ಅಪಘಾತ

ಕೆಎಸ್‍ ಆರ್ ಟಿಸಿ ಬಸ್‍ ಗಳೆರಡು ಮುಖಾಮುಖಿ ಡಿಕ್ಕಿ : ಹಲವರಿಗೆ ಗಾಯ

ಸುಳ್ಯ: ಕೆಎಸ್‍ ಆರ್‍ ಟಿಸಿ ಬಸ್‍ ಗಳೆರಡು ಮುಖಾಮುಖಿ ಡಿಕ್ಕಿ ಹೊಡದುಕೊಂಡ ಪರಿಣಾಮ ಹಲವರು ಗಾಯಗೊಂಡ ಘಟನೆ ಬುಧವಾರ ಸಂಜೆ ಸುಳ್ಯ ತಾಲೂಕಿನ ಅರಂತೋಡು ಶಾಲಾ ಮುಂಭಾಗ ನಡೆದಿದೆ. ಮಡಿಕೇರಿಯಿಂದ ಪುತ್ತೂರು ಕಡೆ ಬರುತ್ತಿದ್ದ ಬಸ್ ಎದುರಿನಿಂದ ಬಂದ ಬಸ್‌ ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಹಲವರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತಗೊಂಡ ಬಸ್ ಗಳ ಪೈಕಿ ಒಂದು ಅಶ್ವಮೇಧ ಬಸ್ ಎಂದು ಹೇಳಲಾಗಿದೆ.

ಕೆಎಸ್‍ ಆರ್ ಟಿಸಿ ಬಸ್‍ ಗಳೆರಡು ಮುಖಾಮುಖಿ ಡಿಕ್ಕಿ : ಹಲವರಿಗೆ ಗಾಯ Read More »

ಸಂಪಾಜೆಯಲ್ಲಿ ಕಾರಿನ ಮೇಲೆ ಮುರಿದು ಬಿದ್ದ ಮರದ ಕೊಂಬೆ

ಸುಳ್ಯ: ಚಲಿಸುತ್ತಿದ್ದ ಕಾರೊಂದರ ಮೇಲೆ ಮರದ ಕೊಂಬೆ ಮುರಿದು ಬಿದ್ದ ಘಟನೆ ಸಂಪಾಜೆಯಲ್ಲಿ ನಡೆದಿದೆ. ಮರದ ಕೊಂಬೆ ವಿನಯ್ ಎಂಬುವವರು ಮಾರುತಿ 800 ಕಾರಿನ ಮೇಲೆ ಬಿದ್ದಿದೆ. ಇದೇ ಸ್ಥಳದಿಂದ ಸ್ವಲ್ಪ ದೂರದಲ್ಲೇ ವಿದ್ಯಾರ್ಥಿಗಳು ಪ್ರತಿನಿತ್ಯ ಮುಂಜಾನೆ ಆಟೋ ಹತ್ತುತ್ತಿದ್ದು ಅಲ್ಲಿಯೂ ಮರದ ಕೊಂಬೆ ಮುರಿದು ಬಿದ್ದಿದೆ. ಅದೃಷ್ಟವಶಾತ್ ಈ ಸಮಯದಲ್ಲಿ ಅವರು ಆಟೋ ಹತ್ತಿದ್ದು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಈ ಕೊಂಬೆ ಮುರಿದ ಮರಗಳು ಖಾಸಗಿ ಜಾಗದೊಳಗಿದ್ದು, ಇದನ್ನು ತೆರವು ಮಾಡಲು ಕೆಲವು ನಿಯಮಗಳಿವೆ ಎಂದು

ಸಂಪಾಜೆಯಲ್ಲಿ ಕಾರಿನ ಮೇಲೆ ಮುರಿದು ಬಿದ್ದ ಮರದ ಕೊಂಬೆ Read More »

13ನೇ ಅಂತಸ್ತಿನಲ್ಲಿ ರೀಲ್ಸ್ | ಕೆಳಗೆ ಬಿದ್ದು ಯುವತಿ ಮೃತ್ಯು

ಬೆಂಗಳೂರು: ಯುವತಿಯೊಬ್ಬಳು ನಿರ್ಮಾಣ ಹಂತದ ಕಟ್ಟಡದ 13ನೇ ಅಂತಸ್ತಿನಲ್ಲಿ ರೀಲ್ಸ್ ಮಾಡುವ ಸಂದರ್ಭ ಕೆಳಗೆ ಬಿದ್ದು ಮೃತಪಟ್ಟ ಘಟನೆ ಬೆಂಗಳೂರಿನ ಪರಪ್ಪನ ಅಗ್ರಹಾರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ನಂದಿನಿ ಮೃತಪಟ್ಟ ಯುವತಿ   ಸ್ನೇಹಿತರೆಲ್ಲಾ ಸೇರಿ ನಿರ್ಮಾಣ ಹಂತದ ಕಟ್ಟಡದ ಬಳಿ ಪಾರ್ಟಿ ಮಾಡಲೆಂದು ಯುವತಿ ನಂದಿನಿ ಹೋಗಿದ್ದಳು. ಈ ಪಾರ್ಟಿಯಲ್ಲಿ ಪ್ರೀತಿ ವಿಚಾರಕ್ಕಾಗಿ ಮಾತುಕತೆ ನಡೆದು ಗಲಾಟೆ ಆಗಿದೆ. 12 ವರ್ಷದ ಲವ್ ಮುರಿದು ಬಿದ್ದಿತ್ತು. ಇದರಿಂದ ಬೇಸರಗೊಂಡಿದ್ದ ಯುವತಿ ಸ್ಯಾಡ್ ರೀಲ್ಸ್ ಮಾಡಲು ಹೋಗಿದ್ದಳು.

13ನೇ ಅಂತಸ್ತಿನಲ್ಲಿ ರೀಲ್ಸ್ | ಕೆಳಗೆ ಬಿದ್ದು ಯುವತಿ ಮೃತ್ಯು Read More »

ಉಪ್ಪಿನಂಗಡಿ: ಮಣ್ಣಗುಂಡಿಯಲ್ಲಿ ಗುಡ್ಡ ಜರಿದು ಹೆದ್ದಾರಿಗೆ ಬಿದ್ದ ಮಣ್ಣು ರಾಶಿ

ಹಲವು ತಾಸು ವಾಹನ ಸಂಚಾರ ವ್ಯತ್ಯಯ ಉಪ್ಪಿನಂಗಡಿ: ಇಲ್ಲಿಗೆ ಸಮೀಪದ ಕೌಕ್ರಾಡಿ ಗ್ರಾಮದ ಮಣ್ಣಗುಂಡಿಯಲ್ಲಿ ನಿನ್ನೆ ಸಂಜೆ ಗುಡ್ಡ ಜರಿದು ಭಾರಿ ಪ್ರಮಾಣದಲ್ಲಿ ಕಲ್ಲು-ಮಣ್ಣು ರಸ್ತೆಗೆ ಬಿದ್ದ ಪರಿಣಾಮ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರಲ್ಲಿ ವಾಹನ ಸಂಚಾರ ವ್ಯತ್ಯಯವಾಗಿತ್ತು. ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಬಿ.ಸಿ.ರೋಡ್‍ನಿಂದ ಅಡ್ಡಹೊಳೆ ತನಕ ಚತುಷ್ಪಥ ರಸ್ತೆ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದು, ಮಣ್ಣಗುಂಡಿಯಲ್ಲಿ ರಸ್ತೆ ನಿರ್ಮಾಣ ಸಂದರ್ಭ ಗುಡ್ಡ ಅಗೆಯಲಾಗಿದೆ. ಇಲ್ಲಿ ನೇರವಾಗಿ ಗುಡ್ಡ ಅಗೆದಿರುವುದರಿಂದ ಕೆಲ ದಿನಗಳಿಂದ ಮಣ್ಣು ಜರಿಯುತ್ತಿದ್ದು ಒಂದು

ಉಪ್ಪಿನಂಗಡಿ: ಮಣ್ಣಗುಂಡಿಯಲ್ಲಿ ಗುಡ್ಡ ಜರಿದು ಹೆದ್ದಾರಿಗೆ ಬಿದ್ದ ಮಣ್ಣು ರಾಶಿ Read More »

ನಿಯಂತ್ರಣ ತಪ್ಪಿ ಮಗುಚಿಬಿದ್ದ ಆಟೋ : ಸಹಸವಾರ ಮೃತ್ಯು

ಬೆಳ್ತಂಗಡಿ: ಆಟೋ ಚಾಲಕರೋರ್ವರ ನಿಯಂತ್ರಣ ತಪ್ಪಿ ಆಟೋ ಪಲ್ಟಿಯಾದ ಪರಿಣಾಮ  ಸಹಸವಾರ ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ಬದ್ಯಾರು ಸಮೀಪ ಭಾನುವಾರ ಸಂಜೆ ನಡೆದಿದೆ. ಕುಕ್ಕಳ, ಮಾಲಾಡಿ ಗ್ರಾಮದ ಅಣ್ಣು ಹೆಗ್ಡೆ ಅವರ ಪುತ್ರ ಚರಣ್‍ ಹೆಗ್ಡೆ (33) ಮೃತಪಟ್ಟ ಸಹಸವಾರ. ಚರಣ್‍ ಗುರುವಾಯನಕೆರೆಯಿಂದ ಅಳದಂಗಡಿ ಕಡೆಗೆ ಪ್ರಯಾಣಿಸುತ್ತಿದ್ದ ವೇಳೆ ಘಟನೆ ನಡೆದಿದೆ. ತಕ್ಷಣ ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಕೊಂಡೊಯ್ಯಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ, ಆಟೋದಲ್ಲಿ ಮೂವರು ಪ್ರಯಾಣಿಕರಿದ್ದರು

ನಿಯಂತ್ರಣ ತಪ್ಪಿ ಮಗುಚಿಬಿದ್ದ ಆಟೋ : ಸಹಸವಾರ ಮೃತ್ಯು Read More »

ಪಾದಚಾರಿಗೆ ಡಿಕ್ಕಿ ಹೊಡೆದ ಕಾರು

ವಿಟ್ಲ: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಾದಾಚಾರಿಗೆ ಡಿಕ್ಕಿ ಹೊಡೆದ ಘಟನೆ ಅಡ್ಯನಡ್ಕ ಬಳಿ ನಡೆದಿದೆ. ಘಟನೆ ಪರಿಣಾಮ ಪಾದಚಾರಿಗೆ ಮತ್ತು ಕಾರು ಚಾಲಕನಿಗೆ ಗಾಯಗಳಾಗಿದ್ದು ಅವರನ್ನು ಕೇಪು ಗ್ರಾಮ ಪಂಚಾಯತ್ ಅಧ್ಯಕ್ಷರಾದ ರಾಘವ ಮಣಿಯಾಣಿ ಸ್ಥಳೀಯರ ಸಹಕಾರದೊಂದಿಗೆ ವಿಟ್ಲ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ. ಪಾದಚಾರಿಗೆ ಡಿಕ್ಕಿ ಹೊಡೆದ ಕಾರು ಬದಿಯ ಧರೆಗೆ ಅಪ್ಪಳಿಸಿ ನಿಂತಿದೆ ಎನ್ನಲಾಗಿದೆ.

ಪಾದಚಾರಿಗೆ ಡಿಕ್ಕಿ ಹೊಡೆದ ಕಾರು Read More »

ಸೌಜನ್ಯ ಹೆಸರಿನಲ್ಲಿ ಫೇಸ್ ಬುಕ್‍ ಖಾತೆ | ಲಕ್ಷಾಂತರ ವಂಚನೆ

ಮಂಗಳೂರು: ಮಂಗಳೂರು: ಸೌಜನ್ಯ ಹೆಸರಿನಲ್ಲಿ ಹೆಲ್ಸ್ ಲೈನ್ ತೆರೆದು ಲಕ್ಷ ಲಕ್ಷ ರೂಪಾಯಿ ವಂಚನೆ ಮಾಡಿರುವ ಆರೋಪದ ಮೇಲೆ ಬೆಂಗಳೂರಿನ ಸಂಧ್ಯಾ ಪವಿತ್ರ ನಾಗರಾಜ್ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆಯ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಳ್ತಂಗಡಿ ತಾಲೂಕಿನ ಮಡಂತ್ಯಾರ್‌ ಮಾಲಾಡಿ ನಿವಾಸಿ ಕೆ.ರಾಜೇಶ್ ಎಂಬುವರು ನೀಡಿದ ದೂರಿನ ಅನ್ವಯ ಪ್ರಕರಣ ದಾಖಲಾಗಿದೆ. ದೂರುದಾರ ರಾಜೇಶ್ ಅವರಿಗೆ ಸಂಧ್ಯಾ 2024ರಲ್ಲಿ ಫೇಸ್‌ಬುಕ್ ಮೂಲಕ ಪರಿಚಯವಾಗಿದ್ದಾಳೆ. ಸೌಜನ್ಯ ಹೆಲ್ತ್‌ ಲೈನ್ ಹೆಸರಿನಲ್ಲಿ ವಂಚನೆಗೊಳಗಾದವರಿಗೆ ನೆರವಾಗುತ್ತಿದ್ದೇನೆ. ಅಮಾಯಕರ ಮೇಲೆ

ಸೌಜನ್ಯ ಹೆಸರಿನಲ್ಲಿ ಫೇಸ್ ಬುಕ್‍ ಖಾತೆ | ಲಕ್ಷಾಂತರ ವಂಚನೆ Read More »

ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ ಕಾರು ಅಪಘಾತ

ಮೂರು ಕಾರುಗಳು ಸರಣಿ ಡಿಕ್ಕಿ ; ಶಾಸಕರು ಪಾರು ಶಿವಮೊಗ್ಗ : ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ಸಮೀಪದ ಕೋಡೂರಿನಲ್ಲಿ ನಡೆದಿದೆ. ಶುಕ್ರವಾರ ಸಂಜೆ ಗುರುರಾಜ ಗಂಟಿಹೊಳೆ ಉಡುಪಿ ಕಡೆಗೆ ತೆರಳುವ ವೇಳೆ ಅಪಘಾತ ನಡೆದಿದೆ. ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರ ಕಾರು ಸೇರಿ ಮೂರು ಕಾರುಗಳು ಶುಕ್ರವಾರ ಸಂಜೆ ಕೋಡೂರು ಬಳಿ ಅಪಘಾತಕ್ಕೀಡಾಗಿವೆ. ಶಾಸಕರ ಕಾರಿನ ಮುಂದೆ ಚಲಿಸುತ್ತಿದ್ದ

ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ ಕಾರು ಅಪಘಾತ Read More »

ಅಹಮದಾಬಾದ್‌ ವಿಮಾನ ದುರಂತ : 215 ಮೃತದೇಹಗಳ ಗುರುತು ದೃಢ

ಡಿಎನ್‌ಎ ಪರೀಕ್ಷೆ ವರದಿ ಬಂದ ಬಳಿಕ ಕುಟುಂಬಸ್ಥರಿಗೆ ಹಸ್ತಾಂತರ ಅಹಮದಾಬಾದ್‌: ಇಲ್ಲಿ ಕಳೆದ ಗುರುವಾರ ಸಂಭವಿಸಿದ ಏರ್‌ ಇಂಡಿಯಾ ವಿಮಾನ ದುರಂತದಲ್ಲಿ ಮೃತಪಟ್ಟವರ ಪೈಕಿ ಈವರೆಗೆ 215 ಮಂದಿಯ ಗುರುತು ಪತ್ತೆಯಾಗಿದ್ದು, 198 ಮೃತದೇಹಗಳನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ ಎಂದು ಅಹಮದಾಬಾದ್ ಸಿವಿಲ್ ಹಾಸ್ಪಿಟಲ್ ಅಧೀಕ್ಷಕ ರಾಕೇಶ್ ಜೋಶಿ ತಿಳಿಸಿದ್ದಾರೆ. ಒಟ್ಟು 215 ಡಿಎನ್‌ಎ ವರದಿಗಳು ಮ್ಯಾಚ್‌ ಆಗಿವೆ. 198 ಮೃತದೇಹಗಳನ್ನ ಹಸ್ತಾಂತರಿಸಲಾಗಿದೆ. ಈ ಪೈಕಿ 149 ಭಾರತೀಯರು, 7 ಪೋರ್ಚುಗೀಸ್‌, 32 ಬ್ರಿಟಿಷ್‌ ಮತ್ತು ಕೆನಡಿಯನ್‌ ಪ್ರಜೆಗಳ

ಅಹಮದಾಬಾದ್‌ ವಿಮಾನ ದುರಂತ : 215 ಮೃತದೇಹಗಳ ಗುರುತು ದೃಢ Read More »

ಮಂಗಳೂರು : ಶರಾಬಿನ ಮತ್ತಿನಲ್ಲಿ ಅತಿವೇಗದ ಚಾಲನೆಯಿಂದ ಭೀಕರ ಅಪಘಾತ

ಡ್ರಿಂಕ್​ & ಡ್ರೈವ್ ಅಡಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮಂಗಳೂರು: ಮಂಗಳೂರು ಹೊರವಲಯದ ಜಪ್ಪಿನಮೊಗರಿನಲ್ಲಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುರುವಾರ ನಸುಕಿನ ಹೊತ್ತು ಸಂಭವಿಸಿದ ಭೀಕರ ಅಪಘಾತಕ್ಕೆ ಶರಾಬಿನ ಮತ್ತಿನಲ್ಲಿ ಕಾರನ್ನು ವಿಪರೀತ ವೇಗದಲ್ಲಿ ಚಲಾಯಿಸಿದ್ದೇ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ. ಈ ಭೀಕರ ಅಪಘಾತದಲ್ಲಿ ಎನ್ಎಸ್​ಯುಐ ಜಿಲ್ಲಾ ಉಪಾಧ್ಯಕ್ಷ ಓಂಶ್ರೀ ಪೂಜಾರಿ ಹಾಗೂ ಅವರ ಸ್ನೇಹಿತ ಕದ್ರಿ‌ ನಿವಾಸಿ ಅಮನ್ ರಾವ್​ ಮೃತಪಟ್ಟಿದ್ದಾರೆ. ಕಾರಿನಲ್ಲಿ ಓರ್ವ ಇಟಲಿ ಪ್ರಜೆಯ ಸಹಿತ ಇತರ ಮೂವರಿದ್ದರು. ಇಬ್ಬರಿಗೆ ಗಾಯಗಳಾಗಿವೆ.

ಮಂಗಳೂರು : ಶರಾಬಿನ ಮತ್ತಿನಲ್ಲಿ ಅತಿವೇಗದ ಚಾಲನೆಯಿಂದ ಭೀಕರ ಅಪಘಾತ Read More »

error: Content is protected !!
Scroll to Top