ಅಪಘಾತ

ಅಮೇರಿಕದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಇಬ್ಬರು ಭಾರತೀಯ ವಿದ್ಯಾರ್ಥಿಗಳು ಮೃತ್ಯು

ವಾಷಿಂಗ್ಟನ್ : ಅಮೇರಿಕದ ನ್ಯೂಯಾರ್ಕ್ ನ ರಸ್ತೆ ಅಪಘಾತದಲ್ಲಿ ಕ್ಲೀವ್‌ಲ್ಯಾಂಡ್ ಸ್ಟೇಟ್ ಯೂನಿವರ್ಸಿಟಿಯ ಇಬ್ಬರು ಭಾರತೀಯ ವಿದ್ಯಾರ್ಥಿಗಳು ಸಾವನ್ನಪ್ಪಿದ ಘಟನೆ ನಡೆದಿದ್ದು, ಈ ಮಾಹಿತಿಯನ್ನು  ಭಾರತೀಯ ಕಾನ್ಸುಲೇಟ್ ಮಂಗಳವಾರ ತಿಳಿಸಿದೆ. ಮಾನವ್ ಪಟೇಲ್ (20) ಮತ್ತು ಸೌರವ್ ಪ್ರಭಾಕರ್ (23) ಮೃತಪಟ್ಟ ವಿದ್ಯಾರ್ಥಿಗಳೆನ್ನಲಾಗಿದೆ . ಲ್ಯಾಂಕಾಸ್ಟ‌ರ್ ಕೌಂಟಿ ಕರೋನರ್ ಕಚೇರಿಯ ಪ್ರಕಾರ, ಮೇ 10 ರಂದು ಪೂರ್ವ ಕೊಕಾಲಿಕೊ ಟೌನ್‌ಶಿಪ್‌ನಲ್ಲಿ ಅಪಘಾತ ಸಂಭವಿಸಿದಾಗ ಪ್ರಭಾಕರ್ ಕಾರು ಚಾಲನೆ ಮಾಡುತ್ತಿದ್ದರು. ಪ್ರಭಾಕರ್ ಮತ್ತು ಪಟೇಲ್ ಸ್ಥಳದಲ್ಲೇ ಸಾವನ್ನಪ್ಪಿದರೆ, ಮುಂದಿನ […]

ಅಮೇರಿಕದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಇಬ್ಬರು ಭಾರತೀಯ ವಿದ್ಯಾರ್ಥಿಗಳು ಮೃತ್ಯು Read More »

ಸರಕಾರಿ ಬಸ್ಸಿನಿಂದ ಎಸೆಯಲ್ಪಟ್ಟ ಪ್ರಯಾಣಿಕ

ಪುತ್ತೂರು: ಪ್ರಯಾಣಿಕರೋರ್ವರು ಕೆಎಸ್ ಆರ್ ಟಿಸಿ ಬಸ್ ನಿಂದ ಎಸೆಯಲ್ಪಟ್ಟ ಘಟನೆ ಸೋಮವಾರ ದರ್ಬೆಯಲ್ಲಿ ನಡೆದಿದೆ. ದರ್ಬೆ ಜಂಕ್ಷನ್ ಬಳಿ ಪ್ರಯಾಣಿಕರೋರ್ವರು ಬಸ್ ಗೆ ಹತ್ತಿದ್ದರು. ಬಸ್ ಸ್ವಲ್ಪ ಮುಂದೆ ಹೋಗಿತ್ತಷ್ಟೇ, ಅಷ್ಟರಲ್ಲೇ ಪ್ರಯಾಣಿಕ ಬಸ್ ನಿಂದ ಎಸೆಯಲ್ಪಟ್ಟಿದ್ದಾರೆ. ಗಾಯಗೊಂಡ ಅವರನ್ನು ಬಸ್ ಚಾಲಕ, ನಿರ್ವಾಹಕರು ಆಸ್ಪತ್ರೆಗೆ ಸಾಗಿಸಲು ವ್ಯವಸ್ಥೆ ಮಾಡಿದರು.

ಸರಕಾರಿ ಬಸ್ಸಿನಿಂದ ಎಸೆಯಲ್ಪಟ್ಟ ಪ್ರಯಾಣಿಕ Read More »

ಆಕಸ್ಮಿಕವಾಗಿ ಬೆಂಕಿ ಹೊತ್ತಿ ಉರಿದ ಟಿಪ್ಪರ್

ಸುಳ್ಯ : ಪಿಕಪ್ ವಾಹನವೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಹೊತ್ತಿ ಉರಿದ ಘಟನೆ ನಿನ್ನೆ (ಮೇ. 11) ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪದ ನೆಟ್ಟಾರು ಎಂಬಲ್ಲಿ ನಡೆದಿದೆ. ಬೆಳ್ಳಾರೆ ಕಡೆಯಿಂದ ಪುತ್ತೂರು ಕಡೆಗೆ ತೆರಳುತ್ತಿದ್ದ ಪಿಕಪ್ ವಾಹನ ನೆಟ್ಟಾರು ತಿರುವು ಬಳಿ ಸಮೀಪಿಸುತ್ತಿದ್ದಂತೆ ಮುಂಭಾಗದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದಿದೆ. ಚಾಲಕನು ಕೂಡಲೇ ವಾಹನ ನಿಲ್ಲಿಸಿ ಬೆಂಕಿಯನ್ನು ನಂದಿಸಲು ಪ್ರಯತ್ನಿಸಿದ್ದಾರೆ. ಆದರೆ ಅಗ್ನಿಯ ತೀವ್ರತೆಗೆ ಪಿಕಪ್ ವಾಹನ ಸಂಪೂರ್ಣ ಸುಟ್ಟು ಹೋಗಿದೆ ಎನ್ನಲಾಗಿದೆ

ಆಕಸ್ಮಿಕವಾಗಿ ಬೆಂಕಿ ಹೊತ್ತಿ ಉರಿದ ಟಿಪ್ಪರ್ Read More »

ಭೀಕರ ಅಪಘಾತ : 13 ಮಂದಿ ಸ್ಥಳದಲ್ಲೇ ಸಾವು

ರಾಯ್​ಪುರ: ಛತ್ತೀಸ್​ಗಢದ ರಾಯ್​ಪುರದಲ್ಲಿ ಟ್ರೇಲರ್ ಟ್ರಕ್ ಹಾಗೂ ಲಾರಿ ಮುಖಾಮುಖಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ 13 ಮಂದಿ ಸಾವನ್ನಪ್ಪಿ 11 ಜನರು ಗಾಯಗೊಂಡಿದ್ದಾರೆ. ರಾಯ್‌ಪುರ ಜಿಲ್ಲೆಯ ರಾಯ್‌ಪುರ-ಬಲೋದಬಜಾರ್ ರಸ್ತೆಯ ಸರಗಾಂವ್ ಬಳಿ ಭಾನುವಾರ ತಡರಾತ್ರಿ ಅಪಘಾತ ಸಂಭವಿಸಿದೆ. ಮಡಿದವರಲ್ಲಿ ನಾಲ್ಕು ಮಕ್ಕಳು ಮತ್ತು ಒಂಬತ್ತು ಮಹಿಳೆಯರು ಸೇರಿದ್ದಾರೆ. ಚೌಥಿಯಾ ಛಟ್ಟಿಯಿಂದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಲಾರಿಯಲ್ಲಿ ಹಿಂತಿರುಗುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಘಟನೆಯಲ್ಲಿ ಗಾಯಗೊಂಡವರನ್ನು ತಕ್ಷಣವೇ ರಾಯ್‌ಪುರದ ಡಾ.ಬಿ.ಆರ್. ಅಂಬೇಡ್ಕರ್ ಸ್ಮಾರಕ ಆಸ್ಪತ್ರೆಗೆ ದಾಖಲಿಸಲಾಯಿತು ಎಂದು ರಾಯ್‌ಪುರ ಎಸ್‌ಪಿ

ಭೀಕರ ಅಪಘಾತ : 13 ಮಂದಿ ಸ್ಥಳದಲ್ಲೇ ಸಾವು Read More »

ಬಸ್ ಚಾಲಕನ ನಿರ್ಲಕ್ಷ್ಯತನದಿಂದ ತಂದೆ – ಮಗ ಮೃತ್ಯು | ಚಾಲಕನ ವಿರುದ್ದ ಪ್ರಕರಣ ದಾಖಲು

ಪುತ್ತೂರು : ಕೆ ಎಸ್ ಆರ್ ಟಿ ಸಿ  ಬಸ್ಸಿನ ಚಾಲಕನ ಬೇಜವಾಬ್ದಾರಿಯಿಂದಾಗಿ ಬೈಕ್ ಸವರರಾದ ತಂದೆ ಮತ್ತು ಆತನ ಜೊತೆ ಇದ್ದ ಮಗ ಮೃತ ಪಟ್ಟ ಘಟನೆ ಪುತ್ತೂರಿನಲ್ಲಿ ಭಾನುವಾರ ನಡೆದಿದೆ. ಮೃತಪಟ್ಟವರು ಬಂಟ್ವಾಳ ತಾಲೂಕಿನ  ನರಿಕೊಂಬು ಬಳಿಯ ಬೋರುಗುಡ್ಡೆ ನಿವಾಸಿ ನರಿಕೊಂಬು ಗ್ರಾಪಂ ಸದಸ್ಯ ಹಾಗೂ ಸಮಾಜಸೇವಾ ಬ್ಯಾಂಕ್ ನಿರ್ದೇಶಕರಾದ ಅರುಣ್ ಕುಲಾಲ್ (45) ಹಾಗೂ ಅವರ ಪುತ್ರ ಧ್ಯಾನ್ (15) ಎನ್ನಲಾಗಿದ್ದು, ಈ ಘಟನೆಯಲ್ಲಿ ತಂದೆ ಅರುಣ್ ಕುಲಾಲ್ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮಗನನ್ನು

ಬಸ್ ಚಾಲಕನ ನಿರ್ಲಕ್ಷ್ಯತನದಿಂದ ತಂದೆ – ಮಗ ಮೃತ್ಯು | ಚಾಲಕನ ವಿರುದ್ದ ಪ್ರಕರಣ ದಾಖಲು Read More »

ಬಸ್ – ಬೈಕ್ ನಡುವೆ ಭೀಕರ ಅಪಘಾತ | ಓರ್ವ ಮೃತ್ಯು, ಇನ್ನೊರ್ವ ಗಂಭೀರ

ಪುತ್ತೂರು: ಬಸ್ ಮತ್ತು ಬೈಕ್ ನಡುವೆ ಅಪಘಾತವಾದ ಘಟನೆ ಕಬಕದಲ್ಲಿ ನಡೆದಿದೆ ಅಪಘಾತದ ಪರಿಣಾಮ ಬೈಕ್ ಸವಾರ ಮೃತ ಪಟ್ಟಿದ್ದಾನೆ ಎಂದು ತಿಳಿದು ಬಂದಿದೆ. ಪುತ್ತೂರು ಮಂಗಳೂರು ಹೆದ್ದಾರಿ ಕಬಕ ಕುವೆತ್ತಿಲ ಸಮೀಪ ಸರ್ಕಾರಿ ಬಸ್ ಹಾಗೂ ಬೈಕ್ ನಡುವೆ ನಡೆದ ಅಪಘಾತದಲ್ಲಿ ನರಿಕೊಂಬು ನಿವಾಸಿ ಅರುಣ್ ಕುಲಾಲ್ ಮೃತಪಟ್ಟಿದ್ದು, ಅವರ ಮಗ ಧ್ಯಾನ್ ಗಂಭೀರ ಗಾಯವಾಗಿದೆ.  ಪುತ್ತೂರಿನಿಂದ ಮಂಗಳೂರಿನ ಕಡೆ ಹೋಗುತ್ತಿದ್ದ ಬಸ್ ಮಾಣಿ ಕಡೆಯಿಂದ ಬರುತ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಬಸಕ್ಕೆ

ಬಸ್ – ಬೈಕ್ ನಡುವೆ ಭೀಕರ ಅಪಘಾತ | ಓರ್ವ ಮೃತ್ಯು, ಇನ್ನೊರ್ವ ಗಂಭೀರ Read More »

ಮದುವೆ ಕಾರು ಸಹಿತ ಸರಣಿ ಅಪಘಾತ : ವ್ಯಕ್ತಿಯೋರ್ವನಿಗೆ ಗಾಯ

ಪುತ್ತೂರು: ಶ್ವಾನ ಅಡ್ಡಲಾಗಿ ಬಂದಿದರಿಂದ ಸರಣಿ ಅಪಘಾತ ಕಲ್ಲರ್ಪೆಯ ಕಾರ್ಪಾಡಿ ಬಳಿ ಭಾನುವಾರ ನಡೆದಿದೆ. ಕಟೀಲಿನಲ್ಲಿ ಮದುವೆ ನಡೆಯಲಿದ್ದು, ಈ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಕಾರು ಇದಾಗಿತ್ತು. ಇದರೊಂದಿಗೆ ಇನ್ನೆರಡು ಕಾರು ಹಾಗೂ ಬೈಕ್ ಅಪಘಾತಕ್ಕೀಡಾಗಿದೆ. ಬೈಕ್ ಸವಾರರು ಸ್ವಲ್ಪ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಶ್ವಾನವೊಂದು ಅಡ್ಡ ಬಂದ ಪರಿಣಾಮ ಬ್ರೇಕ್ ಹಾಕಿದ್ದೇ ಘಟನೆಗೆ ಕಾರಣ ಎಂದು ತಿಳಿದು ಬಂದಿದೆ.

ಮದುವೆ ಕಾರು ಸಹಿತ ಸರಣಿ ಅಪಘಾತ : ವ್ಯಕ್ತಿಯೋರ್ವನಿಗೆ ಗಾಯ Read More »

ಜೀಪು ಹಾಗೂ ಗೂಡ್ಸ್ ಟೆಂಪೋ ನಡುವೆ ಡಿಕ್ಕಿ | ಪ್ರಾಣಾಪಾಯದಿಂದ ಪಾರು

ಬೆಳ್ತಂಗಡಿ : ಪಟ್ರಮೆಯ ಪಟ್ಟೂರು ಸಮೀಪ ತಿರುವಿನಲ್ಲಿ ಜೀಪು ಹಾಗೂ ಗೂಡ್ಸ್ ಟೆಂಪೋ ನಡುವೆ ಡಿಕ್ಕಿಯಾದ ಘಟನೆ ಇಂದು ಬೆಳಿಗ್ಗೆ ನಡೆದಿದೆ. ವಾಹನ ಚಾಲಕರಿಗೆ ಸಣ್ಣಪುಟ್ಟ ಗಾಯವಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ.

ಜೀಪು ಹಾಗೂ ಗೂಡ್ಸ್ ಟೆಂಪೋ ನಡುವೆ ಡಿಕ್ಕಿ | ಪ್ರಾಣಾಪಾಯದಿಂದ ಪಾರು Read More »

ದ್ವಿಚಕ್ರ ವಾಹನಗಳ ನಡುವೆ ಡಿಕ್ಕಿ | ವ್ಯಕ್ತಿಯೋರ್ವನಿಗೆ ಗಂಭೀರ ಗಾಯ

ಪುತ್ತೂರು : ದ್ವಿಚಕ್ರ ವಾಹನಗಳ ನಡುವೆ ಡಿಕ್ಕಿಯಾದ ಘಟನೆ ನಿನ್ನೆ ಬೊಳ್ವಾರಿನಲ್ಲಿ ನಡೆದಿದೆ. ಘಟನೆ ಪರಿಣಾಮ ಆಕ್ಟಿವಾ ಮತ್ತು ಡಿಯೋ ವಾಹನಕ್ಕೆ ಹಾನಿಯಾಗಿದ್ದು ಅಕ್ಟಿವಾ ಸವಾರನ ತಲೆಗೆ ಗಂಭೀರ ಗಾಯವಾಗಿದ್ದು ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಸಂಚಾರಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ದ್ವಿಚಕ್ರ ವಾಹನಗಳ ನಡುವೆ ಡಿಕ್ಕಿ | ವ್ಯಕ್ತಿಯೋರ್ವನಿಗೆ ಗಂಭೀರ ಗಾಯ Read More »

ಮರ ಬಿದ್ದು ತಂತಿಗೆ  ಹಾನಿ | ಅದೃಷ್ಟವಶಾತ್ ವಾಹನ ಅಪಾಯದಿಂದ ಪಾರು

ಪುತ್ತೂರು: ಮರ ಬಿದ್ದು ವಿದ್ಯುತ್ ತಂತಿಗೆ ಗೆ ಹಾನಿಯಾದ ಘಟನೆ ಪುತ್ತೂರಿನ ಕಲ್ಲರ್ಪೆ ಬಳಿ ನಡೆದಿದೆ. ಮರ ರಸ್ತೆಗೆ ಅಡ್ಡಲಾಗಿ ಬಿದ್ದ ಪರಿಣಾಮ ಸಂಚಾರಕ್ಕೆ ಅಡಚಣೆ ಉಂಟಾಗಿದೆ ಎನ್ನಲಾಗಿದೆ. ಅದೃಷ್ಟವಶಾತ್ ವಾಹನವೊಂದು ಕೂದಲೆಲೆಯ ಅಂತರದಲ್ಲಿ ಅಪಾಯದಿಂದ ಪಾರಾಗಿದೆ ಎಂದು ತಿಳಿದು ಬಂದಿದೆ.

ಮರ ಬಿದ್ದು ತಂತಿಗೆ  ಹಾನಿ | ಅದೃಷ್ಟವಶಾತ್ ವಾಹನ ಅಪಾಯದಿಂದ ಪಾರು Read More »

error: Content is protected !!
Scroll to Top