ಅಪಘಾತ

ಪುತ್ತೂರಿನಲ್ಲಿ ಆಟೋಗೆ ಕಾರು ಡಿಕ್ಕಿ : ನಾಲ್ಕೂವರೆ ವರ್ಷದ ಮಗು, ಮಹಿಳೆ ದಾರುಣ ಸಾವು

ಪರ್ಪುಂಜ ಕೊಯಿಲತ್ತಡ್ಕ ಅಬ್ರೋಡ್ ಹಾಲ್ ಬಳಿ ಸಂಭವಿಸಿದ ಭೀಕರ ಅಪಘಾತ ಪುತ್ತೂರು: ಆಟೋಗೆ ಕಾರು ಡಿಕ್ಕಿಯಾದ ಪರಿಣಾಮ ನಾಲ್ಕೂವರೆ ವರ್ಷದ ಮಗು ದಾರುಣವಾಗಿ ಮೃತಪಟ್ಟಿರುವ ಘಟನೆ ಪುತ್ತೂರು ತಾಲೂಕಿನ ಪರ್ಪುಂಜ ಕೊಯಿಲತ್ತಡ್ಕದಲ್ಲಿ ನಡೆದಿದೆ. ನಿನ್ನೆ ರಾತ್ರಿ ಪುತ್ತೂರು ತಾಲೂಕಿನ ಕುಂಬ್ರ ಸಮೀಪ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಪರ್ಪುಂಜ ಕೊಯಿಲತ್ತಡ್ಕ ಅಬ್ರೋಡ್ ಹಾಲ್ ಬಳಿ ಈ ಭೀಕರ ಅಪಘಾತವಾಗಿದೆ. ಸುಳ್ಯ ಕಡೆಯಿಂದ ಪುತ್ತೂರಿನತ್ತ ತೆರಳುತ್ತಿದ್ದ ಕಾರು ಚಾಲಕ ಬಸ್ಸನ್ನು ಓವರ್​ಟೇಕ್​ ಮಾಡಲು ಯತ್ನಿಸಿದ್ದಾನೆ. ಈ ವೇಳೆ ನಿಯಂತ್ರಣ ಕಳೆದುಕೊಂಡ […]

ಪುತ್ತೂರಿನಲ್ಲಿ ಆಟೋಗೆ ಕಾರು ಡಿಕ್ಕಿ : ನಾಲ್ಕೂವರೆ ವರ್ಷದ ಮಗು, ಮಹಿಳೆ ದಾರುಣ ಸಾವು Read More »

ಬಿಸಿಲೆ ಘಾಟಿಯಲ್ಲಿ ಮಿನಿಬಸ್‌ ಪಲ್ಟಿ : 20 ಜನರಿಗೆ ಗಾಯ

ಸುಬ್ರಹ್ಮಣ್ಯಕ್ಕೆ ಮದುವೆಗೆಂದು ಬರುತ್ತಿದ್ದ ಬಸ್‌ 20 ಅಡಿ ಆಳಕ್ಕೆ ಪಲ್ಟಿ ಸುಬ್ರಹ್ಮಣ್ಯ: ಮದುವೆ ಸಮಾರಂಭದಲ್ಲಿ ಭಾಗವಹಿಸಲು ವನಗೂರಿನಿಂದ ಕುಕ್ಕೆ ಸುಬ್ರಮಣ್ಯಕ್ಕೆ ಬರುತ್ತಿದ್ದ 30 ಜನರಿದ್ದ ಮಿನಿ ಬಸ್‌ ಬಿಸಿಲೆ ಘಾಟ್ ಡಬಲ್ ಟರ್ನ್‌ನಲ್ಲಿ 20 ಅಡಿ ಎತ್ತರದಿಂದ ಮಗುಚಿ ಬಿದ್ದಿದ್ದು, 20 ಜನರು ಗಾಯಗೊಂಡು 4 ಜನರಿಗೆ ಗಂಭೀರ ಗಾಯವಾಗಿರುವ ಘಟನೆ ವನಗೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದಿದೆ. ಕುಕ್ಕೆ ಸುಬ್ರಹ್ಮಣ್ಯದ ಆದಿ ಸುಬ್ರಹ್ಮಣ್ಯದಲ್ಲಿ ಕೂಡುರಸ್ತೆ ವನಗೂರಿನ ಯುವಕ ಮತ್ತು ಏನೆಕಲ್ಲಿನ ಯುವತಿ ಮದುವೆ ಇಂದು ನಡೆಯಬೇಕಿತ್ತು.

ಬಿಸಿಲೆ ಘಾಟಿಯಲ್ಲಿ ಮಿನಿಬಸ್‌ ಪಲ್ಟಿ : 20 ಜನರಿಗೆ ಗಾಯ Read More »

ಡಿವೈಡರ್‌ಗೆ ಗುದ್ದಿದ ಕಾರು: ಕುದ್ಮಾರಿನ ಯುವಕ ಮೃತ್ಯು

ಬಂಟ್ವಾಳ: ಕಾರ್ ಒಂದು ಪಾಣೆಮಂಗಳೂರು ಫ್ಲೈ ಓವರ್‌ನ ಡಿವೈಡರ್‌ಗೆ ಢಿಕ್ಕಿ ಹೊಡೆದ ಪರಿಣಾಮ ಪುತ್ತೂರಿನ ಯುವಕನೊಬ್ಬ ಮೃತಪಟ್ಟ ಘಟನೆ ನಡೆದಿದೆ. ಕುದ್ಮಾರು ‌ನಿವಾಸಿ ಕಾರ್ತಿಕ್(24) ಮೃತ ದುರ್ದೈವಿ. ಕಾರಿನಲ್ಲಿ ಮೂರು ಮಂದಿ ಪ್ರಯಾಣಿಸುತ್ತಿದ್ದು, ನಿಯಂತ್ರಣ ತಪ್ಪಿ ಡಿವೈಡರ್‌ಗೆ ಗುದ್ದಿದೆ. ಪರಿಣಾಮ ಕಾರ್ತಿಕ್ ಅವರು ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣವೇ ಅವರನ್ನು ಮಂಗಳೂರಿನ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾಗಿ ತಿಳಿದು ಬಂದಿದೆ.

ಡಿವೈಡರ್‌ಗೆ ಗುದ್ದಿದ ಕಾರು: ಕುದ್ಮಾರಿನ ಯುವಕ ಮೃತ್ಯು Read More »

ಫ್ಲೈವುಡ್‌ ಕಾರ್ಖಾನೆಯಲ್ಲಿ ಭೀಕರ ಸ್ಫೋಟ : ಓರ್ವ ಸಾವು, ಹಲವು ಮಂದಿಗೆ ಗಂಭೀರ ಗಾಯ

ಕುಂಬಳೆಯ ಪ್ರಸಿದ್ಧ ಅನಂತಪುರ ಕ್ಷೇತ್ರದ ಸಮೀಪ ಇರುವ ಕಾರ್ಖಾನೆಯಲ್ಲಿ ದುರಂತ ಮಂಗಳೂರು : ಪಕ್ಕದ ಕಾಸರಗೋಡು ಜಿಲ್ಲೆಯ ಕುಂಬಳೆ ಸಮೀಪ ಅನಂತಪುರದಲ್ಲಿ ನಿನ್ನೆ ರಾತ್ರಿ ಫ್ಲೈವುಡ್ ಕಾರ್ಖಾನೆಯಲ್ಲಿ ಭೀಕರ ಸ್ಫೋಟ ಸಂಭವಿಸಿ ಓರ್ವ ಕಾರ್ಮಿಕ ಮೃತಪಟ್ಟು 15ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಡೆಕೋರ್ ಪ್ಯಾನಲ್ ಇಂಡಸ್ಟ್ರೀಸ್ ಸಂಸ್ಥೆಯಲ್ಲಿ ಈ ಮಹಾದುರಂತ ಸಂಭವಿಸಿದೆ. ಅನಂತಪುರ ಕೖಗಾರಿಕಾ ಪ್ರಾಂಗಣದ ಫ್ಲೈವುಡ್ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡು ಈ ದುರಂತ ಉಂಟಾಗಿದೆ. ಸೋಮವಾರ ರಾತ್ರಿ ಸುಮಾರು ಏಳರ ವೇಳೆಗೆ ಭಾರಿ ಸ್ಫೋಟ ಸಂಭವಿಸಿದ್ದು,

ಫ್ಲೈವುಡ್‌ ಕಾರ್ಖಾನೆಯಲ್ಲಿ ಭೀಕರ ಸ್ಫೋಟ : ಓರ್ವ ಸಾವು, ಹಲವು ಮಂದಿಗೆ ಗಂಭೀರ ಗಾಯ Read More »

ಬಂಟ್ವಾಳ : ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದು ಯುವಕ ಸಾವು

ಬಂಟ್ವಾಳ : ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರು ಢಿಕ್ಕಿಯಾಗಿ ಕಾರಿನಲ್ಲಿದ್ದ ಹೊಳೆನರಸೀಪುರದ ಸಂಜಯ್‌ (25) ಸ್ಥಳದಲ್ಲಿಯೇ ಸಾವಿಗೀಡಾದ ಘಟನೆ ಉಪ್ಪಿನಂಗಡಿ ಅಡ್ಡಹೊಳೆ ಅಯ್ಯಪ್ಪಸ್ವಾಮಿ ದೇವಸ್ಥಾನದ ಬಳಿ ಸಂಭವಿಸಿದೆ. ಕಾರು ಚಾಲಕ ಅರಕಲಗೂಡು ನಿವಾಸಿ ಸಂದೀಪ್‌, ಕಾರಿನಲ್ಲಿದ್ದ ಶೇಷ, ಮಹೇಶ್‌ ಅವರು ಅಪಾಯದಿಂದ ಪಾರಾಗಿದ್ದಾರೆ. ಸಂಜಯ್‌ ಹಾಗೂ ಇತರರು ತಮ್ಮ ತೋಟದಲ್ಲಿ ಬೆಳೆದ ಹೂಗಳನ್ನು ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಮಾರಾಟ ಮಾಡಲು ಉಡುಪಿಗೆ ಬಂದಿದ್ದರು. ಹೂವು ಮಾರಾಟ ಮಾಡಿ ಮತ್ತೆ ಊರಿಗೆ ಮರಳುತ್ತಿದ್ದ ವೇಳೆ ಈ ದುರ್ಘ‌ಟನೆ

ಬಂಟ್ವಾಳ : ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದು ಯುವಕ ಸಾವು Read More »

ಟಿಪ್ಪರ್-ಕಾರ್ ಢಿಕ್ಕಿ: ಎರಡು ಸಾವು, ಮೂವರಿಗೆ ಗಾಯ

ಚಾಮರಾಜನಗರ: ಮೈಸೂರು – ಗುಂಡ್ಲುಪೇಟೆ ರಾಷ್ಟ್ರೀಯ ಹೆದ್ದಾರಿ -766 ರ ಬಳಿ ಇಂದು ಮುಂಜಾನೆ ಟಿಪ್ಪರ್ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಕಾರಿನಲ್ಲಿದ್ದ ‌ಕೇರಳ ಮೂಲದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮಗುವೂ ‌ಸೇರು ಮೂವರು ಗಾಯಗೊಂಡ ಘಟನೆ ನಡೆದಿದೆ. ಮೃತರನ್ನು ಬಷೀರ್, ನಸೀಮಾ ಬಷೀರ್ ಎಂದು ಗುರುತಿಸಲಾಗಿದೆ. ಮಹಮ್ಮದ್ ಷಪಿ, ಜಸೀರಾ ಮತ್ತು ಮೂರು ವರ್ಷದ ಮಗು ಅಜೈಮ್ ಅನಾನ್‌ಗೆ ತೀವ್ರ ಸ್ವರೂಪದ ಗಾಯಗಳಾಗಿವೆ. ಗಾಯಾಳುಗಳನ್ನು ಮೈಸೂರಿನ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ತಿಳಿದು ಬಂದಿದೆ.

ಟಿಪ್ಪರ್-ಕಾರ್ ಢಿಕ್ಕಿ: ಎರಡು ಸಾವು, ಮೂವರಿಗೆ ಗಾಯ Read More »

ಕರ್ನೂಲ್ ಬಸ್ ಬೆಂಕಿಗಾಹುತಿ: ಸಂತ್ರಸ್ತರಿಗೆ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ

ನವದೆಹಲಿ: ಆಂಧ್ರಪ್ರದೇಶದ ಕರ್ನೂಲ್‌ನಲ್ಲಿ ಖಾಸಗಿ ಬಸ್ ಬೆಂಕಿಗಾಹುತಿಯಾಗಿ ಮೃತಪಟ್ಟವರಿಗೆ ಸಂತಾಪ ಸೂಚಿಸಿರುವ ಪ್ರಧಾನಿ ಮೋದಿ, ಮೃತರ ಕುಟುಂಬಕ್ಕೆ ಪರಿಹಾರ ಘೋಷಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ‘ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತದಿಂದ ಜೀವಹಾನಿಯಾಗಿದೆ ಎಂದು ತಿಳಿದು ತೀವ್ರ ದುಃಖವಾಗಿದೆ. ಈ ಕಷ್ಟದ ಸಮಯದಲ್ಲಿ ಸಂತ್ರಸ್ತ ಜನರು ಮತ್ತು ಅವರ ಕುಟುಂಬಗಳೊಂದಿಗೆ ನನ್ನ ಪ್ರಾರ್ಥನೆ ಇದೆ. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ’ ಎಂದು ಹೇಳಿದ್ದಾರೆ. ಪಿಎಂಎನ್‌ಆರ್‌ಎಫ್‌ನಿಂದ ಮೃತರ ಸಂಬಂಧಿಕರಿಗೆ 2 ಲಕ್ಷ ರೂ.ಗಳ ಪರಿಹಾರವನ್ನು

ಕರ್ನೂಲ್ ಬಸ್ ಬೆಂಕಿಗಾಹುತಿ: ಸಂತ್ರಸ್ತರಿಗೆ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ Read More »

ಖಾಸಗಿ ಬಸ್ಸಿಗೆ ಬೆಂಕಿ: 20 ಮಂದಿ ಸಾವು, ಹಲವರಿಗೆ ಗಾಯ

ಬೆಂಗಳೂರು: ಆಂಧ್ರ ಪ್ರದೇಶದ ಕರ್ನೂಲ್ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಬಸ್‌ನಲ್ಲಿ ಬೆಂಕಿ ಹತ್ತಿಕೊಂಡು 20 ಮಂದಿ ದಹನವಾಗಿದ್ದು, ಮೃತರ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಬಸ್ಸಿನಲ್ಲಿ 42 ಜನರು ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ. ಖಾಸಗಿ ಬಸ್‌ಗೆ ಬೆಂಕಿ ಹತ್ತಿದ್ದು ಇದರಲ್ಲಿ ಹಲವು ಮಂದಿ ಗಾಯಗೊಂಡಿದ್ದಾರೆ ಎನ್ನಲಾಗಿದೆ. ಬಸ್ ಬೆಂಗಳೂರಿನಿಂದ ಹೈದರಾಬಾದ್‌ಗೆ ಹೋಗುತ್ತಿತ್ತು. ಬೆಳಗ್ಗಿನ ಜಾವ 3.30 ರ ಸುಮಾರಿಗೆ ಈ ದುರ್ಘಟನೆ ನಡೆದಿದೆ. ಬಸ್ಸಿಗೆ ದ್ವಿಚಕ್ರ ವಾಹನವೊಂದು ಢಿಕ್ಕಿಯಾಗಿದೆ ಎಂದು ಹೇಳಲಾಗುತ್ತಿದೆ. ಈ ಅಪಘಾತದ ಪರಿಣಾಮ ಬೈಕ್

ಖಾಸಗಿ ಬಸ್ಸಿಗೆ ಬೆಂಕಿ: 20 ಮಂದಿ ಸಾವು, ಹಲವರಿಗೆ ಗಾಯ Read More »

ನಡುರಸ್ತೆಯಲ್ಲೇ ಬಸ್‌ ಬೆಂಕಿಗಾಹುತಿ : 36 ಪ್ರಯಾಣಿಕರು ಪಾರು

ಟಯರ್‌ ಬ್ಲಾಸ್ಟ್‌ ಆಗಿ ಬಸ್‌ ಬೆಂಕಿಗಾಹುತಿ ಬೆಂಗಳೂರು: ಖಾಸಗಿ ಬಸ್‌ಗೆ ನಡುರಸ್ತೆಯಲ್ಲೇ ಬೆಂಕಿ ಹತ್ತಿಕೊಂಡು ಹೊತ್ತಿ ಉರಿದಿರುವ ಘಟನೆ ಆಂಧ್ರದ ಅನಂತಪುರ ಜಿಲ್ಲೆಗೆ 15 ಕಿಮೀ ದೂರದಲ್ಲಿರುವ ಗರ‍್ಲದಿನ್ನೆ ಎಂಬಲ್ಲಿ ನಡೆದಿದೆ. ಬೆಂಗಳೂರಿನಿಂದ ರಾಯಚೂರಿಗೆ ಹೊರಟಿದ್ದ ಬಸ್‌ ಅನಂತಪುರದ ಬಳಿ ತಲುಪಿದಾಗ ಬೆಂಕಿಗೆ ಆಹುತಿಯಾಗಿದೆ. ಅದೃಷ್ಟವಶಾತ್‌ ಬಸ್‌ನಲ್ಲಿದ್ದ 36 ಮಂದಿ ಪ್ರಯಾಣಿಕರುಸುರಕ್ಷಿತವಾಗಿ ಪಾರಾಗಿದ್ದಾರೆ. ಈ ಬಸ್‌ ಬೆಂಗಳೂರು-ಅನಂತಪುರ ಹೈವೇನಲ್ಲಿ ಹೋಗುತ್ತಿರುವಾಗ ಟಯರ್‌ ಬ್ಲಾಸ್ಟ್‌ ಆಗಿ ಏಕಾಏಕಿ ಬೆಂಕಿ ಹೊತ್ತಿಕೊಂಡಿದೆ. ಟಯರ್‌ ಬ್ಲಾಸ್ಟ್‌ ಆಗುತ್ತಿದ್ದಂತೆ ಪ್ರಯಾಣಿಕರು ತಮ್ಮ ಲಗೇಜ್‌ಗಳನ್ನು

ನಡುರಸ್ತೆಯಲ್ಲೇ ಬಸ್‌ ಬೆಂಕಿಗಾಹುತಿ : 36 ಪ್ರಯಾಣಿಕರು ಪಾರು Read More »

ಬೈಂದೂರಿನಲ್ಲಿ ಮೂವರು ವಿದ್ಯಾರ್ಥಿಗಳು, ಮಲ್ಪೆಯಲ್ಲಿ ಪ್ರವಾಸಿಗ ಜಲಸಮಾಧಿ

ಮೀನು ಹಿಡಿಯಲು ಹೋದ ಮಕ್ಕಳ ದುರಂತ ಅಂತ್ಯದಿಂದ ಇಡೀ ಗ್ರಾಮಕ್ಕೆ ಶೋಕ ಉಡುಪಿ: ನಿನ್ನೆ ಒಂದೇ ದಿನ ಮಲ್ಪೆ ಮತ್ತು ಬೈಂದೂರಲ್ಲಿ ಸಮುದ್ರದಲ್ಲಿ ಮುಳುಗಿ ನಾಲ್ಕು ಮಂದಿ ಸಾವಿಗೀಡಾಗಿರುವ ದಾರುಣ ಘಟನೆ ಸಂಭವಿಸಿದೆ. ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಕಡಲ ಕಿನಾರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ಮೂವರು ಮಕ್ಕಳು ನೀರುಪಾಲಾಗಿದ್ದಾರೆ. ಕಿರಿಮಂಜೇಶ್ವರ ಶಾಲೆಯಲ್ಲಿ 9ನೇ ತರಗತಿ ಓದುತ್ತಿದ್ದ 15 ವರ್ಷ ವಯಸ್ಸಿನ ಆಶಿಶ್ ದೇವಾಡಿಗ, ಕಿರಿ ಮಂಜೇಶ್ವರ ಹೈಸ್ಕೂಲ್‌ನಲ್ಲಿ 10ನೇ ತರಗತಿ ಓದುತ್ತಿದ್ದ 16 ವರ್ಷ ವಯಸ್ಸಿನ

ಬೈಂದೂರಿನಲ್ಲಿ ಮೂವರು ವಿದ್ಯಾರ್ಥಿಗಳು, ಮಲ್ಪೆಯಲ್ಲಿ ಪ್ರವಾಸಿಗ ಜಲಸಮಾಧಿ Read More »

error: Content is protected !!
Scroll to Top