ಅಪಘಾತ

ದೇವಾಲಯದಲ್ಲಿ ಕಾಲ್ತುಳಿತ: ಇಬ್ಬರು ಭಕ್ತರ ಸಾವು, 29 ಮಂದಿಗೆ ಗಾಯ

ವಿದ್ಯುತ್‌ ತಂತಿ ಕಡಿದು ಚಪ್ಪರದ ಶೀಟಿನ ಮೇಲೆ ಬಿದ್ದಾಗ ನೂಕುನುಗ್ಗಲು ಲಖನೌ: ಉತ್ತರ ಪ್ರದೇಶದ ಬಾರಾಬಂಕಿಯಲ್ಲಿರುವ ದೇವಾಲಯವೊಂದರಲ್ಲಿ ಇಂದು ನಸುಕಿನ ಹೊತ್ತು ಕಾಲ್ತುಳಿತ ಸಂಭವಿಸಿ ಇಬ್ಬರು ಭಕ್ತರು ಸಾವನ್ನಪ್ಪಿದ್ದು, 29 ಮಂದಿ ಗಾಯಗೊಂಡಿದ್ದಾರೆ. ಪವಿತ್ರ ಶ್ರಾವಣ ಮಾಸದ ಹಿನ್ನೆಲೆ ಸೋಮವಾರ ಬಾರಾಬಂಕಿಯಲ್ಲಿರುವ ಪ್ರಾಚೀನ ಅವಸಾನೇಶ್ವರ ಮಹಾದೇವ ದೇವಾಲಯದಲ್ಲಿ ಭಕ್ತರು ದೇವರ ದರ್ಶನಕ್ಕೆ ಸಾಲುಗಟ್ಟಿ ನಿಂತಿದ್ದರು. ಈ ವೇಳೆ ಕೆಲ ಕೋತಿಗಳು ಓವರ್‌ಹೆಡ್ ವಿದ್ಯುತ್ ತಂತಿಗಳ ಮೇಲೆ ಹಾರಿವೆ. ಇದರಿಂದ ವಿದ್ಯುತ್‌ ತಂತಿ ತುಂಡಾಗಿ ತಗಡಿನ ಶೆಡ್‌ ಮೇಲೆ […]

ದೇವಾಲಯದಲ್ಲಿ ಕಾಲ್ತುಳಿತ: ಇಬ್ಬರು ಭಕ್ತರ ಸಾವು, 29 ಮಂದಿಗೆ ಗಾಯ Read More »

ಕಾರು ಪಲ್ಟಿಯಾಗಿ ಇಬ್ಬರಿಗೆ ಗಾಯ

ಬಂಟ್ವಾಳ : ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಇಬ್ಬರಿಗೆ ಗಾಯವಾದ ಘಟನೆ ಮಾಣಿ ಸಮೀಪದ ಬೊಳ್ಳುಕಲ್ಲು ಬಳಿ ಶನಿವಾರ ನಡೆದಿದೆ. ಕಾರು ಉಪ್ಪಿನಂಗಡಿಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಅಪಘಾತದ ಪರಿಣಾಮ ಕಾರಿನಲ್ಲಿದ್ದ ಚಾಲಕ ಮತ್ತು ಓರ್ವ ಪ್ರಯಾಣಿಕ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಹೆದ್ದಾರಿ ಕಾಮಗಾರಿ ಅವಾಂತರದಿಂದಾಗಿ ಹೆದ್ದಾರಿಯಲ್ಲಿ ಮಳೆ ನೀರು ತುಂಬಿದೆ. ಹೀಗಾಗಿ ಆಗಾಗ್ಗೆ ಅಪಘಾತಗಳು ಸಂಭವಿಸುತ್ತಿವೆ ಎಂದು ವಾಹನ ಚಾಲಕ, ಮಾಲಕರು ತಿಳಿಸಿದ್ದಾರೆ.

ಕಾರು ಪಲ್ಟಿಯಾಗಿ ಇಬ್ಬರಿಗೆ ಗಾಯ Read More »

ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಸರಣಿ ಅಪಘಾತ : ಓರ್ವ ಸಾವು, 20 ಮಂದಿಗೆ ಗಾಯ

ಇಳಿಜಾರಿನಲ್ಲಿ ಬ್ರೇಕ್‌ಫೇಲ್‌ ಆದ ಟ್ರಕ್‌ 25ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿಯಾಗಿ ಅಪಘಾತ ಮುಂಬೈ: ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ರಾಯಗಢ ಜಿಲ್ಲೆಯ ಖೋಪೋಲಿ ಬಳಿ ಸುಮಾರು 20 ವಾಹನಗಳು ಸರಣಿ ಅಪಘಾತಕ್ಕೀಡಾಗಿ ಓರ್ವ ಮೃತಪಟ್ಟು ಹಲವು ಮಂದಿ ಗಾಯಗೊಂಡಿದ್ದಾರೆ. ಏಕಮುಖ ಸಂಚಾರ ರಸ್ತೆಯಲ್ಲಿ 25ಕ್ಕೂ ಹೆಚ್ಚು ವಾಹನಗಳು ಪರಸ್ಪರ ಡಿಕ್ಕಿಯಾಗಿವೆ. ಖೋಪೋಲಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮುಂಬೈಗೆ ಹೋಗುವ ಮಾರ್ಗದಲ್ಲಿ ಘಟನೆ ಸಂಭವಿಸಿದೆ. ಇಳಿಜಾರಿನಲ್ಲಿ ಕಂಟೇನರ್‌ ಟ್ರಕ್‌ನ ಬ್ರೇಕ್‌ ಫೇಲ್‌ ಆಗಿ ಇದರಿಂದ ನಿಯಂತ್ರಣ ಕಳೆದುಕೊಂಡು ಮುಂದೆ ಸಾಗುತ್ತಿದ್ದ ಬಿಎಂಡಬ್ಲ್ಯು

ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಸರಣಿ ಅಪಘಾತ : ಓರ್ವ ಸಾವು, 20 ಮಂದಿಗೆ ಗಾಯ Read More »

ಕೊಯನಾಡಿನಲ್ಲಿ ಲಾರಿ – ಕಾರು ಮಧ್ಯೆ ಭೀಕರ ಅಪಘಾತ: ನಾಲ್ವರು ಯುವಕರ ಸಾವು

ಮಡಿಕೇರಿ: ಸಂಪಾಜೆ ಸಮೀಪದ ಕೊಯನಾಡಿನಲ್ಲಿ ಲಾರಿ ಮತ್ತು ಕಾರೊಂದರ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ‌ನಾಲ್ವರು ಯುವಕರು ಸಾವನ್ನಪ್ಪಿದ್ದಾರೆ. ಮೃತರನ್ನು ಗೋಣಿಕೊಪ್ಪದ ನಿಹಾದ್, ರಿಝಾನ್, ಹುಣಸೂರಿನ ರಾಖಿಬ್ ಎಂದು ಗುರುತಿಸಲಾಗಿದ್ದು, ಮತ್ತೊಬ್ಬ ಯುವಕನ ಗುರುತು ಇನ್ನಷ್ಟೇ ಪತ್ತೆಯಾಗಬೇಕಿದೆ. ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದರೆ, ಇನ್ನಿಬ್ಬರನ್ನು ಆಸ್ಪತ್ರೆಗೆ ಸಾಗಿಸುವ ವೇಳೆ ದಾರಿ ಮಧ್ಯೆ ಸಾವನ್ನಪ್ಪಿದ್ದಾರೆ. ಮಂಗಳೂರಿನ ಹೊರವಲಯದಲ್ಲಿರುವ ಉಳ್ಳಾಲಕ್ಕೆ ತೆರಳಿ ಅಲ್ಲಿಂದ ತಮ್ಮೂರುಗಳಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದೆ. ಮಡಿಕೇರಿಯಿಂದ ‌ಸುಳ್ಯದ ಕಡೆಗೆ ಬರುತ್ತಿದ್ದ ಲಾರಿ

ಕೊಯನಾಡಿನಲ್ಲಿ ಲಾರಿ – ಕಾರು ಮಧ್ಯೆ ಭೀಕರ ಅಪಘಾತ: ನಾಲ್ವರು ಯುವಕರ ಸಾವು Read More »

ಶಾಲೆಯ ಮೇಲ್ಛಾವಣಿ ಕುಸಿದು ನಾಲ್ಕು ಮಕ್ಕಳು ಸಾವು

ಬೆಳಗ್ಗೆ ಪ್ರಾರ್ಥನೆ ನಡೆಯುತ್ತಿರುವಾಗಲೇ ಕುಸಿದು ಬಿದ್ದ ಛಾವಣಿ ಜೈಪುರ: ಪ್ರಾಥಮಿಕ ಶಾಲಾ ಕಟ್ಟದ ಮೇಲ್ಛಾವಣಿ ಕುಸಿದು ಕನಿಷ್ಠ ನಾಲ್ವರು ಮಕ್ಕಳು ಸಾವನ್ನಪ್ಪಿರುವ ದಾರುಣ ಘಟನೆ ರಾಜಸ್ಥಾನದ ಝಲಾವರ್‌ನಲ್ಲಿ ಸಂಭವಿಸಿದೆ. ಇಂದು ಬೆಳಗ್ಗೆ ಝಲಾವರ್‌ನಲ್ಲಿರುವ ಪಿಪ್ಲೋಡಿ ಪ್ರಾಥಮಿಕ ಶಾಲೆಯ ಮೇಲ್ಛಾವಣಿ ಕುಸಿದಿದ್ದು, ಘಟನೆಯಲ್ಲಿ ಕನಿಷ್ಠ ನಾಲ್ವರು ಮಕ್ಕಳು ಸಾವನ್ನಪ್ಪಿರುವುದಾಗಿ ವರದಿಯಾಗಿದೆ. 60ಕ್ಕೂ ಹೆಚ್ಚು ಮಕ್ಕಳು ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿದ್ದು, ರಕ್ಷಣಾ ತಂಡಗಳಿಂದ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಸ್ಥಳೀಯರು ಸಹ ಅಧಿಕಾರಿಗಳೊಂದಿಗೆ ಕೈಜೋಡಿಸಿದ್ದಾರೆ. ಮೃತಪಟ್ಟ ಮಕ್ಕಳ ಶವಗಳನ್ನ ಹೊರತೆಗೆಯಲಾಗಿದೆ. ಗಾಯಗೊಂಡವರನ್ನ

ಶಾಲೆಯ ಮೇಲ್ಛಾವಣಿ ಕುಸಿದು ನಾಲ್ಕು ಮಕ್ಕಳು ಸಾವು Read More »

ವಿಟ್ಲದಲ್ಲಿ ಕಾರಿಗೆ ಮಿನಿ ಟಿಪ್ಪರ್‌ ಡಿಕ್ಕಿ : ನವವಿವಾಹಿತ ಸಾವು

ಸಹೋದರಿ ಮತ್ತು ಮಗುವಿಗೆ ಗಂಭೀರ ಗಾಯ ವಿಟ್ಲ: ವಿಟ್ಲ ಸಮೀಪದ ವೀರಕಂಬ ಗ್ರಾಮದ ಕೆಲಿಂಜ ಜಂಕ್ಷನ್‌ನಲ್ಲಿ ಮಿನಿ ಟಿಪ್ಪರ್ ಮತ್ತು ಆಲ್ಟೊ ಕಾರು ನಡುವೆ ಭೀಕರ ಅಪಘಾತ ಸಂಭವಿಸಿ, ಕಾರಿನ ಚಾಲಕ ಮೃತಪಟ್ಟು, ಅವರ ಸಹೋದರಿ ಹಾಗೂ ಮಗು ಗಂಭೀರವಾಗಿ ಗಾಯಗೊಂಡಿರುವ ದುರ್ಘಟನೆ ಸೋಮವಾರ ಸಂಭವಿಸಿದೆ. ಅನೀಶ್ ಅನಂತಾಡಿ (34) ಮೃತ ದುರ್ದೈವಿ. ಕಲ್ಲಡ್ಕದಿಂದ ವಿಟ್ಲ ಕಡೆಗೆ ತೆರಳುತ್ತಿದ್ದ ಆಲ್ಟೊ ಕಾರಿಗೆ, ವಿಟ್ಲದಿಂದ ಕಲ್ಲಡ್ಕ ಕಡೆಗೆ ಚಲಿಸುತ್ತಿದ್ದ ಮಿನಿ ಟಿಪ್ಪರ್ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಸ್ಥಳೀಯರು

ವಿಟ್ಲದಲ್ಲಿ ಕಾರಿಗೆ ಮಿನಿ ಟಿಪ್ಪರ್‌ ಡಿಕ್ಕಿ : ನವವಿವಾಹಿತ ಸಾವು Read More »

ಮಿನಿ ಟಿಪ್ಪರ್ – ಕಾರು ಅಪಘಾತ : ಕಾರು ಚಾಲಕ ಮೃತ್ಯು

ವಿಟ್ಲ: ಮಿನಿ ಟಿಪ್ಪ‌ರ್ ಮತ್ತು ಕಾರು ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಕಾರು ಚಾಲಕ ಮೃತಪಟ್ಟು, ಅವರ ಸಹೋದರಿ ಹಾಗೂ ಮಗು ಗಂಭೀರ ಗಾಯಗೊಂಡ ಘಟನೆ ವಿಟ್ಲ ಸಮೀಪ ವೀರಕಂಬ ಗ್ರಾಮದ ಕೆಲಿಂಜ ಜಂಕ್ಷನ್‌ನಲ್ಲಿ ನಡೆದಿದೆ. ಕಾರು ಚಾಲಕ ಅನೀಶ್‍ ಗಂಭೀರ ಗಾಯಗೊಂಡು ಮಂಗಳೂರಿನ ಆಸ್ಪತ್ರೆಯಲ್ಲಿ ದಾಖಲಾಗಿದ್ದವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಕಲ್ಲಡ್ಕದಿಂದ ವಿಟ್ಲ ಕಡೆಗೆ ತೆರಳುತ್ತಿದ್ದ ಆಲ್ಟೋ ಕಾರಿಗೆ, ವಿರುದ್ಧ ದಿಕ್ಕಿನಲ್ಲಿ ಚಲಿಸುತ್ತಿದ್ದ ಮಿನಿ ಟಿಪ್ಪರ್ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಕಾರಿನೊಳಗಿನವರು ತೀವ್ರ

ಮಿನಿ ಟಿಪ್ಪರ್ – ಕಾರು ಅಪಘಾತ : ಕಾರು ಚಾಲಕ ಮೃತ್ಯು Read More »

ತೋಡಿಗೆ ಉರುಳಿದ ಬಸ್‌ : ಓರ್ವ ಸಾವು, 18 ಮಂದಿಗೆ ಗಾಯ

ಬೆಳಗಾವಿಯಿಂದ ಮಂಗಳೂರಿಗೆ ಬರುತ್ತಿದ್ದ ಬಸ್‌ ಅಪಘಾತ ಮಂಗಳೂರು: ಬೆಳಗಾವಿಯಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಸ್ಲೀಪರ್‌ ಕೋಚ್‌ ಬಸ್‌ ಇಂದು ಮುಂಜಾನೆ ಅಂಕೋಲಾ ಸಮೀಪ ತೋಡಿಗೆ ಉರುಳಿ ಬಿದ್ದು, ಓರ್ವ ಪ್ರಯಾಣಿಕ ಮೃತಪಟ್ಟಿದ್ದು, 18 ಮಂದಿ ಗಾಯಗೊಂಡಿದ್ದಾರೆ. ಗಾಯಗೊಂಡವರಲ್ಲಿ ಐದು ಮಂದಿಯ ಸ್ಥಿತಿ ಚಿಂತಾಜನಕವಾಗಿದೆ ಎಂದು ವರದಿಯಾಗಿದೆ. ಅಂಕೋಲಾ ಸಮೀಪ ಅಗಸೂರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬಸ್‌ ರಸ್ತೆ ಬದಿ ಹರಿಯುತ್ತಿರುವ ತೋಡಿಗೆ ಪಲ್ಟಿಯಾಗಿದೆ. ಈ ವೇಳೆ ಪ್ರಯಾಣಿಕರೆಲ್ಲ ಮುಂಜಾನೆಯ ಸುಖನಿದ್ರೆಯಲ್ಲಿದ್ದರು. ಕೂಡಲೇ ಸ್ಥಳೀಯರು ಧಾವಿಸಿ ಬಂದು

ತೋಡಿಗೆ ಉರುಳಿದ ಬಸ್‌ : ಓರ್ವ ಸಾವು, 18 ಮಂದಿಗೆ ಗಾಯ Read More »

ಸುಳ್ಯದ ಯುವಕ ಕಣ್ಣೂರಿನಲ್ಲಿ ಕೆರೆಗೆ ಬಿದ್ದು ಸಾವು

ಸಹಪಾಠಿಯ ಮನೆಗೆ ಹೋದ ವೇಳೆ ಸಂಭವಿಸಿದ ದುರಂತ ಸುಳ್ಯ: ಸುಳ್ಯದ ಯುವಕ ಹದಿಹರೆಯದ ಯುವಕನೊಬ್ಬ ಕೇರಳದ ಕಣ್ಣೂರಿನಲ್ಲಿ ಕೆರೆಗೆ ಬಿದ್ದು ಮೃತಪಟ್ಟಿರುವ ಘಟನೆ ಭಾನುವಾರ ಸಂಭವಿಸಿದೆ. ಈತ ಮಂಗಳೂರಿನಲ್ಲಿ ಕಲಿಯುತ್ತಿದ್ದರು. ಸುಳ್ಯ ತಾಲೂಕಿನ ಮಡಪ್ಪಾಡಿ ಗ್ರಾಮದ ಬಾಳಿಕಲ ನಿವಾಸಿ, ಸುಳ್ಯದ ನಿವೃತ್ತ ತಾಲೂಕು ಆರೋಗ್ಯಾಧಿಕಾರಿ ಡಾ.ನಂದಕುಮಾರ್ ಅವರ ಪುತ್ರ, ಮಂಗಳೂರಿನ ಖಾಸಗಿ ಡೆಂಟಲ್ ಕಾಲೇಜಿನಲ್ಲಿ ಪ್ರಥಮ ವರ್ಷದ ದಂತ ವಿಜ್ಞಾನ ಕಲಿಯುತ್ತಿದ್ದ ಆಸ್ತಿಕ್ ರಾಘವ್ (19) ಮೃತಪಟ್ಟಿರುವ ದುರ್ದೈವಿ. ತಂದೆ, ತಾಯಿ, ಸಹೋದರಿಯನ್ನು ಅಗಲಿದ್ದಾರೆ. ಆಸ್ತಿಕ್ ರಾಘವ್

ಸುಳ್ಯದ ಯುವಕ ಕಣ್ಣೂರಿನಲ್ಲಿ ಕೆರೆಗೆ ಬಿದ್ದು ಸಾವು Read More »

ಡಿ ಕೆ ಶಿವಕುಮಾರ್ ಬೆಂಗಾವಲು ವಾಹನ ಅಪಘಾತ

ಸಾಧನಾ ಸಮಾವೇಶದಿಂದ ಮರಳುತ್ತಿದ್ದಾಗ ಡಿವೈಡರ್‌ಗೆ ಡಿಕ್ಕಿ ಹೊಡೆದ ವಾಹನ ಮೈಸೂರು: ನಗರದಲ್ಲಿ ನಡೆಯುತ್ತಿದ್ದ ಸಾಧನಾ ಸಮಾವೇಶ ಮುಗಿಸಿ ಬೆಂಗಳೂರಿಗೆ ಮರಳುತ್ತಿದ್ದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಬೆಂಗಾವಲು ವಾಹನ ಅಪಘಾತಕ್ಕೀಡಾಗಿದೆ. ಘಟನೆಯಲ್ಲಿ ಇಬ್ಬರು ಸಿಬ್ಬಂದಿಗಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ಮೈಸೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಂಗಳೂರು – ಮೈಸೂರು ಎಕ್ಸ್‌ಪ್ರೆಸ್ ವೇ‌ನಲ್ಲಿ ಈ ಘಟನೆ ಸಂಭವಿಸಿದೆ. ಶ್ರೀರಂಗಪಟ್ಟಣದ ಗೌಡಹಳ್ಳಿ ಟಿಎಂ ಹೊಸೂರು ಸಮೀಪದ ಎಕ್ಸ್‌ಪ್ರೆಸ್ ವೇ ನಲ್ಲಿ ಈ ದುರಂತ ಸಂಭವಿಸಿದೆ. ಡಿವೈಡರ್‌ಗೆ ‌ಢಿಕ್ಕಿಯಾದ ಪರಿಣಾಮ ಆ ಅಪಘಾತ

ಡಿ ಕೆ ಶಿವಕುಮಾರ್ ಬೆಂಗಾವಲು ವಾಹನ ಅಪಘಾತ Read More »

error: Content is protected !!
Scroll to Top