ಅಪಘಾತ

ಬಂಟ್ವಾಳ: ಕಾರು ಡಿಕ್ಕಿ ಹೊಡೆದು ಮೆಕ್ಯಾನಿಕ್‌ ಸಾವು

ಬಂಟ್ವಾಳ : ಬಿ.ಸಿ.ರೋಡ್ ಬಳಿಯ ಗಾಣದಪಡ್ಪು ಎಂಬಲ್ಲಿ ಮಂಗಳವಾರ ಸಂಜೆ ಸಂಭವಿಸಿದ ಭೀಕರ ಅಪಘಾತದಲ್ಲಿ ಹೆದ್ದಾರಿ ಬದಿಯಲ್ಲಿ ಕಾರು ದುರಸ್ತಿ ಮಾಡುತ್ತಿದ್ದ ಮೆಕ್ಯಾನಿಕ್‌ ಮತ್ತೊಂದು ವಾಹನ ಡಿಕ್ಕಿ ಹೊಡೆದು ಸಾವನ್ನಪ್ಪಿದ್ದಾರೆ. ಮೃತರನ್ನು ಬೋಳಾರ್ಂತೂರು ನಿವಾಸಿ ಜಬ್ಬಾರ್ (33) ಎಂದು ಗುರುತಿಸಲಾಗಿದೆ. ಅವರು ಅವಿವಾಹಿತರಾಗಿದ್ದು, ಗಾಣದಪಡ್ಪುವಿನ ಶಿವಗಣೇಶ್ ಬ್ಯಾಟರಿ ಅಂಗಡಿಯಲ್ಲಿ ಆಟೋ ಇಲೆಕ್ಟ್ರಿಕಲ್ ಟೆಕ್ನಿಷಿಯನ್ ಆಗಿ ಕೆಲಸ ಮಾಡುತ್ತಿದ್ದರು. ಜಬ್ಬಾರ್ ಹೆದ್ದಾರಿಯಲ್ಲಿ ನಿಲ್ಲಿಸಿದ್ದ ಕಾರಿಗೆ ಹಾರ್ನ್ ಅಳವಡಿಸುತ್ತಿದ್ದಾಗ ವೇಣೂರಿನ ವ್ಯಕ್ತಿಯೊಬ್ಬರು ಚಲಾಯಿಸುತ್ತಿದ್ದ ಮತ್ತೊಂದು ಕಾರು ಬಂಟ್ವಾಳ ಬೈಪಾಸ್ ಕಡೆಯಿಂದ […]

ಬಂಟ್ವಾಳ: ಕಾರು ಡಿಕ್ಕಿ ಹೊಡೆದು ಮೆಕ್ಯಾನಿಕ್‌ ಸಾವು Read More »

ಚಲಿಸುತ್ತಿದ್ದ ಬಸ್‌ ಬೆಂಕಿಗಾಹುತಿ : 20 ಪ್ರಯಾಣಿಕರು ಜೀವಂತ ಸುಟ್ಟು ಕರಕಲು

ಖರೀದಿಸಿ ಐದು ದಿನವಷ್ಟೇ ಆಗಿದ್ದ ಬಸ್‌ನಲ್ಲಿ ಶಾರ್ಟ್‌ ಸರ್ಕ್ಯೂಟ್‌ನಿಂದ ಅವಘಡ ಜೈಪುರ : ರಾಜಸ್ಥಾನದ ಜೈಸಲ್ಮೇರ್ ಬಳಿ 50ಕ್ಕೂ ಹೆಚ್ಚು ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಖಾಸಗಿ ಬಸ್‌ಗೆ ಬೆಂಕಿ ಹೊತ್ತಿಕೊಂಡ ಪರಿಣಾಮವಾಗಿ 20 ಜನರು ಜೀವಂತ ಸುಟ್ಟು ಕರಕಲಾದ ದಾರುಣ ಘಟನೆ ಮಂಗಳವಾರ ಸಂಜೆ ಸಂಭವಿಸಿದೆ. ಹೊಸದಾಗಿ ಖರೀದಿ ಮಾಡಿದ್ದ ಬಸ್‌ ಕೆಲವೇ ಟ್ರಿಪ್‌ಗಳನ್ನಷ್ಟೇ ಮಾಡಿತ್ತು ಎಂದು ತಿಳಿದುಬಂದಿದೆ. ಸಂಜೆ 4 ಗಂಟೆಗೆ ಪ್ರಯಾಣ ಆರಂಭಿಸಿದ ಬಸ್‌ ಹೆದ್ದಾರಿಯಲ್ಲಿ ಚಲಿಸುತ್ತಿರುವಾಗ ಹಿಂಬದಿಯಿಂದ ಹೊಗೆ ಬರಲಾರಂಭಿಸಿದೆ. ಚಾಲಕ ಬಸ್ಸನ್ನು ರಸ್ತೆ

ಚಲಿಸುತ್ತಿದ್ದ ಬಸ್‌ ಬೆಂಕಿಗಾಹುತಿ : 20 ಪ್ರಯಾಣಿಕರು ಜೀವಂತ ಸುಟ್ಟು ಕರಕಲು Read More »

ಪುತ್ತೂರು : ಸಿಡಿಲು ಬಡಿದು ಕೂಲಿ ಕಾರ್ಮಿಕ ಸಾವು

ಮನೆಯ ಎದುರು ಕುಳಿತಿದ್ದ ವೇಳೆ ಬಡಿದ ಸಿಡಿಲು ಪುತ್ತೂರು: ಪುತ್ತೂರು ತಾಲೂಕಿನಾದ್ಯಂತ ಶನಿವಾರ ಸಂಜೆ ಗುಡುಗು ಸಿಡಿಲು ಸಹಿತ ಭಾರಿ ಮಳೆಯಾಗಿದ್ದು, ಸಿಡಿಲು ಬಡಿದು ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ. ಪುತ್ತೂರು ತಾಲೂಕಿನ ಶಾಂತಿಗೋಡು ಗ್ರಾಮದ ಆನಡ್ಕ ಎಂಬಲ್ಲಿ ಈ ದುರ್ಘಟನೆ ನಡೆದಿದೆ. ಆನಡ್ಕ ನಿವಾಸಿ ವಾಮನ (40) ಸಾವನ್ನಪ್ಪಿದ ವ್ಯಕ್ತಿ. ಕೂಲಿ ಕಾರ್ಮಿಕರಾಗಿದ್ದ ವಾಮನ ಅವರು ಸಂಜೆ ಸುಮಾರು 5.30ರ ವೇಳೆಗೆ ತನ್ನ ಕೆಲಸ ಮುಗಿಸಿ ಮನೆಗೆ ಬಂದು ಮನೆಯ ಮುಂಭಾಗದಲ್ಲಿ ಕುಳಿತುಕೊಂಡಿದ್ದ ವೇಳೆಯಲ್ಲಿ ಸಿಡಲು ಬಡಿದಿದ್ದು,

ಪುತ್ತೂರು : ಸಿಡಿಲು ಬಡಿದು ಕೂಲಿ ಕಾರ್ಮಿಕ ಸಾವು Read More »

ಉಳ್ಳಾಲದಲ್ಲಿ ಮೀನು ಸಂಸ್ಕರಣಾ ಘಟಕ ಬೆಂಕಿಗಾಹುತಿ

ಮಂಗಳೂರು : ಉಳ್ಳಾಲದ ಕೋಟೆಪುರದಲ್ಲಿರುವ ಮೀನಿನ ಆಹಾರ ತಯಾರಿಕ ಸಂಸ್ಕರಣಾ ಘಟಕದ ಗೋದಾಮು ಬುಧವಾರ ರಾತ್ರಿ ಸಂಭವಿಸಿದ ಬೆಂಕಿ ಅವಘಡದಲ್ಲಿ ನಾಶವಾಗಿದೆ. ಲಕ್ಷಾಂತರ ರೂ. ನಷ್ಟ ಉಂಟಾಗಿದೆ. ಖಾದರ್ ಎಂಬವರಿಗೆ ಸೇರಿದ ಎಂಎಂಪಿ ಫಿಶ್ ಫುಡ್ ಗೋದಾಮಿಗೆ ರಾತ್ರಿ ಬೆಂಕಿಹತ್ತಿಕೊಂಡಿದೆ. ಬೆಂಕಿಯ ಕೆನ್ನಾಲೆ ಹೊರಗೂ ಆವರಿಸಿದ್ದು, ತಕ್ಷಣ ಕಾರ್ಯಪ್ರವೃತ್ತರಾದ ಸ್ಥಳೀಯರು ನೀರು ಎರಚಿ ಬೆಂಕಿ ನಂದಿಸಲು ಯತ್ನಿಸಿದ್ದಾರೆ. ತುಂಬಾ ಹೊತ್ತಿನ ನಂತರ ಮಂಗಳೂರಿನಿಂದ ಅಗ್ನಿ ಶಾಮಕ ದಳದ ವಾಹನ ಬಂದು ಬೆಂಕಿ ನಂದಿಸಿದೆ. ಉಳ್ಳಾಲ ಪೊಲೀಸರು ಸ್ಥಳದಲ್ಲಿದ್ದರು.

ಉಳ್ಳಾಲದಲ್ಲಿ ಮೀನು ಸಂಸ್ಕರಣಾ ಘಟಕ ಬೆಂಕಿಗಾಹುತಿ Read More »

4 ತಿಂಗಳು ಜೀವನ್ಮರಣ ಹೋರಾಟ ನಡೆಸಿ ನಿಧನರಾದ ಅಪೂರ್ವ ಭಟ್‌ : ಕಂಬನಿ ಮಿಡಿದ ಪುತ್ತೂರಿನ ಜನ

ಮುರದಲ್ಲಿ ಸಂಭವಿಸಿದ ಅಪಘಾತದಲ್ಲಿ ಗಾಯಗೊಂಡು ಕೋಮಾ ಸ್ಥಿತಿಯಲ್ಲಿದ್ದ ಅಪೂರ್ವ ಭಟ್‌ ಪುತ್ತೂರು: ನಾಲ್ಕು ತಿಂಗಳ ಹಿಂದೆ ಪುತ್ತೂರು ತಾಲೂಕಿನ ಮುರ ಎಂಬಲ್ಲಿ ತಿರುವಿನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ಕೆದಿಲ‌ ನಿವಾಸಿ ಅಪೂರ್ವ ಕೆ. ಭಟ್ (32) ಚಿಕಿತ್ಸೆ ಫಲಿಸದೆ ಮಂಗಳವಾರ ರಾತ್ರಿ ನಿಧನರಾದರು. ಬರೋಬ್ಬರಿ 134 ದಿನ ಕೋಮಾದಲ್ಲಿದ್ದು ಜೀವನ್ಮರಣ ಹೋರಾಟ ನಡೆಸಿದ ಅಪೂರ್ವ ಭಟ್‌ ಅಗಲಿಕೆ ಭಾರಿ ದುಃಖ ತಂದಿದ್ದು, ಸಾವಿರಾರು ಮಂದಿ ಸೋಷಿಯಲ್‌ ಮೀಡಿಯಾದಲ್ಲಿ ಕಂಬನಿ

4 ತಿಂಗಳು ಜೀವನ್ಮರಣ ಹೋರಾಟ ನಡೆಸಿ ನಿಧನರಾದ ಅಪೂರ್ವ ಭಟ್‌ : ಕಂಬನಿ ಮಿಡಿದ ಪುತ್ತೂರಿನ ಜನ Read More »

ನೆರಿಯ : ಬೆಂಕಿ ಅವಘಡದಲ್ಲಿ ಮನೆ ಸುಟ್ಟು ಕರಕಲು

ಬೆಳ್ತಂಗಡಿ: ನೆರಿಯ ಗ್ರಾಮದ ಕಡ್ಡಿಬಾಗಿಲು ಎಂಬಲ್ಲಿ ಸೋಮವಾರ ರಾತ್ರಿ ಹರೀಶ್ ಎಂಬವರ ಮನೆ ಬೆಂಕಿಗಾಹುತಿಯಾಗಿ ಅಪಾರ ನಷ್ಟ ಸಂಭವಿಸಿದೆ. ಘಟನೆಯ ವೇಳೆ ಮನೆಯಲ್ಲಿ ಯಾರೂ ಇಲ್ಲದ ಕಾರಣ ಯಾವುದೇ ಸಾವು ನೋವು ಉಂಟಾಗಿಲ್ಲ. ಹರೀಶ್ ಅವರು ಭಜನೆ ಗುರುಗಳಾಗಿದ್ದು ಅವರು ತಮ್ಮ ತಂಡದೊಂದಿಗೆ ಬೇರೆಡೆ ತೆರಳಿದ್ದರು. ಪತ್ನಿ ಹಾಗೂ ಒಬ್ಬಳು ಮಗಳು ತವರು ಮನೆಗೆ ಹೋಗಿದ್ದರು. ಇನ್ನಿಬ್ಬರು ಮಕ್ಕಳು ಮನೆಯಲ್ಲಿ ಇದ್ದರು. ಅವರು ಸಂಜೆಯ ವೇಳೆ ಪಕ್ಕದ ಮನೆಗೆ ಹೋಗಿದ್ದರು. ರಾತ್ರಿ ಆಗುತ್ತಿದ್ದಂತೆಯೇ ಮನೆಗೆ ಬೆಂಕಿ ಹತ್ತಿಕೊಂಡಿದೆ.ಮನೆಗೆ

ನೆರಿಯ : ಬೆಂಕಿ ಅವಘಡದಲ್ಲಿ ಮನೆ ಸುಟ್ಟು ಕರಕಲು Read More »

ಆಸ್ಪತ್ರೆಯಲ್ಲಿ ಭೀಕರ ಬೆಂಕಿ ಅವಘಡ : 6 ರೋಗಿಗಳು ಜೀವಂತ ದಹನ

ಶಾರ್ಟ್​ ಸರ್ಕ್ಯೂಟ್​ನಿಂದ ಟ್ರಾಮಾ ಸೆಂಟರ್‌ನಲ್ಲಿ ಸಂಭವಿಸಿದ ದುರಂತ ಜೈಪುರ: ರಾಜಸ್ಥಾನದ ಜೈಪುರದ ಸರ್ಕಾರಿ ಆಸ್ಪತ್ರೆಯೊಂದರಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿ 6 ರೋಗಿಗಳು ಸಜೀವ ದಹನವಾಗಿರುವ ಘಟನೆ ನಡೆದಿದೆ. ಶಾರ್ಟ್​ ಸರ್ಕ್ಯೂಟ್​ನಿಂದ ಅವಘಡ ಸಂಭವಿಸಿದೆ ಎನ್ನಲಾಗಿದೆ. ಹಲವಾರು ಗಂಭೀರ ರೋಗಿಗಳನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ. ಸ್ಥಳದಲ್ಲಿದ್ದ ವೈದ್ಯರು, ದಾದಿಯರು ಮತ್ತು ಅಗ್ನಿಶಾಮಕ ದಳದ ತಂಡವು ಅಪಾರ ಪ್ರಯತ್ನದ ನಂತರ ಬೆಂಕಿಯನ್ನು ನಿಯಂತ್ರಣಕ್ಕೆ ತಂದರು. ಸರ್ಕಾರಿ ಸ್ವಾಮ್ಯದ ಸವಾಯಿ ಮಾನ್‌ ಸಿಂಗ್ ಆಸ್ಪತ್ರೆಯಲ್ಲಿ ಈ ದುರ್ಘಟನೆ ಸಂಭವಿಸಿದೆ. ಸ್ಟೋರೇಜ್ ಪ್ರದೇಶದಲ್ಲಿ

ಆಸ್ಪತ್ರೆಯಲ್ಲಿ ಭೀಕರ ಬೆಂಕಿ ಅವಘಡ : 6 ರೋಗಿಗಳು ಜೀವಂತ ದಹನ Read More »

ಉಡುಪಿ ಘನತ್ಯಾಜ್ಯ ಘಟಕದಲ್ಲಿ ಭಾರಿ ಬೆಂಕಿ ಅವಘಡ

ಉಡುಪಿ : ಉಡುಪಿ ನಗರಸಭೆಗೆ ಸಂಬಂಧಿಸಿದ ಅಲೆವೂರು ಗ್ರಾಪಂ ವ್ಯಾಪ್ತಿಯ ಕರ್ವಾಲುವಿನಲ್ಲಿರುವ ಘನತ್ಯಾಜ್ಯ ನಿರ್ವಹಣಾ ಘಟಕದಲ್ಲಿ ಬೆಂಕಿ ಭಾರಿ ಅನಾಹುತ ಸಂಭವಿಸಿದ್ದು, ಕೋಟ್ಯಂತರ ರೂ. ನಷ್ಟ ಉಂಟಾಗಿರುವುದಾಗಿ ಅಂದಾಜಿಸಲಾಗಿದೆ. ಶನಿವಾರ ನಸುಕಿನ ಜಾವ 3 ಗಂಟೆ ಸುಮಾರಿಗೆ ಘಟಕದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಬೆಂಕಿಯ ಕೆನ್ನಾಲಿಗೆ ಇಡೀ ಘಟಕವನ್ನು ಆವರಿಸಿತು. ಇದರಿಂದ ಕಟ್ಟಡ, ಶೆಡ್‌ನಲ್ಲಿರುವ ಹಲವು ಯಂತ್ರೋಪಕಣಗಳು, ತ್ಯಾಜ್ಯಗಳು ಸಂಪೂರ್ಣವಾಗಿ ಸುಟ್ಟು ಹೋಗಿರುವುದಾಗಿ ತಿಳಿದುಬಂದಿದೆ. ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ಆಗಮಿಸಿದ ಉಡುಪಿ ಅಗ್ನಿಶಾಮಕದಳದ ಅಧಿಕಾರಿಗಳು ಹಾಗೂ ಸಿಬ್ಬಂದಿ

ಉಡುಪಿ ಘನತ್ಯಾಜ್ಯ ಘಟಕದಲ್ಲಿ ಭಾರಿ ಬೆಂಕಿ ಅವಘಡ Read More »

ಬಂಟ್ವಾಳ : ರಿಕ್ಷಾ ಡಿಕ್ಕಿ ಹೊಡೆದು ಪಾದಚಾರಿ ಸಾವು

ಬಂಟ್ವಾಳ : ರಸ್ತೆ ದಾಟುವ ವೇಳೆ ರಿಕ್ಷಾ ಡಿಕ್ಕಿ ಹೊಡೆದು ಪಾದಚಾರಿ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಕಲ್ಲಡ್ಕದ ಅಮ್ಟೂರು ಕ್ರಾಸ್‌ನಲ್ಲಿ ನಡೆದಿದೆ. ಸಜೀಪ ಮೂಡ ಗ್ರಾಮದ ಸುಭಾಷ್ ನಗರ ನಿವಾಸಿ ಲೋಕೇಶ್ ಮೂಲ್ಯ (44) ಮೃತ ದುರ್ದೈವಿ. ಲೋಕೇಶ್ ಅವರು ಕಲ್ಲಡ್ಕದ ನಾಯರ ಪೆಟ್ರೋಲ್ ಪಂಪ್‌ನ ಮುಂಭಾಗದಲ್ಲಿ ರಸ್ತೆ ದಾಟುವ ವೇಳೆ ಅತಿವೇಗದಿಂದ ಬಂದ ರಿಕ್ಷಾ ಡಿಕ್ಕಿ ಹೊಡೆದು ಚಾಲಕನ ನಿಯಂತ್ರಣ ಕಳೆದುಕೊಂಡು ಬಳಿಕ ಪಲ್ಟಿಯಾಗಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಲೋಕೇಶ್ ಅವರನ್ನು ಮಂಗಳೂರು ಖಾಸಗಿ

ಬಂಟ್ವಾಳ : ರಿಕ್ಷಾ ಡಿಕ್ಕಿ ಹೊಡೆದು ಪಾದಚಾರಿ ಸಾವು Read More »

ಬೆಂಕಿ ಅವಘಡ : 19 ಇಲೆಕ್ಟ್ರಿಕ್‌ ಬೈಕ್‌ಗಳು ಸುಟ್ಟು ಕರಕಲು

ಚಾರ್ಜಿಂಗ್‌ ಸ್ಟೇಷನ್‌ ಓವರ್‌ಹೀಟ್‌ ಆಗಿ ಅವಘಡ ಬೆಂಗಳೂರು: ಬೆಂಗಳೂರಿನ ಯಲಚೇನಹಳ್ಳಿಯ ಕಮರ್ಷಿಯಲ್ ಕಟ್ಟಡವೊಂದರಲ್ಲಿ ಬೆಂಕಿ ಅವಘಡ ಸಂಭವಿಸಿ 19 ಇಲೆಕ್ಟ್ರಿಕ್‌ ಬೈಕ್‌ಗಳು ಸುಟ್ಟು ಕರಕಲಾಗಿವೆ. ಕನಕಪುರ ಮುಖ್ಯರಸ್ತೆಯಲ್ಲಿರುವ ಮೂರಂತಸ್ತಿನ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕಟ್ಟಡದ ಬೇಸ್ಮೆಂಟ್‌ನಲ್ಲಿದ್ದ ಇವಿ ಬೈಕ್ ಚಾರ್ಜಿಂಗ್ ಪಾಯಿಂಟ್ ಓವರ್ ಹೀಟ್ ಆದ ಪರಿಣಾಮ ಅಲ್ಲಿದ್ದ ಬೈಕ್‌ಗಳಿಗೆ ಬೆಂಕಿ ಹೊತ್ತಿಕೊಂಡಿದೆ. ಜೊತೆಗೆ ಬೆಂಕಿ ಕೆನ್ನಾಲಿಗೆಗೆ ಸಿಲುಕಿ ಆರು ಸಿಲಿಂಡರ್‌ಗಳ ಗ್ಯಾಸ್ ಸೋರಿಕೆಯಾಗಿದ್ದು, ಒಂದು ಸಿಲಿಂಡರ್ ಬ್ಲಾಸ್ಟ್ ಆಗಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿ, ಬೆಂಕಿ

ಬೆಂಕಿ ಅವಘಡ : 19 ಇಲೆಕ್ಟ್ರಿಕ್‌ ಬೈಕ್‌ಗಳು ಸುಟ್ಟು ಕರಕಲು Read More »

error: Content is protected !!
Scroll to Top