ಅಪಘಾತ

ವಿದ್ಯುತ್ ಶಾಕ್‍ ಗೆ ಯುವ ಕಬಡ್ಡಿ ಆಟಗಾರ ಮೃತ್ಯು

ಉಪ್ಪಿನಂಗಡಿ : ಪ್ಯೂಸ್ ಹಾಕಲು ಹೋದ ಯುವಕನೋರ್ವ ವಿದ್ಯುತ್ ಶಾಕ್ ಗೊಳಪಟ್ಟು ಮೃತಪಟ್ಟ ಘಟನೆ ಉಪ್ಪಿನಂಗಡಿ ಸಮೀಪದ ಕಲ್ಲೇರಿಯಲ್ಲಿ ನಡೆದಿದೆ. ಪುಲೇರಿ ಗೋಳಿತ್ತಡಿ ಯುವ ಕಬಡ್ಡಿ ಆಟಗಾರ ಹರೀಶ್ (32) ಎಂಬವರು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಹೆಚ್ಚಿನ ಮಾಹಿತಿ ತಿಳಿದು ಬಂದಿಲ್ಲ.

ವಿದ್ಯುತ್ ಶಾಕ್‍ ಗೆ ಯುವ ಕಬಡ್ಡಿ ಆಟಗಾರ ಮೃತ್ಯು Read More »

ಕೊಂಬೆಟ್ಟು ಬಳಿ ಧರೆಗುರುಳಿದ ಮರ : ವಿದ್ಯುತ್‍ ಕಂಬಗಳಿಗೆ ಹಾನಿ

ಪುತ್ತೂರು: ಇಂದು ಮುಂಜಾನೆ  ಸುರಿದ ಭಾರೀ ಗಾಳಿ ಮಳೆಯಿಂದಾಗಿ ಕೊಂಬೆಟ್ಟು ಶ್ರೀ ಮಹಾಲಿಂಗೇಶ್ವರ ಐಟಿಐ ಬಳಿ ಭಾರೀ ಗಾತ್ರದ ಮರ ಬಿದ್ದು ರಸ್ತೆ ಸಂಚಾರ ಸಂಪೂರ್ಣ ಬಂದ್‍ ಆದ ಘಟನೆ ನಡೆದಿದೆ. ಮರ ರಸ್ತೆಗೆ ಉರುಳಿ ಬಿದ್ದ ಪರಿಣಾಮ ನಾಲ್ಕು ವಿದ್ಯುತ್‍ ಕಂಬಗಳು ಧರೆಗುರುಳಿದೆ. ಸ್ಥಳಕ್ಕೆ ಮಾಜಿ ಶಾಸಕ ಸಂಜೀವ ಮಠಂದೂರು ಭೇಟಿ ನೀಡಿ ವೀಕ್ಷಿಸಿ ವಿದ್ಯುತ್‍ ಕಂಬಗಳನ್ನು ಸರಿಪಡಿಸುವಂತೆ ಮೆಸ್ಕಾಂ ಅಧಿಕಾರಿಗಳಿಗೆ ಕರೆ ಮಾಡಿ ಸೂಚನೆ ನೀಡಿದರು.

ಕೊಂಬೆಟ್ಟು ಬಳಿ ಧರೆಗುರುಳಿದ ಮರ : ವಿದ್ಯುತ್‍ ಕಂಬಗಳಿಗೆ ಹಾನಿ Read More »

ಉಡುಪಿ ಮನೆಯೊಂದರಲ್ಲಿ ಬೆಂಕಿ ಅವಘಡ : ಓರ್ವ ಮೃತ್ಯು, ಮಹಿಳೆ ಗಂಭೀರ

ಉಡುಪಿ : ಮನೆಯೊಂದರಲ್ಲಿ ಇಂದು ಮುಂಜಾನೆ ಬೆಂಕಿ ಅವಘಡ ಸಂಭವಿಸಿದ ಘಟನೆ ಉಡುಪಿ ತಾಲೂಕಿನ ಅಂಬಲಪಾಡಿಯ ಗಾಂಧಿನಗರದಲ್ಲಿ ನಡೆದಿದೆ. ಬೆಂಕಿ ಅವಘಡದಿಂದ ಗಂಭೀರ ಗಾಯಗೊಂಡಿದ್ದ ಬಾರ್ ಮಾಲಕರೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದು, ಅವರ ಪತ್ನಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅದೃಷ್ಟವಶಾತ್ ಇಬ್ಬರು ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ. ನಗರದ ಅಂಬಲಪಾಡಿಯ ಶೆಟ್ಟಿ ಬಾರ್ & ರೆಸ್ಟೋರೆಂಟ್‌ನ ಮಾಲೀಕ ರಮಾನಂದ ಶೆಟ್ಟಿ ಅವರ ಮನೆಯಲ್ಲಿ ಅಗ್ನಿ ಅವಘಡ ಸಂಭವಿಸಿತ್ತು. ಘಟನೆಯಲ್ಲಿ ಬೆಂಕಿಯ ಜ್ವಾಲೆಯಿಂದಾಗಿ ಪ್ರಜ್ಞೆ ತಪ್ಪಿದ್ದ ಗಂಡ

ಉಡುಪಿ ಮನೆಯೊಂದರಲ್ಲಿ ಬೆಂಕಿ ಅವಘಡ : ಓರ್ವ ಮೃತ್ಯು, ಮಹಿಳೆ ಗಂಭೀರ Read More »

ಮಂಗಳೂರಿನ ಫಿಶ್‍ ಮಿಲ್‍ ನಲ್ಲಿ ಬೆಂಕಿ ಅವಘಡ | ಲಕ್ಷಾಂತರ ಮೌಲ್ಯದ ಸೊತ್ತುಗಳು ಬೆಂಕಿಗಾಹುತಿ

ಮಂಗಳೂರು: ಅಥೆಂಟಿಕ್ ಓಪನ್ ಟ್ರೆಷರ್ ಮೀನು ಸಂಸ್ಕರಣಾ ಘಟಕವೊಂದರಲ್ಲಿ ಬೆಂಕಿ ಅವಘಡ ಸಂಭವಿಸಿದ ಘಟನೆ ಇಂದು ನಡೆದಿದೆ. ಸುರತ್ಕಲ್ ನ ಎಸ್‍ ಇಝೆಡ್ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಫಿಶ ಮಿಲ್‍ ನಲ್ಲಿ ವಿದ್ಯುತ್ ಶಾರ್ಟ್‍ ಸರ್ಕ್ಯೂಟ್ ನಿಂದ ಅವಘಡ ಸಂಭವಿಸಿದೆ ಎನ್ನಲಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದವರು ಆಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅವಘಡದಿಂದ ಲಕ್ಷಾಂತರ ಮೌಲ್ಯದ ಸೊತ್ತುಗಳು ಬೆಂಕಿಗೆ ಆಹುತಿಯಾಗಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.

ಮಂಗಳೂರಿನ ಫಿಶ್‍ ಮಿಲ್‍ ನಲ್ಲಿ ಬೆಂಕಿ ಅವಘಡ | ಲಕ್ಷಾಂತರ ಮೌಲ್ಯದ ಸೊತ್ತುಗಳು ಬೆಂಕಿಗಾಹುತಿ Read More »

ರಸ್ತೆಗೆ ಅಡ್ಡಲಾಗಿ ಬಿದ್ದ ಮರ : ಸಂಚಾರದಲ್ಲಿ ವ್ಯತ್ಯಯ

ಪುತ್ತೂರು: ನಗರದ ಬೈಪಾಸ್ ರಸ್ತೆಯ ತೆಂಕಿಲ ಬೈಪಾಸ್ ರಸ್ತೆಯಲ್ಲಿ ಇಂದು ಬೆಳಿಗ್ಗೆ ಬೃಹತ್ ಗಾತ್ರದ ಮರವೊಂದು ರಸ್ತೆಗಡ್ಡವಾಗಿ ಬಿದ್ದಿದೆ. ಮರ ಬಿದ್ದ ಪರಿಣಾಮ ರಸ್ತೆ ಸಂಚಾರ ಬಂದ್‍ ಆಗಿತ್ತು. ಬೈಪಾಸ್ ರಸ್ತೆಯ ವಿವೇಕಾನಂದ ಶಾಲೆ ಬಳಿ ಇರುವ ಕಿರು ಸೇತುವೆಗೆ ಮರ ಬಿದ್ದಿದೆ. ವಾಹನ ಸವಾರರು ಪುತ್ತೂರು ನಗರಕ್ಕೆ ಬಂದು ಸುಳ್ಯ, ಮಂಗಳೂರು ಕಡೆಗೆ ಚಲಿಸಬೇಕಾಯಿತು. ತೆರವು ಕಾರ್ಯ ಇನ್ನಷ್ಟೇ ನಡೆಯಬೇಕಿದೆ.

ರಸ್ತೆಗೆ ಅಡ್ಡಲಾಗಿ ಬಿದ್ದ ಮರ : ಸಂಚಾರದಲ್ಲಿ ವ್ಯತ್ಯಯ Read More »

ನೆಲ್ಯಾಡಿಯಲ್ಲಿ ಬೈಕ್-ಪಿಕಪ್ ಡಿಕ್ಕಿ : ಬೈಕ್ ಸವಾರ ಮೃತ್ಯು

ನೆಲ್ಯಾಡಿ : ಬೈಕ್ ಹಾಗೂ ಪಿಕಪ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ನೆಲ್ಯಾಡಿಯ ಕೊಣಾಲು ಸಮೀಪ ಇಂದು ನಡೆದಿದೆ. ಮಂಗಳೂರು ಕೋಡಿಕ್ಕಲ್ ನಿವಾಸಿ, ಬೈಕ್ ಸವಾರ ಪ್ರಣಮ್ ಕೋಟ್ಯಾನ್ ಮೃತಪಟ್ಟ ಬೈಕ್ ಸವಾರ. ಅಪಘಾತದಲ್ಲಿ ಗಂಭೀರ ಗಾಯಗೊಂಡ ಬೈಕ್ ಸವಾರ ಪ್ರಣಮ್‍ ಅವರನ್ನು ಆಸ್ಪತ್ರೆಗೆ ಸಾಗಿಸಿದರೂ ಅಲ್ಲಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಪ್ರಣಮ್ ಮೆಡಿಕಲ್ ರೆಪ್ರೆಸೆಂಟಿವ್ ಆಗಿ ಕೆಲಸ ಮಾಡುತ್ತಿದ್ದು, ಉಪ್ಪಿನಂಗಡಿಯಿಂದ ನೆಲ್ಯಾಡಿಗೆ ಹೋಗುತ್ತಿದ್ದ ವೇಳೆ ನೆಲ್ಯಾಡಿಯಿಂದ

ನೆಲ್ಯಾಡಿಯಲ್ಲಿ ಬೈಕ್-ಪಿಕಪ್ ಡಿಕ್ಕಿ : ಬೈಕ್ ಸವಾರ ಮೃತ್ಯು Read More »

ಬಸ್ – ಲಾರಿ ಭೀಕರ ಅಪಘಾತ l 9 ಮಂದಿ ಮೃತ್ಯು

ಕೋಲಾರ: ಬೆಂಗಳೂರಿನಿಂದ ತಿರುಪತಿಗೆ ಹೊರಟಿದ್ದ ಬಸ್‌ಗೆ ಕೋಲಾರದ ಬಳಿ ಲಾರಿ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ಪರಿಣಾಮ 9 ಮಂದಿ ಮೃತಪಟ್ಟಿದ್ದು, 15ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡಿದ್ದಾರೆ. ಸದ್ಯ ಪೊಲೀಸ್‌ ತಂಡ ಸ್ಥಳಕ್ಕೆ ಭೇಟಿ ಕೊಟ್ಟು, ಪರಿಹಾರ ಮತ್ತು ರಕ್ಷಣಾ ಕಾರ್ಯ ನಡೆಸುತ್ತಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸಲಾಗಿದೆ.

ಬಸ್ – ಲಾರಿ ಭೀಕರ ಅಪಘಾತ l 9 ಮಂದಿ ಮೃತ್ಯು Read More »

ಹಳಿ ದಾಟುತ್ತಿದ್ದ ಆನೆಗೆ ರೈಲು ಡಿಕ್ಕಿ | ಕಾಲು ಕಳೆದುಕೊಂಡು ತೆವಳುತ್ತಾ ಸಾಗಿ ಪ್ರಾಣಬಿಟ್ಟ ಆನೆ

ಅಸ್ಸಾಂ: ಹಳಿ ದಾಟುತ್ತಿದ್ದ ಆನೆಯೊಂದಕ್ಕೆ ರೈಲು ಡಿಕ್ಕಿಯಾಗಿ ಸಾವನ್ನಪ್ಪಿದ ಘಟನೆ ಅಸ್ಸಾಂನ ಮೊರಿಗಾಂವ್ ಜಿಲ್ಲೆಯ ಜಾಗಿರೋಡ್ ರೈಲು ನಿಲ್ದಾಣದ ಸಮೀಪದಲ್ಲಿ ನಡೆದಿದೆ. ಆನೆಗೆ ರೈಲು ಡಿಕ್ಕಿಯಾದ ಪರಿಣಾಮ 2 ಕಾಲು ಕಳೆದುಕೊಂಡ ಆನೆ ತೆವಳುತ್ತಾ ಸಾಗಿ ಪ್ರಾಣಬಿಟ್ಟಿದೆ. ಕಾಂಚನಜುಂಗಾ ಎಕ್ಸ್‌ಪ್ರೆಸ್ ರೈಲು ವೇಗವಾಗಿ ತೆರಳುತ್ತಿದ್ದ ವೇಳೆ ಎರಡು ಆನೆಗಳು ಹಳಿ ದಾಟುತ್ತಿತ್ತು. ಒಂದು ಆನೆ ಕೂದಲೆಳೆಯುವ ಅಂತರದಲ್ಲಿ ಹಳಿ ದಾಟಿದರೆ ಅದರ ಹಿಂದಿದ್ದ ಈ ಆನೆಗೆ ರೈಲು ಡಿಕ್ಕಿಯಾಗಿದೆ. ರೈಲು ಡಿಕ್ಕಿಯಾದ ಪರಿಣಾಮ ಆನೆ ಗಂಭೀರವಾಗಿ ಗಾಯಗೊಂಡಿದೆ.

ಹಳಿ ದಾಟುತ್ತಿದ್ದ ಆನೆಗೆ ರೈಲು ಡಿಕ್ಕಿ | ಕಾಲು ಕಳೆದುಕೊಂಡು ತೆವಳುತ್ತಾ ಸಾಗಿ ಪ್ರಾಣಬಿಟ್ಟ ಆನೆ Read More »

ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ

ಕಡಬ: ಓಮ್ನಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಘಟನೆ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮರ್ಧಾಳ ಸಮೀಪದ ನೆಕ್ಕಿತ್ತಡ್ಕ ಎಂಬಲ್ಲಿ ನಡೆದಿದೆ. ಸುಬ್ರಹ್ಮಣ್ಯದಿಂದ ಕಡಬ ಕಡೆಗೆ ತೆರಳುತ್ತಿದ್ದ ಕಾರು ನೆಕ್ಕಿತ್ತಡ್ಕ ಎಂಬಲ್ಲಿ ತಲುಪಿದಾಗ ಚಾಲಕನ ನಿಯಂತ್ರಣ ತಪ್ಪಿದ್ದು, ಮರಕ್ಕೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಮಹಿಳೆಯೋರ್ವರು ಗಾಯಗೊಂಡಿದ್ದು, ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗಿದೆ. ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದು, ಕಾರಿನಲ್ಲಿದ್ದ ಉಳಿದ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ

ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ Read More »

ಸೂರತ್‍ ನಲ್ಲಿ ಭಾರೀ ಮಳೆಗೆ ಆರು ಅಂತಸ್ತಿನ ಕಟ್ಟಡ ಕುಸಿತ : 7 ಮಂದಿ ಮೃತ್ಯು

ಸೂರತ್: ಭಾರೀ ಮಳೆಯಿಂದಾಗಿ ಸೂರತ್‍ ನಲ್ಲಿ ಆರು ಅಂತಸ್ತಿನ ಕಟ್ಟಡ ಕುಸಿದು ಬಿದ್ದು 7 ಜನ ಮೃತಪಟ್ಟು, ಹಲವಾರು ಮಂದಿ ಕಟ್ಟಡದ ಅಡಿಯಲ್ಲಿ ಸಿಲಿಕೊಂಡಿರುವ ಘಟನೆ ನಡೆದಿದೆ. ಮಹಿಳೆಯೊಬ್ಬರನ್ನು ಅವಶೇಷಗಳ ಅಡಿಯಿಂದ ರಕ್ಷಿಸಲಾಗಿತ್ತು. ಈ ದುರ್ಘಟನೆಯಲ್ಲಿ ಸುಮಾರು 15 ಮಂದಿ ಗಾಯಗೊಂಡಿದ್ದಾರೆ. ಜನರ ರಕ್ಷಣೆಗಾಗಿ ಎನ್‌ಡಿಆರ್‌ಎಫ್ ಸಿಬ್ಬಂದಿ ರಾತ್ರಿಯಿಡೀ ಕಾರ್ಯ ನಿರ್ವಹಿಸಿದ್ದಾರೆ. ಕುಸಿದು ಬಿದ್ದ ಕಟ್ಟಡದಲ್ಲಿ ಐದು ಕುಟುಂಬಗಳು ವಾಸವಾಗಿದ್ದವು. ಇದನ್ನು 2017 ರಲ್ಲಿ ನಿರ್ಮಿಸಲಾಗಿತ್ತು. ಈ ದುರ್ಘಟನೆ ವೇಳೆ ರಾತ್ರಿ ಪಾಳಿಯಲ್ಲಿ ಕೆಲಸ ಮಾಡುತ್ತಿದ್ದ ಅನೇಕರು

ಸೂರತ್‍ ನಲ್ಲಿ ಭಾರೀ ಮಳೆಗೆ ಆರು ಅಂತಸ್ತಿನ ಕಟ್ಟಡ ಕುಸಿತ : 7 ಮಂದಿ ಮೃತ್ಯು Read More »

error: Content is protected !!
Scroll to Top