ಅಪಘಾತ

ಕೊಡಗು ಜಿಲ್ಲೆಯ ಕೆಲವೆಡೆ ಲಘು ಭೂಕಂಪನ ಅನುಭವ !

ಮಡಿಕೇರಿ: ಕೊಡಗು ಜಿಲ್ಲೆಯ ಹಲವೆಡೆ ಬುಧವಾರ ಬೆಳಗ್ಗೆ ಭೂಕಂಪನದ ಅನುಭವವಾಗಿದೆ.  ಮಡಿಕೇರಿ ತಾಲೂಕಿನ ಮದೆನಾಡು, 2ನೇ ಮೊಣ್ಣಂಗೇರಿ ವ್ಯಾಪ್ತಿಯಲ್ಲಿ ಭೂಕಂಪನ ಅನುಭವವಾಗಿದೆ. ಬೆಳಗ್ಗೆ, 10.50 ರ ಸುಮಾರಿಗೆ ತೀರಾ ಸಣ್ಣ ಪ್ರಮಾಣದಲ್ಲಿ ಭೂಮಿ ಕಂಪಿಸಿದ ಅನುಭವವಾಗಿದೆ ಎಂದು ಗ್ರಾಮಸ್ಥರು ಮಾಹಿತಿ ನೀಡಿದ್ದಾರೆ. ಈ ಕುರಿತು ಭೂ ವಿಜ್ಞಾನಿಗಳಿಗೆ ಮಾಹಿತಿ ನೀಡಲು ಗ್ರಾಮ ಪಂಚಾಯತ್ ಅಧಿಕಾರಿಗಳು. ಮುಂದಾಗಿದ್ದಾರೆ. ವಿಜ್ಞಾನಿಗಳ ಶೋಧನೆಯ ಆಧಾರದಲ್ಲಿ ಭುಕಂಪನ ಆಗಿದೆಯೇ, ಎಷ್ಟರಮಟ್ಟಿಗೆ ಆಗಿದೆ ಎಂಬ ಮಾಹತಿ ತಿಳಿಯಬೇಕಿದೆ.

ಕೊಡಗು ಜಿಲ್ಲೆಯ ಕೆಲವೆಡೆ ಲಘು ಭೂಕಂಪನ ಅನುಭವ ! Read More »

ಬಸ್‍-ದ್ವಿಚಕ್ರ ವಾಹನ ಅಪಘಾತ : ದ್ವಿಚಕ್ರ ವಾಹನ ಸವಾರ ಮೃತ್ಯು

ಕಡಬ: ಸ್ಕೂಟಿ ಹಾಗೂ ಸರಕಾರಿ ಬಸ್‍ ನಡುವೆ ನಡೆದ ಅಪಘಾತದಲ್ಲಿ ಸ್ಕೂಟಿ ಸವಾರ ಮೃತಪಟ್ಟ ಘಟನೆ ಉಪ್ಪಿನಂಗಡಿ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕೈಕಂಬ ಬಳಿ ಸೋಮವಾರ ನಡೆದಿದೆ. ಬಿಳಿನೆಲೆ ಗ್ರಾಮದ ಚೇರು ನಿವಾಸಿ ದಿ.ವಿಶ್ವನಾಥ ಎಂಬವರ ಪುತ್ರ ವಿನ್ಯಾಸ್ (24) ಮೃತಪಟ್ಟ ಸ್ಕೂಟಿ ಸವಾರ. ಸುಬ್ರಹ್ಮಣ್ಯದಿಂದ ಕಡಬ ಕಡೆಗೆ ತೆರಳುತ್ತಿದ್ದ ಬಸ್ ಹಾಗೂ ಕೈಕಂಬ ಕಡೆಗೆ ತೆರಳುತ್ತಿದ್ದ ಸ್ಕೂಟರ್ ನಡುವೆ ಬಿಳಿನೆಲೆ ಗ್ರಾಮದ ಕೈಕಂಬ ಕೋಟೆಹೊಳೆ ಬಳಿ ಅಪಘಾತ ಸಂಭವಿಸಿದೆ. ಗಂಭೀರ ಗಾಯಗೊಂಡಿದ್ದ ವಿನ್ಯಾಸ್ ಆಸ್ಪತ್ರೆಗೆ ಸಾಗಿಸುವ ದಾರಿ

ಬಸ್‍-ದ್ವಿಚಕ್ರ ವಾಹನ ಅಪಘಾತ : ದ್ವಿಚಕ್ರ ವಾಹನ ಸವಾರ ಮೃತ್ಯು Read More »

ಸ್ಕೂಟರ್ ಗೆ ಕಾರು ಡಿಕ್ಕಿ | ಶಿಕ್ಷಕಿಯ ದುರ್ಮರಣ

ಮೂಡಬಿದ್ರೆ : ಕಾರೊಂದು ಸ್ಕೂಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಚಾಲಕಿ  ಶಿಕ್ಷಕಿ ಸಾವನಪ್ಪಿದ ಘಟನೆ ಮೂಡುಬಿದ್ರಿ ರಾಜ್ಯ ಹೆದ್ದಾರಿಯ ಶಿರ್ತಾಡಿ ಸೇತುವೆ ಬಳಿ ಘಟನೆ ನಡೆದಿದೆ.   ಮೃತರನ್ನು ಮೂಡುಬಿದ್ರಿ ನಾಗರಕಟ್ಟೆಯ ನಿವಾಸಿಯಾಗಿದ್ದು, ಶಿರ್ತಾಡಿ ಹೋಲಿ ಏಂಜಲ್ಸ್ ಖಾಸಗಿ ಶಾಲೆಯ ಶಿಕ್ಷಕಿಯಾಗಿದ್ದ ಸುಜಯ  ಭಂಡಾರಿ (35) ಎನ್ನಲಾಗಿದೆ. ಶುಕ್ರವಾರ ಸಂಜೆ ವೇಳೆಗೆ ತನ್ನ ಕರ್ತವ್ಯ ಮುಗಿಸಿ ಮೂಡಬಿದ್ರೆ ನಾಗರಕಟ್ಟೆಯಲ್ಲಿರುವ ಮನೆಗೆ ಆಕ್ಟಿವದಲ್ಲಿ ಹೋಗುತ್ತಿದ್ದರು. ಶಿರ್ತಾಡಿ ಸೇತುವೆ ಬಳಿ ಎದುರುಗಡೆಯಿಂದ ಅತೀ ವೇಗವಾಗಿ ಬಂದ ಕಾರು

ಸ್ಕೂಟರ್ ಗೆ ಕಾರು ಡಿಕ್ಕಿ | ಶಿಕ್ಷಕಿಯ ದುರ್ಮರಣ Read More »

ಎರಡು ಬೈಕ್ ಗಳ ನಡುವೆ ಡಿಕ್ಕಿ | ನಾಲ್ವರ ದುರ್ಮರಣ

ಕಲಬುರಗಿ : ಎರಡು ಬೈಕ್‌ಗಳು ಪರಸ್ಪರ ಮುಖಾಮುಖಿಯಾಗಿ ಡಿಕ್ಕಿ ಹೊಡೆದು  ನಾಲ್ವರು ಸಾವನ್ನಪ್ಪಿರುವ ಘಟನೆ ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಆಬಾಳ ಗ್ರಾಮದ ಬಳಿ ಸಂಭವಿಸಿದೆ. ಈ ದುರ್ಘಟನೆಯಲ್ಲಿ ಮೃತಪಟ್ಟ ಯುವಕರನ್ನು ಸಿದ್ದು, ಸುರೇಶ್ ರೆಡ್ಡಿ, ಮಲ್ಲು ಪೂಜಾರಿ ಮತ್ತು ಪ್ರಕಾಶ್ ಪೂಜಾರಿ ಎನ್ನಲಾಗಿದೆ. ಸೇಡಂನಿಂದ ಆಬಾಳ್ ಕಡೆ ಹೊರಟಿದ್ದ ಒಂದು ಬೈಕ್​​ಗೆ ಎದುರಿಗೆ ಬಂದ ಮತ್ತೊಂದು ಬೈಕ್​​ ಡಿಕ್ಕಿ ಹೊಡೆದಿವೆ. ಘಟನಾ ಸ್ಥಳಕ್ಕೆ ಧಾವಿಸಿದ ಸೇಡಂ ಠಾಣೆಯ ಪೊಲೀಸರು ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಎರಡು ಬೈಕ್ ಗಳ ನಡುವೆ ಡಿಕ್ಕಿ | ನಾಲ್ವರ ದುರ್ಮರಣ Read More »

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೆ ಏರಿದ ಕಾರು ಪಲ್ಟಿ

ಮಂಗಳೂರು : ವೇಗವಾಗಿ ಚಲಿಸುತ್ತಿದ್ದ ಬಲೆನೊ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‍ ಮೇಲೆ ಏರಿ ಪಲ್ಟಿಯಾದ ಘಟನೆ ಮಂಗಳೂರು ಬೆಂದೂರ್ ವೆಲ್ ನ ಬಲ್ಮಠ ಬಳಿ ತಡ ರಾತ್ರಿ ಸಂಭವಿಸಿದೆ. ರಾತ್ರಿ ವೇಳೆ ಖಾಲಿ ಇರುವ ರಸ್ತೆಯಲ್ಲಿ ಅಪಘಾತವಾಗಿದ್ದರಿಂದ,  ಕಾರು ಡಿವೈಡರ್ ಮೇಲೆ ಏರಿ ವಿರುದ್ಧ ದಿಕ್ಕಿನ ರಸ್ತೆಗೆ ಬಿದ್ದರೂ  ಸಂಭವಿಸಬಹುದಾದ ದೊಡ್ಡ ಅನಾಹುತ ತಪ್ಪಿದೆ ಎನ್ನಲಾಗಿದೆ. ಕಾರಿನಲ್ಲಿದ್ದವರ  ಮಾಹಿತಿ  ತಿಳಿಯಬೇಕಿದೆ.

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೆ ಏರಿದ ಕಾರು ಪಲ್ಟಿ Read More »

ಬೈಕ್‍ ಗೆ ಪಿಕಪ್‍ ಡಿಕ್ಕಿ : ಬೈಕ್‍ ಸವಾರ ಮೃತ್ಯು

ಪುತ್ತೂರು: ಮಾಣಿ ಮೈಸೂರು ಹೆದ್ದಾರಿಯ ಮುಕ್ರಂಪಾಡಿಯಲ್ಲಿ ದ್ವಿಚಕ್ರವಾಹನಕ್ಕೆ ಪಿಕಪ್ ಡಿಕ್ಕಿಹೊಡೆದು ಪರಾರಿಯಾಗಿದ್ದು ಪರಿಣಾಮ ದ್ಚಿಚಕ್ರ ವಾಹನ ಸವಾರ ಗಂಭೀರ ಗಾಯಗೊಂಡು ಮಂಗಳೂರು ಆಸ್ಪತ್ರೆಗೆ ಕರೆತಂದರೂ ಚಿಕಿತ್ಸೆ ಫಲಕಾರಿಯಾಗದೆ ಮೃತ ಘಟನೆ ಇಂದು ಸಂಜೆ ನಡೆದಿದೆ. ಪಂಜ ಕೂತ್ಕುಂಜ ಗ್ರಾಮದ ಸಂಪ ನಿವಾಸಿ ನಿವೃತ್ತ ಶಿಕ್ಷಕ ಕೃಷ್ಣ ಭಟ್ ಮೃತಪಟ್ಟ ಬೈಕ್ ಸವಾರರಾಗಿದ್ದಾರೆ. ಕಾರ್ಯ ನಿಮಿತ್ತ ಕೃಷ್ಣ ಭಟ್ ಅವರು ಪಂಜದಿಂದ ಪುತ್ತೂರಿಗೆ ಬೈಕ್ ನಲ್ಲಿ ಬೈಕ್ ನಲ್ಲಿ ಬರುತ್ತಿದ್ದ ವೇಳೆ ಪಿಕಪ್ ವಾಹನವೊಂದು ಡಿಕ್ಕಿ ಹೊಡೆದಿದೆ. ಈ

ಬೈಕ್‍ ಗೆ ಪಿಕಪ್‍ ಡಿಕ್ಕಿ : ಬೈಕ್‍ ಸವಾರ ಮೃತ್ಯು Read More »

ನಂದಿನಿ ಸ್ಟಾಲ್‍ಗೆ ಡಿಕ್ಕಿ ಹೊಡೆದು ಕಂಟೈನರ್ ಪಲ್ಟಿ

ಸುಳ್ಯ : ನಂದಿನಿ ಸ್ಟಾಲ್‍ ಗೆ ಡಿಕ್ಕಿ ಹೊಡೆದು ಕಂಟೈನರ್‍ ಪಲ್ಟಿಯಾದ ಘಟನೆ ಸುಳ್ಯದಲ್ಲಿ ನಡೆದಿದೆ. ಸುಳ್ಯದ ಮುಖ್ಯ ರಸ್ತೆ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣ ಎದುರು ಬ್ಯಾಂಕ್ ಆಫ್ ಬರೋಡಾದ ಪಕ್ಕದಲ್ಲಿರುವ ನಂದಿನಿ ಸ್ಟಾಲ್ ಗೆ ಕಂಟೈನರ್ ಡಿಕ್ಕಿ ಹೊಡೆದು ಕಟ್ಟಡದ ಒಂದು ಭಾಗ ಸಂಪೂರ್ಣ ಹಾನಿಗೊಂಡ ಘಟನೆ ಇಂದು ಮುಂಜಾನೆ 5.30ರ ಹೊತ್ತಿಗೆ ನಡೆದಿದೆ. ಮಂಡ್ಯದಿಂದ ತರಕಾರಿ ಮತ್ತು ಹಣ್ಣುಹಂಪಲುಗಳನ್ನು ತುಂಬಿಕೊಂಡು ಬರುತ್ತಿದ್ದ ಕಂಟೈನರ್ ವಾಹನ ಪುಟ್ ಪಾತ್ ಗೆ

ನಂದಿನಿ ಸ್ಟಾಲ್‍ಗೆ ಡಿಕ್ಕಿ ಹೊಡೆದು ಕಂಟೈನರ್ ಪಲ್ಟಿ Read More »

ಕಾರು ಡಿವೈಡರ್‌ಗೆ ಡಿಕ್ಕಿ : ಮೂವರು ಸ್ಥಳದಲ್ಲೇ ಸಾವು

ಮಂಜೇಶ್ವರ: ಕಾಸರಗೋಡಿನ ಮಂಜೇಶ್ವರದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಹೊಸಂಗಡಿ ಹತ್ತಿರ ವಾಮಂಜೂರು ಚೆಕ್​ಪೋಸ್ಟ್ ಬಳಿ ಸೋಮವಾರ ರಾತ್ರಿ ಚಾಲಕನ ನಿಯಂತ್ರಣ ತಪ್ಪಿ ಕಾರು ಡಿವೈಡರ್​ಗೆ ಡಿಕ್ಕಿಯಾಗಿ ಸಂಭವಿಸಿದ ಅಪಘಾತದಲ್ಲಿ ಕಾರಿನಲ್ಲಿದ್ದ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಜನಾರ್ದನ, ಅವರ ಪುತ್ರ ವರುಣ್ ಹಾಗೂ ಕಿಶನ್ ಮೃತ ದುರ್ದೈವಿಗಳು. ರತ್ನಾ ಎಂಬವರಿಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರು ಉಪ್ಪಳದ ಪೈವಳಿಕೆ ಬಾಯಿಕಟ್ಟೆ ನಿವಾಸಿಗಳು ಎಂದು ತಿಳಿದುಬಂದಿದೆ. ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಮಂಜೇಶ್ವರ ಪೊಲೀಸ್

ಕಾರು ಡಿವೈಡರ್‌ಗೆ ಡಿಕ್ಕಿ : ಮೂವರು ಸ್ಥಳದಲ್ಲೇ ಸಾವು Read More »

ಆಟೋ ರಿಕ್ಷಾ-ಸರಕಾರಿ ಬಸ್ ಅಪಘಾತ | ಇಬ್ಬರು ಮೃತ್ಯು, ಚಾಲಕನಿಗೆ ಗಂಭೀರ ಗಾಯ

ಪುತ್ತೂರು: ಕೆಎಸ್ ಆರ್ ಟಿಸಿ ಬಸ್ಸಿಗೆ ಆಟೋ ರಿಕ್ಷಾವೊಂದು ಡಿಕ್ಕಿ ಹೊಡೆದ ಪರಿಣಾಮ  ರಿಕ್ಷಾದಲ್ಲಿದ್ದ ಇಬ್ಬರು ಮೃತಪಟ್ಟು, ಚಾಲಕ ಗಂಭೀರಗೊಂಡ ದಾರುಣ ಘಟನೆ ಪುತ್ತೂರು ನಗರದ ಹೊರವಲಯದ ಮಂಜಲ್ಪಡ್ಪು ಎಂಬಲ್ಲಿನ ಭಾನುವಾರ ಸಂಜೆ ನಡೆದಿದೆ.  ಮಂಗಳೂರಿನಿಂದ ಪುತ್ತೂರಿಗೆ ಬರುತ್ತಿದ್ದ ಕೆಎಸ್ ಆರ್ ಟಿಸಿ ಬಸ್ಸಿಗೆ ಪುತ್ತೂರು ಕಡೆಯಿಂದ ಕಬಕ ಕಡೆಗೆ ಕೆದಂಬಾಡಿ ಗ್ರಾಮದ ಕೆದಂಬಾಡಿ ಗುಡ್ಡೆ ಮಹಮ್ಮದ್ ಎಂಬವರು ಚಲಾಯಿಸಿಕೊಂಡು ಹೋಗುತ್ತಿದ್ದ ರಿಕ್ಷಾ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಆಟೋ ರಿಕ್ಷಾ ಪಲ್ಟಿಯಾಗಿದ್ದು, ಅದರಲ್ಲಿ ಪ್ರಯಾಣಿಸುತ್ತಿದ್ದ ರಿಕ್ಷಾ

ಆಟೋ ರಿಕ್ಷಾ-ಸರಕಾರಿ ಬಸ್ ಅಪಘಾತ | ಇಬ್ಬರು ಮೃತ್ಯು, ಚಾಲಕನಿಗೆ ಗಂಭೀರ ಗಾಯ Read More »

ಆಟೋ ರಿಕ್ಷಾ-ಬಸ್ ಡಿಕ್ಕಿ : ಇಬ್ಬರಿಗೆ ಗಂಭೀರ ಗಾಯ

ಪುತ್ತೂರು: ಬಸ್‍ ಹಾಗೂ ರಿಕ್ಷಾ ಡಿಕ್ಕಿ ಹೊಡೆದುಕೊಂಡು ಇಬ್ಬರು ಗಂಭೀರ ಗಾಯಗೊಂಡ ಘಟನೆ ಇಂದು ಮಂಜಲ್ಪಡ್ಪುವಿನಲ್ಲಿ ನಡೆದಿದೆ. ಅಪಘಾತದಿಂದ ಆಟೋ ರಿಕ್ಷಾ ನಜ್ಜುಗುಜ್ಜಾಗಿದ್ದು, ರಿಕ್ಷಾದಲ್ಲಿದ್ದ ಇಬ್ಬರು ಗಂಭೀರ ಗಾಯಗೊಂಡಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ಸಂಚಾರಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಆಟೋ ರಿಕ್ಷಾ-ಬಸ್ ಡಿಕ್ಕಿ : ಇಬ್ಬರಿಗೆ ಗಂಭೀರ ಗಾಯ Read More »

error: Content is protected !!
Scroll to Top