ಅಪಘಾತ

ದುಬೈಯಲ್ಲಿ ಸಂಭವಿಸಿದ ಅಪಘಾತದಲ್ಲಿ ಗಾಯಗೊಂಡಿದ್ದ ಮಹಿಳೆ ಸಾವು

ಕೆಲವು ತಿಂಗಳಿಂದ ಕೋಮಾದಲ್ಲಿದ್ದ ಮಹಿಳೆ ಮಂಗಳೂರು : ದುಬೈಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಕಳೆದ ಕೆಲವು ತಿಂಗಳುಗಳಿಂದ ಕೋಮಾದಲ್ಲಿದ್ದ ಕಿನ್ನಿಗೋಳಿಯ ಯುವತಿಯೊಬ್ಬರು ಮೇ 24ರಂದು ನಿಧನರಾಗಿದ್ದಾರೆ. ಪುನರೂರಿನ ವಾಸುದೇವ ಅಗ್ರಹಾರ ನಿವಾಸಿ ಶ್ರೀಲತಾ ತಂತ್ರಿ (26)ಂಋತ ಮಹಿಳೆ. ಇವರು ಭರತನಾಟ್ಯ ಹಾಗೂ ಯಕ್ಷಗಾನ ಕಲಾವಿದೆಯಾಗಿದ್ದು, ನಿರೂಪಕಿಯಾಗಿಯೂ ಗುರುತಿಸಿಕೊಂಡಿದ್ದರು. ದುಬೈನಲ್ಲಿ ಉದ್ಯೋಗದಲ್ಲಿದ್ದ ಶ್ರೀಲತಾ ಅವರು ಕಳೆದ ವರ್ಷ ನವೆಂಬರ್‌ನಲ್ಲಿ ಅಲ್ಲಿ ನಡೆದ ರಸ್ತೆ ಅಪಘಾತವೊಂದರಲ್ಲಿ ಗಂಭೀರವಾಗಿ ಗಾಯಗೊಂಡು ಕೋಮಾ ಸ್ಥಿತಿಗೆ ತಲುಪಿದ್ದರು. ಪ್ರಾರಂಭದಲ್ಲಿ ಅವರಿಗೆ ದುಬೈನಲ್ಲೇ […]

ದುಬೈಯಲ್ಲಿ ಸಂಭವಿಸಿದ ಅಪಘಾತದಲ್ಲಿ ಗಾಯಗೊಂಡಿದ್ದ ಮಹಿಳೆ ಸಾವು Read More »

ಕಾರಿನೊಳಗೆ ಸಿಲುಕಿಕೊಂಡ ಮಗು : ಕಿಟಿಕಿಯ ಗಾಜು ಒಡೆದು ರಕ್ಷಿಸಿದ ಸಾರ್ವಜನಿಕರು

ಆಟೋಮ್ಯಾಟಿಕ್ ಲಾಕಿಂಗ್ ಸಿಸ್ಟಮ್ ಆನ್ ಆಗಿ ಸಿಲುಕಿದ ಮಗು ಬೆಳ್ತಂಗಡಿ: ಕಾರಿನ ಆಟೋಮ್ಯಾಟಿಕ್ ಲಾಕಿಂಗ್ ಸಿಸ್ಟಮ್ ಆನ್ ಆದ ಕಾರಣ ಮಗುವೊಂದು ಕಾರಿನೊಳಗೆ ಸಿಲುಕಿಕೊಂಡ ಆತಂಕಕಾರಿ ಘಟನೆ ನಡೆದಿದ್ದು, ಸಾರ್ವಜನಿಕರು ಸಮಯಪ್ರಜ್ಞೆಯಿಂದ ಮಗುವನ್ನು ಯಶಸ್ವಿಯಾಗಿ ರಕ್ಷಿಸಿದ ಘಟನೆ ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಮಡಂತ್ಯಾರಿನ ಮದ್ದಡ್ಕ ಎಂಬಲ್ಲಿ ಭಾನುವಾರ ನಡೆದಿದೆ. ಚಾಲಕ ಕಾರನ್ನು ರಸ್ತೆ ಬದಿಯಲ್ಲಿ ನಿಲ್ಲಿಸಿ, ಸಮೀಪದ ಅಂಗಡಿಯೊಂದಕ್ಕೆ ತೆರಳಿದ್ದರು. ಈ ಸಂದರ್ಭದಲ್ಲಿ ಕಾರಿನಲ್ಲಿದ್ದ ಆಟೋ-ಲಾಕ್ ವ್ಯವಸ್ಥೆಯು ಇದ್ದಕ್ಕಿದ್ದಂತೆ ಸಕ್ರಿಯಗೊಂಡಿದ್ದು, ಮಗು ಕಾರಿನೊಳಗೆ ಸಿಲುಕಿಕೊಂಡಿದೆ. ಮಗು

ಕಾರಿನೊಳಗೆ ಸಿಲುಕಿಕೊಂಡ ಮಗು : ಕಿಟಿಕಿಯ ಗಾಜು ಒಡೆದು ರಕ್ಷಿಸಿದ ಸಾರ್ವಜನಿಕರು Read More »

ಲಾರಿ – ದ್ವಿಚಕ್ರ ವಾಹನ ಡಿಕ್ಕಿ: ಓರ್ವ ಸಾವು

ಪುತ್ತೂರು: ಲಾರಿ ಮತ್ತು ದ್ವಿಚಕ್ರ ವಾಹನ ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ಸವಾರ ಮೃತಪಟ್ಟ ಘಟನೆ ಮಾಣಿಯಲ್ಲಿ ನಡೆದಿದೆ. ಸ್ಕೂಟರ್ ಕಲ್ಲಡ್ಕದಿಂದ ಪುತ್ತೂರಿನತ್ತ ಬರುತ್ತಿದ್ದು ಲಾರಿಯ ಹಿಂಭಾಗಕ್ಕೆ ಗುದ್ದಿದೆ. ಅಪಘಾತದಲ್ಲಿ ಕಲಂದರ್ ಶಾ‌ ಮೃತಪಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ಸಾಗಿಸುವ ವೇಳೆ ಅವರು ಮೃತಪಟ್ಟಿರುವುದಾಗಿದೆ. ಮೂಲತಃ ಸುಳ್ಯ ನಿವಾಸಿಯಾಗಿರುವ ಅವರು ಕಲ್ಲರ್ಪೆ ಬಾಡಿಗೆ ಮನೆಯಲ್ಲಿ ವಾಸವಿದ್ದರು. ಮೃತರು ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

ಲಾರಿ – ದ್ವಿಚಕ್ರ ವಾಹನ ಡಿಕ್ಕಿ: ಓರ್ವ ಸಾವು Read More »

ಸಾವಿರ ಅಡಿ ಆಳದ ಕಂದಕಕ್ಕೆ ಉರುಳಿದ ಕಾರು : ಎಂಟು ಯುವಕರು ಸಾವು

ಮಹಾಬಲೇಶ್ವರ ಘಾಟಿಯಲ್ಲಿ ತಡರಾತ್ರಿ ಸಂಭವಿಸಿದ ಭೀಕರ ಅಪಘಾತ ಮುಂಬೈ : ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಮಹಾಬಲೇಶ್ವರ-ಪೋಲಾದ್​ಪುರ ರಸ್ತೆಯಲ್ಲಿ ಭಾನುವಾರ ತಡರಾತ್ರಿ ಕಾರು ಕಂದಕಕ್ಕೆ ಉರುಳಿಬಿದ್ದ ಪರಿಣಾಮ 8 ಯುವಕರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವೇಗವಾಗಿ ಚಲಿಸುತ್ತಿದ್ದ ಸ್ಕಾರ್ಪಿಯೋ ಕಾರು ಆಳವಾದ ಕಂದಕಕ್ಕೆ ಉರುಳಿದೆ. ಅಂಬೆನಾಲಿ ಘಾಟ್ ಬಳಿ ಈ ಅಪಘಾತ ಸಂಭವಿಸಿದೆ. ಸ್ಥಳೀಯರು ಈ ಕಂದಕವು ಸುಮಾರು 1,000 ಅಡಿ ಆಳದಲ್ಲಿದೆ ಎಂದು ಅಂದಾಜಿಸಿದ್ದಾರೆ. ಇಲ್ಲಿಯವರೆಗೆ ಎರಡು ಶವಗಳನ್ನು ಹೊರತೆಗೆಯಲಾಗಿದೆ. ಸೋಮವಾರ ಮುಂಜಾನೆ ಕಂದಕದಲ್ಲಿ ಅಪಘಾತಕ್ಕೀಡಾದ

ಸಾವಿರ ಅಡಿ ಆಳದ ಕಂದಕಕ್ಕೆ ಉರುಳಿದ ಕಾರು : ಎಂಟು ಯುವಕರು ಸಾವು Read More »

ಕಪ್ಪೆಚಿಪ್ಪು ಹೆಕ್ಕುವಾಗ ನೀರುಪಾಲು : ಮೃತರ ಸಂಖ್ಯೆ 11ಕ್ಕೇರಿಕೆ

ಭಟ್ಕಳದ ತಟ್ಟೆಹಕ್ಲು ನದಿಗೆ ಕಪ್ಪೆಚಿಪ್ಪು ಹೆಕ್ಕಲು ಇಳಿದವರು ಜಲಸಮಾಧಿ ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಬಳಿಯ ಅಳ್ವೆಕೋಡಿ ಕಡಲತೀರ ಪ್ರದೇಶದಲ್ಲಿ ಕಪ್ಪೆಚಿಪ್ಪು ಸಂಗ್ರಹಿಸಲು ಹೋಗಿ ಮೃತಪಟ್ಟವರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ. 11 ಜನರ ಪೈಕಿ ನಿನ್ನೆ 10 ಜನರ ಮೃತದೇಹಗಳು ಪತ್ತೆಯಾಗಿದ್ದವು. ನಾಪತ್ತೆಯಾಗಿದ್ದ ಮಾದೇವ್ ನಾಯ್ಕ್ ಮೃತದೇಹ ಕೂಡ ಇಂದು ಪತ್ತೆಯಾಗಿದೆ. ಎನ್‌ಡಿಆರ್‌ಎಫ್‌, ಈಶ್ವರ ಮಲ್ಪೆ ತಂಡ ನಡೆಸಿದ ಶೋಧ ಕಾರ್ಯಾಚರಣೆಯಲ್ಲಿ ಮೃತದೇಹವನ್ನು ಪತ್ತೆ ಮಾಡಿ ಹೊರತೆಗೆಯಲಾಗಿದೆ. ಆ ಮೂಲಕ ನೀರಿನ ಅಬ್ಬರಕ್ಕೆ 11

ಕಪ್ಪೆಚಿಪ್ಪು ಹೆಕ್ಕುವಾಗ ನೀರುಪಾಲು : ಮೃತರ ಸಂಖ್ಯೆ 11ಕ್ಕೇರಿಕೆ Read More »

ಮಂಗಳೂರು: ಲಾರಿ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತ್ಯು, ಮತ್ತಿಬ್ಬರಿಗೆ ಗಾಯ

ಮಂಗಳೂರು : ಬೈಕ್‌ಗೆ ಲಾರಿ ಡಿಕ್ಕಿ ಹೊಡೆದು ಓರ್ವ ಸ್ಥಳದಲ್ಲೇ ಮೃತಪಟ್ಟು ಇಬ್ಬರು ಗಾಯಗೊಂಡಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಮುಕ್ಕ ಚೆಕ್‌ಪೋಸ್ಟ್ ಖಂಡಿಗೆ ಕ್ರಾಸ್ ಬಳಿ ಭಾನುವಾರ ಸಂಜೆ ಸಂಭವಿಸಿದೆ. ಮೃತರನ್ನು ಬಾಗಲಕೋಟೆ ನಿವಾಸಿ ಭೀಮಾ ಎಂದು ಗುರುತಿಸಲಾಗಿದೆ‌. ಆತನ ಸಹಚರರಿಬ್ಬರು ಗಂಭೀರ ಗಾಯಗೊಂಡಿದ್ದು ಅವರನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಭೀಮಾ ಮತ್ತು ಆತನ ಇಬ್ಬರು ಸಹಚರರು ಕೆಲಸ ಮುಗಿಸಿಕೊಂಡು ಒಂದೇ ಬೈಕ್‌ನಲ್ಲಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸುರತ್ಕಲ್ ಕಡೆ ತೆರಳುತ್ತಿದ್ದ ವೇಳೆ ಭಾರಿ

ಮಂಗಳೂರು: ಲಾರಿ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತ್ಯು, ಮತ್ತಿಬ್ಬರಿಗೆ ಗಾಯ Read More »

ಬೈಕ್‌ಗಳು ಮುಖಾಮುಖಿ ಡಿಕ್ಕಿ : ಓರ್ವ ಮೃತ್ಯು, ಇಬ್ಬರಿಗೆ ಗಾಯ

ಸುಳ್ಯ: ಎರಡು ಬೈಕ್‍ಗಳ ನಡುವೆ ಅಪಘಾತ ಸಂಭವಿಸಿ ಓರ್ವ ಸವಾರ ಮೃತಪಟ್ಟು, ಇನ್ನಿಬ್ಬರು ಸವಾರರು ಗಂಭೀರ ಗಾಯಗೊಂಡ ಘಟನೆ ಪೆರಾಜೆಯಲ್ಲಿ ಭಾನುವಾರ ನಡೆದಿದೆ. ಕೇರಳದ ಪಯ್ಯನೂರಿನ ಕಾಂಟ್ರಾಕ್ಟರ್ ಮುಂದಾಥನ್ ಪ್ರದೀಪನ್ (52) ಬೈಕ್ ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿ. ಸುಳ್ಯದಿಂದ ಸಂಪಾಜೆ ಕಡೆಗೆ ಹೋಗುತ್ತಿದ್ದ ಪ್ರದೀಪನ್ ಅವರ ಬೈಕ್ ಮತ್ತು ಕಲ್ಲುಗುಂಡಿ ಕಡೆಯಿಂದ ಸುಳ್ಯ ಕಡೆಗೆ ಬರುತ್ತಿದ್ದ ಸುಮಂತ್ ಮತ್ತು ರವಿಕುಮಾರ್ ಬರುತ್ತಿದ್ದ ಬೈಕ್‍ಗಳ ಮಧ್ಯೆ ಅಪಘಾತ ಸಂಭವಿಸಿ ದುರ್ಘಟನೆ ನಡೆದಿದೆ. ಇನ್ನೊಂದು ಬೈಕಿನಲ್ಲಿದ್ದ ಕಲ್ಲುಗುಂಡಿಯ ಸುಮಂತ್ ಮತ್ತು

ಬೈಕ್‌ಗಳು ಮುಖಾಮುಖಿ ಡಿಕ್ಕಿ : ಓರ್ವ ಮೃತ್ಯು, ಇಬ್ಬರಿಗೆ ಗಾಯ Read More »

ಉಪ್ಪಿನಂಗಡಿ : 70 ಅಡಿ ಆಳದ ಕಂದಕಕ್ಕೆ ಉರುಳಿದ ಕಾರು

ಉಪ್ಪಿನಂಗಡಿ: ಉಪ್ಪಿನಂಗಡಿ ಸಮೀಪದ ಪಂಜಳ ಎಂಬಲ್ಲಿ ಕೊಕ್ಕಡದ ಪಟ್ಟೂರಿಗೆ ತೆರಳುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ 70 ಅಡಿ ಆಳಕ್ಕೆ ಉರುಳಿದ ಬಿದ್ದ ಘಟನೆ ಶುಕ್ರವಾರ ಸಂಬವಿಸಿದೆ. ಕಾರಿನಲ್ಲಿದ್ದವರು ಅದೃಷ್ಟವಶಾತ್‌ ಪಾರಾಗಿದ್ದಾರೆ. ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬದಿಯ ಸುಮಾರು 70 ಅಡಿ ಆಳದ ಕಂದಕಕ್ಕೆ ಕಾರು ಉರುಳಿದೆ. ಅಪಘಾತಕ್ಕೀಡಾದ ಕಾರಿನಲ್ಲಿ ಪಟ್ರಮೆ ಗ್ರಾಮದ ದೇರಾಜೆ ನಿವಾಸಿ ಹಾಗೂ ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯ ಸಂಚಾಲಕ ಪ್ರಶಾಂತ್ ದೇರಾಜೆ ಮತ್ತು ಅವರ ಸಹೋದರ ಪ್ರವೀಣ್ ದೇರಾಜೆ ಪ್ರಯಾಣಿಸುತ್ತಿದ್ದರು.

ಉಪ್ಪಿನಂಗಡಿ : 70 ಅಡಿ ಆಳದ ಕಂದಕಕ್ಕೆ ಉರುಳಿದ ಕಾರು Read More »

ಬಾವಿ ಕುಸಿದು ಕಾರ್ಮಿಕ ಸಾವು

ತೋಡುತ್ತಿರುವಾಗಲೇ ಕುಸಿದ ಬಾವಿ ಉಡುಪಿ : ಮಲ್ಪೆ ಸಮೀಪ ಕೊಡವೂರಿನ ಗರಡಿಮಜಲು ಎಂಬಲ್ಲಿ ಬಾವಿ ತೋಡುವ ಕೆಲಸದ ವೇಳೆ ಒಂದು ಭಾಗ ಕುಸಿದು ಕೊಪ್ಪಳದ 25 ವರ್ಷದ ಕಾರ್ಮಿಕನೊಬ್ಬ ಸಾವನ್ನಪ್ಪಿದ ಘಟನೆ ಶುಕ್ರವಾರ ಸಂಜೆ ಸಂಭವಿಸಿದೆ. ಮೃತರನ್ನು ರಮೇಶ್ (25) ಎಂದು ಗುರುತಿಸಲಾಗಿದ್ದು, ಇವರು ಕಾರ್ಕಳದ ಪ್ರಭಾತ್ ಶೆಟ್ಟಿ ಎಂಬವರ ಗುತ್ತಿಗೆಯಡಿ ಬಾವಿ ತೋಡುವ ಕೆಲಸಲ್ಲೆ ಇತರ ಐದು ಮಂದಿಯೊಂದಿಗೆ ಕಾರ್ಕಳದಿಂದ ಬಂದಿದ್ದರು. ಬಾವಿ ತೋಡಿ ಕಾರ್ಮಿಕರು ಮೇಲೆ ಬರುವಾಗ ಕುಸಿತ ಸಂಭವಿಸಿದೆ. ಉಳಿದವರು ಅದಾಗಲೇ ಮೇಲೆ

ಬಾವಿ ಕುಸಿದು ಕಾರ್ಮಿಕ ಸಾವು Read More »

ಕ್ರೂಸರ್‌- ಲಾರಿ ಡಿಕ್ಕಿ : ಒಂದೇ ಕುಟುಂಬದ ಐವರು ಸಾವು

ಕಲಬುರಗಿ: ಕ್ರೂಸರ್ ಮತ್ತು ಲಾರಿ ಮಧ್ಯೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಒಂದೇ ಕುಟುಂಬದ ಐವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಲಾಡ್ಲಾಪುರ ಕ್ರಾಸ್ ಬಳಿ ಇಂದು ಮುಂಜಾನೆ ನಡೆದಿದೆ. ತೋಲುಸಾಬ್ ಕ್ಯಾಶ್ವಾರ್ (27), ಹುಸೇನ್ ಶಾ (48), ಮೈಬೂಬ್ ಅಲಿ (45), ರಸೂಲ್ ಬೀ (42), ಫಾತೀಮಾ ಅಲೀ (38) ಮೃತರು. ಮೃತರೆಲ್ಲರೂ ಚಿತ್ತಾಪುರ ತಾಲೂಕಿನ ಇಂಗಳಗಿ ಗ್ರಾಮದವರು. ಲಾಡ್ಲಾಪುರ ಗ್ರಾಮದ ರಾಷ್ಟ್ರೀಯ ಹೆದ್ದಾರಿ 150ರಲ್ಲಿ ಅಪಘಾತ ಸಂಭವಿಸಿದ್ದು, ಲಾರಿ ಡಿಕ್ಕಿ

ಕ್ರೂಸರ್‌- ಲಾರಿ ಡಿಕ್ಕಿ : ಒಂದೇ ಕುಟುಂಬದ ಐವರು ಸಾವು Read More »

error: Content is protected !!
Scroll to Top