ಅಪಘಾತ

ರೈಲು ಅಪಘಾತ : ಗಾಯಾಳುಗಳ ಸಂಖ್ಯೆ 19ಕ್ಕೇರಿಕೆ

ಮೈಸೂರಿನಿಂದ ಬಿಹಾರಕ್ಕೆ ತೆರಳುತ್ತಿದ್ದಾಗ ರೈಲು ಗೂಡ್ಸ್‌ ರೈಲಿಗೆ ಡಿಕ್ಕಿ ಬೆಂಗಳೂರು: ಚೆನ್ನೈ ಸಮೀಪ ನಿನ್ನೆ ರಾತ್ರಿ ಸಂಭವಿಸಿದ ರೈಲು ಅಪಘಾತದಲ್ಲಿ ಗಾಯಗೊಂಡವರ ಸಂಖ್ಯೆ 19ಕ್ಕೇರಿದೆ. ಈ ಪೈಕಿ ಇಬ್ಬರ ಸ್ಥಿತಿ ಚಿಂತಾಜನಕವಿದೆ. ಮೈಸೂರಿನಿಂದ ಬಿಹಾರದ ದರ್ಬಾಂಗ್‌ಗೆ ತೆರಳುತ್ತಿದ್ದ ಬಾಗಮತಿ ಎಕ್ಸ್‌ಪ್ರೆಸ್‌ ರೈಲು ಚೆನ್ನೈ ಸಮೀಪ ಗೂಸ್‌ ರೈಲಿಗೆ ಡಿಕ್ಕಿ ಹೊಡೆದ ಅಪಘಾತ ಸಂಭವಿಸಿದೆ. ರೈಲ್ವೆ ರಾಜ್ಯ ಸಚಿವ ವಿ. ಸೋಮಣ್ಣ ಆಯುಧ ಪೂಜೆ ದಿನವೇ ಸಂಭವಿಸಿದ ಈ ಅಪಘಾತಕ್ಕೆ ವಿಷಾದ ವ್ಯಕ್ತಪಡಿಸಿದ್ದಾರೆ. ಅದೃಷ್ಟವಶಾತ್‌ ಇಲ್ಲಿಯವರೆಗೆ ಸಾವಿನ ಬಗ್ಗೆ […]

ರೈಲು ಅಪಘಾತ : ಗಾಯಾಳುಗಳ ಸಂಖ್ಯೆ 19ಕ್ಕೇರಿಕೆ Read More »

ಪ್ರಪಾತಕ್ಕೆ ವಾಲಿದ ಮಿನಿ ಬಸ್ : ಪ್ರಯಾಣಿಕರು ಅಪಾಯದಿಂದ ಪಾರು

ಪುತ್ತೂರು : ಮಿನಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಪ್ರಪಾತಕ್ಕೆ ವಾಲಿದ ಘಟನೆ ಬೊಳುವಾರಿನ ಪೈಪಾಸ್ ರಸ್ತೆಯಲ್ಲಿ ಇಂದು ನಡೆದಿದೆ. ಮಂಗಳೂರು ಕಡೆ ಚಲಿಸುತ್ತಿದ್ದ ಮಿನಿ ಬಸ್ ಬೈಪಾಸ್ ಮಾರ್ಗವಾಗಿ ಮಂಗಳೂರು ಕಡೆ ಹೋಗುತ್ತಿತ್ತು. ಬೈಪಾಸ್ ರಸ್ತೆಯ ಬೊಳುವಾರು ಮಂಜಲ್ಪಡು ಮಧ್ಯೆ ನಿಯಂತ್ರಣ ತಪ್ಪಿ ರಸ್ತೆ ಬದಿಯ ಪ್ರಪಾತಕ್ಕೆ ವಾಲಿದ್ದು, ರಸ್ತೆ ಬದಿಯಲ್ಲಿದ್ದ ತಡೆ ಬೇಲಿಗೆ ಡಿಕ್ಕಿಯಾಗಿ ನಿಂತಿದೆ. ಬಸ್ ನಲ್ಲಿದ್ದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ.

ಪ್ರಪಾತಕ್ಕೆ ವಾಲಿದ ಮಿನಿ ಬಸ್ : ಪ್ರಯಾಣಿಕರು ಅಪಾಯದಿಂದ ಪಾರು Read More »

ಪಿಕ್‍ ಅಪ್ – ಬೈಕ್ ಡಿಕ್ಕಿ : ಬೈಕ್‍ ಸವಾರರಿಬ್ಬರಿಗೆ ಗಂಭೀರ ಗಾಯ

ಸವಣೂರು: ಪಿಕ್ ಅಪ್ ಮತ್ತು ಬೈಕ್ ಡಿಕ್ಕಿ ಹೊಡೆದುಕೊಂಡು ಬೈಕ್ ಸವಾರರಿಬ್ಬರು ಗಾಯಗೊಂಡ ಘಟನೆ ಸವಣೂರು ಸಮೀಪ ಚಾಪಳ್ಳ ಎಂಬಲ್ಲಿ ಇಂದು ನಡೆದಿದೆ. ಘಟನೆಯಿಂದ ಬೈಕ್ ಸವಾರರು ತೀವ್ರವಾಗಿ ಗಾಯಗೊಂಡಿದ್ದು, ಗಂಭೀರ ಸ್ಥಿತಿಯಲ್ಲಿದ್ದಾರೆ. ಗಾಯಾಳುಗಳಿಗೆ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ತಿಳಿದು ಬಂದಿಲ್ಲ.

ಪಿಕ್‍ ಅಪ್ – ಬೈಕ್ ಡಿಕ್ಕಿ : ಬೈಕ್‍ ಸವಾರರಿಬ್ಬರಿಗೆ ಗಂಭೀರ ಗಾಯ Read More »

ಮಾಜಿ ಶಾಸಕ ಮೊಯಿದೀನ್ ಬಾವಾ ಸಹೋದರ ಮಮ್ತಾಜ್ ಆಲಿ ಕಾರು ಅಪಘಾತ ಸ್ಥಿತಿಯಲ್ಲಿ ಪತ್ತೆ | ತನಿಖೆ ಕೈಗೆತ್ತಿಕೊಂಡ ಪೊಲೀಸರು

ಮಂಗಳೂರು: ಮಾಜಿ ಶಾಸಕ ಮೊಯಿದೀನ್ ಬಾವಾ ಅವರ ಸಹೋದರ ಮಮ್ರಾಜ್ ಅಲಿ ಅವರ ಕಾರು ಅಪಘಾತಗೊಂಡ ಸ್ಥಿತಿಯಲ್ಲಿ ಇಂದು ಮುಂಜಾನೆ ಕೂಳೂರು ಸೇತುವೆ ಮೇಲೆ ಪತ್ತೆಯಾಗಿದ್ದು, ಅವರು ನಾಪತ್ತೆಯಾಗಿದ್ದಾರೆ ಎಂದು ತಿಳಿದು ಬಂದಿದೆ. ಭಾನುವಾರ ಮುಂಜಾನೆ ಘಟನೆ ಬೆಳಕಿಗೆ ಬಂದಿದ್ದು, ಅಗ್ನಿಶಾಮಕ ಹಾಗೂ ಈಜು ತಜ್ಞರು ನದಿಯಲ್ಲಿ ಹುಡುಕಾಟ ಆರಂಭಿಸಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳದಲ್ಲಿ ತನಿಖೆ ಕೈಗೊಂಡಿದ್ದಾರೆ. ಮಮ್ರಾಜ್ ಅಲ್ಲಿ ಅವರು ತನ್ನ ಮಗಳಿಗೆ ನಾಟ್ರಸ್ ಮೂಲಕ ಇನ್ನು ನಾನು ಹಿಂತಿರುಗಿ ಬರುವುದಿಲ್ಲ ಎಂಬ ಸಂದೇಶ

ಮಾಜಿ ಶಾಸಕ ಮೊಯಿದೀನ್ ಬಾವಾ ಸಹೋದರ ಮಮ್ತಾಜ್ ಆಲಿ ಕಾರು ಅಪಘಾತ ಸ್ಥಿತಿಯಲ್ಲಿ ಪತ್ತೆ | ತನಿಖೆ ಕೈಗೆತ್ತಿಕೊಂಡ ಪೊಲೀಸರು Read More »

ಡಿವೈಡರ್ ಗೆ ಕಾರು ಡಿಕ್ಕಿ : ಪ್ರಯಾಣಿಕರು ಪಾರು

ಉಡುಪಿ: ಕಾರೊಂದು ರಸ್ತೆ ವಿಭಾಜಕದ ಗಾರ್ಡ್ ಗೆ ಡಿಕ್ಕಿಯಾಗಿ ಕಾರಿನಲ್ಲಿದ್ದ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳಿಂದ ಪಾರಾದ ಘಟನೆ ರಾಷ್ಟ್ರೀಯ ಹೆದ್ದಾರಿ 66 ಉದ್ಯಾವರದಲ್ಲಿ  ಶನಿವಾರ ರಾತ್ರಿ ನಡೆದಿದೆ. ಉಡುಪಿಯಿಂದ ಪಡುಬಿದ್ರೆಗೆ ಹೋಗುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಬೈಪಾಸ್ ನ  ರಸ್ತೆ ವಿಭಾಜದ ಬಳಿ ಡಿವೈಡರ್ ಮೇಲೇರಿದ್ದು ಡಿವೈಡರ್ ಮೇಲಿನ ಗಾರ್ಡ್ ಗೆ ಡಿಕ್ಕಿಯಾಗಿ ನಿಂತಿದೆ. ಕಾರಿನಲ್ಲಿ ಮಹಿಳೆ ಸಹಿತ ಐದು ಮಂದಿ ಪ್ರಯಾಣಿರಲ್ಲಿ ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿದೆ. ಅಪಘಾತ ನಡೆದ ವೇಳೆ ಆ ದಾರಿಯಾಗಿ ಹೋಗುತ್ತಿದ್ದ

ಡಿವೈಡರ್ ಗೆ ಕಾರು ಡಿಕ್ಕಿ : ಪ್ರಯಾಣಿಕರು ಪಾರು Read More »

ಟ್ರ್ಯಾಕ್ಟರ್‌ಗೆ ಲಾರಿ ಡಿಕ್ಕಿ : 10 ಮಂದಿ ಸಾವು

ಲಖನೌ: : ಉತ್ತರ ಪ್ರದೇಶದ ಮಿರ್ಜಾಪುರ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 10 ಮಂದಿ ಸಾವನ್ನಪ್ಪಿರುವ ಘಟನೆ ಶುಕ್ರವಾರ ಮುಂಜಾನೆ ನಡೆದಿದೆ. ಕಾರ್ಮಿಕರನ್ನು ತುಂಬಿದ್ದ ಟ್ರ್ಯಾಕ್ಟರ್ ಟ್ರಾಲಿಗೆ ಟ್ರಕ್ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಪರಿಣಾಮ ಅಪಘಾತದಲ್ಲಿ 10 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.ಘಟನೆಯಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಪೊಲೀಸರು ಸ್ಥಳಕ್ಕೆ ಧಾವಿಸಿ ಗಾಯಾಳುಗಳನ್ನು ಆಂಬ್ಯುಲೆನ್ಸ್‌ನಲ್ಲಿ ಆಸ್ಪತ್ರೆಗೆ ರವಾನಿಸಿದ್ದಾರೆ. ಮೃತಪಟ್ಟವರೆಲ್ಲರೂ ವಾರಾಣಸಿ ನಿವಾಸಿಗಳು ಎಂದು ತಿಳಿದುಬಂದಿದೆ.ಗುರುವಾರ ರಾತ್ರಿ 1 ಗಂಟೆ ಸುಮಾರಿಗೆ ಮಿರ್ಜಾಪುರದ ಕಚವಾನ್ ಪ್ರದೇಶದ ಕಟ್ಕಾ ಗ್ರಾಮದ

ಟ್ರ್ಯಾಕ್ಟರ್‌ಗೆ ಲಾರಿ ಡಿಕ್ಕಿ : 10 ಮಂದಿ ಸಾವು Read More »

ಹೆಲಿಕಾಪ್ಟರ್‌ ಪತನ : ಇಬ್ಬರು ಪೈಲಟ್‌ಗಳ ಸಹಿತ ಮೂವರು ಸಾವು

ಪುಣೆ: ಮಹಾರಾಷ್ಟ್ರದ ಪುಣೆ ಜಿಲ್ಲೆಯ ಬಾವ್ಧಾನ್‌ ಎಂಬಲ್ಲಿ ಇಂದು ಬೆಳಗ್ಗೆ ಹೆಲಿಕಾಪ್ಟರ್‌ ಪತನಗೊಂಡು ಅದರಲ್ಲಿದ್ದ ಇಬ್ಬರು ಪೈಲಟ್‌ಗಳು ಹಾಗೂ ಓರ್ವ ಒಂಜಿನಿಯರ್‌ ಸಾವಿಗೀಡಾಗಿದ್ದಾರೆ. ಸಮೀಪದ ಹೆಲಿಪ್ಯಾಡ್‌ನಿಂದ ಟೇಕಾಫ್‌ ಆಗಿದ್ದ ಹೆಲಿಕಾಪ್ಟರ್‌ ಕೆಲವೇ ಕ್ಷಣಗಳಲ್ಲಿ ಪತನಗೊಂಡು ಹೊತ್ತಿ ಉರಿದಿದ್ದು, ಅದರಲ್ಲಿದ್ದ ಮೂವರು ಸುಟ್ಟುಕರಕಲಾಗಿದ್ದಾರೆ.ಪೊಲೀಸರು, ಅಗ್ನಿಶಾಮಕ ದಳ ಹಾಗೂ ವಿಪತ್ತು ಪರಿಹಾರ ದಳ ಸ್ಥಳಕ್ಕೆ ಧಾವಿಸಿದೆ. ಬೆಳಗ್ಗೆ 6.50ರ ಸುಮಾರಿಗೆ ಈ ಘಟನೆ ನಡೆದಿದೆ. ದಟ್ಟ ಮಂಜು ಆವರಿಸಿದ್ದದ್ದು ಅವಘಡಕ್ಕೆ ಕಾರಣ ಎನ್ನಲಾಗಿದೆ. ಹೆಲಿಕಾಪ್ಟರ್‌ ಹೆರಿಟೇಜ್‌ ಏವಿಯೇಶನ್‌ ಸಂಸ್ಥೆಗೆ ಸೇರಿದ್ದು

ಹೆಲಿಕಾಪ್ಟರ್‌ ಪತನ : ಇಬ್ಬರು ಪೈಲಟ್‌ಗಳ ಸಹಿತ ಮೂವರು ಸಾವು Read More »

ಮನೆಯ ಅಂಗಳದಲ್ಲೇ ಕಾರಿನಡಿಗೆ ಬಿದ್ದು ಬಾಲಕ ಮೃತ್ಯು

ಪುತ್ತೂರು: ಕೊಕ್ಕಡದಲ್ಲಿ ಮನೆಯೊಂದರ ಅಂಗಳದಲ್ಲಿ ಕಾರೊಂದನ್ನು ಹಿಂದಕ್ಕೆ ಚಲಾಯಿಸುತ್ತಿದ್ದ ವೇಳೆ ಬಾಲಕನೋರ್ವ ಕಾರಿನಡಿಗೆ ಬಿದ್ದು ಮೃತಪಟ್ಟ ಘಟನೆ ಅ.1ರಂದು ರಾತ್ರಿ ನಡೆದಿದೆ. ಕೊಕ್ಕಡದ ಹಮೀದ್ ಎಂಬವರ 10 ವರ್ಷ ಪ್ರಾಯದ ಪುತ್ರ ನವಾಫ್ ಮೃತಪಟ್ಟವರು.ಹಮೀದ್ ಅವರ ಮನೆಗೆ ಬಂದಿದ್ದ ಸಂಬಂಧಿಕರು ಮನೆಯಂಗಳದಲ್ಲಿ ಕಾರನ್ನು ಹಿಂದಕ್ಕೆ ಚಲಾಯಿಸಿದಾಗ ಕಾರಿನ ಹಿಂಬದಿ ನಿಂತಿದ್ದ ನವಾಫ್ ಅವರು ಕಾರಿನಡಿಗೆ ಬಿದ್ದರು ಎನ್ನಲಾಗಿದೆ. ಅವರ ಮೇಲೆಯೇ ಕಾರು ಹರಿದ ಪರಿಣಾಮ ತಲೆ ಮತ್ತು ಕಾಲಿಗೆ ಗಂಭೀರ ಗಾಯಗಳಾಗಿ ಮೃತಪಟ್ಡಿದ್ದಾರೆ. ನವಾಫ್ ಅವರು ಕಾರಿನ

ಮನೆಯ ಅಂಗಳದಲ್ಲೇ ಕಾರಿನಡಿಗೆ ಬಿದ್ದು ಬಾಲಕ ಮೃತ್ಯು Read More »

ಹೊಸ್ಮಾರಿನಲ್ಲಿ ಭೀಕರ ಅಪಘಾತ – ಒಂದೇ ಕುಟುಂಬದ ನಾಲ್ವರ ದುರ್ಮರಣ

ಕಾರ್ಕಳ: ಮಿನಿ ಲಾರಿ ಮತ್ತು ಬೈಕ್ ಮಧ್ಯೆ ಭೀಕರ ಅಪಘಾತ ಸಂಭವಿಸಿ ಒಂದೇ ಕುಟುಂಬದ ನಾಲ್ವರು ಸಾವನನಪ್ಪಿದ ಘಟನೆ  ಹೊಸ್ಮಾರು ಪಾಜೆಗುಡ್ಡೆ ಬಳಿ ಇಂದು ನಡೆದಿದೆ. ಬೈಕಿನಲ್ಲಿ ಪತಿ, ಪತ್ನಿ ಮತ್ತು ಮೂವರು ಮಕ್ಕಳಿದ್ದು, ಬೈಕಿನಲ್ಲಿದ್ದ ನಾಲ್ಕು ಮಂದಿ ಸಾವನಪ್ಪಿದ್ದಾರೆ. ಮೃತರನ್ನು ಸುರೇಶ್ ಆಚಾರ್ಯ (36) ಮೀನಾಕ್ಷಿ (32) ಸುಮಿಕ್ಷಾ (7) ಸುಶ್ಮಿತಾ (5) ಸುಶಾಂತ್ (2) ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ಪೊಲೀಸರು ತೆರಳಿ ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದೆ.

ಹೊಸ್ಮಾರಿನಲ್ಲಿ ಭೀಕರ ಅಪಘಾತ – ಒಂದೇ ಕುಟುಂಬದ ನಾಲ್ವರ ದುರ್ಮರಣ Read More »

ಕಂಟೈನರ್‌ಗೆ ಡಿಕ್ಕಿಯಾದ ಬಸ್‌ : 20 ಪ್ರಯಾಣಿಕರು ಗಂಭೀರ

ಮಂಡ್ಯ : ಬೆಂಗಳೂರು-ಮೈಸೂರು ‌ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಡ್ಯದ ಸಾಂಜೋ ಆಸ್ಪತ್ರೆ ಬಳಿಯ ಭೀಕರ ಅಪಘಾತ ಸಂಭವಿಸಿ 20ಕ್ಕೂ ಹೆಚ್ಚು ಜನರಿಗೆ ಗಾಯವಾಗಿದ್ದು, ಹಲವರ ಸ್ಥಿತಿ ಗಂಭೀರವಾಗಿದೆ. ಬೆಂಗಳೂರಿನಿಂದ ಮಂಡ್ಯ ಕಡೆಗೆ ಬರುತ್ತಿದ್ದ ಕೆಎಸ್​ಆರ್​ಟಿಸಿ ಬಸ್ ಹೆದ್ದಾರಿಯಿಂದ ಸರ್ವಿಸ್​ ರಸ್ತೆಗೆ ಬರುವಾಗ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ನಿಂತಿದ್ದ ಕಂಟೈನರ್​ಗೆ ಡಿಕ್ಕಿ ಹೊಡೆದು, ಪಲ್ಟಿಯಾಗಿದೆ. ಗಾಯಾಳುಗಳನ್ನು ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಕಂಟೈನರ್‌ಗೆ ಡಿಕ್ಕಿಯಾದ ಬಸ್‌ : 20 ಪ್ರಯಾಣಿಕರು ಗಂಭೀರ Read More »

error: Content is protected !!
Scroll to Top