ಅಪಘಾತ

ರಾಜಸ್ಥಾನದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ: ಆರು ಮಂದಿ ಮೃತ್ಯು

ನವದೆಹಲಿ: ರಾಜಸ್ಥಾನದ ಬುಂದಿ ಜಿಲ್ಲೆಯಲ್ಲಿ ಇಂದು ಬೆಳಗ್ಗೆ ಕಾರೊಂದು  ಅಪರಿಚಿತ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಆರು ಯಾತ್ರಾರ್ಥಿಗಳು ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಜೈಪುರ ರಾಷ್ಟ್ರೀಯ ಹೆದ್ದಾರಿಯ ಹಿಂದೋಲಿ ಬಳಿ ಇಂದು ಮುಂಜಾನೆ 4:30 ರ ಸುಮಾರಿಗೆ ಯಾತ್ರಿಕರು – ಉತ್ತರ ಪ್ರದೇಶದ ದೇವಾಸ್ ನಿವಾಸಿಗಳು – ಸಿಕಾರ್ ಜಿಲ್ಲೆಯ ಖತು ಶ್ಯಾಮ್ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಲು ಹೋಗುತ್ತಿದ್ದಾಗ ಅಪಘಾತ ಸಂಭವಿಸಿದೆ. ಮಾರುತಿ ಸುಜುಕಿ ಇಕೋ ಕಾರಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದು […]

ರಾಜಸ್ಥಾನದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ: ಆರು ಮಂದಿ ಮೃತ್ಯು Read More »

ವಿದ್ಯುತ್ ಶಾಕ್‍ ಗೆ ಇಲೆಕ್ಟ್ರಿಷಿಯನ್ ಮೃತ್ಯು

ಬಂಟ್ವಾಳ : ವಿದ್ಯುತ್ ಶಾಕ್‍ ಗೆ ಒಳಗಾಗಿ ಎಲೆಕ್ಟ್ರಿಷಿಯನ್ ಒಬ್ಬರು ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಉಳಿ ಗ್ರಾಮದ ಉರ್ಕುಂಜ ಎಂಬಲ್ಲಿ ನಡೆದಿದೆ. ಉಳಿ ಗ್ರಾಮದ ನೆಕ್ಕಿಲ ಪಲೈ ನಿವಾಸಿ ಸದಾನಂದ ಗೌಡರ ಪುತ್ರ ದೇವದಾಸ್ (35) ವಿದ್ಯುತ್‍ ಶಾಕ್‍ ನಿಂದ ಮೃತಪಟ್ಟವರು. ದೇವದಾಸ್ ಉಳಿ ಗ್ರಾಮದ, ಉರ್ಕುಂಜ ಎಂಬಲ್ಲಿ ಮನೆಯೊಂದರ ಹೊರಗಡೆಯಲ್ಲಿದ್ದ ಮೈನ್ ಸ್ವಿಚ್ ಬಳಿ ಕೆಲಸ ಮಾಡುತ್ತಿರುವಾಗ ಆಕಸ್ಮಿಕವಾಗಿ ವಿದ್ಯುತ್ ಪ್ರಹರಿಸಿದೆ. ಪರಿಣಾಮ ಕೆಳಗೆ ಬಿದ್ದು ಗಾಯಗೊಂಡಿದ್ದರು ಎನ್ನಲಾಗಿದೆ. ತಕ್ಷಣ ಸ್ಥಳದಲ್ಲಿದ್ದವರು ಗಾಯಾಳುವನ್ನು ಬಂಟ್ವಾಳ

ವಿದ್ಯುತ್ ಶಾಕ್‍ ಗೆ ಇಲೆಕ್ಟ್ರಿಷಿಯನ್ ಮೃತ್ಯು Read More »

ಚಾಲಕನ ನಿಯಂತ್ರಣ ತಪ್ಪಿ ಚರುಂಬುರಿ ಸ್ಟಾಲ್‍ ಗೆ ನುಗ್ಗಿದ ಕಾರು | ಇಬ್ಬರಿಗೆ ಗಾಯ

ಪುತ್ತೂರು : ಚಾಲಕ ತನ್ನ ಕಾರನ್ನು ರಿವರ್ಸ್ ತೆಗೆಯುವಾಗ ಸಂದರ್ಭ ನಿಯಂತ್ರಣ ತಪ್ಪಿ ಸ್ಟಾಲ್‍ ಒಂದಕ್ಕೆ ನುಗ್ಗಿದ ಪರಿಣಾಮ ಇಬ್ಬರು ಗಾಯಗೊಂಡ ಘಟನೆ ಕಿಲ್ಲೆ ಮೈದಾನದಲ್ಲಿ ನಡೆದಿದೆ. ಚುರುಮುರಿ ಅಂಗಡಿಯಲ್ಲಿದ್ದ ವ್ಯಕ್ತಿ ಹಾಗೂ ಇನ್ನೊಬ್ಬರು ಗಾಯಗೊಂಡವರು ಅವರಿಬ್ಬರು ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಗಣೇಶ ಉತ್ಸವದ ಪ್ರಯುಕ್ತ ತಾತ್ಕಲಿಕ ನೆಲೆಯಲ್ಲಿ ತೆರೆದಿದ್ದ ಅಂಗಡಿಗೆ  ಕಾರು ಢಿಕ್ಕಿ ಹೊಡೆದಿದ್ದು,  ಅಂಗಂಡಿ ಜಖಂ ಆಗಿದೆ. ಗಾಯಾಳುಗಳಿಬ್ಬರನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾಸರಗೋಡು ಮೂಲದ ವೆಂಕಟರಮಣ ಭಟ್ ಎಂಬವರಿಗೆ ಸೇರಿದ ಕೇರಳ

ಚಾಲಕನ ನಿಯಂತ್ರಣ ತಪ್ಪಿ ಚರುಂಬುರಿ ಸ್ಟಾಲ್‍ ಗೆ ನುಗ್ಗಿದ ಕಾರು | ಇಬ್ಬರಿಗೆ ಗಾಯ Read More »

ಸ್ಕೂಟರ್ ಅಪಘಾತ | ಆಸ್ಪತ್ರೆಗೆ ದಾಖಲಾಗಿದ್ದ ಕೀರ್ತನ್ ಗೌಡ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

ಪುತ್ತೂರು: ಸ್ಕೂಟರ್ ಅಪಘಾತದಲ್ಲಿ ಗಂಭೀರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಕೆಯೂರು ಗ್ರಾಮದ ಎರಕ್ಕಳ ಬೆಳಿಯಪ್ಪ ಗೌಡರವರ ಪುತ್ರ, ವಿಶ್ವ ಹಿಂದೂ ಪರಿಷದ್ ಬಜರಂಗದಳದ ವೀರಾಂಜನೇಯ ಘಟಕ ತಿಂಗಳಾಡಿಯ ಸಹ ಗೋ ರಕ್ಷಕ ಪ್ರಮುಖ್ ಕೀರ್ತನ್ ಗೌಡ (22) ಮೃತಪಟ್ಟವರು. ಸೆ.10 ರಂದು ಮಧ್ಯರಾತ್ರಿ ಕೆದಂಬಾಡಿ ಗ್ರಾಮದ ತ್ಯಾಗರಾಜನಗರದಲ್ಲಿ ಸ್ಕೂಟರ್ ಅಪಘಾತ ಸಂಭವಿಸಿದ್ದು, ಗಂಭೀರ ಗಾಯಗೊಂಡ ಕೀರ್ತನ್ ರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ

ಸ್ಕೂಟರ್ ಅಪಘಾತ | ಆಸ್ಪತ್ರೆಗೆ ದಾಖಲಾಗಿದ್ದ ಕೀರ್ತನ್ ಗೌಡ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು Read More »

ಖಾಸಗಿ ಆಸ್ಪತ್ರೆಯ ವಿದ್ಯುತ್ ಬೋರ್ಡ್ ನಲ್ಲಿ ಶಾರ್ಟ್ ಸರ್ಕ್ಯೂಟ್

ಪುತ್ತೂರು: ಶಾರ್ಟ್ ಸರ್ಕ್ಯೂಟ್ ನಿಂದ ಖಾಸಗೀ ಆಸ್ಪತ್ರೆಯೊಂದರಲ್ಲಿ ಬೆಂಕಿ ಕಾಣಿಸಿಕೊಂಡು, ಅಗ್ನಿಶಾಮಕ ದಳದವರು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬೊಳುವಾರಿನಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ಬೆಳಗ್ಗಿನ ಜಾವ ಬೆಂಕಿ ಕಾಣಿಸಿಕೊಂಡಿದೆ. ವಿದ್ಯುತ್ ಮೀಟರ್ ಬೋರ್ಡ್‌ನ ಲ್ಲಿ ಶಾರ್ಟ್ ಸರ್ಕ್ಯೂಟ್ ಆದ ಪರಿಣಾಮ ಜಂಕ್ಷನ್ ಬಾಕ್ಸ್ ಸಂಪೂರ್ಣ ಸುಟ್ಟು ಕರಕಲಾಗಿದೆ. ಆಸ್ಪತ್ರೆಯ ತುಂಬಾ ಹೊಗೆ ತುಂಬಿಕೊಂಡಿದ್ದು, ತಕ್ಷಣ ಆಗ್ನಿಶಾಮಕ ದಳದವರು ಆಗಮಿಸಿ ಮುನ್ನೆಚ್ಚರಿಕೆಯನ್ನು ತೆಗೆದುಕೊಂಡಿದ್ದು, ರೋಗಿಗಳಿಗೆ ಯಾವುದೇ ಸಮಸ್ಯೆಯಾಗಿಲ್ಲ ಎಂದು ಹೇಳಲಾಗಿದೆ. ಕಾರ್ಯಚರಣೆಯಲ್ಲಿ ಅಗ್ನಿಶಾಮಕ ಠಾಣಾಧಿಕಾರಿ ಶಂಕರ ಸಹಾಯಕ, ಪ್ರಮುಖ

ಖಾಸಗಿ ಆಸ್ಪತ್ರೆಯ ವಿದ್ಯುತ್ ಬೋರ್ಡ್ ನಲ್ಲಿ ಶಾರ್ಟ್ ಸರ್ಕ್ಯೂಟ್ Read More »

ರಿಕ್ಷಾ-ದ್ವಿಚಕ್ರ ವಾಹನ ಡಿಕ್ಕಿ : ದ್ವಿಚಕ್ರ ವಾಹನ ಸವಾರ ಮೃತ್ಯು

ಸುಳ್ಯ : ರಿಕ್ಷಾ ಹಾಗೂ ದ್ವಿಚಕ್ರ ವಾಹನದ ನಡುವೆ ಡಿಕ್ಕಿ ಸಂಭವಿಸಿ ದ್ವಿಚಕ್ರ ವಾಹನ ಸವಾರ ಮೃತಪಟ್ಟ ಘಟನೆ ಪೆರಾಜೆ ಬಳಿಯ ಕಲ್ಮರ್ಪೆ ಎಂಬಲ್ಲಿ ನಡೆದಿದೆ. ಚೆಂಬು ಗ್ರಾಮದ ಕುದ್ರೆಪಾಯ ಬೊಳ್ಳೂರು ಆನಂದ ಎಂಬವರ ಪುತ್ರ ನವೀನ್ (23) ಮೃತಪಟ್ಟವರು. ನವೀನ್ ಖಾಸಗಿ ಕಾಲೇಜಿನ ಐಟಿಐ ವಿದ್ಯಾರ್ಥಿಯಾಗಿದ್ದಾರೆ ಎಂದು ತಿಳಿದುಬಂದಿದೆ

ರಿಕ್ಷಾ-ದ್ವಿಚಕ್ರ ವಾಹನ ಡಿಕ್ಕಿ : ದ್ವಿಚಕ್ರ ವಾಹನ ಸವಾರ ಮೃತ್ಯು Read More »

ಭೀಕರ ಕಾರು ಅಪಘಾತ | ನವವಿವಾಹಿತೆ ಮೃತ್ಯು

ಬಿ.ಸಿ.ರೋಡ್ : ನವ ದಂಪತಿಗಳು ಇಬ್ಬರು ಪ್ರಯಾಣಿಸುತ್ತಿದ್ದ ಕಾರು  ಬೀಕರ  ಅಪಘಾತದಲ್ಲಿ ನವವಿವಾಹಿತೆ ಮೃತಪಟ್ಟು, ಪತಿ ಗಂಭೀರವಾಗಿ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ ಮಂಗಳೂರು ಬೆಂಗಳೂರು ರಸ್ತೆಯ ಬಂಟ್ವಾಳದ ತಲಪಾಡಿ ಎಂಬಲ್ಲಿ ನಡೆದಿದೆ. ಪೆರ್ನೆ ಸಮೀಪದ ಒಡ್ಯದಗಯ ನಿವಾಸಿ ಅನಿಶ್ ಕೃಷ್ಣ ಎಂಬವರ ಪತ್ನಿ ಮಾನಸ  ಸಾವನ್ನಪ್ಪಿದ ನವವಿವಾಹಿತೆ. ಘಟನೆಯಿಂದ ಗಂಭೀರವಾಗಿ ಗಾಯಗೊಂಡ ಅನಿಶ್ ಕೃಷ್ಣ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.  ಬಿಸಿರೋಡಿನ ಕಡೆಯಿಂದ ‌ಮಂಗಳೂರು ಕಡೆಗೆ ಪ್ರಯಾಣಿಸುತ್ತಿದ್ದ ದವದಂಪತಿಗಳ ಆಲ್ಟೋ ಕಾರು ನಿಯಂತ್ರಣ ಕಳೆದುಕೊಂಡು

ಭೀಕರ ಕಾರು ಅಪಘಾತ | ನವವಿವಾಹಿತೆ ಮೃತ್ಯು Read More »

ಚಾಲಕನ ನಿಯಂತ್ರಣ ತಪ್ಪಿ ಬೈಕ್‍ ಪಲ್ಟಿ | ಸವಾರರಿಬ್ಬರು ಮೃತ್ಯು

ಮಂಗಳೂರು: ಬೈಕೊಂದು ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಪರಿಣಾಮ ಬೈಕ್‍ ಸವಾರರಿಬ್ಬರು ಮೃತಪಟ್ಟ ಘಟನೆ ಮಂಗಳೂರಿನ ಯೆಯ್ಯಾಡಿ ಸಮೀಪದ ಹರಿಪದವು ಎಂಬಲ್ಲಿ ಗುರುವಾರ ತಡರಾತ್ರಿ ನಡೆದಿದೆ. ಉಪ್ಪಿನಂಗಡಿಯ ಚೇತನ್ (24)  ಹಾಗೂ ಕೋಡಿಕಲ್‌ ನಿವಾಸಿ ಕಾಶೀನಾಥ್ (17) ಮೃತಪಟ್ಟವರು. ಬೈಕ್‍ ನಲ್ಲಿ ತೆರಳುತ್ತಿದ್ದಾಗ ಲಾರಿಯೊಂದಕ್ಕೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋದಾಗ ನಿಯಂತ್ರಣ ತಪ್ಪಿ ಬೈಕ್ ಉರುಳಿಬಿದ್ದಿದೆ. ಪರಿಣಾಮ ರಸ್ತೆಗೆಸೆಯಲ್ಪಟ್ಟ ಸವಾರರಿಬ್ಬರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ.

ಚಾಲಕನ ನಿಯಂತ್ರಣ ತಪ್ಪಿ ಬೈಕ್‍ ಪಲ್ಟಿ | ಸವಾರರಿಬ್ಬರು ಮೃತ್ಯು Read More »

ತೋಡಿಗೆ ಬಿದ್ದು ಕೂಲಿ ಕಾರ್ಮಿಕ ಮೃತ್ಯು

ಕಡಬ: ಕೂಲಿ ಕಾರ್ಮಿಕರೊಬ್ಬರು ನೀರು ತುಂಬಿದ ತೋಡಿಗೆ ಬಿದ್ದು ಮೃತಪಟ್ಟ ಘಟನೆ ನೂಜಿಬಾಳ್ತಿಲ ಗ್ರಾಮದ ಪೇರಡ್ಕದಲ್ಲಿನಡೆದಿದೆ. ಮೀನಾಡಿ ಸಮೀಪದ ದೋಳ ನಿವಾಸಿ ಉಮೇಶ (35) ಮೃತಪಟ್ಟವರು ಕೂಲಿ ಕಾರ್ಮಿಕರಾಗಿದ್ದ ಉಮೇಶ ಬೆಳಗ್ಗೆ ಕೆಲಸಕ್ಕೆ ಹೋಗುತ್ತಿದ್ದಾಗ ಕಾಲು ಜಾರಿ ನೀರಿಗೆ ಬಿದ್ದು ನಾಪತ್ತೆಯಾಗಿದ್ದರು. ನಿನ್ನೆ ಸಂಜೆ ವೇಳೆ ಒಂದು ಕಿ.ಮೀ. ದೂರದ ಪೇರಡ್ಕ ಸೇತುವೆ ಬಳಿ ಮೃತದೇಹ ಪತ್ತೆಯಾಗಿದೆ

ತೋಡಿಗೆ ಬಿದ್ದು ಕೂಲಿ ಕಾರ್ಮಿಕ ಮೃತ್ಯು Read More »

ಭೀಕರ ಅಪಘಾತ : ನಾಲ್ವರು ಭಾರತೀಯರು ಜೀವಂತ ದಹನ

ವಾಷಿಂಗ್ಟನ್‌: ಅಮೆರಿಕದ ಟೆಕ್ಸಾಸ್‌ನಲ್ಲಿ ಐದು ವಾಹನಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಓರ್ವ ಮಹಿಳೆ ಸೇರಿ ನಾಲ್ವರು ಭಾರತೀಯರು ಜೀವಂತ ಸುಟ್ಟು ಕರಕಲಾಗಿದ್ದಾರೆ.ಶುಕ್ರವಾರ ಅರ್ಕಾನ್ಸಾಸ್‌ನ ಬೆಂಟನ್‌ವಿಲ್ಲೆಗೆ ತೆರಳುತ್ತಿದ್ದಾಗ ದುರಂತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಕಾರು ಹೊತ್ತಿ ಉರಿದು ಒಳಗಿದ್ದವರು ಜೀವಂತ ದಹನವಾಗಿದ್ದಾರೆ. ಮೃತರ ಗುರುತು ಖಚಿತಪಡಿಸಲು ಅಧಿಕಾರಿಗಳು ಡಿಎನ್ಎ ಪರೀಕ್ಷೆ ಮಾಡಿಸಬೇಕಾಯಿತು.ಮೃತರನ್ನು ಆರ್ಯನ್ ರಘುನಾಥ್ ಓರಂಪಾಟಿ, ಫಾರೂಕ್ ಶೇಕ್, ಲೋಕೇಶ್ ಪಾಲಾಚಾರ್ಲ ಮತ್ತು ದರ್ಶಿನಿ ವಾಸುದೇವನ್ ಎಂದು ಗುರುತಿಸಲಾಗಿದೆ.ಓರಂಪತಿ ಮತ್ತು ಅವರ ಸ್ನೇಹಿತ ಶೇಕ್ ಡಲ್ಲಾಸ್‌ನಲ್ಲಿರುವ ತನ್ನ

ಭೀಕರ ಅಪಘಾತ : ನಾಲ್ವರು ಭಾರತೀಯರು ಜೀವಂತ ದಹನ Read More »

error: Content is protected !!
Scroll to Top