ಅಪಘಾತ

ರಸ್ತೆಗೆ ಉರುಳಿದ ಬೃಹತ್ ಗಾತ್ರದ ಮರ

ಪುತ್ತೂರು: ಪುತ್ತೂರು ನಗರದ ಕಲ್ಲಿಮಾರ್-ಪರ್ಲಡ್ಕ ಸಂಪರ್ಕ ರಸ್ತೆಯಲ್ಲಿ ಇಂದು ಬೆಳಿಗ್ಗೆ  ಬೃಹತ್ ಗಾತ್ರ ಮರ ಬಿದ್ದಿದೆ. ಬೆಳಿಗ್ಗೆ ಸುಮಾರು 8 ಗಂಟೆ ಹೊತ್ತಿಗೆ ಮರ ಧರೆಗೆ ಉರುಳಿದ್ದು, ಬೆಳಗ್ಗಿನ ಹೊತ್ತು ಆಗಿರುವುದರಿಂದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಅಲ್ಲದೆ ರಸ್ತೆಯಲ್ಲಿ ಸಂಪರ್ಕ ಕಡಿತಗೊಂಡಿದೆ. ಅಗ್ನಿಶಾಮಕ ದಳದವರು ಸ್ಥಳಕ್ಕೆ ತೆರಳಿದ್ದು, ಇದೀಗ ಮರ ತೆರವು ಕಾರ್ಯ ನಡೆಯುತ್ತಿದೆ.

ರಸ್ತೆಗೆ ಉರುಳಿದ ಬೃಹತ್ ಗಾತ್ರದ ಮರ Read More »

ರಸ್ತೆ ದಾಟುತ್ತಿದ್ದ ವಿದ್ಯಾರ್ಥಿನಿಗೆ ಬೈಕ್ ಡಿಕ್ಕಿ

ಕುಂಬ್ರ: ವಿದ್ಯಾರ್ಥಿನಿಯೋರ್ವಳು ರಸ್ತೆ ದಾಟುತ್ತಿದ್ದ ವೇಳೆ ಬೈಕೊಂದು ಡಿಕ್ಕಿ ಹೊಡೆದು ಗಾಯಗೊಂಡ ಘಟನೆ ಬುಧವಾರ ಕುಂಬ್ರದಲ್ಲಿ ನಡೆದಿದೆ. ಕುಂಬ್ರ ಮಗಿರೆ ನಿವಾಸಿ ಸಲೀಂ ಎಂಬವರ ಪುತ್ರಿ, ಕುಂಬ್ರ ಕೆಪಿಎಸ್ ಸ್ಕೂಲ್ ನ 9ನೇ ತರಗತಿ ವಿದ್ಯಾರ್ಥಿನಿ ಅನ್ನತ್ ಬೀಬಿ ಗಾಯಗೊಂಡ ವಿದ್ಯಾರ್ಥಿನಿ. ಬೆಳಿಗ್ಗೆ ಶಾಲೆಗೆ ಹೋಗಲು ರಸ್ತೆ ದಾಟುತ್ತಿದ್ದ ವೇಳೆ ಕುಂಬ್ರ ಕಡೆಯಿಂದ ಕೃಷ್ಣ ಎಂಬವರು ಚಲಾಯಿಸಿಕೊಂಡು ಬಂದ ಬೈಕ್ ಡಿಕ್ಕಿಯಾಗಿದೆ. ಅಪಘಾತದಿಂದ ವಿದ್ಯಾರ್ಥಿನಿ ನೆಲಕ್ಕೆ ಬಿದ್ದು ಕೈ ಹಾಗೂ ಕಾಲಿಗೆ ಗಾಯಗಳಾಗಿವೆ. ತಕ್ಷಣ ಸ್ಥಳೀಯ ರಿಕ್ಷಾ

ರಸ್ತೆ ದಾಟುತ್ತಿದ್ದ ವಿದ್ಯಾರ್ಥಿನಿಗೆ ಬೈಕ್ ಡಿಕ್ಕಿ Read More »

ತಿಂಗಳ ಹಿಂದೆ ಆನೆ ತುಳಿತಕ್ಕೊಳಗಾದ ಚೋಮ ಮೃತ್ಯು

ಕಡಬ: ತಿಂಗಳ ಹಿಂದೆ ಆನೆ ತುಳಿತಕ್ಕೊಳಗಾಗಿ ಗಂಭೀರ ಗಾಯಗೊಂಡಿದ್ದ ಗೇರ್ತಿಲ ನಿವಾಸಿ ಚೋಮ ಮಂಗಳವಾರ ಮೃತಪಟ್ಟಿದ್ದಾರೆ. ಕಡಬ ತಾಲೂಕಿನ ಐತ್ತೂರು ಕೊಣಾಜೆ ಸಮೀಪ ಚೋಮ ಅವರು ನಡೆದುಕೊಂಡು ಹೋಗುತ್ತಿದ್ದಾಗ ಆನೆ ದಾಳಿ ಮಾಡಿತ್ತು. ಗಂಭಿರ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿ ಮನೆಗೆ ಕರೆದುಕೊಂಡು ಬಂದಿದ್ದರು. ಇಂದು ಬೆಳಿಗ್ಗೆ ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ.

ತಿಂಗಳ ಹಿಂದೆ ಆನೆ ತುಳಿತಕ್ಕೊಳಗಾದ ಚೋಮ ಮೃತ್ಯು Read More »

ರೈಲು ಬಡಿದು ಟ್ರ್ಯಾಕ್ ಮ್ಯಾನ್ ನವೀನ್ ಮೃತ್ಯು | ಕೆಲ ಸಮಯದ ಹಿಂದಷ್ಟೇ ಕೆಲಸಕ್ಕೆ ಸೇರಿದ ನವೀನ್

ಕಾಸರಗೋಡು: ರೈಲು ಹಳಿ ತಪಾಸಣೆ ನಡೆಸುತ್ತಿದ್ದ ಸಂದರ್ಭ ರೈಲು ಬಡಿದು ಟ್ರ್ಯಾಕ್ ಮ್ಯಾನ್ ಮೃತಪಟ್ಟ ಘಟನೆ ಮೊಗ್ರಾಲ್ ಪುತ್ತೂರಿನಲ್ಲಿ ನಡೆದಿದೆ. ಆಂಧ್ರ ಪ್ರದೇಶದ ನವೀನ್ (26)ಮೃತಪಟ್ಟವರು. ಕುಂಬಳೆ ಸಮೀಪದ ಶಿರಿಯ ಸೇತುವೆ ಬಳಿ ಘಟನೆ ನಡೆದಿದ್ದು, ಬಂದ್ಯೋಡು ಮುಟ್ಟಂನಿಂದ ಶಿರಿಯ ತನಕ ಹಳಿ ತಪಾಸಣೆಗೆ ನವೀನ್‌ಗೆ ನೀಡಲಾಗಿತ್ತು. ಸೇತುವೆ ಸಮೀಪ ತಪಾಸಣೆಗೆ ನಡೆಸುತ್ತಿದ್ದಾಗ ಮಂಗಳೂರು ಕಡೆಗೆ ತೆರಳುತ್ತಿದ್ದ ಚೆನ್ನೈ ಸೂಪರ್ ಫಾಸ್ಟ್ ರೈಲು ಬಡಿದಿದೆ. ಕೆಲ ಸಮಯದ ಹಿಂದೆಯಷ್ಟೇ ನವೀನ್ ರೈಲ್ವೆ, ಕೆಲಸಕ್ಕೆ ಸೇರಿದ್ದರು. ರೈಲ್ವೆ ಅಧಿಕಾರಿಗಳು,

ರೈಲು ಬಡಿದು ಟ್ರ್ಯಾಕ್ ಮ್ಯಾನ್ ನವೀನ್ ಮೃತ್ಯು | ಕೆಲ ಸಮಯದ ಹಿಂದಷ್ಟೇ ಕೆಲಸಕ್ಕೆ ಸೇರಿದ ನವೀನ್ Read More »

ಸ್ಕೂಟರ್-ಜೀಪು ಅಪಘಾತ | ಸ್ಕೂಟರ್ ಹಿಂಬದಿ ಸವಾರ ಇಫ್ರಾಝ್ ಮೃತ್ಯು

ಕಾಸರಗೋಡು: ಸ್ಕೂಟರ್ – ಜೀಪು ನಡುವೆ ಅಪಘಾತ ಸಂಭವಿಸಿದ ಪರಿಣಾಮ ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ಕಾಸರಗೋಡಿನ ಪೈವಳಿಕೆಯಲ್ಲಿ ನಡೆದಿದೆ. ಪೈವಳಿಕೆ ಲಾಲ್ ಬಾಗ್ ನಿವಾಸಿ ಇಫ್ರಾಝ್ ಮೃತಪಟ್ಟ ವಿದ್ಯಾರ್ಥಿ. ಈತ ಉಪ್ಪಳ ತಹಾನಿ ಆಂಗ್ಲ ಮಾಧ್ಯಮ ಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿಯಾಗಿದ್ದು, ಗೆಳೆಯನೊಂದಿಗೆ ಮಸೀದಿಯಿಂದ ಮರಳುತ್ತಿದ್ದಾಗ ಮನೆ ಸಮೀಪವೇ ಈ ಅಪಘಾತ ನಡೆದಿದೆ. ಮುಂಭಾಗದಲ್ಲಿ ತೆರಳುತ್ತಿದ್ದ ಜೀಪು ತಿರುವೊಂದರಲ್ಲಿ ಏಕಾಏಕಿ ಬ್ರೇಕ್ ಹಾಕಿದೆ. ಆಗ ಹಿಂಭಾಗದಲ್ಲಿ ಬರುತ್ತಿದ್ದ ಸ್ಕೂಟರ್ ಜೀಪಿಗೆ ಢಿಕ್ಕಿ ಹೊಡೆದು ಈ ಅಪಘಾತ ನಡೆದಿದೆ.

ಸ್ಕೂಟರ್-ಜೀಪು ಅಪಘಾತ | ಸ್ಕೂಟರ್ ಹಿಂಬದಿ ಸವಾರ ಇಫ್ರಾಝ್ ಮೃತ್ಯು Read More »

ಆಟೋ ರಿಕ್ಷಾ-ಓಮ್ನಿ ಡಿಕ್ಕಿ : ರಿಕ್ಷಾ ಚಾಲಕ ಮೃತ್ಯು

ಸುಳ್ಯ: ಓಮ್ನಿ ಹಾಗೂ ಅಟೋ ರಿಕ್ಷಾ ಡಿಕ್ಕಿ ಹೊಡೆದ ಪರಿಣಾಮ ರಿಕ್ಷಾ ಚಾಲಕ ಗಂಭೀರ ಗಾಯಗೊಂಡು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟ ಘಟನೆ ಹಳೆಗೇಟಿನಲ್ಲಿ ಭಾನುವಾರ ರಾತ್ರಿ ನಡೆದಿದೆ. ಜಾಲ್ಸೂರು ಗ್ರಾಮದ ಅರಿಯಡ್ಕ ನಿವಾಸಿ ಬಾಬು ಪಾಟಾಳಿ ಅಪಘಾತದಿಂದ ಮೃತಪಟ್ಟವರು. ಜಾಲ್ಲೂರಿನಿಂದ ಸುಳ್ಯಕ್ಕೆ ಪ್ರಯಾಣಿಕರೋರ್ವರನ್ನು ಬಿಟ್ಟು ಹಿಂತಿರುಗುತ್ತಿದ್ದ ಬಾಬು ಪಾಟಾಳಿಯವರು ಚಲಾಯಿಸುತ್ತಿದ್ದ ಅಟೋರಿಕ್ಷಾ ಹಳೆಗೇಟು ಪೆಟ್ರೋಲ್ ಪಂಪ್ ಬಳಿ ಮುಂಭಾಗದಿಂದ ಬರುತ್ತಿದ್ದ ಓಮ್ಮಿಗೆ ಢಿಕ್ಕಿ ಹೊಡೆದಿದ್ದು, ಚಾಲಕ ಬಾಬು ಪಾಟಾಳಿ ಅವರನ್ನು ಆಸ್ಪತ್ರೆಗೆ ಸಾಗಿಸುವ ದಾರಿ

ಆಟೋ ರಿಕ್ಷಾ-ಓಮ್ನಿ ಡಿಕ್ಕಿ : ರಿಕ್ಷಾ ಚಾಲಕ ಮೃತ್ಯು Read More »

ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಉರುಳಿದ ಬಸ್ | ಮಹಿಳೆ ಮೃತ್ಯು

ಮೂಡಿಗೆರೆ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ಸೊಂದು ಪ್ರಪಾತಕ್ಕೆ ಉರುಳಿಬಿದ್ದು ಮಹಿಳೆಯೋರ್ವರು ಮೃತಪಟ್ಟು, ಐವರು ಗಂಭೀರ ಗಾಯಗೊಂಡ ಘಟನೆ ಶನಿವಾರ ಮುಂಜಾನೆ ನಡೆದಿದೆ. ಬೆಂಗಳೂರಿನ ಯಲಹಂಕ ನಿವಾಸಿ ಸುರೇಖಾ(45) ಮೃತ ದುರ್ದೈವಿಯಾಗಿದ್ದಾರೆ. ಗಂಭೀರ ಗಾಯಗೊಂಡವರನ್ನು ಮೂಡಿಗೆರೆ, ಬೇಲೂರು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಚೀಕನಹಳ್ಳಿ – ಕಸ್ಕೆಬೈಲು ಕ್ರಾಸ್ ಬಳಿ ಈ ಅಪಘಾತ ಸಂಭವಿಸಿದೆ. ಬೆಂಗಳೂರಿನಿಂದ ಬೆಂಗಳೂರು- ಹಾಸನ-ಮೂಡಿಗೆರೆ ಮಾರ್ಗವಾಗಿ ಹೊರನಾಡಿಗೆ ಪ್ರವಾಸ ಹೊರಟಿದ್ದ ಈ ಬಸ್ಸಿನಲ್ಲಿ 48ಕ್ಕೂ

ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಉರುಳಿದ ಬಸ್ | ಮಹಿಳೆ ಮೃತ್ಯು Read More »

ನೇಪಾಳದಲ್ಲಿ ಪ್ರಬಲ ಭೂಕಂಪ | 128 ಮಂದಿ ಮೃತ್ಯು, 140 ಮಂದಿಗೆ ಗಾಯ

ನೇಪಾಳ: ನೇಪಾಳದ ಕಂಡು, ಪಶ್ಚಿಮ ರುಕುಂ, ಜಾಜರಕೋಟ್ ಸೇರಿದಂತೆ ಹಲವೆಡೆ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 6.4 ತೀವ್ರತೆ ದಾಖಲಾಗಿದೆ. ಘಟನೆಯಲ್ಲಿ 128 ಮಂದಿ ಸಾವನ್ನಪ್ಪಿದ್ದು, 140 ಮಂದಿ ಗಾಯಗೊಂಡಿದ್ದಾರೆ. ಇದೇ ವೇಳೆ ದೆಹಲಿ-ಎನ್‌ಸಿಆರ್ ಪ್ರದೇಶ, ಬಿಹಾರ, ಉತ್ತರ ಪ್ರದೇಶ ಮತ್ತು ಮಧ್ಯಪ್ರದೇಶ ಸೇರಿದಂತೆ ಉತ್ತರ ಭಾರತದಲ್ಲಿ ಪ್ರಬಲ ಕಂಪನಗಳು ಸಂಭವಿಸಿವೆ. ಭೂಕಂಪವು ನ.3ರ ರಾತ್ರಿ 11:32 ಕ್ಕೆ ಸಂಭವಿಸಿದೆ. ಪರ್ವತ ಶ್ರೇಣಿಗಳಿಂದ ಕೂಡಿದ ಈ ಪ್ರದೇಶದಲ್ಲಿ ಪರಿಹಾರ ಕಾರ್ಯಾಚರಣೆ ಮುಂದುವರಿದಿದೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ

ನೇಪಾಳದಲ್ಲಿ ಪ್ರಬಲ ಭೂಕಂಪ | 128 ಮಂದಿ ಮೃತ್ಯು, 140 ಮಂದಿಗೆ ಗಾಯ Read More »

ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ | ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

ಪಡುಬಿದ್ರೆ : ನಿಂತಿದ್ದ ಬಸ್ಸಿಗೆ ಹಿಂದಿನಿಂದ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರನ ಮೇಲೆ ಟ್ಯಾಂಕರ್ ಹರಿದು ಸ್ಥಳದಲ್ಲೇ ಮೃತಪಟ್ಟ ಘಟನೆ ಪಡುಬಿದ್ರಿ ಬಸ್ ನಿಲ್ದಾಣದಲ್ಲಿ ನಡೆದಿದೆ. ಕಂಚಿನಡ್ಕ ನಿವಾಸಿ ಪ್ರಜ್ವಲ್ ಮೃತಪಟ್ಟು ಯುವಕ ಎಂದು ಗುರುತಿಸಲಾಗಿದೆ. ಪ್ರಯಾಣಿಕರನ್ನು ಇಳಿಸಲು ನಿಂತಿದ್ದ ಬಸ್ ಗೆ ಹಿಂಬದಿಯಿಂದ ಬೈಕ್ ಡಿಕ್ಕಿ ಹೊಡೆದು ರಸ್ತೆಗೆ ಎಸೆಲ್ಪಟ್ಟು ಬೈಕ್‌ ಸವಾರನ ಮೇಲೆ ಟ್ಯಾಂಕರ್ ಲಾರಿ ಹರಿದಿದೆ. ಪಡುಬಿದ್ರೆ ಪೊಲೀಸರು ಸ್ಥಳಕ್ಕೆ ಧಾವಿಸಿ ಸ್ಥಳ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ | ಬೈಕ್ ಸವಾರ ಸ್ಥಳದಲ್ಲೇ ಮೃತ್ಯು Read More »

ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿ ಹಲ್ಲೆ | ಪ್ರಕರಣ ದಾಖಲು

ಉಪ್ಪಿನಂಗಡಿ: ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿ ಹಲ್ಲೆ ನಡೆಸಿದ ಆರೋಪದ ಮೇಲೆ ನಾಲ್ಕು ಮಂದಿ ಮೇಲೆ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಜತ್ತೂರು ಮಣಿಕ್ಕಲ ಎಂಬಲ್ಲಿ ಮಹಿಳೆಯೊಬ್ಬರು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಸಂದರ್ಭ ಸುರೇಶ, ಉಮೇಶ, ಗಿರೀಶ ಹಾಗೂ ಇನ್ನೋರ್ವ ಬಂದು ಮಹಿಳೆಗೆ ಅವಾಚ್ಯ ಶಬ್ದಗಳಿಂದ ಬೈದು, ಮರದ ಕೋಲಿನಿಂದ ಹಲ್ಲೆ ನಡೆಸಿ ಅಸಭ್ಯವಾಗಿ ವರ್ತಿಸಿದ್ದಾರೆ ತಡೆಯಲು ಬಂದ ಮಹಿಳೆಯ ಪತಿಗೂ ಹಲ್ಲೆ ನಡೆಸಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಈ ಕುರಿತು ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ

ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿ ಹಲ್ಲೆ | ಪ್ರಕರಣ ದಾಖಲು Read More »

error: Content is protected !!
Scroll to Top