ಅಪಘಾತ

ಸಿಡಿಲು ಬಡಿದು ವಿದ್ಯುತ್ ಉಪಕರಣಗಳಿಗೆ ಹಾನಿ

ಪುಣಚ: ಮಿಂಚು, ಸಿಡಿಲಿಗೆ ಕೃಷಿ ಪಂಪ್‍ ಶೆಡ್ ಹಾಗೂ ಮನೆಯ ವಿದ್ಯುತ್ ಉಪಕರಣಗಳಿಗೆ ಹಾನಿಯಾ ಘಟನೆ ಶನಿವಾರ ರಾತ್ರಿ ಪುಣಚ ಕೆಲ್ಲಾಳಿ ಎಂಬಲ್ಲಿ ನಡೆದಿದೆ. ಪುಣಚ ಕೆಲ್ಲಾಳಿಯ ದೇವಪ್ಪ ನಾಯ್ಕ ಎಂಬವರ ಮನೆ ಪಂಪ್ ಶೆಡ್ ಹಾಗೂ ವಿದ್ಯುತ್ ಉಪಕರಣಗಳು ಸಿಡಿಲಿಗೆ ಸುಟ್ಟು ಕರಕಲಾಗಿದೆ. ಈ ಕುರಿತು ಅಪಾಯ ನಷ್ಟ ಉಂಟಾಗಿದೆ ಎಂದು ಮನೆ ಮಾಲಕ ತಿಳಿಸಿದ್ದಾರೆ.

ಸಿಡಿಲು ಬಡಿದು ವಿದ್ಯುತ್ ಉಪಕರಣಗಳಿಗೆ ಹಾನಿ Read More »

ಕಾರು-ರಿಕ್ಷಾ ಡಿಕ್ಕಿ : ಇಬ್ಬರಿಗೆ ಗಾಯ

ಪುತ್ತೂರು: ನಿರ್ಲಕ್ಷ್ಯದಿಂದ ಕಾರು ಚಲಾಯಿಸಿದ ಪರಿಣಾಮ ಆಟೋರಿಕ್ಷಾಗೆ ಡಿಕ್ಕಿ ಹೊಡೆದು ರಿಕ್ಷಾ ಚಾಲಕ ಸಹಿತ ಪ್ರಯಾಣಿಕರೊಬ್ಬರು ಗಾಯಗೊಂಡ ಘಟನೆ ಬೊಳುವಾರಿನಲ್ಲಿ ನಡೆದಿದೆ. ಚಿಕ್ಕಮುಡೂರು ಗ್ರಾಮ ನಿವಾಸಿ ಹರೀಶ್ ಕೆ(42) ಹಾಗೂ ಕೆ.ಸಚ್ಚಿದಾನಂದ ರಾವ್ ಗಾಯಗೊಂಡವರು. ಕಾರು ಚಾಲಕ ನಿರ್ಲಕ್ಷ್ಯತನದಿಂದ ರಸ್ತೆಯಲ್ಲಿ ಒಮ್ಮೇಲೆ ಯು ಟರ್ನ್ ಮಾಡಿದ ಪರಿಣಾಮ ಆಟೋರಿಕ್ಷಾಗೆ ಡಿಕ್ಕಿ ಹೊಡೆದು ರಿಕ್ಷಾ ಮಗುಚಿ ಬಿದ್ದಿದ್ದು, ಇಬ್ಬರು ಗಾಯಗೊಂಡರು. ಸಚ್ಚಿದಾನಂದ ರವರು ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ. ಅಪಘಾತದ ಬಳಿಕ ಕಾರು ಚಾಲಕ ಸ್ಥಳದಿಂದ ಪರಾರಿಯಾಗಿರುವುದಾಗಿ

ಕಾರು-ರಿಕ್ಷಾ ಡಿಕ್ಕಿ : ಇಬ್ಬರಿಗೆ ಗಾಯ Read More »

ಲಾರಿಯಡಿಗೆ ಸಿಲುಕಿ ಚಾಲಕ ಮೃತ್ಯು

ಕಾಸರಗೋಡು: ಚಾಲಕನೋರ್ವ ಲಾರಿಯಡಿಗೆ ಸಿಲುಕಿ ಮೃತಪಟ್ಟ ಘಟನೆ ಇಂದು ಮಧ್ಯಾಹ್ನ ಬದಿಯಡ್ಕ ಸಮೀಪದ ನೀರ್ಚಾಲ್ ಗೋಳಿಯಡ್ಕದಲ್ಲಿ ನಡೆದಿದೆ. ಪಾಡಿ ಉತ್ತರತ್ತೋಡಿಯ ಮುಹಮ್ಮದ್ ನೌಫಲ್ (23) ಮೃತಪಟ್ಟವರು. ಲಾರಿಯನ್ನು ಸ್ಟಾರ್ಟಿನಲ್ಲಿರಿಸಿ ಗೇಟ್ ತೆರೆಯಲು ತೆರಳಿದ ಸಂದರ್ಭ ಲಾರಿ ಮುಂದಕ್ಕೆ ಚಲಿಸಿದೆ. ಎದುರಿನಲ್ಲಿದ್ದ ಮಹಮ್ಮದ್ ನೌಫಲ್ ಲಾರಿಯಡಿಗೆ ಸಿಲುಕಿದ್ದು, ತಕ್ಷಣ ಅವರನ್ನು ಕುಂಬಳೆ ಆಸ್ಪತ್ರೆಗೆ ಕರೆದೊಯ್ದರೂ ಜೀವ ಉಳಿಸಲಾಗಲಿಲ್ಲ. ಬದಿಯಡ್ಕ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ

ಲಾರಿಯಡಿಗೆ ಸಿಲುಕಿ ಚಾಲಕ ಮೃತ್ಯು Read More »

ನಿಂತಿದ್ದ ಟ್ರ್ಯಾಕ್ಟರಿಗೆ ಆ್ಯಂಬುಲೆನ್ಸ್ ಡಿಕ್ಕಿ: ತುಂಬು ಗರ್ಭಿಣಿ ಮೃತ್ಯು!

ನಿಂತಿದ್ದ ಟ್ರ್ಯಾಕ್ಟರಿಗೆ ಆ್ಯಂಬುಲೆನ್ಸ್ ಡಿಕ್ಕಿಯಾಗಿ, ತುಂಬು ಗರ್ಭಿಣಿ ಮೃತಪಟ್ಟ ಘಟನೆ ವಿಜಯಪುರದ ತಾಳಿಕೋಟೆಯಲ್ಲಿ ನಡೆದಿದೆ. ಮೃತರನ್ನು ಭಾಗ್ಯಶ್ರೀ ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ಯುವ ಹಾದಿಯಲ್ಲಿ ಗರ್ಭಿಣಿ ಮೃತಪಟ್ಟಿರುವುದಾಗಿ ವರದಿಯಾಗಿದೆ. ಆಂಬ್ಯುಲೆನ್ಸ್ ಚಾಲಕನ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣ  ಎಂದು ದೂರಲಾಗಿದೆ. ತುಂಬು ಗರ್ಭಿಣಿಯನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ವೇಳೆ, ಆ್ಯಂಬುಲೆನ್ಸ್ ಡಿಕ್ಕಿ ಹೊಡೆದಿದೆ. ಕಬ್ಬು ತುಂಬಿದ್ದ ಟ್ರ್ಯಾಕ್ಟರ್ ರಸ್ತೆ ಬದಿ ನಿಂತಿತ್ತು. ಆ್ಯಂಬುಲೆನ್ಸ್’ನಲ್ಲಿದ್ದ ತುಂಬು ಗರ್ಭಿಣಿ ಸಹಿತ ಇಬ್ಬರು ಸ್ಟಾಫ್ ನರ್ಸ್, ಓರ್ವ ಸಹಾಯಕ ಗಾಯಗೊಂಡಿದ್ದರು. ತಾಳಿಕೋಟೆ ಸಮುದಾಯ

ನಿಂತಿದ್ದ ಟ್ರ್ಯಾಕ್ಟರಿಗೆ ಆ್ಯಂಬುಲೆನ್ಸ್ ಡಿಕ್ಕಿ: ತುಂಬು ಗರ್ಭಿಣಿ ಮೃತ್ಯು! Read More »

ಎದೆಯ ಭಾಗದಿಂದಲೇ ಹರಿದ ಬಸ್!! | ಸ್ಥಳದಲ್ಲೇ ಕೊನೆಯುಸಿರೆಳೆದ ಕುಂಞಿರಾಮ ಮಣಿಯಾಣಿ!

ಪುತ್ತೂರು: ಖಾಸಗಿ ಬಸ್ಸಿನ ಅಡಿಗೆ ಬಿದ್ದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಗಾಳಿಮುಖದಲ್ಲಿ ನಡೆದಿದ್ದು, ಮೃತಪಟ್ಟವರನ್ನು ಕುಂಞಿರಾಮ ಮಣಿಯಾಣಿ ಎಂದು ಗುರುತಿಸಲಾಗಿದೆ. ಕೃಷಿಕರಾಗಿದ್ದ ಕುಂಞಿರಾಮ ಮಣಿಯಾಣಿ ಅವರು ಮುಳ್ಳೇರಿಯಾದ ಕೋಳಿಕಾಲ ನಿವಾಸಿ. ಗಾಳಿಮುಖಕ್ಕೆ ಬಂದಿದ್ದ ಅವರು, ಬಸ್ಸಿನಿಂದ ಇಳಿದು ರಸ್ತೆ ದಾಟಬೇಕು ಎನ್ನುವಷ್ಟರಲ್ಲಿ ದುರ್ಘಟನೆ ನಡೆದಿದೆ. ಹಿಂಬದಿ ಬಾಗಿಲಿನಿಂದ ಇಳಿದಿದ್ದ ಕುಂಞಿರಾಮ ಮಣಿಯಾಣಿ ಅವರು, ಇನ್ನೊಂದು ಬದಿಗೆ ದಾಟುವವರಿದ್ದರು. ಅಷ್ಟರಲ್ಲಿ ಬಸ್ ಚಲಿಸಿದ್ದು, ಬಸ್ಸಿನ ಮುಂಭಾಗದ ಚಕ್ರ ಕುಂಞಿರಾಮ ಅವರ ಎದೆಯ ಭಾಗದಿಂದ ಬಸ್ ಹರಿದಿದೆ. ತಾನು ಬಂದಿದ್ದ

ಎದೆಯ ಭಾಗದಿಂದಲೇ ಹರಿದ ಬಸ್!! | ಸ್ಥಳದಲ್ಲೇ ಕೊನೆಯುಸಿರೆಳೆದ ಕುಂಞಿರಾಮ ಮಣಿಯಾಣಿ! Read More »

ಖಾಸಗಿ ಬಸ್’ನಡಿಗೆ ಬಿದ್ದು ವ್ಯಕ್ತಿ ಮೃತ್ಯು!!

ಬಸ್ಸಿನಡಿಗೆ ವ್ಯಕ್ತಿಯೋರ್ವರು ಬಿದ್ದು ಮೃತಪಟ್ಟ ಘಟನೆ ಈಶ್ವರಮಂಗಲ ಸಮೀಪದ ಗಾಳಿಮುಖದಲ್ಲಿ ಶುಕ್ರವಾರ ನಡೆದಿದೆ. ಘಟನೆಯಿಂದಾಗಿ ವ್ಯಕ್ತಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ಮೃತದೇಹವನ್ನು ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿರಿಸಲಾಗಿದೆ.

ಖಾಸಗಿ ಬಸ್’ನಡಿಗೆ ಬಿದ್ದು ವ್ಯಕ್ತಿ ಮೃತ್ಯು!! Read More »

ಶಿರಸಿಯಲ್ಲಿ ಅಪಘಾತ; ಮಂಗಳೂರಿನ ನಾಲ್ವರು ಸಹಿತ ಐವರು ಮೃತ್ಯು!

ಬಸ್ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ಐವರು ಮೃತಪಟ್ಟ ಘಟನೆ ತಾಲೂಕಿನ ಕುಮಟಾ – ಶಿರಸಿ ಹೆದ್ದಾರಿಯ ಬಂಡಲ್ ಸಮೀಪದ ಪೆಟ್ರೋಲ್ ಬಂಕ್ ಎದುರು ನಡೆದಿದೆ. ಮೃತರು ಶಿರಸಿ ರಾಘವೆಂದ್ರ ಕಲ್ಯಾಣ ಮಂಟಪದಲ್ಲಿ ನಡೆಯುತ್ತಿರುವ ಮದುವೆ ಸಮಾರಂಭಕ್ಕೆ ವರನ ಕಡೆಯಿಂದ ಬರುತ್ತಿದ್ದ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದು, ಚಾಲಕ ಚೆನ್ನೈ ಮೂಲದವನಾಗಿದ್ದಾನೆ. ದಕ್ಷಿಣ ಕನ್ನಡದ ಮಂಗಳೂರು ತಾಲೂಕಿನ ಕಿನ್ನಿಕಂಬಳದ ರಿಕ್ಷಾ ಚಾಲಕ ರಾಮಕೃಷ್ಣ ರಾವ್ ಬಾಬುರಾವ್

ಶಿರಸಿಯಲ್ಲಿ ಅಪಘಾತ; ಮಂಗಳೂರಿನ ನಾಲ್ವರು ಸಹಿತ ಐವರು ಮೃತ್ಯು! Read More »

ಅಡಿಕೆ ಮರದಿಂದ ಬಿದ್ದು ಕೂಲಿ ಕಾರ್ಮಿಕ ಮೃತ್ಯು!

ಪುತ್ತೂರು: ಮರದಿಂದ ಅಡಿಕೆ ಕೀಳುವ ಸಂದರ್ಭ ಆಕಸ್ಮತ್ತಾಗಿ ಮರದಿಂದ ಬಿದ್ದು ಕೂಲಿ ಕಾರ್ಮಿಕರೋರ್ವರು ಮೃತಪಟ್ಟ ಘಟನೆ ಬೆಟ್ಟಂಪಾಡಿಯಲ್ಲಿ ನಡೆದಿದೆ. ನಿಡ್ಪಳ್ಳಿ ಗ್ರಾಮದ ತಂಬುತ್ತಡ್ಕ ನಿವಾಸಿ ಸಯ್ಯದ್ (45) ಮೃತಪಟ್ಟವರು. ಬೆಟ್ಟಂಪಾಡಿಯ ಕೃಷಿಕರೋರ್ವರ ಮನೆಗೆ ಸಯ್ಯದ್ ಅವರು ಅಡಿಕೆ ಕೀಳಲು ತೆರಳಿದ್ದು, ಮರದಿಂದ ಆಕಸ್ಮಿಕವಾಗಿ ಮರದಿಂದ ಕಾಲುಜಾರಿ ಬಿದ್ದರು. ಅವರನ್ನು ಪುತ್ತೂರಿನ ಆಸ್ಪತ್ರೆಗೆ ಕರೆದೊಯ್ಯಲಾದರೂ, ಅಷ್ಟರಲ್ಲಿ ಅವರು ಮೃತಪಟ್ಟಿದ್ದರು ಎನ್ನಲಾಗಿದೆ.

ಅಡಿಕೆ ಮರದಿಂದ ಬಿದ್ದು ಕೂಲಿ ಕಾರ್ಮಿಕ ಮೃತ್ಯು! Read More »

ವಿದೇಶದಿಂದ ಬಂದ ಯುವಕ ಬೈಕ್ ಅಪಘಾತದಲ್ಲಿ ಮೃತ್ಯು

ಮೂಡಬಿದ್ರೆ: ಮೂರು ದಿನಗಳ ಹಿಂದೆ ವಿದೇಶದಿಂದ ಊರಿಗೆ ಬಂದಿದ್ದ ಯುವಕನ ಬೈಕ್ ಅಪಘಾತದಲ್ಲಿ ಮೃತಪಟ್ಟ ಘಟನೆ ಮೂಡಬಿದ್ರೆ ಠಾಣಾ ವ್ಯಾಪ್ತಿಯ ಕಲ್ಲಬೆಟ್ಟುವಿನಲ್ಲಿ ನಡೆದಿದೆ. ಮೂಡಬಿದ್ರೆ ಮಹಾವೀರ ಕಾಲೇಜು ಬಳಿ ನಿವಾಸಿ ಪ್ರದೀಪ್ ಶೆಟ್ಟಿ (38) ಮೃತಪಟ್ಟ ಯುವಕ. ಪ್ರದೀಪ್ ಅವರು ತನ್ನ ಮನೆಯಲ್ಲಿ ರಾತ್ರಿ ಊಟ ಮುಗಿಸಿ ಬೈಕ್ ನಲ್ಲಿ ಮೂಡುಬಿದಿರೆಯಿಂದ ಗಂಟಲ್ ಕಟ್ಟೆಗೆ ಬರುತ್ತಿದ್ದ ಸಂದರ್ಭದಲ್ಲಿ ಬೆಳ್ತಂಗಡಿಯಿಂದ ಮೂಡುಬಿದಿರೆ ಕಡೆಗೆ ಬರುತ್ತಿದ್ದ ಬರುತ್ತಿದ್ದ ಕಾರು ಕಲ್ಲಬೆಟ್ಟು ಬಳಿ ಢಿಕ್ಕಿ ಹೊಡೆದಿದೆ. ಆಗ ಬೈಕ್ ನಿಂದ ರಸ್ತೆಗೆ

ವಿದೇಶದಿಂದ ಬಂದ ಯುವಕ ಬೈಕ್ ಅಪಘಾತದಲ್ಲಿ ಮೃತ್ಯು Read More »

ಖಾಸಗಿ ಬಸ್ ಡಿಕ್ಕಿ : ಸ್ಕೂಟರ್ ಸವಾರ ಮೃತ್ಯು

ಬಂಟ್ವಾಳ: ಸ್ಕೂಟರ್ ಗೆ ಖಾಸಗಿ ಬಸ್‌ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕು ಬಿ ಮೂಡ ಗ್ರಾಮದ ಪಲ್ಲಮಜಲು ಕ್ರಾಸ್ ನಲ್ಲಿ ನಡೆದಿದೆ. ಸ್ಕೂಟರ್ ಸವಾರ ನಾರಾಯಣ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಬಂಟ್ವಾಳ ತಾಲೂಕು ಬಿ ಮೂಡ ಗ್ರಾಮದ ಪಲ್ಲಮಜಲು ಕ್ರಾಸ್ ಈ ಅಪಘಾತ ಸಂಭವಿಸಿದ್ದು. ಸ್ಕೂಟರ್ ಸವಾರ ನಾರಾಯಣ ಅವರು ರಸ್ತೆಗೆ ಎಸೆಯಲ್ಪಟು ಗಂಭೀರ ಗಾಯಗೊಂಡಿದ್ದರು. ತಕ್ಷಣ ಅವರನ್ನು ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಅಲ್ಲಿ ವೈದ್ಯರು ಪರೀಕ್ಷಿಸಿ

ಖಾಸಗಿ ಬಸ್ ಡಿಕ್ಕಿ : ಸ್ಕೂಟರ್ ಸವಾರ ಮೃತ್ಯು Read More »

error: Content is protected !!
Scroll to Top