ಅಪಘಾತ

ಟ್ಯಾಂಕರ್-ತ್ರಿವೀಲರ್ ಸ್ಕೂಟರ್ ಅಪಘಾತ : ವಿಕಲಚೇತನ ಶಿವರಾಮ ನಾಯ್ಕ ಮೃತ್ಯು

ಪುತ್ತೂರು: ಟ್ಯಾಂಕರ್ ಮತ್ತು ತ್ರಿವೀಲರ್ ಸ್ಕೂಟರ್ ನಡುವೆ ನಡೆದ ಅಪಘಾತದಲ್ಲಿ ಸ್ಕೂಟರ್ ಸವಾರ ವಿಕಲ ಚೇತನ ವ್ಯಕ್ತಿಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ನೆಹರುನಗರ ಮಂಜಲಪಡ್ಡು ಬಳಿಯ ಪೆಟ್ರೋಲ್ ಪಂಪ್ ಮುಂಭಾಗ ನಿನ್ನೆ ರಾತ್ರಿ ಸಂಭವಿಸಿದೆ. ಮಿತ್ತೂರು ಏಮಾಜೆಯ ವಿಕಲಚೇತನ ಶಿವರಾಮ ನಾಯ್ಕ (50) ಮೃತಪಟ್ಟವರು. ಮಂಗಳೂರು ಕಡೆ ಹೋಗುತ್ತಿದ್ದ ಟ್ಯಾಂಕರ್ ವೊಂದು ವಿಕಲಚೇತನ ಶಿವರಾಮ ಅವರು ಚಲಾಯಿಸುತ್ತಿದ್ದ ತ್ರಿವೀಲ‌ರ್ ಸ್ಕೂಟರ್ ಗೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ತೀವು ಗಾಯಗೊಂಡ ಅವರು ಸ್ಥಳದಲ್ಲೇ ಮೃತ ಪಟ್ಟಿದ್ದಾರೆಂದು ತಿಳಿದು ಬಂದಿದೆ. […]

ಟ್ಯಾಂಕರ್-ತ್ರಿವೀಲರ್ ಸ್ಕೂಟರ್ ಅಪಘಾತ : ವಿಕಲಚೇತನ ಶಿವರಾಮ ನಾಯ್ಕ ಮೃತ್ಯು Read More »

ಲಾರಿಗೆ ಟಯರ್ ಜೋಡಣೆ ವೇಳೆ ರಿಂಗ್ ಚಿಮ್ಮಿ ಕಾರ್ಮಿಕ ಗಂಭೀರ ಗಾಯ

ಪುತ್ತೂರು: ಲಾರಿಯೊಂದಕ್ಕೆ ಟಯರ್ ಜೋಡಣೆ ವೇಳೆ ಟಯರ್ ರಿಂಗ್ ಚಿಮ್ಮಿ ಟಯರ್ ಸಮೇತ ಎಸೆಯಲ್ಪಟ್ಟ ಕಾರ್ಮಿಕರೊಬ್ಬರು ಗಂಭೀರ ಗಾಯಗೊಂಡ ಘಟನೆ ಪುತ್ತೂರು ಪರ್ಲಡ್ಕ ಗೋಳಿಕಟ್ಟೆ ಮಸೀದಿ ಬಳಿ ನಿನ್ನೆ ರಾತ್ರಿ ಸಂಭವಿಸಿದೆ. ಕರಾಯ ಜನತಾ ಕಾಲೋನಿ ನಿವಾಸಿ ರಶೀದ್ ಗಂಭೀರ ಗಾಯಗೊಂಡವರು. ಲಾರಿಯೊಂದು ಟಯರ್ ಪಂಚರ್ ಆದ ಪರಿಣಾಮ ಪರ್ಲಡ್ಕ ಗೋಳಿಕಟ್ಟೆ ಮಸೀದಿ ಬಳಿ ನಿಲ್ಲಿಸಲಾಗಿತ್ತು. ಅದರ ಚಾಲಕ ಕರಾಯಕ್ಕೆ ಹೋಗಿ ಟಯರ್ ಪಂಚರ್ ಮಾಡಿಸಿಕೊಂಡು ಆಟೋರಿಕ್ಷಾದಲ್ಲಿ ಟಯರ್ ತಂದಿದ್ದರು. ಟಯರ್ ಜೋಡಣೆ ಮಾಡಲು ಕರಾಯದಿಂದಲೇ ಬಂದ

ಲಾರಿಗೆ ಟಯರ್ ಜೋಡಣೆ ವೇಳೆ ರಿಂಗ್ ಚಿಮ್ಮಿ ಕಾರ್ಮಿಕ ಗಂಭೀರ ಗಾಯ Read More »

ಸ್ಕೂಟಿ-ಸರಕಾರಿ ಬಸ್ ಅಪಘಾತ | ಸ್ಕೂಟಿ ಸವಾರ, ನೆಲ್ಲೂರು ಕೆಮ್ರಾಜೆ ಪಂಚಾಯಿತಿ ಸದಸ್ಯ ಮೃತ್ಯು

ಸುಳ್ಯ: ದ್ವಿಚಕ್ರ ವಾಹನ ಹಾಗೂ ಸರಕಾರಿ  ಬಸ್ ನಡುವೆ ನಡೆದ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟ ಘಟನೆ ಸೋಣಂಗೇರಿ ಸಮೀಪದ ಸುತ್ತುಕೋಟೆಯಲ್ಲಿ ಇಂದು ನಡೆದಿದೆ. ನೆಲ್ಲೂರು ಕೆಮ್ರಾಜೆ ಗ್ರಾಮ ಪಂಚಾಯತ್ ಸದಸ್ಯ ರಾಮಚಂದ್ರ ಪ್ರಭು (68) ಮೃತಪಟ್ಟವರು. ರಾಮಚಂದ್ರ ಪ್ರಭು ಅವರು ತನ್ನ ಸ್ಕೂಟಿಯಲ್ಲಿ ಸುಳ್ಯಕ್ಕೆ ಬರುತ್ತಿದ್ದ ವೇಳೆ ಎದುರಿನಿಂದ ಬರುತ್ತಿದ್ದ ಕೆಎಸ್‌ ಆರ್‌ ಟಿಸಿ ಬಸ್ ನಡುವೆ ಅಪಘಾತವಾಗಿದೆ. ಅಪಘಾತದಲ್ಲಿ ಗಂಭೀರ ಗಾಯಗೊಂಡ ರಾಮಚಂದ್ರ ಪ್ರಭುರವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ರಾಮಚಂದ್ರ ಪ್ರಭು

ಸ್ಕೂಟಿ-ಸರಕಾರಿ ಬಸ್ ಅಪಘಾತ | ಸ್ಕೂಟಿ ಸವಾರ, ನೆಲ್ಲೂರು ಕೆಮ್ರಾಜೆ ಪಂಚಾಯಿತಿ ಸದಸ್ಯ ಮೃತ್ಯು Read More »

ಚಾಲಕನ ನಿಯಂತ್ರಣ ತಪ್ಪಿ ಕಾರು ಹೊಂಡಕ್ಕೆ !

ವಿಟ್ಲ : ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಹೊಂಡಕ್ಕೆ ಬಿದ್ದ ಪರಿಣಾಮ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾದ ಘಟನೆ ವಿಟ್ಲ ಚಂದಳಿಕೆ ತಿರುವಿನಲ್ಲಿ ಇಂದು ನಡೆದಿದೆ. ಅತೀ ವೇಗವಾಗಿ ಕಾರು ವಿಟ್ಲ ಪುತ್ತೂರು ರಸ್ತೆಯ ಚಂದಳಿಕೆ ತಿರುವಿನಲ್ಲಿ ಚಲಿಸುತ್ತಿದ್ದ ಸಂದರ್ಭ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ಹೊಂಡಕ್ಕೆ ಬಿದ್ದಿದೆ. ತಕ್ಷಣ ಸಾರ್ವಜನಿಕರು ಸ್ಥಳಕ್ಕೆ ಆಗಮಿಸಿದ್ದಾರೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.

ಚಾಲಕನ ನಿಯಂತ್ರಣ ತಪ್ಪಿ ಕಾರು ಹೊಂಡಕ್ಕೆ ! Read More »

ಎಲ್‍ ಪಿಜಿ ಸಾಗಾಟ ಮಾಡುತ್ತಿದ್ದ ಲಾರಿಯಿಂದ ಗ್ಯಾಸ್ ಸೋರಿಕೆ

ಬಂಟ್ವಾಳ : ಎಲ್‍ ಪಿಜಿ ಗ್ಯಾಸ್ ಸಾಗಾಟ ಮಾಡುತ್ತಿದ್ದ ಲಾರಿಯಲ್ಲಿದ್ದ ಗ್ಯಾಸ್ ಸಿಲಿಂಡರ್‍ ನಿಂದ ಗ್ಯಾಸ್ ಸೋರಿಕೆಯಾದ ಘಟನೆ ಬಂಟ್ವಾಳದಲ್ಲಿ ನಡೆದಿದೆ. ಮಂಗಳೂರಿನಿಂದ ಬೆಂಗಳೂರಿಗೆ ಗ್ಯಾಸ್ ಸಾಗಾಟ ಮಾಡುತ್ತಿತ್ತು ಎನ್ನಲಾಗಿದೆ. ಅಗ್ನಿ ಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಎಲ್‍ ಪಿಜಿ ಸಾಗಾಟ ಮಾಡುತ್ತಿದ್ದ ಲಾರಿಯಿಂದ ಗ್ಯಾಸ್ ಸೋರಿಕೆ Read More »

ಬೈಕ್‍ ಗಳೆರಡು ಡಿಕ್ಕಿ : ಓರ್ವ ಮೃತ್ಯು, ಮೂವರಿಗೆ ಗಾಯ

ತಣ್ಣೀರುವಂತ : ಬೈಕ್‍ ಗಳೆರಡು ಡಿಕ್ಕಿ ಹೊಡೆದುಕೊಂಡ ಪರಿಣಾಮ ಒಂದು ಬೈಕ್ ನ ಸವಾರ ಮೃತಪಟ್ಟು, ನಾಲ್ವರು ಗಾಯಗೊಂಡ ಘಟನೆ ತಣ್ಣೀರುಪಂತ ಗ್ರಾಮದ ತುರ್ಕಳಿಕೆ ಎಂಬಲ್ಲಿ ನಿನ್ನೆ ರಾತ್ರಿ ಸಂಭವಿಸಿದೆ. ಬಾರ್ಯ ನಿವಾಸಿ ಶಿವಾನಂದ ಅಪಘಾತದಿಂದ ಮೃತಪಟ್ಟವರು ಎನ್ನಲಾಗಿದೆ. ಶಿವಾನಂದ ಹಾಗೂ ಅವರ ಸಹೋದರ ಕಲ್ಲೇರಿಯಿಂದ ಬಾರ್ಯದಲ್ಲಿರುವ ತಮ್ಮ ಮನೆ ಕಡೆ ಬೈಕ್ ನಲ್ಲಿ ತೆರಳುವಾಗ ಎದುರುಗಡೆಯಿಂದ ಬಂದ ಬೈಕ್ ಗಳ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಪರಿಣಾಮ ಶಿವಾನಂದ ಎಂಬವರು ರಸ್ತೆಗೆಸೆಯಲ್ಪಟ್ಟು ಗಂಭೀರ ಸ್ವರೂಪದ ಗಾಯಗಳಾಗಿತ್ತು ಕೂಡಲೇ

ಬೈಕ್‍ ಗಳೆರಡು ಡಿಕ್ಕಿ : ಓರ್ವ ಮೃತ್ಯು, ಮೂವರಿಗೆ ಗಾಯ Read More »

ರೈಲ್ವೆ ಹಳಿಯಲ್ಲಿ ಮದ್ಯ ಸೇವನೆ ಮಾಡುತ್ತಿದ್ದವರ ಮೇಲೆ ಹರಿದ ರೈಲು | ಮೂವರೂ ಮೃತ್ಯು

ಗಂಗಾವತಿ: ರೈಲು ಹಳಿಯ ಮೇಲೆ ಕುಳಿತು ಮದ್ಯ ಸೇವನೆ ಮಾಡುತ್ತಿದ್ದ ಸಂದರ್ಭ ಮೂವರು ಯುವಕರ ಮೇಲೆ ರೈಲು ಹರಿದು ಮೂವರೂ ಮೃತಪಟ್ಟ ಘಟನೆ ಗಂಗಾವತಿಯ ಕನಕಗಿರಿ ರಸ್ತೆಯ ರೈಲ್ವೇ ಮಾರ್ಗದಲ್ಲಿ ನಿನ್ನೆ ರಾತ್ರಿ ನಡೆದಿದೆ. ಗಂಗಾವತಿಯ ಮೌನೇಶ (23), ಸುನೀಲ್ ಕುಮಾರ(23), ವೆಂಕಟ್ (20) ಮೃತಪಟ್ಟವರು.  ಮೂವರು ನಿನ್ನೆ ರಾತ್ರಿ 9 ಗಂಟೆ ಸುಮಾರಿಗೆ ಕನಕಗಿರಿ ರಸ್ತೆಯಲ್ಲಿರುವ ರೈಲ್ವೇ ಹಳಿ ಮೇಲೆ ಕುಳಿತು ಮದ್ಯ ಸೇವನೆ ಮಾಡುತ್ತಿದ್ದರು ಎನ್ನಲಾಗಿದೆ ಈ ಸಂದರ್ಭದಲ್ಲಿ ಹುಬ್ಬಳ್ಳಿ ಕಡೆಯಿಂದ ಆಗಮಿಸಿದ ರೈಲು

ರೈಲ್ವೆ ಹಳಿಯಲ್ಲಿ ಮದ್ಯ ಸೇವನೆ ಮಾಡುತ್ತಿದ್ದವರ ಮೇಲೆ ಹರಿದ ರೈಲು | ಮೂವರೂ ಮೃತ್ಯು Read More »

ಹಳಿತಪ್ಪಿದ ರೈಲು | ನಾಲ್ವರು ಸಾವು, 25 ಮಂದಿಗೆ ಗಾಯ

ಉತ್ತರ ಪ್ರದೇಶ: ದಿಬ್ರುಗಢ ಎಕ್ಸ್‌ಪ್ರೆಸ್‌ನ  15 ಬೋಗಿಗಳು ಹಳಿ ತಪ್ಪಿ ನಾಲ್ವರು ಮೃತಪಟ್ಟು, 25 ಮಂದಿ ಗಾಯಗೊಂಡ ಘಟನೆ ನಡೆದಿದೆ. ಹಳಿ ತಪ್ಪಿದ ರೈಲು ಚಂಡೀಗಢದಿಂದ ಬರುತ್ತಿತ್ತು. ಯುಪಿಯ ಜಿಲಾಹಿ ರೈಲು ನಿಲ್ದಾಣ ಮತ್ತು ಗೋಸಾಯಿ ದಿಹ್ವಾ ನಡುವೆ ಈ ದುರ್ಘಟನೆ ಸಂಭವಿಸಿದೆ. ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ರೈಲ್ವೆ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದಾರೆ. ರಕ್ಷಣಾ ಕಾರ್ಯಾಚರಣೆ ಆರಂಭವಾಗಿದೆ. ಉತ್ತರ ಪ್ರದೇಶ ಮತ್ತು ಅಸ್ಸಾಂ ಸರ್ಕಾರಗಳು ಕಾರ್ಯಾಚರಣೆಯನ್ನು ಗಮನಿಸುತ್ತಿವೆ. ಕಳೆದ ತಿಂಗಳು ಜೂನ್ 17ರಂದೇ ಪಶ್ಚಿಮ ಬಂಗಾಳದ ಡಾರ್ಜಿಲಿಂಗ್‌ನಲ್ಲಿ

ಹಳಿತಪ್ಪಿದ ರೈಲು | ನಾಲ್ವರು ಸಾವು, 25 ಮಂದಿಗೆ ಗಾಯ Read More »

ಐರಾವತ ಬಸ್ಸಿಗೆ ಬೆಂಕಿ | ಸ್ಥಳೀಯ ಯುವಕರ ಸಕಾಲಿಕ ಪ್ರಯತ್ನದಿಂದ ತಪ್ಪಿದ ಅನಾಹುತ

ಉಪ್ಪಿನಂಗಡಿ: ಐರಾವತ ಬಸ್ಸೊಂದಕ್ಕೆ ಬೆಂಕಿ ಹಿಡಿದ ಘಟನೆ ಇಂದು ಬೆಳಿಗ್ಗೆ ಉಪ್ಪಿನಂಗಡಿ ಹಳೆಗೇಟು ಎಂಬಲ್ಲಿ ನಡೆದಿದೆ. ಬೆಂಕಿ ಹತ್ತಿಕೊಂಡ ತಕ್ಷಣ ಸ್ಥಳೀಯ ಯುವಕರ ಸಕಾಲಿಕ ಪ್ರಯತ್ನದಿಂದ ಬೆಂಕಿ ಆರಿಸಿ ಸಂಭವಿಸಬಹುದಾಗಿದ್ದ ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ. ಬೆಂಗಳೂರಿನಿಂದ – ಮಂಗಳೂರಿಗೆ ಆಗಮಿಸುತ್ತಿದ್ದ ಐರಾವತ ಬಸ್ಸಿನ ಹಿಂಬದಿ ಎಸಿಗೆ ಬೆಂಕಿ ಹತ್ತಿಕೊಂಡಿದೆ. ಗಮನಿಸಿದ ಚಾಲಕ ಹಳೆಗೇಟು ಬಳಿ ಬಸ್ಸನ್ನು ನಿಲ್ಲಿಸಿದ್ದಾನೆ. ಆಗ ಪ್ರಯಾಣಿಕರೆಲ್ಲರೂ ಬಸ್ಸಿನಿಂದ ಇಳಿದಿದ್ದಾರೆ. ಆಗ ಅಲ್ಲಿದ್ದ ಉಪ್ಪಿನಂಗಡಿ ಗ್ರಾ.ಪಂ. ಸಿಬ್ಬಂದಿಯಾದ ಇಸಾಕ್, ಇನ್ಸಾಲ್, ಸ್ಥಳೀಯರಾದ ಜಾಯಿ, ಸ್ನೇಕ್

ಐರಾವತ ಬಸ್ಸಿಗೆ ಬೆಂಕಿ | ಸ್ಥಳೀಯ ಯುವಕರ ಸಕಾಲಿಕ ಪ್ರಯತ್ನದಿಂದ ತಪ್ಪಿದ ಅನಾಹುತ Read More »

ಅಂಬಲಪಾಡಿ ಅಗ್ನಿ ಅವಘಡ | ಮೃತಪಟ್ಟ ರಮಾನಂದ ಶೆಟ್ಟಿ ಅವರ ಪತ್ನಿಯೂ ಮೃತ್ಯು

ಉಡುಪಿ : ಅಂಬಲಪಾಡಿಯ ಶೆಟ್ಟಿ ಬಾರ್ ಅಂಡ್ ರೆಸ್ಟೋರೆಂಟ್ ಮಾಲೀಕ ರಮಾನಂದ್ ಶೆಟ್ಟಿ ಅವರ ಮನೆಯಲ್ಲಿ ಸಂಭವಿಸಿದ ಬೆಂಕಿ ಅನಾಹುತದಲ್ಲಿ  ಮೃತಪಟ್ಟಿದ್ದು, ಇದೀಗ ಗಂಭೀರ ಗಾಯಗೊಂಡಿದ್ದ ಅವರ ಪತ್ನಿಯೂ ಸಾವನ್ನಪ್ಪಿದ್ದಾರೆ. ಅಶ್ವಿನಿ (50) ಮೃತ ಪಟ್ಟವರು. ಚಿಕಿತ್ಸೆ ಫಲಕಾರಿಯಾಗದೇ ನಿನ್ನೆ ಸಂಜೆ ಅಶ್ವಿನಿ ಮೃತಪಟ್ಟಿದ್ದಾರೆ. ಬೆಂಕಿ ಕೆನ್ನಾಲಿಗೆಗೆ ಗಂಭಿರವಾಗಿ ಗಾಯಗೊಂಡಿದ್ದ ಅಶ್ವಿನಿ ಉಸಿರಾಟ ಹಾಗೂ ಶಾಸ್ವಕೋಶ ಸಮಸ್ಯೆಯಿಂದ ಬಳಲುತ್ತಿದ್ದರು. ಇನ್ನು ಅವರಿಬ್ಬರ ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ತಂದೆ-ತಾಯಿಯನ್ನು ಕಳೆದುಕೊಂಡು ಮಕ್ಕಳು ಅನಾಥರಾಗಿದ್ದಾರೆ.

ಅಂಬಲಪಾಡಿ ಅಗ್ನಿ ಅವಘಡ | ಮೃತಪಟ್ಟ ರಮಾನಂದ ಶೆಟ್ಟಿ ಅವರ ಪತ್ನಿಯೂ ಮೃತ್ಯು Read More »

error: Content is protected !!
Scroll to Top