ಅಪಘಾತ

ಬೈಕ್‍-ರಿಕ್ಷಾ ಡಿಕ್ಕಿ : ಈಜು ತಜ್ಞರೊಬ್ಬರಿಗೆ ಗಂಭೀರ ಗಾಯ

ಬೆಳ್ತಂಗಡಿ: ರಿಕ್ಷಾ-ಬೈಕ್‍ ಡಿಕ್ಕಿ ಹೊಡೆದ ಪರಿಣಾಮ ಬಂದಾರಿನ ಈಜು ತಜ್ಞ ಮುಹಮ್ಮದ್ ಓಟೆಚ್ಚಾರು ಬಟ್ಲಡ್ಕ ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಗಾಯಾಳು ಮುಹಮ್ಮದ್ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ರಿಕ್ಷಾ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.

ಬೈಕ್‍-ರಿಕ್ಷಾ ಡಿಕ್ಕಿ : ಈಜು ತಜ್ಞರೊಬ್ಬರಿಗೆ ಗಂಭೀರ ಗಾಯ Read More »

ಕಾರು ಡಿಕ್ಕಿಯಾಗಿ ವಿಕಲಚೇತನರೊಬ್ಬರು ಮೃತ್ಯು !

ಕಡಬ: ರಸ್ತೆ ದಾಟುತ್ತಿದ್ದ ವಿಕಲಚೇತನರೊಬ್ಬರ ಮೇಲೆ ಕಾರೊಂದು ಹರಿದ ಪರಿಣಾಮ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ಕಡಬದ ಮುಖ್ಯ ರಸ್ತೆಯಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಕಡಬದ ಅಂಗಡಿ ಮನೆ ನಿವಾಸಿ ಧರ್ನಪ್ಪ ಮೃತರ ವಿಕಲಚೇತನರಾಗಿದ್ದಾರೆ. ಶುಕ್ರವಾರ ಸಾಯಂಕಾಲ ರಸ್ತೆ ದಾಟಲು ಯತ್ನಿಸುತ್ತಿದ್ದಾಗ ಮಂಗಳೂರಿನಿಂದ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಕಾರು ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಅಪಘಾತದ ರಭಸಕ್ಕೆ ತಲೆ ಹಾಗೂ ಕಾಲಿಗೆ ಗಂಭೀರ ಗಾಯವಾಗಿದ್ದು, ಕೂಡಲೇ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.

ಕಾರು ಡಿಕ್ಕಿಯಾಗಿ ವಿಕಲಚೇತನರೊಬ್ಬರು ಮೃತ್ಯು ! Read More »

ಕಾರು-ಸ್ಕೂಟರ್ ಡಿಕ್ಕಿ | ವಿದ್ಯಾರ್ಥಿ ಮೃತ್ಯು

ಕಡಬ: ಕಾರು ಮತ್ತು ಸ್ಕೂಟ‌ರ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಶಾಲಾ ಬಾಲಕನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಶುಕ್ರವಾರ ತಡರಾತ್ರಿ ಕಡಬ ತಾಲೂಕಿನ ಕಳಾರದಲ್ಲಿ ನಡೆದಿದೆ. ಕಳಾರದಲ್ಲಿ ವಾಸವಿರುವ ಚಂದ್ರಶೇಖರ ಎಂಬವರ ಪುತ್ರ ಸರಸ್ವತಿ ಶಾಲಾ ಎಂಟನೇ ತರಗತಿ ವಿದ್ಯಾರ್ಥಿ ಬಿಪಿನ್ ಮೃತಪಟ್ಟ ಬಾಲಕ. ಮೃತ ಬಾಲಕನ ತಂದೆ ಹಾಗೂ ತಂಗಿ ಗಂಭೀರ ಗಾಯಗೊಂಡಿದ್ದು ಪ್ರಾಣಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ. ತಮ್ಮ ನಿವಾಸದಿಂದ ಸುಮಾರು ನೂರು ಮೀಟರ್ ಅಂತರದಲ್ಲಿ ಈ ಅಪಘಾತ ನಡೆದಿದ್ದು, ಸರಸ್ವತಿ ಶಾಲೆಯಲ್ಲಿ ನಡೆದಿದ್ದ ಕ್ರೀಡೋತ್ಸವ

ಕಾರು-ಸ್ಕೂಟರ್ ಡಿಕ್ಕಿ | ವಿದ್ಯಾರ್ಥಿ ಮೃತ್ಯು Read More »

ವಾಹನ ಚಾಲನೆ ವೇಳೆ ಎದೆನೋವು ಕಾಣಿಸಿಕೊಂಡು ಚಾಲಕ ಮೃತ್ಯು !

ಸುಳ್ಯ: ಪಿಕಪ್ ವಾಹನ ಚಾಲನೆ ಸಂದರ್ಭ ಚಾಲಕರೊಬ್ಬರಿಗೆ ಎದೆನೋವು ಕಾಣಿಸಿಕೊಂಡು ಆಸ್ಪತ್ರೆಗೆ ಸಾಗಿಸುವ ಮಧ್ಯೆ ಮೃತಪಟ್ಟ ಘಟನೆ ಸುಳ್ಯ ಪೈಚಾರಿನಲ್ಲಿ ನಡೆದಿದೆ. ಗದಗ ತಾಲೂಕು ಹೊಸೂರು ಗ್ರಾಮದ ಹುಸೇನಸಾಬ ಹೆಬಸುರ (45) ಮೃತಪಟ್ಟವರು. ಬೆಳ್ತಂಗಡಿಯಲ್ಲಿ ಶಾಮಿಯಾನ ಅಂಗಡಿಯೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದ ಅವರು ಮಡಿಕೇರಿಯಲ್ಲಿ ಕಾರ್ಯಕ್ರಮವೊಂದಕ್ಕೆ ಅಳವಡಿಸಲಾಗಿದ್ದ ಶಾಮಿಯಾನವನ್ನು ತರಲೆಂದು ಮಡಿಕೇರಿಗೆ ಗುರುವಾರ ರಾತ್ರಿ ಹೊರಟ್ಟಿದ್ದರು. ವಾಹನ ಸುಳ್ಯದ ಪೈಚಾರು ಸಮೀಪ ಬರುತ್ತಿದ್ದಂತೆ ಚಾಲಕನಿಗೆ ಎದೆ ನೋವು ಕಾಣಿಸಿಕೊಂಡಿದ್ದು ಅಲ್ಲೇ ಬದಿಯಲ್ಲಿ ವಾಹನವನ್ನು ನಿಲ್ಲಿಸಿ ಬಳಿಯಲ್ಲಿ ಕುಳಿತಿದ್ದ ವ್ಯಕ್ತಿಗೆ

ವಾಹನ ಚಾಲನೆ ವೇಳೆ ಎದೆನೋವು ಕಾಣಿಸಿಕೊಂಡು ಚಾಲಕ ಮೃತ್ಯು ! Read More »

ಕೆರೆಗೆ ಬಿದ್ದು ಮೃತ್ಯು !

ವಿಟ್ಲ: ವ್ಯಕ್ತಿಯೊಬ್ಬರು ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಮೃತಪಟ್ಟ ಘಟನೆ ಬೈರಿಕಟ್ಟೆ ಎಂಬಲ್ಲಿ ನಡೆದಿದೆ. ಬೈರಿಕಟ್ಟೆ ಅಂಗ್ರಿಮನೆ ನಿವಾಸಿ ಗಣೇಶ್ (39) ಮೃತಪಟ್ಟವರು. ತೋಟದಲ್ಲಿ ಹುಲ್ಲು ತೆಗೆಯಲು ಹೋಗಿದ್ದ ಗಣೇಶ್ ಅವರು ಮನೆಗೆ ಬಾರದೆ ಇದ್ದಾಗ ಅವರ ತಂದೆ ತೋಟಕ್ಕೆ ಹುಡುಕಿಕೊಂಡು ಹೋದಾಗ ಘಟನೆ ಬೆಳಕಿಗೆ ಬಂದಿದೆ ಎನ್ನಲಾಗಿದೆ.

ಕೆರೆಗೆ ಬಿದ್ದು ಮೃತ್ಯು ! Read More »

ಕಂಬಳ ಕೋಣಗಳ ಯಜಮಾನ ಕಟ್ಟಡದಿಂದ ಬಿದ್ದು ಸಾವು !

ಪೂಂಜಾಲಕಟ್ಟೆ: ಹಳೆಯ ಕಟ್ಟಡದ ಮೇಲ್ಚಾವಣಿ ಕೆಡಹುವ ಸಂದರ್ಭದಲ್ಲಿ ಕೆಳಗೆ ಬಿದ್ದು ಕಂಬಳ ಕೋಣಗಳ ಯಜಮಾನ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಬಡಗಕಜೆಕಾರು ಗ್ರಾಮ ಪಂಚಾಯತ್‌ ವ್ಯಾಪ್ತಿಯ ತೆಂಕಕಜೆಕಾರು ಎಂಬಲ್ಲಿ ನಡೆದಿದೆ. ಬಡಗಕಜೆಕಾರು ಗ್ರಾಮದ ಕುಲೆಂಜಿಕೋಡಿ ನಿವಾಸಿ ಸುಂದರ ಪೂಜಾರಿ (55) ಮೃತಪಟ್ಟವರು. ವೃತ್ತಿಯಲ್ಲಿ ಮೇಸ್ತ್ರಿ ಕೆಲಸ ಮಾಡುತ್ತಿದ್ದ ಸುಂದರ ಪೂಜಾರಿ ತೆಂಕಕಜೆಕಾರಿನ ವಿಜಯಾ ಎಂಬವರ ದೈವಸ್ಥಾನ ಕಟ್ಟಡ ಕೆಡಹುವ ಕೆಲಸಕ್ಕೆ ಹೋಗಿದ್ದು ಗೋಡೆಯ ಮೇಲಿನಿಂದ ಸ್ಲಾಬ್‌ ತೆಗೆಯುವ ವೇಳೆ ಸ್ಲಾಬ್‌ ಸಹಿತ ಕೆಳಕ್ಕೆ ಬಿದ್ದಿದ್ದರು. ಗಂಭೀರ ಗಾಯಗೊಂಡ

ಕಂಬಳ ಕೋಣಗಳ ಯಜಮಾನ ಕಟ್ಟಡದಿಂದ ಬಿದ್ದು ಸಾವು ! Read More »

ದೇಹದ ಮುಕ್ಕಾಲು ಭಾಗ ತಿಂದ ನರಭಕ್ಷಕ ಹುಲಿ!!

ಹುಲಿ ದಾಳಿಗೆ ಸಿಲುಕಿದ ವ್ಯಕ್ತಿಯೋರ್ವನ ಮೃತದೇಹ ಬಂಡೀಪುರ ಅಭಯಾರಣ್ಯ ವ್ಯಾಪ್ತಿಯ ಆಡಿನ ಕಣಿವೆ ಸಮೀಪದಲ್ಲಿ ಪತ್ತೆಯಾಗಿರುವ ಘಟನೆ ಮಂಗಳವಾರ ನಡೆದಿದೆ. ಆಡಿನಕಣಿವೆಯ ಬಸವಯ್ಯ (54) ಮೃತ ವ್ಯಕ್ತಿ. ಬಸವಯ್ಯ ಬುಡಕಟ್ಟು ಜನಾಂಗಕ್ಕೆ ಸೇರಿದವನು. ಎರಡು ದಿನಗಳ ಹಿಂದೆ ಕುರಿಗಳನ್ನು ಮೇಯಿಸಲು ಕಾಡಿಗೆ ತೆರಳಿದ್ದ. ನಂತರ ಮನೆಗೆ ವಾಪಾಸ್ಸಾಗದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಹುಡುಕಾಟ ನಡೆಸಿದಾಗ ಅಭಯಾರಣ್ಯದ ಒಳಗೆ ಮೃತದೇಹ ಪತ್ತೆಯಾಗಿದೆ. ಆತನ ಕಾಲು, ಎದೆಯ ಭಾಗವನ್ನು ಹುಲಿ ತಿಂದು ಹಾಕಿದ್ದು, ಕೇವಲ ಹೊಟ್ಟೆ ಭಾಗವನ್ನು ಮಾತ್ರ ಬಿಟ್ಟಿದೆ. ಮುಕ್ಕಾಲು

ದೇಹದ ಮುಕ್ಕಾಲು ಭಾಗ ತಿಂದ ನರಭಕ್ಷಕ ಹುಲಿ!! Read More »

ಕಲ್ಲಿನ ಕೋರೆಯಲ್ಲಿ ಕಾರ್ಮಿಕ ಮೃತ್ಯು!

ವಿಟ್ಲ: ಕಾರ್ಮಿಕನೋರ್ವ ಕಲ್ಲಿನ ಕೋರೆಯಲ್ಲಿ ಜಾರಿ ಬಿದ್ದು ಮೃತಪಟ್ಟ ಘಟನೆ ವಿಟ್ಲ ಸಮೀಪದ ಕುದ್ದುಪದವಿನಲ್ಲಿ ನಡೆದಿದೆ. ಉಕ್ಕುಡ ದರ್ಬೆ ನಿವಾಸಿ ಕಾರ್ತಿಕ್ (24) ಮೃತಪಟ್ಟ ದುರ್ದೈವಿ. ಕಲ್ಲಿನ ಕೋರೆಯಲ್ಲಿ ಕೆಲಸ ಮಾಡುತ್ತಿದ್ದಾಗ ಆಕಸ್ಮತ್ತಾಗಿ ನೀರಿಗೆ ಬಿದ್ದು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಮೃತರಿಗೆ ಈಜು ಬರುತ್ತಿರಲಿಲ್ಲ ಎಂದು ಹೇಳಲಾಗಿದೆ.

ಕಲ್ಲಿನ ಕೋರೆಯಲ್ಲಿ ಕಾರ್ಮಿಕ ಮೃತ್ಯು! Read More »

ಶಬರಿಮಲೆ ಯಾತ್ರಿಕರ ಟೆಂಪೋ ಟ್ರಾವೆಲರ್ ಪಲ್ಟಿ !

ಕೋಟ: ಶಬರಿಮಲೆ ಯಾತ್ರೀಕರ ಟೆಂಪೋ ಟ್ರಾವೆಲರ್ ಪಲ್ಟಿ ಹೊಡೆದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕೋಟ ಸಮೀಪದ ಬಾಳೆಬೆಟ್ಟು ಎಂಬಲ್ಲಿ ಸೋಮವಾರ ರಾತ್ರಿ ನಡೆದಿದೆ. ಮುರ್ಡೇಶ್ವರದಿಂದ ಯಾತ್ರಿಕರು ಹೊರಟಿದ್ದರು ಎನ್ನಲಾಗಿದ್ದು, ಹೆದ್ದಾರಿಯಲ್ಲಿ ಅಡ್ಡ ಬಂದ ದನವೊಂದನ್ನು ತಪ್ಪಿಸಲು ಹೋಗಿ ಚಾಲಕನ ನಿಯಂತ್ರಣ ತಪ್ಪಿ ವಾಹನ ಪಲ್ಟಿ ಹೊಡೆದಿದೆ. ವಾಹನದಲ್ಲಿದ್ದ ಎಲ್ಲಾ ಅಯ್ಯಪ್ಪ ಭಕ್ತರು ಸಣ್ಣ ಗಾಯದೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ತಕ್ಷಣ ಕೋಟ ಪೊಲೀಸರು ಮತ್ತು ಟೋಲ್ ಸಿಬ್ಬಂದಿಗಳು, ಸಾರ್ವಜನಿಕರು ಸೇರಿ ತೆರವು ಗೊಳಿಸಿ ವಾಹನ ಸಂಚಾರಕ್ಕೆ ಅನುವು

ಶಬರಿಮಲೆ ಯಾತ್ರಿಕರ ಟೆಂಪೋ ಟ್ರಾವೆಲರ್ ಪಲ್ಟಿ ! Read More »

ಉಳ್ಳಾಲ ಸಮುದ್ರ ಪಾಲಾದ ವಿದ್ಯಾರ್ಥಿಗಳ ಮೃತದೇಹ ಪತ್ತೆ

ಉಳ್ಳಾಲ: ಸಮುದ್ರತೀರಕ್ಕೆ ವಿಹಾರಕ್ಕೆ ತೆರಳಿದ್ದ ಸಂದರ್ಭ ಸಮುದ್ರಪಾಲಾಗಿದ್ದ ಇಬ್ಬರು ವಿದ್ಯಾರ್ಥಿಗಳ ಮೃತದೇಹ ಪತ್ತೆಯಾಗಿದೆ. ಸೊಮೇಶ್ವರ ಪರಿಜ್ಞಾನ ಕಾಲೇಜಿನಲ್ಲಿ ದ್ವಿತೀಯ ವಾಣಿಜ್ಯ ವಿಭಾಗದ ಓದುತ್ತಿದ್ದ  ವಿದ್ಯಾರ್ಥಿಗಳಾದ ಯಶ್ವಿತ್‌, ಯುವರಾಜ ಸೇರಿದಂತೆ ಒಟ್ಟು ಆರು ಮಂದಿ ವಿದ್ಯಾರ್ಥಿಗಳು ಶನಿವಾರ ಮದ್ಯಾಹ್ನ 12.40ಕ್ಕೆ ಕಾಲೇಜು ಮುಗಿಸಿ ಸೋಮೇಶ್ವರ ಶ್ರೀ ಸೊಮನಾಥ ದೇವಸ್ಥಾನಕ್ಕೆ ತೆರಳಿದ್ದರು. ಪೂಜೆಯ ಬಳಿಕ ದೇವಸ್ಥಾನದಲ್ಲಿ ಮುಗಿಸಿ ಅಲ್ಲೇ ಪಕ್ಕದ ಮರದಡಿಯಲ್ಲಿ ಕುಳಿತಿದ್ದರು. ಸುಮಾರು ಮೂರು ಗಂಟೆಯ ಬಳಿಕ ಸ್ಥಳೀಯ ಗೂಡಂಗಡಿಯಿಂದ ತಿಂಡಿ ತೆಗೆದುಕೊಂಡು ಸೋಮೇಶ್ವರ ದೇವಸ್ಥಾನದಿಂದ ಉಚ್ಚಿಲದ ಕಡೆಗೆ

ಉಳ್ಳಾಲ ಸಮುದ್ರ ಪಾಲಾದ ವಿದ್ಯಾರ್ಥಿಗಳ ಮೃತದೇಹ ಪತ್ತೆ Read More »

error: Content is protected !!
Scroll to Top