ಅಪಘಾತ

ನವಿಮುಂಬಯಿಯಲ್ಲಿ ಬಹು ಮಹಡಿ ಕಟ್ಟಡ ಕುಸಿತ | ಕಟ್ಟಡದಡಿ ಹಲವಾರು ಮಂದಿ ಸಿಲುಕಿರುವ ಶಂಕೆ

ಮುಂಬಯಿ: ಬಹು ಮಹಡಿಯ ಕಟ್ಟಡವೊಂದು ಕುಸಿದ ಪರಿಣಾಮ ಹಲವಾರು ಮಂದಿ ಅಡಿಯಲ್ಲಿ ಸಿಲುಕಿರುವ ಘಟನೆ ನವಿಮುಂಬಯಿಯಲ್ಲಿ ಇಂದು ಮುಂಜಾನೆ ನಡೆದಿದೆ. ನವಿ ಮುಂಬಯಿಯ ಶಹಬಾಜ್ ಎಂಬಲ್ಲಿ ಇಂದು ಮುಂಜಾನೆ ಸುಮಾರು 5 ಗಂಟೆ ಸಮಯಕ್ಕೆ ಮೂರು ಅಂತಸ್ತಿನ ಕಟ್ಟಡ ಕುಸಿದು ಬಿದ್ದಿದೆ. ಹಲವಾರು ಪೊಲೀಸರು, ಅಗ್ನಿಶಾಮಕ ದಳ ಮತ್ತು ಎನ್‌ಡಿಆರ್‌ಎಫ್ ತಂಡಗಳು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿವೆ ಎಂದು ನವಿಮುಂಬಯಿ ಮಹಾನಗರ ಪಾಲಿಕೆ ಆಯುಕ್ತ ಕೈಲಾಸ್ ಶಿಂಧೆ ತಿಳಿಸಿದ್ದಾರೆ. ಕಟ್ಟಡದಲ್ಲಿ 13 ಫ್ಲಾಟ್‌ಗಳಿದ್ದು 24 ಕುಟುಂಬಗಳು ವಾಸವಾಗಿದ್ದವು ಎಂದು […]

ನವಿಮುಂಬಯಿಯಲ್ಲಿ ಬಹು ಮಹಡಿ ಕಟ್ಟಡ ಕುಸಿತ | ಕಟ್ಟಡದಡಿ ಹಲವಾರು ಮಂದಿ ಸಿಲುಕಿರುವ ಶಂಕೆ Read More »

ಆಟೋ ರಿಕ್ಷಾ-ಕಾರು ಅಪಘಾತ : ರಿಕ್ಷಾ ಚಾಲಕ ಮೃತ್ಯು

ವಿಟ್ಲ: ಆಟೋ ರಿಕ್ಷಾ ಹಾಗೂ ಕಾರು ನಡುವೆ ಸಂಭವಿಸಿದ ಅಪಘಾತದಲ್ಲಿ ರಿಕ್ಷಾ ಚಾಲಕ ಮೃತಪಟ್ಟ ಘಟನೆ ಉಕ್ಕುಡದಲ್ಲಿ ನಡೆದಿದೆ. ಪೆರುವಾಯಿ ನಿವಾಸಿ ಅಬ್ಬಾಸ್ ಮೃತಪಟ್ಟ ರಿಕ್ಷಾ ಚಾಲಕ. ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದೆ.

ಆಟೋ ರಿಕ್ಷಾ-ಕಾರು ಅಪಘಾತ : ರಿಕ್ಷಾ ಚಾಲಕ ಮೃತ್ಯು Read More »

ಮನೆ ಮೇಲೆ ತಡೆಗೋಡೆ ಕುಸಿತ : ಬಾಲಕ ಮೃತ್ಯು

ಮಂಗಳೂರು : ಸುರಿದ ಭಾರೀ ಮಳೆಗೆ ಮನೆಯೊಂದರ ಮೇಲೆ ತಡೆಗೋಡೆ ಕುಸಿದು ಬಿದ್ದ ಪರಿಣಾಮ ಬಾಲಕನೋರ್ವ ಮೃತಪಟ್ಟ ಘಟನೆ ಮಂಗಳೂರಿನ ಜೋಕಟ್ಟೆಯಲ್ಲಿ ನಡೆದಿದೆ. ಮಲ್ಕಿ ಕೊಲ್ನಾಡು ಲಿಂಗಪ್ಪಯ್ಯ ಕಾಡು ನಿವಾಸಿ ಶೈಲೇಶ್ (17) ಮೃತಪಟ್ಟ ಬಾಲಕ. ಜೋಕಟ್ಟೆಯಲ್ಲಿರುವ ಸಂಬಂಧಿಕರ ಮನೆಗೆ ಶೈಲೇಶ್ ಅತಿಥಿಯಾಗಿ ಬಂದಿದ್ದ ಎನ್ನಲಾಗಿದ್ದು, ಬುಧವಾರ  ರಾತ್ರಿ ಮಂಗಳೂರು ಭಾಗದಲ್ಲಿ ಭಾರೀ ಮಳೆಯಾಗಿದ್ದು, ಮನೆಯ ಪಕ್ಕದ ತಡೆಗೋಡೆ ಕುಸಿದು ಈ ಅವಘಡ ಸಂಭವಿಸಿದೆ ಎಂದು ತಿಳಿದು ಬಂದಿದೆ.

ಮನೆ ಮೇಲೆ ತಡೆಗೋಡೆ ಕುಸಿತ : ಬಾಲಕ ಮೃತ್ಯು Read More »

ಶಿರೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತದ ವೇಳೆ ನಾಪತ್ತೆಯಾಗಿದ್ದ ಲಾರಿ ಪತ್ತೆ

ಉತ್ತರಕನ್ನಡ : ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ರಾಷ್ಟ್ರೀಯ ಹೆದ್ದಾರಿ 66ರ ಬಳಿ ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಪತ್ತೆಯಾಗಿದ್ದ ಕೇರಳ ಮೂಲದ ಲಾರಿ ಪತ್ತೆಯಾಗಿದೆ. ಆದರೆ ಲಾರಿ ಚಾಲಕ ಅರ್ಜುನ ಇನ್ನೂ ಪತ್ತೆ ಆಗಿರದ ಕಾರಣ ಶೋಧ ಕಾರ್ಯ ಮುಂದುವರೆದಿದೆ. ಕಳೆದ 8 ದಿನಗಳಿಂದ ಶಿರೂರು ಗುಡ್ಡ ಕುಸಿತ ಸ್ಥಳದಲ್ಲಿ ಎನ್ ಡಿ ಆರ್ ಎಫ್ ಎಚ್ ಡಿ ಆರ್ ಎಫ್ ತಂಡ ಸೇರಿದಂತೆ ಮಿಲಿಟರಿ ತಂಡ ಕೂಡ ಮಣ್ಣು ತೆರವು ಕಾರ್ಯಾಚರಣೆಗೆ ಆಗಮಿಸಿತ್ತು. ಈ

ಶಿರೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತದ ವೇಳೆ ನಾಪತ್ತೆಯಾಗಿದ್ದ ಲಾರಿ ಪತ್ತೆ Read More »

ಟ್ಯಾಂಕರ್-ತ್ರಿವೀಲರ್ ಸ್ಕೂಟರ್ ಅಪಘಾತ : ವಿಕಲಚೇತನ ಶಿವರಾಮ ನಾಯ್ಕ ಮೃತ್ಯು

ಪುತ್ತೂರು: ಟ್ಯಾಂಕರ್ ಮತ್ತು ತ್ರಿವೀಲರ್ ಸ್ಕೂಟರ್ ನಡುವೆ ನಡೆದ ಅಪಘಾತದಲ್ಲಿ ಸ್ಕೂಟರ್ ಸವಾರ ವಿಕಲ ಚೇತನ ವ್ಯಕ್ತಿಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ನೆಹರುನಗರ ಮಂಜಲಪಡ್ಡು ಬಳಿಯ ಪೆಟ್ರೋಲ್ ಪಂಪ್ ಮುಂಭಾಗ ನಿನ್ನೆ ರಾತ್ರಿ ಸಂಭವಿಸಿದೆ. ಮಿತ್ತೂರು ಏಮಾಜೆಯ ವಿಕಲಚೇತನ ಶಿವರಾಮ ನಾಯ್ಕ (50) ಮೃತಪಟ್ಟವರು. ಮಂಗಳೂರು ಕಡೆ ಹೋಗುತ್ತಿದ್ದ ಟ್ಯಾಂಕರ್ ವೊಂದು ವಿಕಲಚೇತನ ಶಿವರಾಮ ಅವರು ಚಲಾಯಿಸುತ್ತಿದ್ದ ತ್ರಿವೀಲ‌ರ್ ಸ್ಕೂಟರ್ ಗೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ತೀವು ಗಾಯಗೊಂಡ ಅವರು ಸ್ಥಳದಲ್ಲೇ ಮೃತ ಪಟ್ಟಿದ್ದಾರೆಂದು ತಿಳಿದು ಬಂದಿದೆ.

ಟ್ಯಾಂಕರ್-ತ್ರಿವೀಲರ್ ಸ್ಕೂಟರ್ ಅಪಘಾತ : ವಿಕಲಚೇತನ ಶಿವರಾಮ ನಾಯ್ಕ ಮೃತ್ಯು Read More »

ಲಾರಿಗೆ ಟಯರ್ ಜೋಡಣೆ ವೇಳೆ ರಿಂಗ್ ಚಿಮ್ಮಿ ಕಾರ್ಮಿಕ ಗಂಭೀರ ಗಾಯ

ಪುತ್ತೂರು: ಲಾರಿಯೊಂದಕ್ಕೆ ಟಯರ್ ಜೋಡಣೆ ವೇಳೆ ಟಯರ್ ರಿಂಗ್ ಚಿಮ್ಮಿ ಟಯರ್ ಸಮೇತ ಎಸೆಯಲ್ಪಟ್ಟ ಕಾರ್ಮಿಕರೊಬ್ಬರು ಗಂಭೀರ ಗಾಯಗೊಂಡ ಘಟನೆ ಪುತ್ತೂರು ಪರ್ಲಡ್ಕ ಗೋಳಿಕಟ್ಟೆ ಮಸೀದಿ ಬಳಿ ನಿನ್ನೆ ರಾತ್ರಿ ಸಂಭವಿಸಿದೆ. ಕರಾಯ ಜನತಾ ಕಾಲೋನಿ ನಿವಾಸಿ ರಶೀದ್ ಗಂಭೀರ ಗಾಯಗೊಂಡವರು. ಲಾರಿಯೊಂದು ಟಯರ್ ಪಂಚರ್ ಆದ ಪರಿಣಾಮ ಪರ್ಲಡ್ಕ ಗೋಳಿಕಟ್ಟೆ ಮಸೀದಿ ಬಳಿ ನಿಲ್ಲಿಸಲಾಗಿತ್ತು. ಅದರ ಚಾಲಕ ಕರಾಯಕ್ಕೆ ಹೋಗಿ ಟಯರ್ ಪಂಚರ್ ಮಾಡಿಸಿಕೊಂಡು ಆಟೋರಿಕ್ಷಾದಲ್ಲಿ ಟಯರ್ ತಂದಿದ್ದರು. ಟಯರ್ ಜೋಡಣೆ ಮಾಡಲು ಕರಾಯದಿಂದಲೇ ಬಂದ

ಲಾರಿಗೆ ಟಯರ್ ಜೋಡಣೆ ವೇಳೆ ರಿಂಗ್ ಚಿಮ್ಮಿ ಕಾರ್ಮಿಕ ಗಂಭೀರ ಗಾಯ Read More »

ಸ್ಕೂಟಿ-ಸರಕಾರಿ ಬಸ್ ಅಪಘಾತ | ಸ್ಕೂಟಿ ಸವಾರ, ನೆಲ್ಲೂರು ಕೆಮ್ರಾಜೆ ಪಂಚಾಯಿತಿ ಸದಸ್ಯ ಮೃತ್ಯು

ಸುಳ್ಯ: ದ್ವಿಚಕ್ರ ವಾಹನ ಹಾಗೂ ಸರಕಾರಿ  ಬಸ್ ನಡುವೆ ನಡೆದ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟ ಘಟನೆ ಸೋಣಂಗೇರಿ ಸಮೀಪದ ಸುತ್ತುಕೋಟೆಯಲ್ಲಿ ಇಂದು ನಡೆದಿದೆ. ನೆಲ್ಲೂರು ಕೆಮ್ರಾಜೆ ಗ್ರಾಮ ಪಂಚಾಯತ್ ಸದಸ್ಯ ರಾಮಚಂದ್ರ ಪ್ರಭು (68) ಮೃತಪಟ್ಟವರು. ರಾಮಚಂದ್ರ ಪ್ರಭು ಅವರು ತನ್ನ ಸ್ಕೂಟಿಯಲ್ಲಿ ಸುಳ್ಯಕ್ಕೆ ಬರುತ್ತಿದ್ದ ವೇಳೆ ಎದುರಿನಿಂದ ಬರುತ್ತಿದ್ದ ಕೆಎಸ್‌ ಆರ್‌ ಟಿಸಿ ಬಸ್ ನಡುವೆ ಅಪಘಾತವಾಗಿದೆ. ಅಪಘಾತದಲ್ಲಿ ಗಂಭೀರ ಗಾಯಗೊಂಡ ರಾಮಚಂದ್ರ ಪ್ರಭುರವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ರಾಮಚಂದ್ರ ಪ್ರಭು

ಸ್ಕೂಟಿ-ಸರಕಾರಿ ಬಸ್ ಅಪಘಾತ | ಸ್ಕೂಟಿ ಸವಾರ, ನೆಲ್ಲೂರು ಕೆಮ್ರಾಜೆ ಪಂಚಾಯಿತಿ ಸದಸ್ಯ ಮೃತ್ಯು Read More »

ಚಾಲಕನ ನಿಯಂತ್ರಣ ತಪ್ಪಿ ಕಾರು ಹೊಂಡಕ್ಕೆ !

ವಿಟ್ಲ : ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಹೊಂಡಕ್ಕೆ ಬಿದ್ದ ಪರಿಣಾಮ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾದ ಘಟನೆ ವಿಟ್ಲ ಚಂದಳಿಕೆ ತಿರುವಿನಲ್ಲಿ ಇಂದು ನಡೆದಿದೆ. ಅತೀ ವೇಗವಾಗಿ ಕಾರು ವಿಟ್ಲ ಪುತ್ತೂರು ರಸ್ತೆಯ ಚಂದಳಿಕೆ ತಿರುವಿನಲ್ಲಿ ಚಲಿಸುತ್ತಿದ್ದ ಸಂದರ್ಭ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ಹೊಂಡಕ್ಕೆ ಬಿದ್ದಿದೆ. ತಕ್ಷಣ ಸಾರ್ವಜನಿಕರು ಸ್ಥಳಕ್ಕೆ ಆಗಮಿಸಿದ್ದಾರೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.

ಚಾಲಕನ ನಿಯಂತ್ರಣ ತಪ್ಪಿ ಕಾರು ಹೊಂಡಕ್ಕೆ ! Read More »

ಎಲ್‍ ಪಿಜಿ ಸಾಗಾಟ ಮಾಡುತ್ತಿದ್ದ ಲಾರಿಯಿಂದ ಗ್ಯಾಸ್ ಸೋರಿಕೆ

ಬಂಟ್ವಾಳ : ಎಲ್‍ ಪಿಜಿ ಗ್ಯಾಸ್ ಸಾಗಾಟ ಮಾಡುತ್ತಿದ್ದ ಲಾರಿಯಲ್ಲಿದ್ದ ಗ್ಯಾಸ್ ಸಿಲಿಂಡರ್‍ ನಿಂದ ಗ್ಯಾಸ್ ಸೋರಿಕೆಯಾದ ಘಟನೆ ಬಂಟ್ವಾಳದಲ್ಲಿ ನಡೆದಿದೆ. ಮಂಗಳೂರಿನಿಂದ ಬೆಂಗಳೂರಿಗೆ ಗ್ಯಾಸ್ ಸಾಗಾಟ ಮಾಡುತ್ತಿತ್ತು ಎನ್ನಲಾಗಿದೆ. ಅಗ್ನಿ ಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಎಲ್‍ ಪಿಜಿ ಸಾಗಾಟ ಮಾಡುತ್ತಿದ್ದ ಲಾರಿಯಿಂದ ಗ್ಯಾಸ್ ಸೋರಿಕೆ Read More »

ಬೈಕ್‍ ಗಳೆರಡು ಡಿಕ್ಕಿ : ಓರ್ವ ಮೃತ್ಯು, ಮೂವರಿಗೆ ಗಾಯ

ತಣ್ಣೀರುವಂತ : ಬೈಕ್‍ ಗಳೆರಡು ಡಿಕ್ಕಿ ಹೊಡೆದುಕೊಂಡ ಪರಿಣಾಮ ಒಂದು ಬೈಕ್ ನ ಸವಾರ ಮೃತಪಟ್ಟು, ನಾಲ್ವರು ಗಾಯಗೊಂಡ ಘಟನೆ ತಣ್ಣೀರುಪಂತ ಗ್ರಾಮದ ತುರ್ಕಳಿಕೆ ಎಂಬಲ್ಲಿ ನಿನ್ನೆ ರಾತ್ರಿ ಸಂಭವಿಸಿದೆ. ಬಾರ್ಯ ನಿವಾಸಿ ಶಿವಾನಂದ ಅಪಘಾತದಿಂದ ಮೃತಪಟ್ಟವರು ಎನ್ನಲಾಗಿದೆ. ಶಿವಾನಂದ ಹಾಗೂ ಅವರ ಸಹೋದರ ಕಲ್ಲೇರಿಯಿಂದ ಬಾರ್ಯದಲ್ಲಿರುವ ತಮ್ಮ ಮನೆ ಕಡೆ ಬೈಕ್ ನಲ್ಲಿ ತೆರಳುವಾಗ ಎದುರುಗಡೆಯಿಂದ ಬಂದ ಬೈಕ್ ಗಳ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಪರಿಣಾಮ ಶಿವಾನಂದ ಎಂಬವರು ರಸ್ತೆಗೆಸೆಯಲ್ಪಟ್ಟು ಗಂಭೀರ ಸ್ವರೂಪದ ಗಾಯಗಳಾಗಿತ್ತು ಕೂಡಲೇ

ಬೈಕ್‍ ಗಳೆರಡು ಡಿಕ್ಕಿ : ಓರ್ವ ಮೃತ್ಯು, ಮೂವರಿಗೆ ಗಾಯ Read More »

error: Content is protected !!
Scroll to Top