಕಪ್ ವಾಹನ ಪಲ್ಟಿಯಾಗಿ ಚಾಲಕ ಮೃತಪಟ್ಟ ಘಟನೆ ಫೆ.11ರಂದು ನಡೆದಿದೆ. ಮೃತ ವ್ಯಕ್ತಿ ಅಳಕೆ ನಿವಾಸಿ ಪುಟ್ಟ (31) ಎಂಬವರಾಗಿದ್ದಾರೆ. ಸೆಂಟ್ರಿಂಗ್ ಕೆಲಸದ ಸಾಮಾಗ್ರಿಗಳನ್ನು ಸಾಗಿಸುವ ವೇಳೆ ಪಿಕಪ್‌ ವಾಹನ ಪಲ್ಟಿಯಾಗಿದೆ. ಮೇಲ್ಬಾಗದ ರಸ್ತೆಯಿಂದ ವಾಹನ ಕೆಳಭಾಗದ ರಸ್ತೆಗೆ ಪಿಕಪ್‌ ಉರುಳಿ ಬಿದ್ದಿದ್ದು, ಚಾಲಕ ಅಳಕ್ಕೆ ನಿವಾಸಿ ಹರಿಶ್ಚಂದ್ರ ಎಂಬವರ ಮಗ ಹೇಮಚಂದ್ರ (32) ಎಂಬವರು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಹಾಗೂ ಪಿಕಪ್‍ನಲ್ಲಿದ್ದ ಉಮ್ಮರಬ್ಬ (51) ಎಂಬವರು ಗಾಯಗೊಂಡು

ಪಿಕಪ್‌ ಪಲ್ಟಿಯಾಗಿ ಚಾಲಕ ಸಾವು Read More »

ಬಸ್ ಗುದ್ದಿ ಬೈಕ್ ಸವಾರ ಸಾವು, ಸಹಸವಾರನಿಗೆ ಗಾಯ

ತುಮಕೂರು: ದ್ವಿಚಕ್ರ ವಾಹನ ಮತ್ತು ಖಾಸಗಿ ಬಸ್ ಒಂದರ ನಡುವೆ ಅಪಘಾತ‌ ಸಂಭವಿಸಿದ್ದು, ದ್ವಿಚಕ್ರ ಸವಾರ ಮೃತಪಟ್ಟ‌ ಘಟನೆ ಸಾತಟ್ಟದಲ್ಲಿ ‌ನಡೆದಿದೆ. ಮಿಟ್ರಳ್ಳಿಯ ಗಂಗಯ್ಯ (60) ಎಂಬವರೇ ಮೃತ ದುರ್ದೈವಿ. ಸಹಸವಾರ ಲಿಂಗಣ್ಣ ಎಂಬವರಿಗೆ ‌ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಅವರನ್ನು ತುಮಕೂರು ಜಿಲ್ಲಾಸ್ಪತ್ರೆಗೆ ‌ದಾಖಲು ಮಾಡಲಾಗಿದೆ. ಕ್ಯಾತಸಂದ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಸ್ ಗುದ್ದಿ ಬೈಕ್ ಸವಾರ ಸಾವು, ಸಹಸವಾರನಿಗೆ ಗಾಯ Read More »

error: Content is protected !!
Scroll to Top