ಅಪಘಾತ

ನಡು ಸಮುದ್ರದಲ್ಲಿ ಮುಳುಗಿದ ಮೀನುಗಾರಿಕೆ ಬೋಟ್‌ : ಐವರು ಮೀನುಗಾರರ ರಕ್ಷಣೆ

ಅಡಿ ಭಾಗದ ಫೈಬರ್‌ ಪ್ಲೇಟ್‌ ಒಡೆದು ಒಳನುಗ್ಗಿದ ನೀರು ಉಡುಪಿ : ಮೀನುಗಾರಿಗೆ ತೆರಳಿದ ದೋಣಿಯೊಂದು ಸಮುದ್ರ ಮಧ್ಯದಲ್ಲಿ ಮುಳುಗಿದ್ದು, ಅದರಲ್ಲಿದ್ದ ಐವರು ಮೀನುಗಾರರನ್ನು ರಕ್ಷಿಸಲಾಗಿದೆ. ಈ ಘಟನೆಯಲ್ಲಿ ಮೀನು, ಮೀನಿನ ಬಲೆಗಳು ಸೇರಿದಂತೆ ಇತರ ಸಲಕರಣೆಗಳು ಸಮುದ್ರಪಾಲಾಗಿ ಲಕ್ಷಾಂತರ ರೂ. ನಷ್ಟವಾಗಿದೆ. ಸಾಸ್ತಾನಾ ಕೋಡಿಕನ್ಯಾನದ ರವೀಂದ್ರ ಎನ್. ಪೂಜಾರಿ ಅವರಿಗೆ ಸೇರಿದ ‘ವೀರಕಲ್ಕುಡ’ ಎಂಬ ಹೆಸರಿನ ಬೋಟ್‌ ನವೆಂಬರ್ 17ರ ಸಂಜೆ ತಂಡೇಲ್ (ಮುಖಂಡ) ಮತ್ತು ನಾಲ್ವರು ಮೀನುಗಾರರೊಂದಿಗೆ ಮಲ್ಪೆ ಬಂದರಿನಿಂದ ಹೊರಟಿತ್ತು. ಅವರು ಪಣಂಬೂರು […]

ನಡು ಸಮುದ್ರದಲ್ಲಿ ಮುಳುಗಿದ ಮೀನುಗಾರಿಕೆ ಬೋಟ್‌ : ಐವರು ಮೀನುಗಾರರ ರಕ್ಷಣೆ Read More »

ರಸ್ತೆ ಕಾಮಗಾರಿಯ ವಾಹನದಡಿಗೆ ಬಿದ್ದು ವೃದ್ಧ ಸಾವು

ಬೆಳ್ತಂಗಡಿ: ಮದ್ದಡ್ಕದಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿರುವ ಸ್ಥಳದಲ್ಲಿ ಕಾಮಗಾರಿಯ ವಾಹನದ ಅಡಿಗೆ ಸಿಲುಕಿ ವೃದ್ಧರೊಬ್ಬರು ಮೃತಪಟ್ಟ ಘಟನೆ ಗುರುವಾರ ರಾತ್ರಿ ಸಂಭವಿಸಿದೆ. ಮೃತ ವ್ಯಕ್ತಿ ಬಂಗಾಡಿ ನಿವಾಸಿ ಎಂದು ತಿಳಿದು ಬಂದಿದೆ. ಕಾಮಗಾರಿ ನಡೆಯುತ್ತಿರುವ ಪ್ರದೇಶದಲ್ಲಿ ವೃದ್ಧ ನಡೆದುಕೊಂಡು ಹೋಗುತ್ತಿದ್ದ ವೇಳೆ ಕಾಮಗಾರಿಯ ಯಂತ್ರವೊಂದನ್ನು ಚಲಾಯಿಸುತ್ತಾ ಬಂದ ಚಾಲಕ ವೃದ್ಧನನ್ನು ಗಮನಿಸದೆ ವಾಹನ ಚಲಾಯಿಸಿದ್ದು ವೃದ್ಧ ವಾಹನದ ಅಡಿಗೆ ಸಿಲುಕಿಕೊಂಡು ಮೃತಪಟ್ಟಿದ್ದಾರೆ. ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ತೆರಳಿ ಪರಿಶೀಲನೆ ನಡೆಸಿದ್ದಾರೆ.

ರಸ್ತೆ ಕಾಮಗಾರಿಯ ವಾಹನದಡಿಗೆ ಬಿದ್ದು ವೃದ್ಧ ಸಾವು Read More »

ಸ್ಕೂಟಿಗೆ ಕಾರು ಡಿಕ್ಕಿ : ಇಂಜಿನಿಯರಿಂಗ್‌ ವಿದ್ಯಾರ್ಥಿನಿ ಸಾವು

ಬೆಳ್ತಂಗಡಿ: ಇಂಜಿನಿಯರಿಂಗ್‌ ವಿದ್ಯಾರ್ಥಿನಿಯರು ಸಂಚರಿಸುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಓರ್ವ ವಿದ್ಯಾರ್ಥಿನಿ ಮೃತಪಟ್ಟು ಮತ್ತೋರ್ವ ವಿದ್ಯಾರ್ಥಿನಿ ಗಂಭೀರ ಗಾಯಗೊಂಡ ಘಟನೆ ಕಾವಳಕಟ್ಟೆ ಸಮೀಪದ ಎನ್.ಸಿ.ರೋಡ್ ಬಳಿ ಬುಧವಾರ ಸಂಭವಿಸಿದೆ. ಕಡಬ ನಿವಾಸಿ ಸುನಿಲ್ ಎಂಬವರ ಪುತ್ರಿ ಅನನ್ಯ (21) ಮೃತ ವಿದ್ಯಾರ್ಥಿನಿ. ಗುರುವಾಯನಕೆರೆ ನಿವಾಸಿ ಪೃಥ್ವಿ ರಾವ್ ಎಂಬವರು ಗಾಯಗೊಂಡಿದ್ದಾರೆ. ಗಾಯಾಳು ವಿದ್ಯಾರ್ಥಿಯನ್ನು ಮಂಗಳೂರಿನ ಆಸ್ಪತ್ರೆಗೆ ಸಾಗಿಸಲಾಗಿದೆ. ಇವರಿಬ್ಬರೂ ಮಂಗಳೂರಿನ ಕಾಲೇಜಿನಲ್ಲಿ ಅಂತಿಮ ವರ್ಷದ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ಘಟನಾ

ಸ್ಕೂಟಿಗೆ ಕಾರು ಡಿಕ್ಕಿ : ಇಂಜಿನಿಯರಿಂಗ್‌ ವಿದ್ಯಾರ್ಥಿನಿ ಸಾವು Read More »

ವಿಟ್ಲ: ಸಿಡಿಲು ಬಡಿದು ಮನೆಗೆ ಹಾನಿ

ವಿಟ್ಲ : ಕೊಳ್ನಾಡು ಗ್ರಾಮದ ಬಾರೆಬೆಟ್ಟು ನಿವಾಸಿ ಅಬ್ದುಲ್ ಲತೀಫ್ ಎಂಬವರ ಮನೆಗೆ ನ.18ರಂದು ರಾತ್ರಿ ಸಿಡಿಲು ಬಡಿದು ಹಾನಿಯಾಗಿದೆ. ಸಿಡಿಲು ಬಡಿದ ಸಂದರ್ಭದಲ್ಲಿ ಮನೆಯೊಳಗೆ ಪುಟಾಣಿ ಮಗು ಹಾಗೂ ಇಬ್ಬರು ಮಹಿಳೆಯರಿದ್ದರು. ಮಗುವಿನ ಕಿವಿಗೆ ಗಾಯವಾಗಿದೆ.

ವಿಟ್ಲ: ಸಿಡಿಲು ಬಡಿದು ಮನೆಗೆ ಹಾನಿ Read More »

ಮಕ್ಕಾದಲ್ಲಿ ಭೀಕರ ಅಪಘಾತ : 42 ಭಾರತೀಯ ಉಮ್ರಾ ಯಾತ್ರಿಕರು ದುರ್ಮರಣ

ಟ್ಯಾಂಕರ್‌ ಡಿಕ್ಕಿ ಹೊಡೆದ ಪರಿಣಾಮ ಹೊತ್ತಿ ಉರಿದ ಬಸ್‌ ನವದೆಹಲಿ : ಸೌದಿ ಅರೇಬಿಯಾದಲ್ಲಿ ಮಕ್ಕಾ ಸಮೀಪ ಸೋಮವಾರ ಮುಂಜಾನೆ ಬಸ್‌ ಮತ್ತು ಡೀಸೆಲ್‌ ಟ್ಯಾಂಕರ್‌ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 42 ಭಾರತೀಯ ಮಕ್ಕಾ ಯಾತ್ರಿಕರು ಮೃತಪಟ್ಟಿದ್ದಾರೆಂದು ವರದಿಯಾಗಿದೆ. ಮಕ್ಕಾದಿಂದ ಮದೀನಾಕ್ಕೆ ಯಾತ್ರಿಕರನ್ನು ಕರೆದೊಯ್ಯುತ್ತಿದ್ದ ಬಸ್‌ ಸೋಮವಾರ ಮುಂಜಾನೆ 1.30ರ ವೇಳೆಗೆ ಮುಫ್ರಿಹತ್‌ ಎಂಬ ಸ್ಥಳದಲ್ಲಿ ಅಪಘಾತಕ್ಕೀಡಾಗಿದೆ. ಅಪಘಾತದಿಂದ ತೀವ್ರತೆಯಿಂದಾಗಿ ಬಸ್‌ಗೆ ಬೆಂಕಿ ಹತ್ತಿಕೊಂಡು ಸುಟ್ಟು ಕರಕಲಾಗಿದೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ಬಸ್‌ನಲ್ಲಿದ್ದವರೆಲ್ಲ ಹೈದರಾಬಾದ್‌ನ

ಮಕ್ಕಾದಲ್ಲಿ ಭೀಕರ ಅಪಘಾತ : 42 ಭಾರತೀಯ ಉಮ್ರಾ ಯಾತ್ರಿಕರು ದುರ್ಮರಣ Read More »

ಬೆಳ್ತಂಗಡಿ : ಆಟೋರಿಕ್ಷಾ ಪಲ್ಟಿಯಾಗಿ ಬಾಲಕ ಸಾವು; 5 ಮಂದಿಗೆ ಗಾಯ

ಬೆಳ್ತಂಗಡಿ : ಚಾಲಕನ ನಿಯಂತ್ರಣ ತಪ್ಪಿ ಆಟೋ ಪಲ್ಟಿಯಾಗಿ ಓರ್ವ ಬಾಲಕ ಮೃತಪಟ್ಟು, ಐವರು ಗಾಯಗೊಂಡಿರುವ ಘಟನೆ ಭಾನುವಾರ ರಾತ್ರಿ ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಕುತ್ರೋಟ್ಟು ಟಿ.ಬಿ.ಕ್ರಾಸ್ ರಸ್ತೆಯ ಹೊಕ್ಕಿಲ ಎಂಬಲ್ಲಿ ನಡೆದಿದೆ. ನಾವೂರಿನ ಶಶಿ ಎಂಬವರ ಆಟೋ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಆಟೋದಲ್ಲಿದ್ದ ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದ ಕುಂಡಡ್ಕ ನಿವಾಸಿ ಗಣೇಶ್ ಪುತ್ರ ತನ್ವಿತ್(12) ಎಂಬ ಬಾಲಕ ಮೃತಪಟ್ಟಿದ್ದಾನೆ. ಆಟೋ ಪಲ್ಟಿಯಾದ ರಭಸಕ್ಕೆ ಗಾಯಗೊಂಡಿದ್ದ ತನ್ವಿತ್‌ನನ್ನು ಖಾಸಗಿ ಆಸ್ಪತ್ರೆಗೆ ಸಾಗಿಸುವ ವೇಳೆ

ಬೆಳ್ತಂಗಡಿ : ಆಟೋರಿಕ್ಷಾ ಪಲ್ಟಿಯಾಗಿ ಬಾಲಕ ಸಾವು; 5 ಮಂದಿಗೆ ಗಾಯ Read More »

ಸುಳ್ಯ : ಕಾಡುಹಂದಿ ಅಡ್ಡಬಂದು ಕಾರು ಪಲ್ಟಿ

ಸುಳ್ಯ : ಹಂದಿ ಅಡ್ಡ ಬಂದ ಪರಿಣಾಮ ಕಾರು ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾದ ಘಟನೆ ಸುಳ್ಯ ಸಮೀಪದ ಕೋಲ್ಚಾರಿನ ಕಣಕ್ಕೂರು ಎಂಬಲ್ಲಿ ಭಾನುವಾರ ನಡೆದಿದೆ. ಘಟನೆಯಲ್ಲಿ ಕಾರು ಚಾಲಕ ಗಾಯಗೊಂಡಿದ್ದಾರೆ. ಸುಳ್ಯದಿಂದ ಕೇರಳದ ಬಂದಡ್ಕ ಕಡೆಗೆ ಸಂಚರಿಸುತ್ತಿದ್ದ ಕಾರಿನ ಎದುರು ದಿಢೀರ್‌ ಎಂದು ಕಾಡುಹಂದಿ ರಸ್ತೆಗೆ ಜಿಗಿದು ಅಡ್ಡ ಬಂದಿದೆ. ಈ ವೇಳೆ ಚಾಲಕನ ನಿಯಂತ್ರಣ ಕಳೆದುಕೊಂಡ ಕಾರು ಮೋರಿಯ ಕೆಳಗೆ ಉರುಳಿದೆ. ಘಟನೆಯಲ್ಲಿ ಕಾರು ಸಂಪೂರ್ಣ ಜಖಂಗೊಂಡಿದೆ.

ಸುಳ್ಯ : ಕಾಡುಹಂದಿ ಅಡ್ಡಬಂದು ಕಾರು ಪಲ್ಟಿ Read More »

ಬಿ.ಸಿ.ರೋಡ್‌ ಅಪಘಾತ : ಮೃತರ ಸಂಖ್ಯೆ ಮೂರಕ್ಕೇರಿಕೆ

ಬೆಳ್ಳಂಬೆಳಗ್ಗೆ ಸರ್ಕಲ್‌ಗೆ ಗುದ್ದಿದ ಇನ್ನೋವಾ ಕಾರು ; ಉಡುಪಿ ಕೃಷ್ಣ ಮಠಕ್ಕೆ ಹೋಗುತ್ತಿದ್ದ ಯಾತ್ರಿಕರು ಮಂಗಳೂರು : ಇಂದು ಮುಂಜಾನೆ ಬಿ.ಸಿ.ರೋಡ್‌ನಲ್ಲಿ ಕಾರು ಸರ್ಕಲ್‌ಗೆ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಬೆಂಗಳೂರಿನಿಂದ ಉಡುಪಿ ಬರುತ್ತಿದ್ದ ಕಾರು ಬೆಳ್ಳಂಬೆಳಗ್ಗೆ ಬಿ.ಸಿ.ರೋಡ್‌ನಲ್ಲಿ ನಾರಾಯಣ ಗುರು ವೃತ್ತಕ್ಕೆ ಡಿಕ್ಕಿ ಹೊಡೆದು ಈ ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಗಾಯಗೊಡ ನಾಲ್ವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸರ್ಕಲ್‌ಗೆ ಗುದ್ದಿದ ರಭಸಕ್ಕೆ

ಬಿ.ಸಿ.ರೋಡ್‌ ಅಪಘಾತ : ಮೃತರ ಸಂಖ್ಯೆ ಮೂರಕ್ಕೇರಿಕೆ Read More »

ಸುರತ್ಕಲ್‌ನಲ್ಲಿ ಟ್ಯಾಂಕರ್‌ನಿಂದ ಗ್ಯಾಸ್‌ ಸೋರಿಕೆ

ಹೆದ್ದಾರಿ ಬಂದ್‌ ಮಾಡಿ ಸುರಕ್ಷತಾ ಕ್ರಮ ಕೈಗೊಂಡ ಅಧಿಕಾರಿಗಳು ಮಂಗಳೂರು: ನಗರದ ಹೊರವಲಯದ ಸುರತ್ಕಲ್ ಜಂಕ್ಷನ್‌ನಲ್ಲಿ ಅಥರ್ವಾ ಆಸ್ಪತ್ರೆ ಬಳಿ ಸಿಎನ್‌ಜಿ ಸಾಗಾಟ ಮಾಡುತ್ತಿದ್ದ ಟ್ಯಾಂಕರ್ ಒಂದರಲ್ಲಿ ಶುಕ್ರವಾರ ರಾತ್ರಿ ಸೋರಿಕೆ ಉಂಟಾಗಿ ಪರಿಸರದಲ್ಲಿ ಆತಂಕದ ಪರಿಸ್ಥಿತಿ ಉಂಟಾಯಿತು. ಕೂಡಲೇ ಸುರಕ್ಷತಾ ಕ್ರಮ ಕೈಗೊಂಡು ಪರಿಸ್ಥಿತಿ ನಿಯಂತ್ರಿಸಲಾಯಿತು. ಬೈಕಂಪಾಡಿ ಗೈಲ್ ಪಂಪ್‌ನಿಂದ ಸಿಎನ್‌ಜಿ ತುಂಬಿಸಿಕೊಂಡು ಉಡುಪಿ ಕಡೆ ಹೋಗುತ್ತಿದ್ದ ಟ್ಯಾಂಕರ್ ಸುರತ್ಕಲ್ ತಲುಪುತ್ತಿದ್ದಂತೆ ಸೋರಿಕೆ ಆರಂಭವಾಗಿತ್ತು. ಚಾಲಕ ತಕ್ಷಣ ಟ್ಯಾಂಕರನ್ನು ಹೆದ್ದಾರಿ ಬದಿ ನಿಲ್ಲಿಸಿ ಅಪಾಯದ ಮುನ್ಸೂಚನೆಯನ್ನು

ಸುರತ್ಕಲ್‌ನಲ್ಲಿ ಟ್ಯಾಂಕರ್‌ನಿಂದ ಗ್ಯಾಸ್‌ ಸೋರಿಕೆ Read More »

ಪುಣೆ ಅಪಘಾತ : ಮೃತರ ಸಂಖ್ಯೆ ಎಂಟಕ್ಕೇರಿಕೆ

ಕಂಟೇನರ್‌ ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತ ಪುಣೆ : ಮಹಾರಾಷ್ಟ್ರದ ಪುಣೆ-ಬೆಂಗಳೂರು ಹೆದ್ದಾರಿಯ ನವಲೆ ಸೇತುವೆ ಬಳಿ ಗುರುವಾರ ರಾತ್ರಿ ಕಂಟೇನರ್ ಟ್ರಕ್ ನಿಯಂತ್ರಣ ತಪ್ಪಿ ಹಲವಾರು ವಾಹನಗಳಿಗೆ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟವರ ಸಖ್ಯೆ 8ಕ್ಕೇರಿದೆ. ಎರಡು ಕಂಟೇನರ್‌ಗಳ ನಡುವೆ ವಾಹನಗಳು ಸಿಲುಕಿಕೊಂಡ ಪರಿಣಾಮ 2ರಿಂದ 3 ಭಾರೀ ವಾಹನಗಳು ಬೆಂಕಿಗೆ ಆಹುತಿಯಾಗಿವೆ. ಅನೇಕ ಮಂದಿಗೆ ಗಂಭೀರ ಸ್ವರೂಪದ ಸುಟ್ಟ ಗಾಯಗಳಾಗಿದ್ದು, ಆರು ಮಂದಿ ಸ್ಥಳದಲ್ಲೇ ಜೀವಂತ ದಹನವಾಗಿದ್ದರು. ಎರಡು

ಪುಣೆ ಅಪಘಾತ : ಮೃತರ ಸಂಖ್ಯೆ ಎಂಟಕ್ಕೇರಿಕೆ Read More »

error: Content is protected !!
Scroll to Top