ಹಳಿ ದಾಟುತ್ತಿದ್ದ ಆನೆಗೆ ರೈಲು ಡಿಕ್ಕಿ | ಕಾಲು ಕಳೆದುಕೊಂಡು ತೆವಳುತ್ತಾ ಸಾಗಿ ಪ್ರಾಣಬಿಟ್ಟ ಆನೆ
ಅಸ್ಸಾಂ: ಹಳಿ ದಾಟುತ್ತಿದ್ದ ಆನೆಯೊಂದಕ್ಕೆ ರೈಲು ಡಿಕ್ಕಿಯಾಗಿ ಸಾವನ್ನಪ್ಪಿದ ಘಟನೆ ಅಸ್ಸಾಂನ ಮೊರಿಗಾಂವ್ ಜಿಲ್ಲೆಯ ಜಾಗಿರೋಡ್ ರೈಲು ನಿಲ್ದಾಣದ ಸಮೀಪದಲ್ಲಿ ನಡೆದಿದೆ. ಆನೆಗೆ ರೈಲು ಡಿಕ್ಕಿಯಾದ ಪರಿಣಾಮ 2 ಕಾಲು ಕಳೆದುಕೊಂಡ ಆನೆ ತೆವಳುತ್ತಾ ಸಾಗಿ ಪ್ರಾಣಬಿಟ್ಟಿದೆ. ಕಾಂಚನಜುಂಗಾ ಎಕ್ಸ್ಪ್ರೆಸ್ ರೈಲು ವೇಗವಾಗಿ ತೆರಳುತ್ತಿದ್ದ ವೇಳೆ ಎರಡು ಆನೆಗಳು ಹಳಿ ದಾಟುತ್ತಿತ್ತು. ಒಂದು ಆನೆ ಕೂದಲೆಳೆಯುವ ಅಂತರದಲ್ಲಿ ಹಳಿ ದಾಟಿದರೆ ಅದರ ಹಿಂದಿದ್ದ ಈ ಆನೆಗೆ ರೈಲು ಡಿಕ್ಕಿಯಾಗಿದೆ. ರೈಲು ಡಿಕ್ಕಿಯಾದ ಪರಿಣಾಮ ಆನೆ ಗಂಭೀರವಾಗಿ ಗಾಯಗೊಂಡಿದೆ. […]
ಹಳಿ ದಾಟುತ್ತಿದ್ದ ಆನೆಗೆ ರೈಲು ಡಿಕ್ಕಿ | ಕಾಲು ಕಳೆದುಕೊಂಡು ತೆವಳುತ್ತಾ ಸಾಗಿ ಪ್ರಾಣಬಿಟ್ಟ ಆನೆ Read More »










