ಅಪಘಾತ

ನದಿಗೆ ಮೀನು ಹಿಡಿಯಲು ಹೋದ ವ್ಯಕ್ತಿ ನೀರುಪಾಲು

ಬಿ.ಸಿ.ರೋಡ್ : ಗಾಳ ಹಾಕಿ ಮೀನು ಹಿಡಿಯುತ್ತಿದ್ದ ಸಂದರ್ಭ ಕಾಲು ಜಾರಿ ನದಿಗೆ ಬಿದ್ದು ಕೊಚ್ಚಿ ಹೋದ ಘಟನೆ ಗುರುವಾರ ಸಂಜೆ ಅಜಿಲಮೊಗರು ಸೇತುವೆ ಬಳಿ ನಡೆದಿದೆ. ಮಣಿನಾಲ್ಕೂರು ಗ್ರಾಮದ ಕುಟೇಲು ಎಂಬಲ್ಲಿಗೆ ಸುರತ್ಕಲ್ ನ ಕಾನ ನಿವಾಸಿ ಮೈಕಲ್ (53) ನೀರು ಪಾಲಾದವರು. ಮೈಕಲ್ ಅವರು ಸುದೀಪ ಹಾಗೂ ದಯಾನಂದ, ಜನಾರ್ದನ ಎಂಬವರ ಜೊತೆಗೆ ನದಿಗೆ ತೆರಳಿ ಗಾಳ ಹಾಕಿ ಮೀನು ಹಿಡಿಯುತ್ತಿದ್ದರು. ಸಂಜೆ ಸುಮಾರು 6.15 ರ ಹೊತ್ತಿಗೆ ಸುದೀಪ ಮತ್ತು ದಯಾನಂದರು ಮನೆಗೆ […]

ನದಿಗೆ ಮೀನು ಹಿಡಿಯಲು ಹೋದ ವ್ಯಕ್ತಿ ನೀರುಪಾಲು Read More »

ನಿಯಂತ್ರಣ ತಪ್ಪಿ ಗ್ಯಾರೇಜ್‍ ಗೆ ನುಗ್ಗಿದ ಕಾರು

ವಿಟ್ಲ : ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಗ್ಯಾರೇಜ್ ಗೆ ನುಗ್ಗಿದ ಘಟನೆ ವಿಟ್ಲ ಸಮೀಪದ ಅಪ್ಪೆರಿಪಾದೆಯಲ್ಲಿ ನಡೆದಿದೆ. ವಿಟ್ಲ-ಕಾಸರಗೋಡು ರಸ್ತೆಯ ಅಪ್ಪೆರಿಪಾದೆ ಎಂಬಲ್ಲಿ ರಾಷ್ಟ್ರೀಯ ಹೆದ್ದಾರಿ ಯಲ್ಲಿ ಈ ಅಪಘಾತ ಸಂಭವಿಸಿದೆ. ಅಪಘಾತದಿಂದ ಗ್ಯಾರೇಜ್ ನ ಮೇಲ್ಛಾವಣಿಗೆ ಹಾನಿಯಾಗಿದ್ದು, ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.

ನಿಯಂತ್ರಣ ತಪ್ಪಿ ಗ್ಯಾರೇಜ್‍ ಗೆ ನುಗ್ಗಿದ ಕಾರು Read More »

ಶಿರಾಡಿ ಘಾಟ್ ನಲ್ಲಿ ಸರಣಿ ಅಪಘಾತ

ಪುತ್ತೂರು : ಶಿರಾಡಿ ಘಾಟ್ ಚೆಕ್ ಪೋಸ್ಟ್ ಬಳಿ ಸರಣಿ ಅಪಘಾತ ನಡೆದ ಘಟನೆ ಇಂದು ಮಧ್ಯಾಹ್ನ ನಡೆದಿದೆ. ಗೂಡ್ಸ್ ಹೊತ್ತ ಟೆಂಪೋ, ಐರಾವತ ಬಸ್, ರಾಜಹಂಸ ಬಸ್ ನಡುವೆ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಕೆಲವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಪುತ್ತೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಐರಾವತ ಬಸ್ ನ್ನು ಗೂಡ್ಸ್ ಹೊತ್ತ ಟೆಂಪೋ ಓವರ್ ಟೇಕ್ ಮಾಡುವ ಭರದಲ್ಲಿ ದುರ್ಘಟನೆ ಸಂಭವಿಸಿತು. ಓವರ್ ಟೇಕ್ ಮಾಡುವ ಸಂದರ್ಭ ಎದುರಿನಿಂದ ರಾಜಹಂಸ ಬಸ್ ಬರುತ್ತಿದ್ದು, ಟೆಂಪೋ ಚಾಲಕ ನಿಯಂತ್ರಣ

ಶಿರಾಡಿ ಘಾಟ್ ನಲ್ಲಿ ಸರಣಿ ಅಪಘಾತ Read More »

ಎರಡು ಬಸ್ ಗಳ ನಡುವೆ ಮುಖಾಮುಖಿ ಡಿಕ್ಕಿ

ಬೆಳ್ತಂಗಡಿ: ಖಾಸಗಿ ಬಸ್‌ ಹಾಗೂ ಕೆ.ಎಸ್.ಆರ್.ಟಿ.ಸಿ. ಬಸ್ ಮುಖಾಮುಖಿ ಡಿಕ್ಕಿಯಾದ ಘಟನೆ ಜೂ.29ರಂದು ಬೆಳ್ತಂಗಡಿಯ ಸಂತೆಕಟ್ಟೆ ಬಳಿ ಸಂಭವಿಸಿದೆ. ಬೆಳ್ತಂಗಡಿಯಿಂದ ಮಂಗಳೂರಿಗೆ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ. ಬಸ್ ಹಾಗೂ ಗುರುವಾಯನಕೆರೆಯಿಂದ ಬೆಳ್ತಂಗಡಿಗೆ ಬರುತ್ತಿದ್ದ ಖಾಸಗಿ ಬಸ್ ಅಯ್ಯಪ್ಪಗುಡಿಯ ಸಮೀಪ ಮುಖಾಮುಖಿ ಡಿಕ್ಕಿಯಾಗಿದ್ದು ಈ ವೇಳೆ ಖಾಸಗಿ ಬಸ್‌ ಚಾಲಕ ಗಾಯಗೊಂಡಿದ್ದಾರೆ. ಉಳಿದಂತೆ ಎರಡೂ ಬಸ್‌ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸದ್ಯ ಸಂತೆಕಟ್ಟೆ ಬಳಿಯಿಂದ ಟ್ರಾಫಿಕ್‌ ಜಾಮ್ ಉಂಟಾಗಿದೆ.

ಎರಡು ಬಸ್ ಗಳ ನಡುವೆ ಮುಖಾಮುಖಿ ಡಿಕ್ಕಿ Read More »

ಭೀಕರ ಕಾರು ಅಪಘಾತ | ಉದ್ಯಮಿ ಮೃತ್ಯು

ಬೆಳ್ತಂಗಡಿ : ಬೆಳ್ಳಂಬೆಳಗ್ಗೆ ನಡೆದ ಭೀಕರ ಕಾರು ಅಪಘಾತದಲ್ಲಿ ಬೆಳ್ತಂಗಡಿ ಉದ್ಯಮಿಯೊಬ್ಬರು ಮೃತಪಟ್ಟ ಘಟನೆ ಉಜಿರೆ ಕಾಲೇಜು ರಸ್ತೆಯಲ್ಲಿ ಇಂದು ನಡೆದಿದೆ. ಬೆಳ್ತಂಗಡಿ ಪ್ರಜ್ವಲ್ ಕಾಂಪ್ಲೆಕ್ಸ್ ಮಾಲಕರ ಪುತ್ರ ಪ್ರಜ್ವಲ್ ನಾಯಕ್ (35) ಅಪಘಾತದಿಂದ ಮೃತಪಟ್ಟವರು. ಇಂದು ಮುಂಜಾನೆ 4 ಗಂಟೆ ಸುಮಾರಿಗೆ ಈ ಅಪಘಾತ ನಡೆದಿದ್ದು, ಕಾಲೇಜು ರಸ್ತೆಯಿಂದ ಬೆಳ್ತಂಗಡಿ ಸಾಗುವ ಮಧ್ಯೆ ಡಿವೈಡರ್ ನ ಬೀದಿ ದೀಪದ ಕಂಬಗಳಿಗೆ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಕಾರು ಮುಂಭಾಗ ನಜ್ಜು-ಗುಜ್ಜಾದರೆ, ಒಂದು ವಿದ್ಯುತ್ ಕಂಬ

ಭೀಕರ ಕಾರು ಅಪಘಾತ | ಉದ್ಯಮಿ ಮೃತ್ಯು Read More »

ಬೈಕ್ – ಖಾಸಗಿ ಬಸ್ ಅಪಘಾತ | ಬೈಕ್ ಸವಾರ ಸಾವು

ನಡ: ಲಾಯಿಲ ಪುತ್ರಬೈಲು ನಲ್ಲಿ ಬೈಕ್ ಹಾಗೂ ಖಾಸಗಿ ಬಸ್ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ತೀವ್ರ ಗಾಯಗೊಂಡು ಬೈಕ್ ಸವಾರ ಸಾವನ್ನಪ್ಪಿದ್ದ ಘಟನೆ ಜೂ.28 ರಂದು ಬೆಳಿಗ್ಗೆ ನಡೆದಿದೆ. ಬೈಕ್ ಸವಾರ ಬಳಂಜ ನಿವಾಸಿಯಾಗಿದ್ದು ನಡ ಗ್ರಾಮಕರಣಿಕರ ಕಚೇರಿ ಸಹಾಯಕ ಅವಿವಾಹಿತ ಜಯರಾಜ್(45) ಎಂದು ತಿಳಿದುಬಂದಿದೆ. ಬೈಕ್ ಸವಾರ ಜಯರಾಜ್ ರವರು ಬೆಳ್ತಂಗಡಿ ಕಡೆಯಿಂದ ನಡ ಕಚೇರಿಗೆ ತೆರಳುತ್ತಿದ್ದು ಬಸ್ಸು ಕಿಲ್ಲೂರಿನಿಂದ ಬೆಳ್ತಂಗಡಿಗೆ ಬರುತ್ತಿದ್ದಾಗ ಈ ದುರ್ಘಟನೆ ನಡೆದಿದೆ. ಅಪಘಾತದಲ್ಲಿ ಜಯರಾಜ್ ರವರಿಗೆ ತೀವ್ರ

ಬೈಕ್ – ಖಾಸಗಿ ಬಸ್ ಅಪಘಾತ | ಬೈಕ್ ಸವಾರ ಸಾವು Read More »

ಭೀಕರ ರಸ್ತೆ ಅಪಘಾತ  | 13 ಮಂದಿ  ಸಾವು

ಹಾವೇರಿ : ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿಯ ಬೆಂಗಳೂರು-ಪುಣೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು 13 ಮಂದಿ ಮೃತಪಟ್ಟಿದ್ದಾರೆ. ನಿಂತಿದ್ದ ಲಾರಿಗೆ ಹಿಂದಿನಿಂದ ಟಿಟಿ ವಾಹನ ಡಿಕ್ಕಿಯಾಗಿದೆ. ಡಿಕ್ಕಿ ರಭಸಕ್ಕೆ ಟಿಟಿ ವಾಹನದಲ್ಲಿದ್ದ ಮಹಿಳೆಯರು ಸೇರಿದಂತೆ 13 ಜನ ಮೃತಪಟ್ಟಿದ್ದಾರೆ. ಮೃತಪಟ್ಟವರು ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಎಮ್ಮೆಹಟ್ಟಿ ಗ್ರಾಮದ ನಿವಾಸಿಗಳು ಎಂದು ತಿಳಿದುಬಂದಿದೆ. ನಾಲ್ವರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಳಗಿನ ಜಾವ 4 ಗಂಟೆಯ ಸುಮಾರಿಗೆ ಅಪಘಾತ ನಡೆದಿದೆ ಎನ್ನಲಾಗಿದೆ.

ಭೀಕರ ರಸ್ತೆ ಅಪಘಾತ  | 13 ಮಂದಿ  ಸಾವು Read More »

ವಿದ್ಯುತ್ ಶಾಕ್ ಹೊಡೆದು ಯುವತಿ ಮೃತ್ಯು

ಬೆಳ್ತಂಗಡಿ : ವಿದ್ಯುತ್ ತಂತಿ ಸ್ಪರ್ಶಿಸಿ ಯುವತಿ ಮೃತಪಟ್ಟ ‍ಘಟನೆ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಶಿಬಾಜೆ ಗ್ರಾಮದಲ್ಲಿ ಇಂದು ನಡೆದಿದೆ. ಶಿಬಾಜೆ ಗ್ರಾಮದ ಬರ್ಗುಳ ನಿವಾಸಿ ಗಣೇಶ್ ಶೆಟ್ಟಿ ಮತ್ತು ರೋಹಿಣಿ ದಂಪತಿ ಪುತ್ರಿ ಪ್ರತೀಕ್ಷಾ ಶೆಟ್ಟಿ (21) ಮೃತಪಟ್ಟ ಯುವತಿ. ಪ್ರತೀಕ್ಷಾ ಸಂಜೆ ಮನೆಯ ರಸ್ತೆ ಸಮೀಪ ಪಾರ್ಸೆಲ್ ಬಂದಿದ್ದರಿಂದ ರಸ್ತೆಗೆ ಬಂದಿದ್ದಾರೆ. ಈ ವೇಳೆ ರಸ್ತೆಯಲ್ಲಿ ಹರಿದಾಡುತ್ತಿದ್ದ ನೀರಿನಲ್ಲಿ ವಿದ್ಯುತ್ ಪ್ರವಹಿಸಿದ ಪರಿಣಾಮ ಅದನ್ನು ಸ್ಪರ್ಶಿಸಿದ ಅವರಿಗೆ ವಿದ್ಯುತ್ ಶಾಕ್ ಹೊಡೆದಿದೆ. ಸ್ಥಳದಲ್ಲಿದ್ದ

ವಿದ್ಯುತ್ ಶಾಕ್ ಹೊಡೆದು ಯುವತಿ ಮೃತ್ಯು Read More »

ಭಾರೀ ಮಳೆಗೆ ಮನೆ ಮೇಲೆ ಧರೆ ಕುಸಿತ | ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳನ್ನು ಪಾರು ಮಾಡಿದ ತಂದೆ

ಪುತ್ತೂರು: ಭಾರೀ ಮಳೆಗೆ ಮನೆ ಮೇಲೆ ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು ಸಿಲುಕಿದ ಘಟನೆ ಬನ್ನೂರು ಸಮೀಪದ ಜೈನರಗುರಿಯಲ್ಲಿ ಇಂದು ನಸುಕಿನ ಜಾವ ನಡೆದಿದೆ. ನಸುಕಿನ ಜಾವ ನಿದ್ದೆಯಲ್ಲಿದ್ದ ಸಂದರ್ಭ ಮನೆ ಮೇಲೆ ಧರೆ ಕುಸಿದಿದೆ. ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳನ್ನ ಈ ಸಂದರ್ಭದಲ್ಲಿ ಪಾರು ಮಾಡಿದ್ದಾರೆ. ಮಣ್ಣು ಬಿದ್ದ ಪರಿಣಾಮ ಮನೆಯ ಅರ್ಧ ಭಾಗ ಕುಸಿದು ಹಾನಿಗೊಂಡಿದೆ. ಮಜೀದ್ ಮತ್ತು ಇಬ್ಬರು ಮಲಗಿದ್ದ ಕೊಠಡಿ ಮೇಲೆ ಬಿದ್ದ ಮಣ್ಣು ಬಿದ್ದಿರುವುದನ್ನು ಗಮನಿಸಿತಕ್ಷಣ ಎಚ್ಚೆತ್ತು

ಭಾರೀ ಮಳೆಗೆ ಮನೆ ಮೇಲೆ ಧರೆ ಕುಸಿತ | ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳನ್ನು ಪಾರು ಮಾಡಿದ ತಂದೆ Read More »

ಭಾರೀ ಮಳೆಗೆ ಮನೆಯ ಕಂಪೌಂಡ್ ಕುಸಿತ | ಒಂದೇ ಕುಟುಂಬದ ನಾಲ್ವರು ಮೃತ್ಯು

ಉಳ್ಳಾಲ: ಭಾರೀ ಮಳೆಗೆ ಬೆಳ್ಳಂಬೆಳಗ್ಗೆ ಮನೆಯ ಹಿಂಬದಿಯ ಕಂಪೌಂಡ್ ಕುಸಿದುಬಿದ್ದು ಒಂದೇ ಕುಟುಂಬದ ನಾಲ್ವರು ದಾರುಣವಾಗಿ ಮೃತಪಟ್ಟ ಘಟನೆ ಉಳ್ಳಾಲ ತಾಲೂಕಿನ ಮುನ್ನೂರು ಗ್ರಾಮದ ಮದನಿ ನಗರ ಎಂಬಲ್ಲಿ ಬುಧವಾರ ನಡೆದಿದೆ. ಮನೆಯೊಳಗೆ ವಾಸ್ತವ್ಯವಿದ್ದ ಯಾಸಿರ್ (45), ಅವರ ಪತ್ನಿ ಮರಿಯಮ್ಮ (40), ಮಕ್ಕಳಾದ ರಿಯಾನ ಮತ್ತು ರಿಫಾನ ಮೃತಪಟ್ಟವರು. ಸ್ಥಳಕ್ಕೆ ಅಧಿಕಾರಿಗಳು ದೌಡಾಯಿಸಿದ್ದು, ರಕ್ಷಣ ಕಾರ್ಯಾಚರಣೆ ನಡೆಸಲಾಗಿದೆ. ಮೂವರ ಶವಗಳನ್ನು ಹೊರ ತೆಗೆಯಲಾಗಿದೆ. ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅವಘಡ ಸಂಭವಿಸಿದೆ. ಅಬೂಬಕ್ಕರ್ ಎಂಬವರಿಗೆ ಸಂಬಂಧಿಸಿದ

ಭಾರೀ ಮಳೆಗೆ ಮನೆಯ ಕಂಪೌಂಡ್ ಕುಸಿತ | ಒಂದೇ ಕುಟುಂಬದ ನಾಲ್ವರು ಮೃತ್ಯು Read More »

error: Content is protected !!
Scroll to Top