ಅಪಘಾತ

ಎರಡು ಕಾರುಗಳ ಮುಖಾಮುಖಿ ಡಿಕ್ಕಿ – ಆರು ಮಂದಿಗೆ ಗಾಯ

ಪುತ್ತೂರು: ಎರಡು ಕಾರುಗಳ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಆರು ಮಂದಿ ಗಾಯಗೊಂಡ ಘಟನೆ ಕಣಿಯೂರು ಗ್ರಾಮದ ಪಿಲಿಗೂಡು ಎಂಬಲ್ಲಿ ಭಾನುವಾರ ನಡೆದಿದೆ. ಬೆಳ್ತಂಗಡಿಯಿಂದ ಪುತ್ತೂರಿಗೆ ಬರುತ್ತಿದ್ದ ಸ್ವಿಫ್ಟ್ ಕಾರು ಹಾಗೂ ಎದುರಿನಿಂದ ಬರುತ್ತಿದ್ದ ಮಾರುತಿ 800 ವಾಹನ ಮುಖಾಮುಖಿಯಾಗಿ ಡಿಕ್ಕಿಯಾಗಿದೆ. ಸ್ವಿಫ್ಟ್ ಕಾರಿನ ಚಾಲಕ ಮಹಾಬಲ ಶೆಟ್ಟಿ ಹಾಗೂ ಕಾರಿನಲ್ಲಿದ್ದ ಅನ್ವಿತಾ, ಮಾನ್ವಿತಾ, ಮಮತಾ, ಆಶಾ, ಮಾರುತಿ ಕಾರಿನಲ್ಲಿದ್ದ ಅಣ್ಣಿಗೌಡ ಎಂಬುವವರಿಗೆ ಗಾಯಗಳಾಗಿವೆ. ತಕ್ಷಣ ಗಾಯಗೊಂಡವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಪುತ್ತೂರು ಸಂಚಾರ […]

ಎರಡು ಕಾರುಗಳ ಮುಖಾಮುಖಿ ಡಿಕ್ಕಿ – ಆರು ಮಂದಿಗೆ ಗಾಯ Read More »

ಕಟೀಲು ದೇವಳದ ಮುಂಭಾಗ MRPL ಬಸ್ ಬೆಂಕಿಗಾಹುತಿ

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಳದ ಮುಂಭಾಗದಲ್ಲಿ ಬಸ್ಸೊಂದು ಹೊತ್ತಿ ಉರಿದ ಘಟನೆ ಬುಧವಾರ ಮಧ್ಯಾಹ್ನ ವರದಿಯಾಗಿದೆ. ಬೆಂಕಿಗೆ ಆಹುತಿಯಾದ ಬಸ್ ಎಂಆರ್‌ಪಿಯಲ್ ಗೆ ಸೇರಿದ್ದು ಎನ್ನಲಾಗಿದೆ. ಇದು ಕಟೀಲು ದೇವಸ್ಥಾನದ ಮುಂಭಾಗವಾಗಿ ಮಂಗಳೂರು ಕಡೆ ತೆರಳುತ್ತಿದ್ದ ಸಂದರ್ಭ ಬಸ್ ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ ಎಂದು ತಿಳಿದು ಬಂದಿದೆ. ಘಟನೆಗೆ ಬಸ್ಸಿನಲ್ಲಿ ನಡೆದ ಶಾರ್ಟ್ ಸರ್ಕ್ಯೂಟ್ ಕಾರಣ ಎನ್ನಲಾಗಿದೆ. ತಕ್ಷಣ ಎಚ್ಚೆತ್ತುಕೊಂಡ ದೇವಸ್ಥಾನದ ಸಿಬ್ಬಂದಿ ಮತ್ತು ಸ್ಥಳೀಯರು ಬೆಂಕಿಯನ್ನು ನಂದಿಸುವಲ್ಲಿ ಸಫಲರಾಗಿದ್ದು ಯಾವುದೇ ಪ್ರಾಣ ಹಾನಿ

ಕಟೀಲು ದೇವಳದ ಮುಂಭಾಗ MRPL ಬಸ್ ಬೆಂಕಿಗಾಹುತಿ Read More »

ಮಹಿಳೆ ಜೊತೆ ಅಸಭ್ಯವಾಗಿ ವರ್ತಿಸಿದಾತನ ಸೆರೆ

ವಿಟ್ಲ: ವಿಟ್ಲದಲ್ಲಿ ಮಹಿಳೆ ಜೊತೆ ಅಸಭ್ಯವಾಗಿ ವರ್ತಿಸಿದ ಆರೋಪಿಯನ್ನು ಸೆರೆ ಹಿಡಿಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.ಆರೋಪಿ ಕನ್ಯಾನದ ಅಬೂಬಕ್ಕರ್ (46) ಬಂಧಿತ. ದಾರಿ ಕೇಳುವ ನೆಪದಲ್ಲಿ ಮಹಿಳೆ ಜೊತೆ ಅಸಭ್ಯವಾಗಿ ವರ್ತಿಸಿದ್ದ. ಘಟನೆ ಬಗ್ಗೆ ತಕ್ಷಣ ಪ್ರತಿಕ್ರಿಯಿಸಿದ ಬಿಜೆಪಿ ಅಭ್ಯರ್ಥಿಯಾಗಿದ್ದ ಆಶಾ ತಿಮ್ಮಪ್ಪ ಅವರು ಮನೆಯವರಿಗೆ ಧೈರ್ಯ ತುಂಬಿ, ಸಾಂತ್ವಾನ ಹೇಳಿದ್ದರು. ಬಳಿಕ ಪೊಲೀಸ್ ಠಾಣೆಗೂ ಭೇಟಿ ನೀಡಿ, ಆರೋಪಿಯನ್ನು ಶೀಘ್ರ ಬಂಧಿಸುವಂತೆ ಆಗ್ರಹಿಸಿದ್ದರು. ವಿಧಾನಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಅರುಣ್ ಕುಮಾರ್ ಪುತ್ತಿಲ ಅವರೂ ಕೂಡ

ಮಹಿಳೆ ಜೊತೆ ಅಸಭ್ಯವಾಗಿ ವರ್ತಿಸಿದಾತನ ಸೆರೆ Read More »

ಚಾರ್ವಾಕ: ಟ್ರಾನ್ಸ್ ಫಾರ್ಮರಿನಲ್ಲಿ ವಿದ್ಯುತ್ ಶಾಕ್, ಲೈನ್ ಮ್ಯಾನಿಗೆ ಗಾಯ

ಕಡಬ; ಕಡಬ ತಾಲೂಕಿನ ಚಾರ್ವಾಕ ಗ್ರಾಮದಲ್ಲಿ ಮೆಸ್ಕಾಂ ಲೈನ್ ಮ್ಯಾನ್ ಗೆ ವಿದ್ಯುತ್ ಶಾಕ್ ಗೊಳಪಟ್ಟು, ಕಂಬದಿಂದ ಎಸೆಯಲ್ಪಟ್ಟು ಗಾಯಗೊಂಡ ಘಟನೆ ಸೋಮವಾರ  ನಡೆದಿದೆ. ಮೆಸ್ಕಾಂ ಲೈನ್ ಮ್ಯಾನ್ ಎಡಮಂಗಲ‌ ನಿವಾಸಿ ನಾರಾಯಣ ಪಿ ಎಂಬವರು ಗಾಯಗೊಂಡವರು. ಚಾರ್ವಾಕದ ಎಣ್ಮೂರಿನಲ್ಲಿ ವಿದ್ಯುತ್ ಟ್ರಾನ್ಸ್ ಫರ್ಮರ್ ನಲ್ಲಿ  ಸಮಸ್ಯೆ ಇದೆ ಎಂದು ಗ್ರಾಹಕರು ಮಾಹಿತಿ ನೀಡಿರುವ ಹಿನ್ನೆಲೆಯಲ್ಲಿ  ಅಲ್ಲಿ ತೆರಳಿ ಟ್ರಾನ್ಸ್ ಫಸರ್ಮರ್ ಏರಿ ಫ್ಯೂಸ್ ಹಾಕುತ್ತಿದ್ದಾಗ ವಿದ್ಯುತ್ ಶಾಕ್ ಗೆ ಒಳಗಾಗಿ ಕೆಳಗೆ  ಎಸೆಯಲ್ಪಟ್ಟಿದ್ದಾರೆ. ತಕ್ಷಣ  ಗಾಯಳುವನ್ನು 

ಚಾರ್ವಾಕ: ಟ್ರಾನ್ಸ್ ಫಾರ್ಮರಿನಲ್ಲಿ ವಿದ್ಯುತ್ ಶಾಕ್, ಲೈನ್ ಮ್ಯಾನಿಗೆ ಗಾಯ Read More »

ಬುಡಸಹಿತ ರಿಕ್ಷಾದ ಮೇಲೆ ಬಿದ್ದ ಮರ | ಅಂಗವಿಕಲ ಸಹೋದರನಿಗೆ ತಾಯಿಯಾಗಿದ್ದ ಪುಷ್ಪಾ ಸಹಿತ ಇಬ್ಬರ ದಾರುಣ ಸಾವು

ಕಾಪು: ಬೃಹತ್ ಮರವೊಂದು ಆಟೋ ರಿಕ್ಷಾದ ಮೇಲೆ ಉರುಳಿ ಬಿದ್ದು, ಇಬ್ಬರು ಪ್ರಯಾಣಿಕರು ಮೃತಪಟ್ಟಿರುವ ಬಗ್ಗೆ ಕಾಪು – ಶಿರ್ವ ರಸ್ತೆಯಲ್ಲಿ ನಡೆದಿದೆ. ನಿನ್ನೆ ರಾತ್ರಿ ಸುರಿದ ಭಾರಿ ಗಾಳಿ ಮಳೆಯಿಂದಾಗಿ ಮರ ಬುಡಸಹಿತ ಬಿದ್ದಿದ್ದು, ಮಲ್ಲಾರು ಚಂದ್ರನಗರದ ಬಳಿ ಗುರುವಾರ ರಾತ್ರಿ 8 ಗಂಟೆ ಹೊತ್ತಿಗೆ ಈ ದುರ್ಘಟನೆ ಸಂಭವಿಸಿದೆ. ರಿಕ್ಷಾದಲ್ಲಿದ್ದ ಇಬ್ಬರು ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿದರೆ, ಚಾಲಕ ಪವಾಡ ಸದೃಶ ಪಾರಾಗಿದ್ದಾರೆ. ಪಾದೂರು ಕೂರಾಲು ರೈಸ್‌ಮಿಲ್‌ ಬಳಿಯ ನಿವಾಸಿ ಪುಷ್ಪಾ ಕುಲಾಲ್‌ (45) ಮತ್ತು

ಬುಡಸಹಿತ ರಿಕ್ಷಾದ ಮೇಲೆ ಬಿದ್ದ ಮರ | ಅಂಗವಿಕಲ ಸಹೋದರನಿಗೆ ತಾಯಿಯಾಗಿದ್ದ ಪುಷ್ಪಾ ಸಹಿತ ಇಬ್ಬರ ದಾರುಣ ಸಾವು Read More »

ಪುತ್ತೂರಲ್ಲಿ ಸರಣಿ ಅಪಘಾತ: ನಾಲ್ಕು ಕಾರುಗಳಿಗೆ ಹಾನಿ

ಪುತ್ತೂರು: ಪುತ್ತೂರು ಬೈಪಾಸ್‌ ತೆಂಕಿಲ ರಸ್ತೆಯಲ್ಲಿ ಸೋಮವಾರ ಸಂಜೆ ಸರಣಿ ಅಪಘಾತ ಸಂಭವಿಸಿ ನಾಲ್ಕು ಕಾರುಗಳಿಗೆ ಹಾನಿಯಾಗಿವೆ. ಅಪಘಾತದ ರಭಸಕ್ಕೆ ಕಾರಿನ ಎರಡು ಏರ್‌ಬ್ಯಾಗ್‌ ತೆರೆದುಕೊಂಡ ಕಾರಣ ಕಾರಿನಲ್ಲಿದ್ದವರಿಗೆ ಯಾವುದೇ ಗಾಯಗಳಾಗದೆ ಅಪಾಯದಿಂದ ಪಾರಾಗಿದ್ದಾರೆ. ಆದರೆ ಕಾರುಗಳ ಹಲವು ಭಾಗ ಜಖಂಗೊಂಡಿದೆ.

ಪುತ್ತೂರಲ್ಲಿ ಸರಣಿ ಅಪಘಾತ: ನಾಲ್ಕು ಕಾರುಗಳಿಗೆ ಹಾನಿ Read More »

ಕಾರು ಬೈಕ್‌ ಡಿಕ್ಕಿ : ಅಪಘಾತದಲ್ಲಿ ಸುಳ್ಯದ ಯುವಕ ಸಾವು

ಸುಳ್ಯ : ಬೆಂಗಳೂರಿನಲ್ಲಿ ನಡೆದ ಕಾರು ಬೈಕ್‌ ಡಿಕ್ಕಿ ಅಪಘಾತದಲ್ಲಿ ಕೊಲ್ಲಮೊಗ್ರ ನಿವಾಸಿಯೋರ್ವರು ಸಾವನಪ್ಪಿರುವ ಘಟನೆ ಏ.25 ರಂದು ಸಂಭವಿಸಿದೆ. ಕೊಲ್ಲಮೊಗ್ರ ಧರ್ಮಪಾಲ ಗೌಡ ಬಾಳೆಬೈಲು ಮತ್ತು ವಿಮಲಾಕ್ಷಿ ದಂಪತಿಯ ಪುತ್ರ ಯತೀಶ್ ಬಾಳೆಬೈಲು(30) ಮೃತಪಟ್ಟವರು. ಸೋಮವಾರ ಬೆಳಗ್ಗೆ ಯತೀಶ್ ಬೈಕ್ ನಲ್ಲಿ ಸಂಚರಿಸುತ್ತಿದ್ದ ವೇಳೆ ಕಾರೊಂದು ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಯತೀಶ್ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಅವಿವಾಹಿತರಾಗಿರುವ ಯತೀಶ್ ಬೆಂಗಳೂರಿನ ವಿಮಾನ ನಿಲ್ದಾಣ ಬಳಿ ಉದ್ಯೋಗದಲ್ಲಿದ್ದರು. ಮೃತರು

ಕಾರು ಬೈಕ್‌ ಡಿಕ್ಕಿ : ಅಪಘಾತದಲ್ಲಿ ಸುಳ್ಯದ ಯುವಕ ಸಾವು Read More »

ಉಪ್ಪಿನಂಗಡಿ: ಸ್ಕೂಟರ್-ಕಾರು ಡಿಕ್ಕಿ : ತಂದೆ ಸಾವು, ಇಬ್ಬರು ಮಕ್ಕಳು ಗಂಭೀರ

ಉಪ್ಪಿನಂಗಡಿ : ಏ. 22 ರಂದು ಕಲ್ಲೇರಿ ಎಂಬಲ್ಲಿ ಸ್ಕೂಟರ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಸ್ಕೂಟರ್ ಸವಾರ ಸಾವನಪ್ಪಿದ್ದು, ಇಬ್ಬರು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಬೆಳ್ತಂಗಡಿ ತಾಲೂಕಿನ ಕಳೆಂಜಿಬೈಲು ನಿವಾಸಿ ಜಾಫರ್ (35) ಮೃತ ವ್ಯಕ್ತಿ ಎಂದು ತಿಳಿದು ಬಂದಿದೆ. ಇವರು ತನ್ನೆರಡು ಮಕ್ಕಳೊಂದಿಗೆ ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುತ್ತಿದ್ದಾಗ ರಸ್ತೆಯ ವಿರುದ್ಧ ದಿಕ್ಕಿನಲ್ಲಿ ಬಂದ ಕಾರು ಇವರ ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಅಪಘಾತದಲ್ಲಿ ಮಕ್ಕಳಿಬ್ಬರು ಗಂಭೀರ ಗಾಯಗೊಂಡಿದ್ದು,

ಉಪ್ಪಿನಂಗಡಿ: ಸ್ಕೂಟರ್-ಕಾರು ಡಿಕ್ಕಿ : ತಂದೆ ಸಾವು, ಇಬ್ಬರು ಮಕ್ಕಳು ಗಂಭೀರ Read More »

error: Content is protected !!
Scroll to Top