ನಿರ್ಮಾಣ ಹಂತದ ಮನೆ ಮೇಲಿನಿಂದ ಬಿದ್ದು ಮೃತ್ಯು !
ಉಪ್ಪಿನಂಗಡಿ: ವ್ಯಕ್ತಿಯೋರ್ವರು ನಿರ್ಮಾಣ ಹಂತದ ಮನೆ ಮೇಲಿನಿಂದ ಆಯತಪ್ಪಿ ಬಿದ್ದು ಮೃತಪಟ್ಟ ಘಟನೆ ಉಪ್ಪಿನಂಗಡಿ ಸಮೀಪದ ಕರ್ವೇಲು ಎಂಬಲ್ಲಿ ಇಂದು ನಡೆದಿದೆ. ಕರ್ವೇಲು ನಿವಾಸಿ ಮುಹಮ್ಮದ್ ಮುಸ್ತಾಫ (35) ಮೃತಪಟ್ಟವರು. ಮುಹಮ್ಮದ್ ಅವರು ಮನೆಯೊಂದನ್ನು ನಿರ್ಮಿಸುತ್ತಿದ್ದು, ಕಾರ್ಮಿಕರೊಂದಿಗೆ ಸೇರಿ ಮನೆ ಕೆಲಸದಲ್ಲಿ ತೊಡಗಿದ್ದರು. ಇಂದು ಮನೆ ಮೇಲೆ ನೀರು ಹಾಕುತ್ತಿದ್ದ ಸಂದರ್ಭ ಆಯತಪ್ಪಿ ಕೆಳಗೆ ಬಿದ್ದಿದ್ದು ಸ್ಥಳದಲ್ಲೇ ಮೃತಪಟ್ಟರು ಎನ್ನಲಾಗಿದೆ. ಮೃತರು ಪತ್ನಿ, ಗಂಡು, ಹೆಣ್ಣು ಮಕ್ಕಳನ್ನು ಅಗಲಿದ್ದಾರೆ. ಈ ಕುರಿತು ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಿರ್ಮಾಣ ಹಂತದ ಮನೆ ಮೇಲಿನಿಂದ ಬಿದ್ದು ಮೃತ್ಯು ! Read More »