ಕಾರು ಚಾಲಕನ ನಿಯಂತ್ರಣ ತಪ್ಪಿ ಮಹಿಳೆಗೆ ಡಿಕ್ಕಿ : ಗಂಭೀರ ಗಾಯ
ಬೆಳ್ತಂಗಡಿ: ಕಾರು ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ರಸ್ತೆ ಬದಿ ನಿಂತಿದ್ದ ಮಹಿಳೆಗೆ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆ ಅಯ್ಯಪ್ಪನ ನಗರದ ಬಳಿ ನಡೆದಿದೆ. ಅಂಜಲಿ ಶೆಣೈ ಅಪಘಾತದಿಂದ ಗಂಭೀರ ಗಾಯಗೊಂಡವರು. ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಪಘಾತದ ಬಳಿಕ ಕಾರು ಚಾಲಕ ಪರಾರಿಯಾಗಿದ್ದು, ಬಳಿಕ ಠಾಣೆಗೆ ಬಂದು ಶರಣಾಗಿದ್ದಾನೆ ಎನ್ನಲಾಗಿದೆ. ಈ ಕುರಿತು ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾರು ಚಾಲಕನ ನಿಯಂತ್ರಣ ತಪ್ಪಿ ಮಹಿಳೆಗೆ ಡಿಕ್ಕಿ : ಗಂಭೀರ ಗಾಯ Read More »