ಅಪಘಾತ

ಬೈಕ್‍ ಅಪಘಾತದಲ್ಲಿ ಬಾಲಕಿ ಮೃತ್ಯು

ಬಂಟ್ವಾಳ : ಬೈಕ್ – ಬೈಕ್ ಗಳ ನಡುವೆ ಅಪಘಾತ ಸಂಭವಿಸಿರುವ   ಘಟನೆ ಇಂದು ರಾತ್ರಿ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ರಾಮಲ್ ಕಟ್ಟೆಯಲ್ಲಿ ನಡೆದಿದೆ.           ಘಟನೆಯಿಂದ ಬೈಕ್ ನಲ್ಲಿ ಸಹಪ್ರಯಾಣಿಕೆಯಾಗಿದ್ದ ಬಾಲಕಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಕುಕ್ಕಿಪಾಡಿ ಗ್ರಾಮದ ಕೊಡಂಬೆಟ್ಟು ನಿವಾಸಿ ಇಸ್ಮತ್ ಆಯಿಶಾ (13) ಮೃತಪಟ್ಟ ಬಾಲಕಿ. ಬೈಕ್ ಚಾಲಕ ಬಾಲಕಿಯ ತಂದೆ ಅಬ್ದುಲ್ ರಹಮಾನಿಗೆ ಗಾಯಗಳಾಗಿದ್ದು, ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರಾಮಲ್ ಕಟ್ಟೆಯಿಂದ ಹೆದ್ದಾರಿಯಲ್ಲಿ ರಾಂಗ್ ಸೈಡ್ ನಲ್ಲಿ ಬಂದ ನೆತ್ತರಕೆರೆ […]

ಬೈಕ್‍ ಅಪಘಾತದಲ್ಲಿ ಬಾಲಕಿ ಮೃತ್ಯು Read More »

ಬೆನ್ನು ಮೂಳೆ ಮುರಿತ : ಸಚಿವೆಗೆ ಒಂದು ತಿಂಗಳು ಬೆಡ್‌ರೆಸ್ಟ್‌

ಕಾರು ಅಪಘಾತದಲ್ಲಿ ಗಾಯಗೊಂಡಿರುವ ಲಕ್ಷ್ಮೀ ಹೆಬ್ಬಾಳ್ಕರ್‌ ಬೆಳಗಾವಿ: ಕಾರು ಅಪಘಾತದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರಿಗೆ ತುಸು ಗಂಭೀರವಾದ ಗಾಯವಾಗಿದೆ. ಎರಡು ಕಡೆ ಬೆನ್ನುಮೂಳೆ ಮುರಿತವಾಗಿದ್ದು, ಕನಿಷ್ಠ ಒಂದು ತಿಂಗಳು ಅತ್ತಿತ್ತ ಓಡಾಡದೆ ವಿಶ್ರಾಂತಿ ಪಡೆಯಬೇಕಾಗುತ್ತದೆ ಎಂದು ಚಿಕಿತ್ಸೆ ನೀಡಿದ ವೈದ್ಯರು ಮಾಹಿತಿ ನೀಡಿದ್ದಾರೆ.ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ಸಚಿವೆಗೆ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತದಲ್ಲಿ ಸಚಿವೆಯ ಸಹೋದರ, ಗನ್‌ಮ್ಯಾನ್‌ ಮತ್ತು ಕಾರಿನ ಡ್ರೈವರ್‌ ಕೂಡ ಗಾಯಗೊಂಡಿದ್ದಾರೆ. ಎಲ್ಲರಿಗೂ ಒಂದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.ಲಕ್ಷ್ಮಿ ಹೆಬ್ಬಾಳ್ಕರ್‌ ಅವರ ಬೆನ್ನುಮೂಳೆಯ ಎಲ್1

ಬೆನ್ನು ಮೂಳೆ ಮುರಿತ : ಸಚಿವೆಗೆ ಒಂದು ತಿಂಗಳು ಬೆಡ್‌ರೆಸ್ಟ್‌ Read More »

ಅಪಘಾತದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಗಾಯ : ಆಸ್ಪತ್ರೆಯಲ್ಲಿ ಚಿಕಿತ್ಸೆ

ಕಾರು ಜಖಂ; ಸಹೋದರ ಚೆನ್ನರಾಜ ಹಟ್ಟಿಹೊಳಿ ತಲೆಗೆ ಗಾಯ ಬೆಳಗಾವಿ: ಕಾರು ಅಪಘಾತದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರ ಮುಖಕ್ಕೆ ಗಾಯವಾಗಿದ್ದು, ಬೆಳಗಾವಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನಡೆಯುತ್ತಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆಯಾಗಿರುವ ಲಕ್ಷ್ಮೀ ಹೆಬ್ಬಾಳ್ಕರ್‌ ಹಾಗೂ ಸಹೋದರ ಚೆನ್ನರಾಜ ಹಟ್ಟಿಹೊಳಿ ಪ್ರಯಾಣಿಸುತ್ತಿರುವ ಕಾರು ಇಂದು ಮುಂಜಾನೆ ಹೊತ್ತು ಬೆಳಗಾವಿ ಸಮೀಪ ಅಪಘಾತಕ್ಕೀಡಾಗಿದೆ. ಅದೃಷ್ಟವಶಾತ್ ಇಬ್ಬರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಳಗಾವಿ ಜಿಲ್ಲೆ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಸಮೀಪ ಸಚಿವರು

ಅಪಘಾತದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಗಾಯ : ಆಸ್ಪತ್ರೆಯಲ್ಲಿ ಚಿಕಿತ್ಸೆ Read More »

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಪ್ರಯಾಣಿಸುತ್ತಿದ್ದ ಕಾರು ಅಪಘಾತ

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತೆರಳುತ್ತಿದ್ದ ಕಾರು ಅಪಘಾತವಾಗಿದ್ದು, ಸಚಿವೆ ಅಪಾಯದಿಂದ ಪಾರಾಗಿದ್ದಾರೆ. ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಬಳಿ ಅವಘಡ ಸಂಭವಿಸಿದೆ. ಅದೃಷ್ಟವಶಾತ್ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತು ಸಹೋದರ ಚನ್ನರಾಜ ಹಟ್ಟಿಹೊಳಿ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಪ್ರಯಾಣಿಸುತ್ತಿದ್ದ ಕಾರು ಅಪಘಾತ Read More »

ಕಾರ್ಕಳದ ಉದ್ಯಮಿಗೆ 2 ಕೋಟಿ ರೂ. ವಂಚನೆ

ಪಾಲುದಾರಿಕೆ ವ್ಯವಹಾರದಲ್ಲಿ ಬೆನ್ನಿಗಿರಿದ ಪರಂಗಿಪೇಟೆಯ ಸ್ನೇಹಿತರು ಉಡುಪಿ : ಪಾಲುದಾರಿಕೆಯಲ್ಲಿ ವ್ಯವಹಾರ ನಡೆಸುವ ಭರವಸೆ ನೀಡಿ ಉದ್ಯಮಿಯೋರ್ವರಿಗೆ 2 ಕೋಟಿ ರೂ. ವಂಚಿಸಿದ ಪ್ರಕರಣ ಕಾರ್ಕಳದಲ್ಲಿ ಸಂಭವಿಸಿದೆ. ಈ ಕುರಿತು ಉಡುಪಿ ಸೆನ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾರ್ಕಳ ಮಾರ್ಕೆಟ್‌ ರಸ್ತೆಯಲ್ಲಿರುವ ಮಹಾಲಕ್ಷ್ಮೀ ಪ್ರಭಾ ಕಾಂಪ್ಲೆಕ್ಸ್‌ನಲ್ಲಿ ಮೊಬೈಲ್‌ ಅಂಗಡಿ ಹೊಂದಿರುವ ಮರ್ಣೆಯ ದಾವುದುಲ್‌ ಹಕೀಂ ಎಂಬವರಿಗೆ ಕಳೆದ 20 ವರ್ಷಗಳಿಂದ ಪರಿಚಯಸ್ಥರಾಗಿರುವ ಫರಂಗಿಪೇಟೆಯ ಅಬ್ದುಲ್‌ ರಹಿಮಾನ್‌, ಹಫೀಜ್ ಟಿ.ಎ., ಅಯ್ಯೂಬ್‌, ಸದಕತ್ತುಲ್ಲಾ, ಮೊಹಮ್ಮದ್‌ ಎಂಬವರು ವಂಚನೆ

ಕಾರ್ಕಳದ ಉದ್ಯಮಿಗೆ 2 ಕೋಟಿ ರೂ. ವಂಚನೆ Read More »

ಸೇತುವೆಯಿಂದ ನದಿ ನೀರಿಗೆ ಬಿದ್ದು ಮಹಿಳೆ ಮೃತ್ಯು

ಮಂಗಳೂರು: ಸೇತುವೆಯಿಂದ ನದಿ ನೀರಿಗೆ ಬಿದ್ದು ಮಹಿಳೆಯೊಬ್ಬರು ಮೃತಪಟ್ಟ ಘಟನೆ ಮಂಗಳೂರಿನ ಮರವೂರು ಬಳಿಯ ಸೇತುವೆ ಬಳಿ ಭಾನುವಾರ ನಡೆದಿದೆ. ಕುಂಜತ್ತಬೈಲು ನಿವಾಸಿ ರೇವತಿ (60) ಮೃತಪಟ್ಟ ಮಹಿಳೆ. ಭಾನುವಾರ ಬೆಳಿಗ್ಗೆ 7.30 ರಿಂದ 8.30ರ ಸುಮಾರಿಗೆ ಅಂಗಡಿಗೆ ಹೋಗುತ್ತಿದ್ದ ರೇವತಿ ಅವರು ಮರವೂರು ಸೇತುವೆಯ ಬಳಿ ಏಕಾಏಕಿ ನದಿಗೆ ಬಿದ್ದಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಸ್ಥಳೀಯರು ಅವರ ಮೃತದೇಹವನ್ನು ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಅಂಗಡಿಗೆ ಹೋಗಿದ್ದ ರೇವತಿಯನ್ನು ಕಾಣದಾದಾಗ ಮನೆಯವರು ಅವರನ್ನು ಹುಡುಕುತ್ತಾ ಬಂದಿದ್ದರು.

ಸೇತುವೆಯಿಂದ ನದಿ ನೀರಿಗೆ ಬಿದ್ದು ಮಹಿಳೆ ಮೃತ್ಯು Read More »

ಟ್ರಕ್ – ಬೈಕ್‍ ಡಿಕ್ಕಿ | ಬೈಕ್ ಸವಾರ ಸ್ಥಳದಲ್ಲೇ ಮೃತ್ಯು ; ಟ್ರಕ್ ಬೆಂಕಿಗಾಹುತಿ

ಉಡುಪಿ : ಬೈಕ್ ಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ  ಟ್ರಕ್ ಸಂಪೂರ್ಣ ಬೆಂಕಿಗೆ ಆಹುತಿಯಾಗಿ ಬೈಕ್‍ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಜ.10ರ ಶುಕ್ರವಾರ ಮದ್ಯರಾತ್ರಿ ರಾ.ಹೆ. 66 ರ ಉದ್ಯಾವರ ಕೊರಂಗ್ರಪಾಡಿ ಬಳಿ ನಡೆದಿದೆ. ಕೊರಂಗ್ರಪಾಡಿಯಿಂದ ಉದ್ಯಾವರ ಮೂಲಕವಾಗಿ ಪಣಿಯರಿಗೆ ಬರುತ್ತಿದ್ದ ಬೈಕ್ ಸವಾರ ಪಣಿಯೂರು ನಿವಾಸಿ ಅವಿನಾಶ್ ಆಚಾರ್ಯ (19) ಮೃತ ಯುವಕ ಎನ್ನಲಾಗಿದೆ. ಉಡುಪಿಯಲ್ಲಿ ಪ್ಯಾರಾ ಮೆಡಿಕಲ್ ಕಲಿಯುತ್ತಿದ್ದ ಅವಿನಾಶ್ ಆಚಾರ್ಯ ರಾತ್ರಿ ಪರಿಚಯಸ್ಥರ ಮನೆಯ ಕಾರ್ಯಕ್ರಮಕ್ಕೆ ತೆರಳಿ, ಅಲ್ಲಿಂದ ಹಿಂತಿರುಗುತ್ತಿದ್ದ

ಟ್ರಕ್ – ಬೈಕ್‍ ಡಿಕ್ಕಿ | ಬೈಕ್ ಸವಾರ ಸ್ಥಳದಲ್ಲೇ ಮೃತ್ಯು ; ಟ್ರಕ್ ಬೆಂಕಿಗಾಹುತಿ Read More »

ಹೆಜ್ಜೇನು ಕಡಿತ : ಇಬ್ಬರಿಗೆ ಗಂಭೀರ ಗಾಯ

ನೆಲ್ಯಾಡಿ: ಹೆಜ್ಜೇನು ದಾಳಿ ನಡೆಸಿ ಇಬ್ಬರು ಗಾಯಗೊಂಡು ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ನಿನ್ನೆ ಬೆಳಿಗ್ಗೆ ನೆಲ್ಯಾಡಿ ಗ್ರಾಮದ ಮಾದೇರಿ ಸಮೀಪದ ತುಂಬೆತ್ತಡ್ಕ ಎಂಬಲ್ಲಿ ನಡೆದಿದೆ. ಗಾಯಗೊಂಡವರು ಮಾದೇರಿ ತುಂಬೆತ್ತಡ್ಕ ನಿವಾಸಿ ರೂಪಾವತಿ(30) ಹಾಗೂ ತಿಮ್ಮಪ್ಪ ಕುಂಬಾರ(49) ಎನ್ನಲಾಗಿದೆ. ರೂಪಾವತಿ ಎಂಬವರಿಗೆ ಮನೆ ಸಮೀಪವೇ ಏಕಾಏಕಿ ಹೆಜ್ಜೇನುಗಳು ದಾಳಿ ಮಾಡಿವೆ. ಇದರಿಂದ ವಿಚಲಿತಗೊಂಡ ರೂಪಾವತಿ ಜೋರಾಗಿ ಕಿರುಚಿದ್ದಾರೆ.  ರೂಪಾವತಿಯವರ ಬೊಬ್ಬೆ ಕೇಳಿ ಪಕ್ಕದ ಮನೆಯ ತಿಮ್ಮಪ್ಪ ಕುಂಬಾರ ಎನ್ನುವವರು ರಕ್ಷಣೆಗಾಗಿ ಗೋಣಿ ಚೀಲ ಹಿಡಿದು ಬಂದಿದ್ದರು.

ಹೆಜ್ಜೇನು ಕಡಿತ : ಇಬ್ಬರಿಗೆ ಗಂಭೀರ ಗಾಯ Read More »

ಬೈಕ್ ಅಪಘಾತದಲ್ಲಿ ಗಾಯಗೊಂಡ ನಿಶಾಂತ್, ಕಾರ್ತಿಕ್ ಅವರಿಗೆ ವಜ್ರತೇಜಸ್ ತಂಡದಿಂದ ಧನಸಹಾಯ ಹಸ್ತಾಂತರ

ಪುತ್ತೂರು : ದಾರಂದಕುಕ್ಕು ಸಮೀಪ ನಿನ್ನೆ ನಡೆದ ಬೈಕ್ ಮತ್ತು ಬಸ್ ಅಪಘಾತದಲ್ಲಿ ಗಂಭೀರ ಗಾಯಗೊಂಡ ವಿದ್ಯಾರ್ಥಿಗಳಾದ ಬೆಳ್ಳಿಪ್ಪಾಡಿಯ ನಿಶಾಂತ್ ಮತ್ತು ಕಾರ್ತಿಕ್ ಅವರಿಗೆ ವಿಶ್ವ ಹಿಂದೂ ಪರಿಷದ್ ಬಜರಂಗದಳ ಪುತ್ತೂರು ಇದರ ಸೇವಾ ಪ್ರಕಲ್ಪವಾದ ವಜ್ರತೇಜಸ್ ತಂಡದಿಂದ ಧನಸಹಾಯ ನೀಡಲಾಯಿತು. ಗುರುವಾರ ಆಸ್ಪತ್ರೆಯಲ್ಲಿ ಭೇಟಿ ಮಾಡಿ ಆರೋಗ್ಯ ವಿಚಾರಿಸಿ ವಜ್ರತೇಜಸ್ ವಾಟ್ಸ್ ಆಪ್ ಗ್ರೂಪ್ ನಲ್ಲಿ ಸಂಗ್ರಹವಾದ ಮೊದಲ ಕಂತಿನ ಮೊತ್ತವನ್ನು ಅವರ ಮನೆಯವರಿಗೆ ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ವಜ್ರತೇಜಸ್ ಅಧ್ಯಕ್ಷ ಮುರಳೀಕೃಷ್ಣ ಹಸಂತಡ್ಕ, ವಿಶ್ವ

ಬೈಕ್ ಅಪಘಾತದಲ್ಲಿ ಗಾಯಗೊಂಡ ನಿಶಾಂತ್, ಕಾರ್ತಿಕ್ ಅವರಿಗೆ ವಜ್ರತೇಜಸ್ ತಂಡದಿಂದ ಧನಸಹಾಯ ಹಸ್ತಾಂತರ Read More »

ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಮನೆ ಧ್ವಂಸ

ಕಡಬ : ವಿದ್ಯುತ್ ಶಾರ್ಟ್ ಸಕ್ಯೂಟ್‌ನಿಂದ ಮನೆ ಸಂಪೂರ್ಣವಾಗಿ ಸುಟ್ಟಿರುವ ಘಟನೆ ಕಡಬ ತಾಲೂಕು ಆಲಂಕಾರು ಗ್ರಾಮದ ನೆಕ್ಕಿಲಾಡಿಯಲ್ಲಿ ನಡೆದಿದೆ. ವಿನೋದಾ ಎಂಬವರ ಮನೆ ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿದೆ. ಸುಮಾರು ರಾತ್ರಿ 8 ರ ವೇಳೆ ವಿದ್ಯುತ್ ಶಾರ್ಟ್ ಸಕ್ಯೂಟ್‌  ಸಂಭವಿಸಿದೆ. ಈ ವೇಳೆ  ಮನೆಯಿಂದ ಹೊಗೆ ಬರುತ್ತಿರುವುದನ್ನು ಗಮನಿಸಿದ ಸ್ಥಳೀಯರು ವಿನೋದ ಅವರ ಮನೆ ಕಡೆ ತೆರಳಿ ನೋಡಿದಾಗ  ಬೆಂಕಿ ಮನೆಯೊಳಗೆ ಆವರಿಸಿಕೊಂಡಿರುವುದು  ಬೆಳಕಿಗೆ ಬಂದಿದೆ. ತಕ್ಷಣ ಮನೆಯೊಡತಿಗೆ ವಿಚಾರ ತಿಳಿಸಿ ಮನೆ ಬಾಗಿಲು ಮುರಿದು

ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಮನೆ ಧ್ವಂಸ Read More »

error: Content is protected !!
Scroll to Top